
ICC ODI Rankings: ಐಸಿಸಿ ನೂತನ ODI ರ‍್ಯಾಂಕಿಂಗ್ ಪಟ್ಟಿಯನ್ನು (ICC ODI Rankings) ಪ್ರಕಟಿಸಿದೆ. ಈ ಬಾರಿ ಕೂಡ ಪಾಕಿಸ್ತಾನ್ ತಂಡದ ನಾಯಕ ಬಾಬರ್ ಆಜಂ ಅಗ್ರಸ್ಥಾನ ಅಲಂಕರಿಸಿದ್ದಾರೆ. ಇನ್ನು ಟಾಪ್ 10 ರ‍್ಯಾಂಕಿಂಗ್ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಮೂವರು ಆಟಗಾರರು ಮಾತ್ರ ಕಾಣಿಸಿಕೊಂಡಿದ್ದಾರೆ. ಹೊಸ ಶ್ರೇಯಾಂಕ ಪಟ್ಟಿಯಲ್ಲಿ ಟೀಮ್ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಹಾಗೂ ಹಾಲಿ ನಾಯಕ ರೋಹಿತ್ ಶರ್ಮಾ ಒಂದು ಸ್ಥಾನ ಕುಸಿತಕ್ಕೊಳಗಾಗಿದ್ದಾರೆ. ಹಾಗೆಯೇ ಪಾಕಿಸ್ತಾನ್ ಬ್ಯಾಟ್ಸ್ಮನ್ ಇಮಾಮ್ ಉಲ್ ಹಕ್ ಶ್ರೇಯಾಂಕ ಪಟ್ಟಿಯಲ್ಲಿ ಮೇಲೇರಿದ್ದಾರೆ.
ವೆಸ್ಟ್ ಇಂಡೀಸ್ ವಿರುದ್ದದ ಏಕದಿನ ಸರಣಿಯಿಂದ ಹೊರಗುಳಿದಿದ್ದ ರೋಹಿತ್ ಶರ್ಮಾ ಒಂದು ಸ್ಥಾನ ಕುಸಿತ ಕಂಡಿದ್ದು, ನೂತನ ಶ್ರೇಯಾಂಕ ಪಟ್ಟಿಯಲ್ಲಿ 6ನೇ ಸ್ಥಾನಕ್ಕೆ ಇಳಿದಿದ್ದಾರೆ. ಹಾಗೆಯೇ ಕಳೆದ ಬಾರಿ 4ನೇ ಸ್ಥಾನದಲ್ಲಿದ್ದ ವಿರಾಟ್ ಕೊಹ್ಲಿ ಈ ಬಾರಿ 5ನೇ ಸ್ಥಾನಕ್ಕೆ ಕುಸಿದಿದ್ದಾರೆ.
ಇನ್ನು ವೆಸ್ಟ್ ಇಂಡೀಸ್ ವಿರುದ್ದದ ಸರಣಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿರುವ ಶಿಖರ್ ಧವನ್ 13ನೇ ಸ್ಥಾನಕ್ಕೆ ಏರಿದ್ದಾರೆ. ಹಾಗೆಯೇ ವಿಂಡೀಸ್ ವಿರುದ್ದ ಅಬ್ಬರಿಸಿದ್ದ ಶ್ರೇಯಸ್ ಅಯ್ಯರ್ 6 ಸ್ಥಾನ ಮೇಲೇರಿದ್ದು, ಈ ಮೂಲಕ 54ನೇ ಸ್ಥಾನಕ್ಕೆ ತಲುಪಿದ್ದಾರೆ. ಹಾಗೆಯೇ ಆಲ್ರೌಂಡರ್ ವಿಭಾಗದಲ್ಲಿ ಹಾರ್ದಿಕ್ ಪಾಂಡ್ಯ ಟಾಪ್ 10 ನಲ್ಲಿ ಕೊನೆಯ ಸ್ಥಾನ ಅಲಂಕರಿಸಿದ್ದಾರೆ.
ಬೌಲಿಂಗ್ ವಿಭಾಗದಲ್ಲಿ ಟಾಪ್ 10 ನಲ್ಲಿ ಟೀಮ್ ಇಂಡಿಯಾದ ಏಕೈಕ ಬೌಲರ್ ಕಾಣಿಸಿಕೊಂಡಿದ್ದಾರೆ. ನ್ಯೂಜಿಲೆಂಡ್‌ನ ಎಡಗೈ ವೇಗಿ ಟ್ರೆಂಟ್ ಬೌಲ್ಟ್ ಮತ್ತೊಮ್ಮೆ ನಂಬರ್ ಒನ್ ಆಗಿ ಹೊರಹೊಮ್ಮಿದ್ದರೆ, ಭಾರತದ ಜಸ್ಪ್ರೀತ್ ಬುಮ್ರಾ ಎರಡನೇ ಸ್ಥಾನದಲ್ಲಿದ್ದಾರೆ. ನೂತನ ರ‍್ಯಾಂಕಿಂಗ್ ಪಟ್ಟಿ ಈ ಕೆಳಗಿನಂತಿದೆ.
ಏಕದಿನ ಬ್ಯಾಟಿಂಗ್ ರ‍್ಯಾಂಕಿಂಗ್ ಪಟ್ಟಿ:
ಏಕದಿನ ಬೌಲರ್ ರ‍್ಯಾಂಕಿಂಗ್ ಪಟ್ಟಿ:
ಏಕದಿನ ಆಲ್ರೌಂಡರ್ ರ‍್ಯಾಂಕಿಂಗ್ ಪಟ್ಟಿ: