AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WCL 2025: ‘ಆಗ ಆಡಿಲ್ಲ ಅಂದ್ರೆ ಮುಂದೇನೂ ಆಡಲ್ಲ’; ಪಾಕ್ ಪತ್ರಕರ್ತನಿಗೆ ಧವನ್ ಖಡಕ್ ರಿಪ್ಲೈ

WCL 2025: ವಿಶ್ವ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್ ಟೂರ್ನಮೆಂಟ್‌ನಲ್ಲಿ ಭಾರತ ತಂಡ ಪಾಕಿಸ್ತಾನದ ವಿರುದ್ಧ ಪಂದ್ಯವನ್ನು ಆಡಲು ನಿರಾಕರಿಸಿದೆ. ಶಿಖರ್ ಧವನ್ ಅವರು ಈ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದು, ಮುಂದಿನ ಸೆಮಿಫೈನಲ್‌ನಲ್ಲೂ ಪಂದ್ಯ ಆಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಪಾಕಿಸ್ತಾನಿ ಆಟಗಾರರು ಮತ್ತು ಪತ್ರಕರ್ತರ ಆಕ್ರೋಶಕ್ಕೆ ಉತ್ತರಿಸಿರುವ ಧವನ್, ಈ ವಿಷಯದಲ್ಲಿ ತಮ್ಮ ನಿಲುವು ಬದಲಾಗದು ಎಂದು ತಿಳಿಸಿದ್ದಾರೆ.

WCL 2025: ‘ಆಗ ಆಡಿಲ್ಲ ಅಂದ್ರೆ ಮುಂದೇನೂ ಆಡಲ್ಲ’; ಪಾಕ್ ಪತ್ರಕರ್ತನಿಗೆ ಧವನ್ ಖಡಕ್ ರಿಪ್ಲೈ
Shikhar Dhawan
ಪೃಥ್ವಿಶಂಕರ
|

Updated on:Jul 27, 2025 | 6:35 PM

Share

ಇಂಗ್ಲೆಂಡ್​ನಲ್ಲಿ ನಡೆಯುತ್ತಿರುವ ಎರಡನೇ ಆವೃತ್ತಿಯ ವಿಶ್ವ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್‌ (Worlds Championship of Legends) ಟೂರ್ನಮೆಂಟ್​ನಲ್ಲಿ ಇಂಡಿಯಾ ಚಾಂಪಿಯನ್ಸ್ (India Champions) ತಂಡ ಇದುವರೆಗೆ ಒಂದೇ ಒಂದು ಪಂದ್ಯವನ್ನು ಗೆಲ್ಲಲು ಸಾಧ್ಯವಾಗಿಲ್ಲ. ಹಾಲಿ ಚಾಂಪಿಯನ್ ಆಗಿರುವ ಇಂಡಿಯಾ ಟೂರ್ನಿಯಿಂದ ಹೊರಬೀಳುವ ಆತಂಕದಲ್ಲಿದೆ. ಆದಾಗ್ಯೂ ಈ ಲೀಗ್​ನಲ್ಲಿ ಇಂಡಿಯಾ ಚಾಂಪಿಯನ್ಸ್ ತಂಡ, ಪಾಕಿಸ್ತಾನ ಚಾಂಪಿಯನ್ಸ್ ವಿರುದ್ಧ ಪಂದ್ಯವನ್ನು ಆಡಲು ನಿರಾಕರಿಸಿತು. ತಂಡದ ಈ ನಿರ್ಧಾರಕ್ಕೆ ಪಾಕ್ ತಂಡದ ಆಟಗಾರರು ಆಕ್ರೋಶ ಹೊರಹಾಕಿದ್ದರು. ಇದೀಗ ಅಂತಹದ್ದೇ ಪ್ರಶ್ನೆಯನ್ನು ಮತ್ತೊಮ್ಮೆ ಕೇಳಲಾಗಿದೆ. ಇದಕ್ಕೆ ತಂಡದ ಆಟಗಾರ ಶಿಖರ್ ಧವನ್ (Shikhar Dhawan) ಕೂಡ ಖಡಕ್ ಉತ್ತರ ನೀಡಿದ್ದಾರೆ.

ವಾಸ್ತವವಾಗಿ ಈ ಟೂರ್ನಮೆಂಟ್​ನ ಲೀಗ್ ಸುತ್ತಿನಲ್ಲಿ ಭಾರತ-ಪಾಕಿಸ್ತಾನ ತಂಡಗಳು ಪರಸ್ಪರ ಆಡಬೇಕಿತ್ತು. ಆದರೆಪಂದ್ಯಕ್ಕೆ 12 ಗಂಟೆಗಳ ಮೊದಲು ಭಾರತೀಯ ಆಟಗಾರರು ಪಾಕ್ ವಿರುದ್ಧ ಆಡಲು ನಿರಾಕರಿಸಿದ್ದರಿಂದ ಪಂದ್ಯವನ್ನು ರದ್ದುಗೊಳಿಸಬೇಕಾಯಿತು. ಇದೀಗ ಮುಂದಿನ ಸುತ್ತಿನಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಮತ್ತೆ ಎದುರಾಗುವ ಸಾಧ್ಯತೆಗಳಿವೆ. ಹೀಗಾಗಿ ಈ ಪಂದ್ಯದ ಕುರಿತು ಪತ್ರಕರ್ತರೊಬ್ಬರು ಇಂಡಿಯಾ ಚಾಂಪಿಯನ್ಸ್ ತಂಡದ ಆರಂಭಿಕ ಆಟಗಾರ ಶಿಖರ್ ಧವನ್ ಬಳಿ ಈ ಪ್ರಶ್ನೆ ಕೇಳಿದ್ದಾರೆ.

ಶಿಖರ್ ಧವನ್ ಹೇಳಿದ್ದೇನು?

ವಾಸ್ತವವಾಗಿ ಈ ಲೀಗ್​ನಲ್ಲಿ ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯ ರದ್ದಾಗಲು ಶಿಖರ್ ಧವನ್ ಪ್ರಮುಖ ಕಾರಣ ಎಂದು ಪಾಕಿಸ್ತಾನಿ ಆಟಗಾರರು ದೂಷಿಸಿದ್ದರು. ಇದೀಗ ಪಾಕಿಸ್ತಾನಿ ಪತ್ರಕರ್ತರೊಬ್ಬರು ಸೆಮಿಫೈನಲ್‌ನಲ್ಲಿ ಪಾಕಿಸ್ತಾನ ತಂಡ, ಭಾರತದ ಎದುರಾದರೆ ಆ ಪಂದ್ಯವನ್ನು ನೀವು ಆಡುವುದಿಲ್ಲವಾ ಎಂದು ಧವನ್‌ಗೆ ಪ್ರಶ್ನೆ ಕೇಳಿದ್ದಾರೆ. ಇದಕ್ಕೆ ಉತ್ತರವಾಗಿ ಧವನ್,‘ಅಣ್ಣ, ಈ ಪ್ರಶ್ನೆ ಕೇಳಲು ಇದು ಸರಿಯಾದ ಜಾಗವಲ್ಲ. ಆದಾಗ್ಯೂ ನೀವು ಈ ಪ್ರಶ್ನೆಯನ್ನು ಕೇಳುವುದರಿಂದ ನಾನು ಒತ್ತಡಕ್ಕೆ ಸಿಲುಕಿ ಏನಾದರೂ ಹೇಳುತ್ತೇನೆ ಎಂದು ನೀವು ಭಾವಿಸುತ್ತೀರಿ. ಆದರೆ ನಾನು ಆ ರೀತಿಯಾಗಿ ಏನನ್ನು ಹೇಳುವುದಿಲ್ಲ. ನೀವು ಈ ಪ್ರಶ್ನೆಯನ್ನು ಕೇಳಬಾರದಿತ್ತು. ಆದರೂ ಹೇಳುತ್ತೀನಿ ಕೇಳಿ, ನಾವು ಮೊದಲು ಆಡಿಲ್ಲವೆಂದಾಗ, ಈಗಲೂ ಆಡುವುದಿಲ್ಲ ಎಂದಿದ್ದಾರೆ.

ಏಷ್ಯಾಕಪ್​ನಲ್ಲಿ ಭಾರತ-ಪಾಕಿಸ್ತಾನ ಪಂದ್ಯ

ಶಿಖರ್ ಧವನ್, ಪಾಕಿಸ್ತಾನದೊಂದಿಗೆ ಪಂದ್ಯವನ್ನು ಆಡುವುದಿಲ್ಲ ಎಂದು ಬಹಿರಂಗವಾಗಿಯೇ ಹೇಳಿಕೆ ನೀಡಿದ್ದಾರೆ. ಆದರೆ ಬಿಸಿಸಿಐ ಮಾತ್ರ ಪಾಕಿಸ್ತಾನದ ವಿರುದ್ಧ ಏಷ್ಯಾಕಪ್​ನಲ್ಲಿ ಆಡುವುದನ್ನು ಖಚಿತಪಡಿಸಿದೆ. ಏಷ್ಯಾಕಪ್​ನಲ್ಲಿ ಎರಡೂ ತಂಡಗಳು ಒಂದೇ ಗುಂಪಿನಲ್ಲಿದ್ದು, ಟೂರ್ನಿಯಲ್ಲಿ 3 ಬಾರಿ ಮುಖಾಮುಖಿಯಾಗುವ ಸಾಧ್ಯತೆಗಳಿವೆ. ಹೀಗಿರುವಾಗ ಮುಂದಿನ ದಿನಗಳಲ್ಲಿ ಬಿಸಿಸಿಐನ ಈ ನಡೆಗೆ ಭಾರತೀಯರು ಯಾವ ರೀತಿ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ಕಾದುನೋಡಬೇಕಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:25 pm, Sun, 27 July 25

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ