AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ODI Rankings: ಏಕದಿನ ರ‍್ಯಾಂಕಿಂಗ್ ಪ್ರಕಟ: ರೋಹಿತ್-ಕೊಹ್ಲಿ ಶ್ರೇಯಾಂಕದಲ್ಲಿ ಕುಸಿತ

ICC ODI Rankings: ಬೌಲಿಂಗ್ ವಿಭಾಗದಲ್ಲಿ ಟಾಪ್ 10 ನಲ್ಲಿ ಟೀಮ್ ಇಂಡಿಯಾದ ಏಕೈಕ ಬೌಲರ್ ಕಾಣಿಸಿಕೊಂಡಿದ್ದಾರೆ. ನ್ಯೂಜಿಲೆಂಡ್‌ನ ಎಡಗೈ ವೇಗಿ ಟ್ರೆಂಟ್ ಬೌಲ್ಟ್ ಮತ್ತೊಮ್ಮೆ ನಂಬರ್ ಒನ್ ಆಗಿ ಹೊರಹೊಮ್ಮಿದ್ದಾರೆ.

ODI Rankings: ಏಕದಿನ ರ‍್ಯಾಂಕಿಂಗ್ ಪ್ರಕಟ: ರೋಹಿತ್-ಕೊಹ್ಲಿ ಶ್ರೇಯಾಂಕದಲ್ಲಿ ಕುಸಿತ
VIrat kohli-Rohit sharma
TV9 Web
| Edited By: |

Updated on: Jul 27, 2022 | 6:32 PM

Share

ICC ODI Rankings: ಐಸಿಸಿ ನೂತನ ODI ರ‍್ಯಾಂಕಿಂಗ್ ಪಟ್ಟಿಯನ್ನು (ICC ODI Rankings) ಪ್ರಕಟಿಸಿದೆ. ಈ ಬಾರಿ ಕೂಡ ಪಾಕಿಸ್ತಾನ್ ತಂಡದ ನಾಯಕ ಬಾಬರ್ ಆಜಂ ಅಗ್ರಸ್ಥಾನ ಅಲಂಕರಿಸಿದ್ದಾರೆ. ಇನ್ನು ಟಾಪ್ 10 ರ‍್ಯಾಂಕಿಂಗ್ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಮೂವರು ಆಟಗಾರರು ಮಾತ್ರ ಕಾಣಿಸಿಕೊಂಡಿದ್ದಾರೆ. ಹೊಸ ಶ್ರೇಯಾಂಕ ಪಟ್ಟಿಯಲ್ಲಿ ಟೀಮ್ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಹಾಗೂ ಹಾಲಿ ನಾಯಕ ರೋಹಿತ್ ಶರ್ಮಾ ಒಂದು ಸ್ಥಾನ ಕುಸಿತಕ್ಕೊಳಗಾಗಿದ್ದಾರೆ. ಹಾಗೆಯೇ ಪಾಕಿಸ್ತಾನ್ ಬ್ಯಾಟ್ಸ್​ಮನ್ ಇಮಾಮ್​ ಉಲ್ ಹಕ್ ಶ್ರೇಯಾಂಕ ಪಟ್ಟಿಯಲ್ಲಿ ಮೇಲೇರಿದ್ದಾರೆ.

ವೆಸ್ಟ್ ಇಂಡೀಸ್ ವಿರುದ್ದದ ಏಕದಿನ ಸರಣಿಯಿಂದ ಹೊರಗುಳಿದಿದ್ದ  ರೋಹಿತ್ ಶರ್ಮಾ ಒಂದು ಸ್ಥಾನ ಕುಸಿತ ಕಂಡಿದ್ದು, ನೂತನ ಶ್ರೇಯಾಂಕ ಪಟ್ಟಿಯಲ್ಲಿ 6ನೇ ಸ್ಥಾನಕ್ಕೆ ಇಳಿದಿದ್ದಾರೆ. ಹಾಗೆಯೇ ಕಳೆದ ಬಾರಿ 4ನೇ ಸ್ಥಾನದಲ್ಲಿದ್ದ ವಿರಾಟ್ ಕೊಹ್ಲಿ ಈ ಬಾರಿ 5ನೇ ಸ್ಥಾನಕ್ಕೆ ಕುಸಿದಿದ್ದಾರೆ.

ಇನ್ನು ವೆಸ್ಟ್ ಇಂಡೀಸ್ ವಿರುದ್ದದ ಸರಣಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿರುವ ಶಿಖರ್ ಧವನ್ 13ನೇ ಸ್ಥಾನಕ್ಕೆ ಏರಿದ್ದಾರೆ. ಹಾಗೆಯೇ ವಿಂಡೀಸ್ ವಿರುದ್ದ ಅಬ್ಬರಿಸಿದ್ದ ಶ್ರೇಯಸ್ ಅಯ್ಯರ್ 6 ಸ್ಥಾನ ಮೇಲೇರಿದ್ದು, ಈ ಮೂಲಕ 54ನೇ ಸ್ಥಾನಕ್ಕೆ ತಲುಪಿದ್ದಾರೆ. ಹಾಗೆಯೇ ಆಲ್​ರೌಂಡರ್ ವಿಭಾಗದಲ್ಲಿ ಹಾರ್ದಿಕ್ ಪಾಂಡ್ಯ ಟಾಪ್ 10 ನಲ್ಲಿ ಕೊನೆಯ ಸ್ಥಾನ ಅಲಂಕರಿಸಿದ್ದಾರೆ.

ಇದನ್ನೂ ಓದಿ
Image
Team India: 7 ತಿಂಗಳಲ್ಲಿ 7 ನಾಯಕರು: ವಿಶೇಷ ದಾಖಲೆ ಬರೆದ ಟೀಮ್ ಇಂಡಿಯಾ
Image
ಸಚಿನ್, ಧೋನಿಗೂ ಸಿಕ್ಕಿಲ್ಲ ಈ ಗೌರವ: ಇಂಗ್ಲೆಂಡ್ ಕ್ರಿಕೆಟ್ ಸ್ಟೇಡಿಯಂಗೆ ಭಾರತೀಯ ಕ್ರಿಕೆಟಿಗನ ಹೆಸರು..!
Image
Cheteshwar Pujara: ಒಟ್ಟು 997 ರನ್​: ಕೌಂಟಿ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆದ ಪೂಜಾರ
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಬೌಲಿಂಗ್ ವಿಭಾಗದಲ್ಲಿ ಟಾಪ್ 10 ನಲ್ಲಿ ಟೀಮ್ ಇಂಡಿಯಾದ ಏಕೈಕ ಬೌಲರ್ ಕಾಣಿಸಿಕೊಂಡಿದ್ದಾರೆ. ನ್ಯೂಜಿಲೆಂಡ್‌ನ ಎಡಗೈ ವೇಗಿ ಟ್ರೆಂಟ್ ಬೌಲ್ಟ್ ಮತ್ತೊಮ್ಮೆ ನಂಬರ್ ಒನ್ ಆಗಿ ಹೊರಹೊಮ್ಮಿದ್ದರೆ, ಭಾರತದ ಜಸ್ಪ್ರೀತ್ ಬುಮ್ರಾ ಎರಡನೇ ಸ್ಥಾನದಲ್ಲಿದ್ದಾರೆ. ನೂತನ ರ‍್ಯಾಂಕಿಂಗ್ ಪಟ್ಟಿ ಈ ಕೆಳಗಿನಂತಿದೆ.

ಏಕದಿನ ಬ್ಯಾಟಿಂಗ್​ ರ‍್ಯಾಂಕಿಂಗ್ ಪಟ್ಟಿ:

  1. ಬಾಬರ್ ಆಜಂ (ಪಾಕಿಸ್ತಾನ್)
  2. ಇಮಾಮ್ ಉಲ್ ಹಕ್ (ಪಾಕಿಸ್ತಾನ್)
  3.  ರಸ್ಸಿ ವಂಡರ್ ಡುಸ್ಸೆನ್ (ಸೌತ್ ಆಫ್ರಿಕಾ)
  4. ಕ್ವಿಂಟನ್ ಡಿಕಾಕ್ (ಸೌತ್ ಆಫ್ರಿಕಾ)
  5.  ವಿರಾಟ್ ಕೊಹ್ಲಿ (ಭಾರತ)
  6.  ರೋಹಿತ್ ಶರ್ಮಾ (ಭಾರತ)
  7.  ರಾಸ್ ಟೇಲರ್ (ನ್ಯೂಜಿಲೆಂಡ್)
  8. ಡೇವಿಡ್ ವಾರ್ನರ್ (ಆಸ್ಟ್ರೇಲಿಯಾ)
  9. ಜಾನಿ ಬೈರ್​ಸ್ಟೋವ್ (ಇಂಗ್ಲೆಂಡ್)
  10. ಆರೋನ್ ಫಿಂಚ್ (ಆಸ್ಟ್ರೇಲಿಯಾ)

ಏಕದಿನ ಬೌಲರ್​ ರ‍್ಯಾಂಕಿಂಗ್ ಪಟ್ಟಿ:

  1. ಟ್ರೆಂಟ್ ಬೌಲ್ಟ್ (ನ್ಯೂಜಿಲೆಂಡ್)
  2. ಜಸ್​ಪ್ರೀತ್ ಬುಮ್ರಾ (ಭಾರತ)
  3. ಶಾಹೀನ್ ಅಫ್ರಿದಿ (ಪಾಕಿಸ್ತಾನ್)
  4. ಜೋಶ್ ಹ್ಯಾಝಲ್​ವುಡ್ (ಆಸ್ಟ್ರೇಲಿಯಾ)
  5. ಮುಜೀಬುರ್ ರೆಹಮಾನ್ (ಅಫ್ಘಾನಿಸ್ತಾನ್)
  6. ಮೆಹದಿ ಹಸನ್ (ಬಾಂಗ್ಲಾದೇಶ್)
  7. ಮ್ಯಾಟ್ ಹೆನ್ರಿ (ನ್ಯೂಜಿಲೆಂಡ್)
  8. ಮೊಹಮ್ಮದ್ ನಬಿ (ಅಫ್ಘಾನಿಸ್ತಾನ್)
  9. ರಶೀದ್ ಖಾನ್ (ಅಫ್ಘಾನಿಸ್ತಾನ್)
  10. ಕ್ರಿಸ್ ವೋಕ್ಸ್ (ಇಂಗ್ಲೆಂಡ್)

ಏಕದಿನ ಆಲ್​ರೌಂಡರ್ ರ‍್ಯಾಂಕಿಂಗ್ ಪಟ್ಟಿ:

  1. ಶಕೀಬ್ ಅಲ್ ಹಸನ್ (ಬಾಂಗ್ಲಾದೇಶ್)
  2. ಮೊಹಮ್ಮದ್ ನಬಿ (ಅಫ್ಘಾನಿಸ್ತಾನ್)
  3. ರಶೀದ್ ಖಾನ್ (ಅಫ್ಘಾನಿಸ್ತಾನ್)
  4. ಮಿಚೆಲ್ ಸ್ಯಾಂಟ್ನರ್ (ನ್ಯೂಜಿಲೆಂಡ್)
  5. ಕಾಲಿನ್ ಗ್ರ್ಯಾಂಡ್​ಹೋಮ್ (ನ್ಯೂಜಿಲೆಂಡ್)
  6. ಮೆಹದಿ ಹಸನ್ (ಬಾಂಗ್ಲಾದೇಶ್)
  7. ಝೀಶಾನ್ ಮಕ್ಸೂದ್ (ಯುಎಇ)
  8. ಕ್ರಿಸ್ ವೋಕ್ಸ್ (ಇಂಗ್ಲೆಂಡ್)
  9. ಇಮಾದ್ ವಾಸಿಂ (ಪಾಕಿಸ್ತಾನ್)
  10. ಹಾರ್ದಿಕ್ ಪಾಂಡ್ಯ (ಭಾರತ)

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ