India Playing XI 3rd ODI: ಧವನ್ ಕಮ್​ಬ್ಯಾಕ್, ಥಾಕೂರ್ ಔಟ್: 3ನೇ ಏಕದಿನಕ್ಕೆ ಭಾರತದಲ್ಲಿ ಮೂರು ಬದಲಾವಣೆ?

IND vs WI, 3rd ODI: ಭಾರತ ಪರ ಮೊದಲೆರಡು ಪಂದ್ಯದಿಂದ ಅವಕಾಶ ವಂಚಿತರಾಗಿದ್ದ ಆಟಗಾರರು ಇಂದು ಕಣಕ್ಕಿಳಿಯುವ ನಿರೀಕ್ಷೆಯಿದೆ. ಶಿಖರ್ ಧವನ್ ಹಾಗೂ ಶ್ರೇಯಸ್ ಅಯ್ಯರ್ ಕೋವಿಡ್​ನಿಂದ ಗುಣಮುಖರಾಗಿದ್ದು ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ. ಹಾಗಾದ್ರೆ ಮೂರನೇ ಏಕದಿನ ಪಂದ್ಯಕ್ಕೆ ಭಾರತ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಬಗ್ಗೆ ನೋಡುವುದಾದರೆ…

India Playing XI 3rd ODI: ಧವನ್ ಕಮ್​ಬ್ಯಾಕ್, ಥಾಕೂರ್ ಔಟ್: 3ನೇ ಏಕದಿನಕ್ಕೆ ಭಾರತದಲ್ಲಿ ಮೂರು ಬದಲಾವಣೆ?
India Playing XI vs Wes Indies T20
Follow us
TV9 Web
| Updated By: Vinay Bhat

Updated on: Feb 11, 2022 | 9:14 AM

ಆಫ್ರಿಕಾ ನೆಲದಲ್ಲಿ ನಡೆದ ಏಕದಿನ ಸರಣಿಯಲ್ಲಿ ವೈಟ್​ವಾಷ್ ಮುಖಭಂಗಕ್ಕೆ ಒಳಗಾಗಿದ್ದ ಟೀಮ್ ಇಂಡಿಯಾ (Team India) ಇದೀಗ ರೋಹಿತ್ ಶರ್ಮಾ ನಾಯಕತ್ವದಲ್ಲಿ ಭರ್ಜರಿ ಕಮ್​ಬ್ಯಾಕ್ ಮಾಡಿದೆ. ವೆಸ್ಟ್ ಇಂಡೀಸ್ ವಿರುದ್ಧದ ಏಕದಿನದಲ್ಲಿ ಈಗಾಗಲೇ 2-0 ಮುನ್ನಡೆ ಪಡೆದುಕೊಂಡು ಸರಣಿ ವಶಪಡಿಸಕೊಂಡಿರುವ ಭಾರತ ತಂಡ ಇದೀಗ ಕ್ಲೀನ್​ಸ್ವೀಪ್ ಮಾಡಲು ಎದುರು ನೋಡುತ್ತಿದೆ. ಇಂದು ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಅಂತಿಮ ಮೂರನೇ ಏಕದಿನ ಪಂದ್ಯ ಜರುಗಲಿದ್ದು ಸಾಕಷ್ಟು ಕುತೂಹಲ ಕೆರಳಿಸಿದೆ. ಇತ್ತ ಕೆರಿಬಿಯನ್ನರು ನಾಯಕ ಕೀರೊನ್ ಪೊಲಾರ್ಡ್ ಅನುಪಸ್ಥಿತಿಯಲ್ಲೇ ಇಂದುಕೂಡ ಕಣಕ್ಕಿಳಿಯಲಿದೆ. ಭಾರತ ಪರ ಮೊದಲೆರಡು ಪಂದ್ಯದಿಂದ ಅವಕಾಶ ವಂಚಿತರಾಗಿದ್ದ ಆಟಗಾರರು ಇಂದು ಕಣಕ್ಕಿಳಿಯುವ ನಿರೀಕ್ಷೆಯಿದೆ. ಶಿಖರ್ ಧವನ್ (Shikhar Dhawan) ಹಾಗೂ ಶ್ರೇಯಸ್ ಅಯ್ಯರ್ ಕೋವಿಡ್​ನಿಂದ ಗುಣಮುಖರಾಗಿದ್ದು ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ. ಹಾಗಾದ್ರೆ ಮೂರನೇ ಏಕದಿನ ಪಂದ್ಯಕ್ಕೆ ಭಾರತ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ (India Playing XI) ಬಗ್ಗೆ ನೋಡುವುದಾದರೆ…

ರೋಹಿತ್ ಶರ್ಮಾ ಜೊತೆ ಎರಡನೇ ಏಕದಿನದಲ್ಲಿ ಇನ್ನಿಂಗ್ಸ್ ಆರಂಭಿಸಿದ್ದ ರಿಷಭ್ ಪಂತ್ ಕಮಾಲ್ ಮಾಡಲಿಲ್ಲ. ಹೀಗಾಗಿ ಅವರು ತಮ್ಮ ಐದು ಅಥವಾ ಆರನೇ ಕ್ರಮಾಂಕಕ್ಕೆ ಮರಳಲಿದ್ದಾರೆ. ಹಿಟ್​ಮ್ಯಾನ್ ಜೊತೆ ಶಿಖರ್ ಧವನ್ ಬ್ಯಾಟ್ ಬೀಸಲು ಕಣಕ್ಕಿಳಿಯಲಿದ್ದಾರೆ. ಧವನ್ ಲಭ್ಯವಿರುವ ಬಗ್ಗೆ ಈಗಾಗಲೇ ನಾಯಕ ರೋಹಿತ್ ಖಚಿತ ಪಡಿಸಿದ್ದಾರೆ. ವಿರಾಟ್ ಕೊಹ್ಲಿ ಮೂರನೇ ಕ್ರಮಾಂಕದಲ್ಲಿ ಆಡಲಿದ್ದು, ಅವರ ಬ್ಯಾಟ್​ನಿಂದ ರನ್ ಬರುತ್ತಿಲ್ಲ ಎಂಬುದು ಬೇಸರದ ಸಂಗತಿ. ಕೆಎಲ್ ರಾಹುಲ್ ತಂಡಕ್ಕೆ ಕಮ್​ಬ್ಯಾಕ್ ಮಾಡಿರುವುದು ಬಲ ಹೆಚ್ಚಿದೆ. ಹೀಗಾಗಿ ಇವರು ಮಧ್ಯಮ ಕ್ರಮಾಂಕದ ಪ್ರಮುಖ ಅಸ್ತ್ರವಾಗಿದ್ದಾರೆ.

ಇತ್ತ ಸೂರ್ಯಕುಮಾರ್ ಯಾದವ್ ಕೂಡ ಬೊಂಬಾಟ್ ಫಾರ್ಮ್​​ನಲ್ಲಿದ್ದಾರೆ. ಆದರೆ, ಇವರಿಗೆ ವಿಶ್ರಾಂತಿ ನೀಡಿ ಶ್ರೇಯಸ್ ಅಯ್ಯರ್​ಗೆ ಅವಕಾಶ ನೀಡುವ ಸಾಧ್ಯತೆ ಕೂಡ ಇದೆ. ಆಲ್ರೌಂಡರ್ ದೀಪಕ್ ಹೂಡ ಕಡೆಯಿಂದ ಸಾಧಾರಣ ಪ್ರದರ್ಶನವಷ್ಟೆ ಬರುತ್ತಿದೆ. ಇವರಿಗೆ ಇನ್ನೊಂದು ಅವಕಾಶ ನೀಡಿದರೆ ತಂಡದಲ್ಲಿ ಸ್ಥಾನ ಉಳಿಸಿಕೊಳ್ಳಲು ಒಂದು ದೊಡ್ಡ ಇನ್ನಿಂಗ್ಸ್ ಆಡಬೇಕಿದೆ. ಟೀಮ್ ಇಂಡಿಯಾದ ಬೌಲಿಂಗ್ ವಿಭಾಗದಲ್ಲಿ ಪ್ರಮುಖ ಬದಲಾವಣೆ ನಿರೀಕ್ಷಿಸಲಾಗಿದೆ. ಶಾರ್ದುಲ್ ಥಾಕೂರ್ ಆಟ ಬ್ಯಾಟಿಂಗ್ – ಬೌಲಿಂಗ್​ನಲ್ಲಿ ನಡೆಯುತ್ತಿಲ್ಲ. ಹೀಗಾಗಿ ದೀಪಕ್ ಚಹರ್​ಗೆ ಅವಕಾಶ ಖಚಿತ.

ಇತ್ತ ವಾಷಿಂಗ್ಟನ್ ಸುಂದರ್ ಅವರನ್ನು ಈ ಪಂದ್ಯದಿಂದ ಹೊರಗಿಡುವ ಸಾಧ್ಯತೆಯಿದ್ದು ಅವಕಾಶಕ್ಕಾಗಿ ಕಾಯುತ್ತಿರುವ ಕುಲ್ದೀಪ್​ ಯಾದವ್ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಬಹುದು. ಪ್ರಸಿದ್ಧ್ ಕೃಷ್ಣ ಎರಡನೇ ಏಕದಿನದಲ್ಲಿ 4 ವಿಕೆಟ್ ಕಿತ್ತು ಮಿಂಚಿ ಭರವಸೆ ಮೂಡಿಸಿದ್ದಾರೆ. ಮೊಹಮ್ಮದ್ ಸಿರಾಜ್ ಕೂಡ ಆರಂಭದಲ್ಲಿ ಬ್ರೇಕ್ ತಂದುಕೊಡುತ್ತಿದ್ದಾರೆ. ಇದರ ನಡುವೆ ಆವೇಶ್ ಖಾನ್ ಪದಾರ್ಪಣೆ ಮಾಡಿದರೆ ಅಚ್ಚರಿ ಪಡಬೇಕಿಲ್ಲ.

ಭಾರತದ ಸಂಭಾವ್ಯ ಪ್ಲೇಯಿಂಗ್ XI:

ರೋಹಿತ್ ಶರ್ಮಾ (ನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್/ ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್- ಕೀಪರ್), ದೀಪಕ್ ಹೂಡ, ದೀಪಕ್ ಚಹರ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಲ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್.

IND vs WI: ಇಂದು ಭಾರತ- ವೆಸ್ಟ್ ಇಂಡೀಸ್ ಅಂತಿಮ ಏಕದಿನ: ಸರಣಿ ಕ್ಲೀನ್​ಸ್ವೀಪ್ ಮಾಡುತ್ತಾ ರೋಹಿತ್ ಪಡೆ?

ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ