AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಡಿಲಬ್ಬರದ ಶತಕ ಸಿಡಿಸಿದ ಶೆಫಾಲಿ ವರ್ಮಾ; ಟೀಂ ಇಂಡಿಯಾಕ್ಕೆ ರೀ ಎಂಟ್ರಿ ಯಾವಾಗ?

Shefali Verma's Explosive Century: ಭಾರತ ಮಹಿಳಾ ಕ್ರಿಕೆಟ್ ತಂಡದಿಂದ ಹೊರಗುಳಿದಿರುವ ಶೆಫಾಲಿ ವರ್ಮಾ, ಹಿರಿಯ ಮಹಿಳಾ ಏಕದಿನ ಚಾಲೆಂಜರ್ ಟ್ರೋಫಿಯಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ನಾಲ್ಕು ಪಂದ್ಯಗಳಲ್ಲಿ ನಾಲ್ಕು ಅರ್ಧಶತಕಗಳನ್ನು ಗಳಿಸಿರುವ ಅವರು, ಇತ್ತೀಚಿನ ಪಂದ್ಯದಲ್ಲಿ ಕೇವಲ 60 ಎಸೆತಗಳಲ್ಲಿ ಶತಕ ಸಿಡಿಸಿದ್ದಾರೆ. ಈ ಅದ್ಭುತ ಪ್ರದರ್ಶನದಿಂದಾಗಿ ಅವರು ಶೀಘ್ರದಲ್ಲೇ ಭಾರತ ತಂಡಕ್ಕೆ ಮರಳಬಹುದು ಎಂಬ ನಿರೀಕ್ಷೆ ಹೆಚ್ಚಾಗಿದೆ.

ಸಿಡಿಲಬ್ಬರದ ಶತಕ ಸಿಡಿಸಿದ ಶೆಫಾಲಿ ವರ್ಮಾ; ಟೀಂ ಇಂಡಿಯಾಕ್ಕೆ ರೀ ಎಂಟ್ರಿ ಯಾವಾಗ?
ಶೆಫಾಲಿ ವರ್ಮಾ
ಪೃಥ್ವಿಶಂಕರ
|

Updated on:Jan 13, 2025 | 5:13 PM

Share

ಭಾರತ ಮಹಿಳಾ ಕ್ರಿಕೆಟ್ ತಂಡದಿಂದ ಹೊರಗುಳಿದಿರುವ ಸ್ಫೋಟಕ ಆರಂಭಿಕ ಆಟಗಾರ್ತಿ ಶೆಫಾಲಿ ವರ್ಮಾ ದೇಶೀ ಕ್ರಿಕೆಟ್​ನಲ್ಲಿ ರನ್‌ಗಳ ಮಳೆಸುರಿಸುತ್ತಿದ್ದಾರೆ. ಪ್ರಸ್ತುತ ನಡೆಯುತ್ತಿರುವ ಹಿರಿಯ ಮಹಿಳಾ ಏಕದಿನ ಚಾಲೆಂಜರ್ ಟ್ರೋಫಿಯಲ್ಲಿ ಶೆಫಾಲಿ ಸ್ಫೋಟಕ ಶತಕ ಸಿಡಿಸಿ ಮಿಂಚಿದ್ದಾರೆ. ಎ ತಂಡದ ಪರ ಆಡುತ್ತಿರುವ ಶೆಫಾಲಿ ಈ ಪಂದ್ಯದಲ್ಲಿ ಭರ್ಜರಿ ಶತಕ ಬಾರಿಸಿದ್ದರು. ಶೆಫಾಲಿ ಕೇವಲ 60 ಎಸೆತಗಳಲ್ಲಿ ತಮ್ಮ ಮೊದಲ ಶತಕದ ಸ್ಕ್ರಿಪ್ಟ್ ಬರೆದರು. ಇದು ಈ ಟೂರ್ನಿಯಲ್ಲಿ ಅವರ ಸತತ ನಾಲ್ಕನೇ ಅರ್ಧಶತಕ ಪ್ಲಸ್ ಸ್ಕೋರ್ ಆಗಿದೆ. ಇದಕ್ಕೂ ಮುನ್ನ ಅವರು 2 ಪಂದ್ಯಗಳಲ್ಲಿ ಶತಕದ ಸನಿಹಕ್ಕೆ ಬಂದು ಔಟಾಗಿ ಶತಕ ವಂಚಿತರಾಗಿದ್ದರು.

60 ಎಸೆತಗಳಲ್ಲಿ ಶತಕ

ಡಿ ತಂಡದ ವಿರುದ್ಧದ ಪಂದ್ಯದಲ್ಲಿ 166.6 ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟ್ ಬೀಸಿದ ಶೆಫಾಲಿ ವರ್ಮಾ ಕೇವಲ 60 ಎಸೆತಗಳಲ್ಲಿ 100 ರನ್‌ಗಳನ್ನು ಪೂರ್ಣಗೊಳಿಸಿದರು. ಇದರಲ್ಲಿ 12 ಬೌಂಡರಿ ಮತ್ತು 5 ಸಿಕ್ಸರ್‌ಗಳು ಸೇರಿದ್ದವು. ಅಂತಿಮವಾಗಿ ತಮ್ಮ ಇನ್ನಿಂಗ್ಸ್​ನಲ್ಲಿ 70 ಎಸೆತಗಳನ್ನು ಎದುರಿಸಿದ ಶೆಫಾಲಿ 14 ಬೌಂಡರಿ ಮತ್ತು 6 ಸಿಕ್ಸರ್‌ಗಳ ಸಹಾಯದಿಂದ 115 ರನ್ ಕಲೆಹಾಕಿದರು. ಇದು ಶೆಫಾಲಿ ವರ್ಮಾಗೆ ಏಕದಿನ ಚಾಲೆಂಜರ್ ಟ್ರೋಫಿಯಲ್ಲಿ ನಾಲ್ಕನೇ ಪಂದ್ಯವಾಗಿದೆ. ಇದಕ್ಕೂ ಮುನ್ನ ಆಡಿದ ಮೂರು ಪಂದ್ಯಗಳಲ್ಲಿ ಅವರು 95, 91 ಮತ್ತು 87 ರನ್‌ಗಳ ಇನ್ನಿಂಗ್ಸ್‌ಗಳನ್ನು ಆಡುವ ಮೂಲಕ ಒಟ್ಟು 273 ರನ್ ಗಳಿಸಿದ್ದರು. ಈಗ 4 ಪಂದ್ಯಗಳ ನಂತರ, ಏಕದಿನ ಚಾಲೆಂಜರ್ ಟ್ರೋಫಿಯಲ್ಲಿ ಅವರ ಒಟ್ಟು ರನ್ಗಳ ಸಂಖ್ಯೆ 388 ಕ್ಕೇ ಏರಿಕೆಯಾಗಿದೆ.

ಪ್ರತಿ ಪಂದ್ಯದಲ್ಲೂ ಶೆಫಾಲಿ ಆರ್ಭಟ

ಟೂರ್ನಿಯಲ್ಲಿ ಇದುವರೆಗೆ ಆಡಿದ ಎಲ್ಲಾ ನಾಲ್ಕು ಪಂದ್ಯಗಳಲ್ಲಿ ಶೆಫಾಲಿ ಐವತ್ತು ಪ್ಲಸ್ ಸ್ಕೋರ್ ಕಲೆ ಹಾಕಿದ್ದಾರೆ. ಅಷ್ಟೇ ಅಲ್ಲ, ಏಕದಿನ ಪಂದ್ಯವಾದರೂ ಟಿ20 ಪಂದ್ಯ ಎಂಬಂತೆ ಬ್ಯಾಟ್ ಬೀಸುತ್ತಿದ್ದಾರೆ. ಮೊದಲ ಪಂದ್ಯದಲ್ಲಿ 65 ಎಸೆತಗಳಲ್ಲಿ 95 ರನ್ ಬಾರಿಸಿದ್ದ ಅವರು ಎರಡನೇ ಪಂದ್ಯದಲ್ಲಿ 71 ಎಸೆತಗಳಲ್ಲಿ 91 ರನ್ ಗಳಿಸಿದ್ದರು. ಮೂರನೇ ಪಂದ್ಯದಲ್ಲಿ ಅವರು 58 ಎಸೆತಗಳಲ್ಲಿ 87 ರನ್ ಸಿಡಿಸಿದ್ದರು.

ಶೆಫಾಲಿ ಆಟಕ್ಕೆ ಒಲಿದ ಜಯ

ಇನ್ನು ಈ ಪಂದ್ಯದ ಕುರಿತು ಹೇಳುವುದಾದರೆ, ಮೊದಲು ಬ್ಯಾಟ್ ಮಾಡಿದ ಡಿ ತಂಡವು 50 ಓವರ್‌ಗಳಲ್ಲಿ 9 ವಿಕೆಟ್‌ಗೆ 211 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ಎ ತಂಡ ಶೆಫಾಲಿ ಅವರ ಆಕ್ರಮಣಕಾರಿ ಇನ್ನಿಂಗ್ಸ್‌ನಿಂದಾಗಿ ಸುಲಭ ಜಯ ದಾಖಲಿಸಿತು. ಎ ತಂಡದ ಆರಂಭಿಕ ಜೋಡಿ 47 ರನ್‌ಗಳಿಗೆ ಪೆವಿಲಿಯನ್ ಸೇರಿಕೊಂಡರೂ, ಶೆಫಾಲಿ ಒಂದು ತುದಿಯಲ್ಲಿ ನಿಂತು ಗೆಲುವಿನ ಇನ್ನಿಂಗ್ಸ್ ಆಡಿದರು.

ಶೀಘ್ರದಲ್ಲೇ ಟೀಂ ಇಂಡಿಯಾಕ್ಕೆ ಎಂಟ್ರಿ

ಶೆಫಾಲಿ ಕಳೆದ ವರ್ಷ ಅಕ್ಟೋಬರ್‌ನಲ್ಲಿ ಭಾರತದ ಪರ ಕೊನೆಯ ಏಕದಿನ ಪಂದ್ಯವನ್ನು ಆಡಿದ್ದರು. ಆದರೆ ಅವರ ಪ್ರಸ್ತುತ ಫಾರ್ಮ್ ಮತ್ತು ದೇಶೀಯ ಕ್ರಿಕೆಟ್‌ನಲ್ಲಿ ರನ್‌ಗಳ ರಾಶಿಯನ್ನು ನೋಡಿದರೆ, ಅವರು ಶೀಘ್ರದಲ್ಲೇ ತಂಡಕ್ಕೆ ಪುನರಾಗಮನ ಮಾಡಬಹುದು ಎಂದು ಹೇಳಿದರೆ ತಪ್ಪಾಗುವುದಿಲ್ಲ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:08 pm, Mon, 13 January 25

ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ