Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾವು ಒಪ್ಪಿಕೊಳ್ಳಲೇಬೇಕು’; ತಂಡದಿಂದ ಕೈಬಿಟ್ಟ ಬಗ್ಗೆ ಮೊದಲ ಬಾರಿಗೆ ಮೌನ ಮುರಿದ ಶಿಖರ್ ಧವನ್

Shikhar Dhawan: ಏಷ್ಯನ್ ಗೇಮ್ಸ್​ಗೆ ತಂಡದಲ್ಲಿ ಅವಕಾಶ ಪಡೆಯುವ ನಿರೀಕ್ಷೆಯಲ್ಲಿದ್ದ ಅನುಭವಿ ಶಿಖರ್ ಧವನ್​ಗೆ ಮತ್ತೊಮ್ಮೆ ನಿರಾಸೆಯಾಗಿತ್ತು. ಇದೀಗ ತಂಡದಲ್ಲಿ ಆಯ್ಕೆಯಾಗದಿರುವ ಬಗ್ಗೆ ಮೊದಲ ಬಾರಿಗೆ ಶಿಖರ್ ಧವನ್ ಮೌನ ಮುರಿದಿದ್ದಾರೆ.

‘ನಾವು ಒಪ್ಪಿಕೊಳ್ಳಲೇಬೇಕು’; ತಂಡದಿಂದ ಕೈಬಿಟ್ಟ ಬಗ್ಗೆ ಮೊದಲ ಬಾರಿಗೆ ಮೌನ ಮುರಿದ ಶಿಖರ್ ಧವನ್
ಶಿಖರ್ ಧವನ್
Follow us
ಪೃಥ್ವಿಶಂಕರ
|

Updated on: Aug 11, 2023 | 10:15 AM

ಸೆಪ್ಟೆಂಬರ್ 28 ರಿಂದ ಆರಂಭವಾಗಲಿರುವ ಏಷ್ಯನ್ ಗೇಮ್ಸ್‌ಗೆ (Asian Games 2023) 15 ಸದಸ್ಯರ ಟೀಂ ಇಂಡಿಯಾವನ್ನು ಜುಲೈ 14 ರಂದು ಬಿಸಿಸಿಐ ಪ್ರಕಟಿಸಿತು. ತಿಂಗಳುಗಳ ಅಂತರದಲ್ಲಿ ಏಷ್ಯಾಕಪ್ (Asia Cup 2023) ಹಾಗೂ ವಿಶ್ವಕಪ್ (ODI World Cup 2023) ನಡೆಯುವುದರಿಂದ ಭಾರತ ಬಿ ತಂಡವನ್ನು ಏಷ್ಯನ್ ಗೇಮ್ಸ್‌ಗೆ ಕಳುಹಿಸಲು ಬಿಸಿಸಿಐ ನಿರ್ಧರಿಸಿತ್ತು. ಅದರಂತೆ ಯುವ ಆರಂಭಿಕ ಆಟಗಾರ ರುತುರಾಜ್ ಗಾಯಕ್ವಾಡ್​ಗೆ (Ruturaj Gaikwad) ತಂಡದ ನಾಯಕತ್ವ ನೀಡಲಾಗಿದೆ. ಹಾಗೆಯೇ ತಂಡದಲ್ಲಿ ಹಲವು ಯುವ ಆಟಗಾರರೂ ಆಯ್ಕೆಯಾಗಿದ್ದಾರೆ. ಆದರೆ ಏಷ್ಯನ್ ಗೇಮ್ಸ್​ಗೆ ತಂಡದಲ್ಲಿ ಅವಕಾಶ ಪಡೆಯುವ ನಿರೀಕ್ಷೆಯಲ್ಲಿದ್ದ ಅನುಭವಿ ಶಿಖರ್ ಧವನ್​ಗೆ (Shikhar Dhawan) ಮತ್ತೊಮ್ಮೆ ನಿರಾಸೆಯಾಗಿತ್ತು. ಇದೀಗ ತಂಡದಲ್ಲಿ ಆಯ್ಕೆಯಾಗದಿರುವ ಬಗ್ಗೆ ಮೊದಲ ಬಾರಿಗೆ ಶಿಖರ್ ಧವನ್ ಮೌನ ಮುರಿದಿದ್ದಾರೆ.

ವಾಸ್ತವವಾಗಿ ಏಷ್ಯನ್ ಗೇಮ್ಸ್‌ಗೆ ತಂಡವನ್ನು ಪ್ರಕಟಿಸುವ ಮುನ್ನ ಈ ಪಂದ್ಯಾವಳಿಗೆ ಟೀಂ ಇಂಡಿಯಾದ ನಾಯಕತ್ವವನ್ನು ಶಿಖರ್ ಧವನ್​ಗೆ ನೀಡಲಾಗುವುದು ಎಂದು ಹೇಳಲಾಗಿತ್ತು. ಆದರೆ ಬಿಸಿಸಿಐ ರುತುರಾಜ್​ಗೆ ಆದ್ಯತೆ ನೀಡಿತು. ಇದೀಗ ಆ ಬಗ್ಗೆ ಮಾತನಾಡಿರುವ ಧವನ್, ಏಷ್ಯನ್ ಕ್ರೀಡಾಕೂಟಕ್ಕೆ ತಂಡದಲ್ಲಿ ಆಯ್ಕೆಯಾಗದಿರುವುದು ಆಘಾತ ತಂದಿದೆ. ಆದರೆ, ನಾನು ಬಲಿಷ್ಠ ಪುನರಾಗಮನ ಮಾಡುವ ವಿಶ್ವಾಸವಿದೆ ಎಂದಿದ್ದಾರೆ.

Shikhar Dhawan Career: ಏಷ್ಯನ್ ಗೇಮ್ಸ್​ಗೂ ಬೇಡವಾದ ಶಿಖರ್ ಧವನ್; ಗಬ್ಬರ್ ಕ್ರಿಕೆಟ್ ಕೆರಿಯರ್ ಅಂತ್ಯ..?

ಅದನ್ನು ನಾವು ಒಪ್ಪಿಕೊಳ್ಳಬೇಕು

“ಏಷ್ಯನ್ ಗೇಮ್ಸ್‌ಗೆ ನಾನು ಆಯ್ಕೆಯಾಗದಿದ್ದಾಗ ನನಗೆ ಆಘಾತವಾಯಿತು. ಆದರೆ ಆಯ್ಕೆ ಸಮಿತಿಯು ವಿಭಿನ್ನ ಆಟದ ಯೋಜನೆಯನ್ನು ಹೊಂದಿದ್ದರೆ, ಅದನ್ನು ನಾವು ಒಪ್ಪಿಕೊಳ್ಳಬೇಕು. ರುತುರಾಜ್ ಗಾಯಕ್ವಾಡ್ ಟೀಂ ಇಂಡಿಯಾ ನಾಯಕತ್ವ ವಹಿಸಿರುವುದು ಸಂತಸ ತಂದಿದೆ. ಏಷ್ಯನ್ ಕ್ರೀಡಾಕೂಟದಲ್ಲಿ ಹಲವು ಯುವಕರು ಆಡಲಿದ್ದಾರೆ. ಈ ಹೊಸ ಹುಡುಗರು ಖಂಡಿತವಾಗಿಯೂ ಅಬ್ಬರದ ಪ್ರದರ್ಶನ ನೀಡುತ್ತಾರೆ,” ಎಂದು ಧವನ್ ಹೇಳಿಕೊಂಡಿದ್ದಾರೆ.

ನಾನು ಪುನರಾಗಮನಕ್ಕೆ ಸಿದ್ಧ

“ನಾನು ಪುನರಾಗಮನಕ್ಕೆ ಸಂಪೂರ್ಣವಾಗಿ ಸಿದ್ಧನಿದ್ದೇನೆ. ಪುನರಾಗಮನ ಮಾಡಲು ನಾನು ನನ್ನನ್ನು ಫಿಟ್ ಆಗಿ ಇಡಲು ಶ್ರಮಿಸುತ್ತೆದ್ದೇನೆ. ಪುನರಾಗಮನಕ್ಕೆ ಅವಕಾಶ ಸಿಕ್ಕಾಗಲೆಲ್ಲಾ ನಾನು ಸಿದ್ಧ,” ಎಂದು ಗಬ್ಬರ್ ಹೇಳಿದ್ದಾರೆ.

ಏಷ್ಯನ್​ ಗೇಮ್ಸ್​​ಗೆ ಟೀಂ ಇಂಡಿಯಾ: ರುತುರಾಜ್ ಗಾಯಕ್ವಾಡ್ (ನಾಯಕ), ಯಶಸ್ವಿ ಜೈಸ್ವಾಲ್, ರಾಹುಲ್ ತ್ರಿಪಾಠಿ, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಶಹಬಾಜ್ ಅಹ್ಮದ್, ರವಿ ಬಿಷ್ಣೋಯ್, ಅವೇಶ್ ಖಾನ್, ಅರ್ಷದೀಪ್ ಸಿಂಗ್, ಮುಖೇಶ್ ಕುಮಾರ್, ಶಿವಂ ಮಾವಿ, ಶಿವಂ ದುಬೆ ಮತ್ತು ಪ್ರಭಾಸಿಮ್ರಾನ್ ಸಿಂಗ್ (ವಿಕೆಟ್ ಕೀಪರ್)

ರಿಸರ್ವ್ ಪ್ಲೇಯರ್: ಯಶ್ ಠಾಕೂರ್, ಸಾಯಿ ಕಿಶೋರ್, ವೆಂಕಟೇಶ್ ಅಯ್ಯರ್, ದೀಪಕ್ ಹೂಡಾ ಮತ್ತು ಸಾಯಿ ಸುದರ್ಶನ್.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ