2ನೇ ಮದುವೆಗೆ ಶಿಖರ್ ಧವನ್ ತಯಾರಿ? ಚೆಂದುಳ್ಳಿ ಚೆಲುವೆ ಜೊತೆ ಕಾಣಿಸಿಕೊಂಡ ಗಬ್ಬರ್

Shikhar Dhawan: ಕ್ರಿಕೆಟ್‌ಗೆ ವಿದಾಯ ಹೇಳಿದ ನಂತರ, ಖಾಸಗಿ ಜೀವನಕ್ಕೆ ಹೆಚ್ಚು ಹೊತ್ತು ನೀಡಿರುವ ಶಿಖರ್ ಧವನ್ ಇದೀಗ ಹೊಸ ಗೆಳತಿಯೊಂದಿಗೆ ಕಾಣಿಸಿಕೊಂಡಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ವಿಮಾನ ನಿಲ್ದಾಣದಲ್ಲಿ ವಿದೇಶಿ ಯುವತಿಯೊಂದಿಗೆ ಧವನ್ ಕಾಣಿಸಿಕೊಂಡಿರುವ ವಿಡಿಯೋವೊಂದು ವೈರಲ್ ಆಗುತ್ತಿದೆ.

2ನೇ ಮದುವೆಗೆ ಶಿಖರ್ ಧವನ್ ತಯಾರಿ? ಚೆಂದುಳ್ಳಿ ಚೆಲುವೆ ಜೊತೆ ಕಾಣಿಸಿಕೊಂಡ ಗಬ್ಬರ್
ಶಿಖರ್ ಧವನ್
Follow us
ಪೃಥ್ವಿಶಂಕರ
|

Updated on:Nov 04, 2024 | 5:56 PM

2024 ರಲ್ಲಿ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದ ಟೀಂ ಇಂಡಿಯಾದ ಮಾಜಿ ಆರಂಭಿಕ ಆಟಗಾರ ಶಿಖರ್ ಧವನ್​ ತಮ್ಮ ವೈಯಕ್ತಿಕ ಬದುಕಿನಲ್ಲಿ ಎರಡನೇ ಇನ್ನಿಂಗ್ಸ್ ಆರಂಭಿಸುವ ಸುಳಿವು ನೀಡಿದ್ದಾರೆ. ಇದಕ್ಕೆ ಪೂರಕವಾಗಿ ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋವೊಂದು ಹರಿದಾಡುತ್ತಿದ್ದು, ಅದರಲ್ಲಿ ಗಬ್ಬರ್ ಸಿಂಗ್ ಖ್ಯಾತಿಯ ಶಿಖರ್ ಧವನ್, ಚೆಂದುಳ್ಳಿ ಚೆಲುವೆಯೊಂದಿಗೆ ಓಡಾಟ ನಡೆಸುತ್ತಿರುವುದನ್ನು ಕಾಣಬಹುದಾಗಿದೆ. ಪ್ರಸ್ತುತ ಧವನ್ ಜೊತೆಗೆ ಕ್ಯಾಮೆರಾ ಕಣ್ಣಿಗೆ ಸೆರೆ ಸಿಕ್ಕ ಈ ಮಿಸ್ಟ್ರಿ ಗರ್ಲ್​ ಯಾರೆಂಬುದು ತಿಳಿದುಬಂದಿಲ್ಲ ಆದಾಗ್ಯೂ ಧವನ್, ಈ ಸುಂದರಿಯೊಂದಿಗೆ ಪ್ರೀತಿಯಲ್ಲಿ ಬಿದ್ದಿದ್ದಾರೆ ಎಂಬ ಮಾತು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

ವಿಮಾನ ನಿಲ್ದಾಣದಲ್ಲಿ ಹುಡುಗಿ ಜೊತೆ ಧವನ್

ಪಾಪರಾಜಿಗಳ ಕ್ಯಾಮರಾ ಕಣ್ಣಿನಲ್ಲಿ ಸೆರೆ ಸಿಕ್ಕಿರುವ ವಿಡಿಯೋದಲ್ಲಿ ಶಿಖರ್ ಧವನ್ ಕಾರಿನಲ್ಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಧವನ್ ನೀಲಿ ಟಿ-ಶರ್ಟ್ ಮತ್ತು ಕಪ್ಪು ಕಾರ್ಗೋವನ್ನು ಧರಿಸಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಧವನ್ ಜೊತೆಗೆ ಹುಡುಗಿ ಕೂಡ ಕಾರಿನಿಂದ ಇಳಿದಿದ್ದು, ಪಾಪರಾಜಿಗಳ ಕ್ಯಾಮೆರಾ ಅವರತ್ತ ವಾಲಿದೆ. ಕೂಡಲೇ ಆಕೆ ಕ್ಯಾಮೆರಾ ಕಣ್ಣಿನಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾರೆ. ಕ್ಯಾಮೆರಾ ನೋಡಿದ ಕೂಡಲೇ ಅವರು ತಮ್ಮ ಮುಖವನ್ನು ಬೇರೆ ಕಡೆ ತಿರುಗಿಸಿದ್ದಾಳೆ. ಆದಾಗ್ಯೂ, ಅವರು ಕ್ಯಾಮೆರಾ ಕಣ್ಣಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ.

ಮಿಸ್ಟರಿ ಗರ್ಲ್ ಯಾರು?

ಇದೀಗ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಈ ಮಿಸ್ಟರಿ ಗರ್ಲ್ ಯಾರು ಎಂಬುದು ಎಲ್ಲರ ಪ್ರಶ್ನೆಯಾಗಿದೆ. ವೀಡಿಯೊದ ಕಾಮೆಂಟ್‌ಗಳಲ್ಲಿ, ಜನರು ಗಬ್ಬರ್‌ನ ಹೊಸ ಪ್ರೇಮಿಯಾಗಿರಬಹುದು ಎಂದು ಹೇಳಿದ್ದಾರೆ. ಹುಡುಗಿ ವಿದೇಶಿಯಂತೆ ಕಾಣುತ್ತಿದ್ದು, ಹೀಗಿರುವಾಗ ಮತ್ತೆ ಗಬ್ಬರ್ ಜೀವನದಲ್ಲಿ ವಿದೇಶಿ ಹುಡುಗಿಯೊಬ್ಬಳು ಬಂದಿದ್ದಾಳೆ ಎಂದು ಜನ ಕಮೆಂಟ್ ಮಾಡಿದ್ದಾರೆ. ಆದರೆ, ಇದುವರೆಗೂ ಈ ವಿದೇಶಿ ಚೆಲುವೆ ಯಾರೆಂಬುದು ಸ್ಪಷ್ಟವಾಗಿಲ್ಲ.

ಕಳೆದ ವರ್ಷವಷ್ಟೇ ವಿಚ್ಛೇದನ

ವಾಸ್ತವವಾಗಿ ಶಿಖರ್ ಧವನ್ ಕಳೆದ ವರ್ಷ ಅಕ್ಟೋಬರ್‌ನಲ್ಲಿ ಪತ್ನಿ ಆಯೇಷಾ ಮುಖರ್ಜಿಯೊಂದಿಗೆ ವಿಚ್ಛೇದನ ಪಡೆದಿದ್ದರು. ಆಯೇಷಾ ಪ್ರಸ್ತುತ ಆಸ್ಟ್ರೇಲಿಯಾದಲ್ಲಿ ತಮ್ಮ ಮಕ್ಕಳೊಂದಿಗೆ ನೆಲೆಸಿದ್ದಾರೆ.   ವಿಚ್ಛೇದನದ ನಂತರ ಹೊಸ ಹುಡುಗಿಯೊಂದಿಗೆ ಧವನ್ ಕಾಣಿಸಿಕೊಂಡಿರುವುದು ಸಾಕಷ್ಟು ಊಹಾಪೋಹಗಳಿಗೆ ಎಡೆ ಮಾಡಿಕೊಟ್ಟಿದೆ. ಶಿಖರ್ ಧವನ್ ಅವರ ಈ ಹೊಸ ಸಂಬಂಧ ಮುಂದಿನ ದಿನಗಳಲ್ಲಿ ಯಾವ ತಿರುವು ಪಡೆಯುತ್ತದೆ ಎಂಬುದು ಈಗ ಕುತೂಹಲಕಾರಿಯಾಗಿದೆ.

ಧವನ್ ವೃತ್ತಿಜೀವನ ಹೀಗಿತ್ತು

ಈ ವರ್ಷವಷ್ಟೇ ಕ್ರಿಕೆಟ್​ಗೆ ಹೇಳಿದ ಧವನ್ ತಮ್ಮ ಅಂತರಾಷ್ಟ್ರೀಯ ವೃತ್ತಿಜೀವನದಲ್ಲಿ 269 ಪಂದ್ಯಗಳನ್ನು ಆಡಿದ್ದಾರೆ. ಇದರಲ್ಲಿ ಅವರು 24 ಶತಕ ಮತ್ತು 44 ಅರ್ಧ ಶತಕಗಳನ್ನು ಸೇರಿದಂತೆ 10867 ರನ್ ಗಳಿಸಿದ್ದಾರೆ. 2015ರ ಏಕದಿನ ವಿಶ್ವಕಪ್‌ನಲ್ಲಿ ಧವನ್ ಭಾರತದ ಪರ ಅತಿ ಹೆಚ್ಚು ರನ್ ಗಳಿಸಿದ ಆಟಗಾರರಾಗಿದ್ದರು. ಆಡಿದ 8 ಪಂದ್ಯಗಳಲ್ಲಿ ಧವನ್ 51.50 ಸರಾಸರಿಯಲ್ಲಿ 412 ರನ್ ಗಳಿಸಿದ್ದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:53 pm, Mon, 4 November 24

ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್