Shikhar Dhawan: ವಿಚ್ಛೇದನದ ಎರಡು ವರ್ಷಗಳ ಬಳಿಕ ಮಗನನ್ನು ಭೇಟಿಯಾದ ಧವನ್! ಭಾವನಾತ್ಮಕ ವಿಡಿಯೋ ವೈರಲ್

Shikhar Dhawan: ಅವನ ಜೊತೆ ಆಡುವುದು, ತಬ್ಬಿಕೊಳ್ಳುವುದು, ಮಾತನಾಡುವುದು ಇವೆಲ್ಲವೂ ಭಾವನಾತ್ಮಕ ಕ್ಷಣಗಳು. ಇವುಗಳು ಜೀವಿತಾವಧಿಯಲ್ಲಿ ನೆನಪಿನಲ್ಲಿ ಉಳಿಯುವ ಕ್ಷಣಗಳು ಎಂದು ಬರೆದುಕೊಂಡಿದ್ದಾರೆ.

Shikhar Dhawan: ವಿಚ್ಛೇದನದ ಎರಡು ವರ್ಷಗಳ ಬಳಿಕ ಮಗನನ್ನು ಭೇಟಿಯಾದ ಧವನ್! ಭಾವನಾತ್ಮಕ ವಿಡಿಯೋ ವೈರಲ್
ಶಿಖರ್ ಧವನ್ ಕುಟುಂಬ
Follow us
TV9 Web
| Updated By: ಪೃಥ್ವಿಶಂಕರ

Updated on: Feb 20, 2022 | 6:25 PM

ಭಾರತದ ಅನುಭವಿ ಆರಂಭಿಕ ಆಟಗಾರ ಶಿಖರ್ ಧವನ್ (Shikhar Dhawan)ಸುಮಾರು ಎರಡು ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ ತಮ್ಮ ಮಗನನ್ನು ಭೇಟಿ ಮಾಡಿದ್ದಾರೆ. ತಮ್ಮ ಮಗನನ್ನು ಭೇಟಿಯಾದ ವಿಡಿಯೋವನ್ನು ಧವನ್ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವೀಡಿಯೊದಲ್ಲಿ, ಧವನ್ ತಮ್ಮ ಮಗನನ್ನು ಎತ್ತಿಕೊಂಡು ಮುದ್ದಾಡಿದ್ದಾರೆ. ಧವನ್ ಅವರ ಪುತ್ರ ಜೋರಾವರ್ 2020 ರಿಂದ ಆಸ್ಟ್ರೇಲಿಯಾದಲ್ಲಿದ್ದಾರೆ. ಕಟ್ಟುನಿಟ್ಟಾದ ಕೋವಿಡ್ ನಿಯಮಗಳ ಕಾರಣ, ಶಿಖರ್ ಆಸ್ಟ್ರೇಲಿಯಾದಲ್ಲಿ ಮಗುವನ್ನು ಭೇಟಿ ಮಾಡಲು ಸಾಧ್ಯವಾಗಲಿಲ್ಲ. ಧವನ್ ಹಂಚಿಕೊಂಡಿರುವ ವೀಡಿಯೊದ ಶೀರ್ಷಿಕೆಯಲ್ಲಿ, “ಅವನ ಜೊತೆ ಆಡುವುದು, ತಬ್ಬಿಕೊಳ್ಳುವುದು, ಮಾತನಾಡುವುದು ಇವೆಲ್ಲವೂ ಭಾವನಾತ್ಮಕ ಕ್ಷಣಗಳು. ಇವುಗಳು ಜೀವಿತಾವಧಿಯಲ್ಲಿ ನೆನಪಿನಲ್ಲಿ ಉಳಿಯುವ ಕ್ಷಣಗಳು” ಎಂದು ಬರೆದುಕೊಂಡಿದ್ದಾರೆ.

ಕಳೆದ ವರ್ಷ ಶಿಖರ್‌ ವೈವಾಹಿಕ ಜೀವನದಲ್ಲಿ ಬಿರುಗಾಳಿ ಬೀಸಿತ್ತು. ಆಯೇಷಾ ಮುಖರ್ಜಿ (ಶಿಖರ್ ಅವರ ಪತ್ನಿ), ಸೆಪ್ಟೆಂಬರ್‌ನಲ್ಲಿ ಗಂಡ ಮತ್ತು ಹೆಂಡತಿಯ ನಡುವಿನ ಸಂಬಂಧವನ್ನು ಕೊನೆಗೊಳಿಸಲು ನಿರ್ಧರಿಸಿದರು. ಇದರೊಂದಿಗೆ ಒಂಬತ್ತು ವರ್ಷಗಳ ವೈವಾಹಿಕ ಜೀವನ ಮುರಿದು ಬಿದ್ದಿತ್ತು. ಶಿಖರ್ ಧವನ್ ಅಕ್ಟೋಬರ್ 2012 ರಲ್ಲಿ ಆಯೇಷಾ ಮುಖರ್ಜಿ ಅವರನ್ನು ವಿವಾಹವಾದರು. ಎರಡು ವರ್ಷಗಳ ನಂತರ, 2014 ರಲ್ಲಿ, ಜೋರಾವರ್ ಜನಿಸಿದರು. ಜೋರಾ ಈಗ ತನ್ನ ತಾಯಿಯೊಂದಿಗೆ ಮೆಲ್ಬೋರ್ನ್‌ನಲ್ಲಿ ವಾಸಿಸುತ್ತಿದ್ದಾರೆ.

ಧವನ್ ವೃತ್ತಿ ಬದುಕು

ಶಿಖರ್ ಧವನ್ ಭಾರತದ ಭರವಸೆಯ ಬ್ಯಾಟ್ಸ್‌ಮನ್. ಮುಂಬರುವ ಐಪಿಎಲ್ 2022 ರಲ್ಲಿ ಅವರು ಪಂಜಾಬ್ ಕಿಂಗ್ಸ್ ಪರ ಆಡಲಿದ್ದಾರೆ. ಪಂಜಾಬ್ ಇವರನ್ನು ರೂ 8.25 ಕೋಟಿಗೆ ಖರೀದಿಸಿದೆ. ಈ ಋತುವಿನಲ್ಲಿ ಅವರು ಪಂಜಾಬ್ ಕಿಂಗ್ಸ್ ನಾಯಕರಾಗಿ ಆಯ್ಕೆಯಾಗಬಹುದು. ಮೆಗಾ ಹರಾಜಿನ ಮೊದಲು ಶಿಖರ್ ಧವನ್ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ಬಿಡುಗಡೆ ಮಾಡಿತು. ಶಿಖರ್ ಧವನ್ ಐಪಿಎಲ್‌ನ ಅತ್ಯುತ್ತಮ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರು. ಶಿಖರ್ ಧವನ್ ಇದುವರೆಗೆ 192 ಐಪಿಎಲ್ ಪಂದ್ಯಗಳಲ್ಲಿ 5784 ರನ್ ಗಳಿಸಿದ್ದಾರೆ.

ಇದನ್ನೂ ಓದಿ:Shikhar Dhawan, IPL 2022 Auction: ಬೃಹತ್ ಮೊತ್ತಕ್ಕೆ ಪಂಜಾಬ್ ಕಿಂಗ್ಸ್ ತಂಡ ಸೇರಿದ ಶಿಖರ್ ಧವನ್!

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್