IND VS IRE: ಧವನ್​ ನಿಂಗ್ ವಯಸ್ಸಾಯ್ತೋ! ಐಪಿಎಲ್​ನಲ್ಲಿ ಮಿಂಚಿದರೂ ಟಿ20 ತಂಡದಲ್ಲಿ ಗಬ್ಬರ್​ಗಿಲ್ಲ ಸ್ಥಾನ

IND VS IRE: ದಕ್ಷಿಣ ಆಫ್ರಿಕಾ ವಿರುದ್ಧ ಟಿ20 ತಂಡವನ್ನು ಆಯ್ಕೆ ಮಾಡಿದಾಗ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರು ಶಿಖರ್ ಧವನ್‌ಗೆ ಕರೆ ಮಾಡಿ ಟಿ20ಯಲ್ಲಿ ಯುವಕರಿಗೆ ಅವಕಾಶ ನೀಡುವ ಚಿಂತನೆಯಲ್ಲಿದ್ದೇವೆ ಎಂದು ಧವನ್ ಬಳಿ ಹೇಳಿದ್ದಾರೆ ಎಂದು ವರದಿಯಾಗಿದೆ.

IND VS IRE: ಧವನ್​ ನಿಂಗ್ ವಯಸ್ಸಾಯ್ತೋ! ಐಪಿಎಲ್​ನಲ್ಲಿ ಮಿಂಚಿದರೂ ಟಿ20 ತಂಡದಲ್ಲಿ ಗಬ್ಬರ್​ಗಿಲ್ಲ ಸ್ಥಾನ
ಶಿಖರ್ ಧವನ್
Follow us
| Updated By: ಪೃಥ್ವಿಶಂಕರ

Updated on:Jun 16, 2022 | 2:56 PM

ಐರ್ಲೆಂಡ್ ವಿರುದ್ಧದ 2 ಪಂದ್ಯಗಳ ಟಿ20 ಸರಣಿಗೆ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದೆ. ಹಾರ್ದಿಕ್ ಪಾಂಡ್ಯ (Hardik Pandya) ತಂಡದ ನಾಯಕತ್ವ ಪಡೆದಿದ್ದು, ಸಂಜು ಸ್ಯಾಮ್ಸನ್ (Sanju Samson) ತಂಡಕ್ಕೆ ಮರಳಿದ್ದಾರೆ. ಅದೇ ಸಮಯದಲ್ಲಿ ಐಪಿಎಲ್‌ (IPL)ನಲ್ಲಿ ಅಮೋಘ ಪ್ರದರ್ಶನ ನೀಡಿದ ರಾಹುಲ್ ತ್ರಿಪಾಠಿ ತಂಡಕ್ಕೆ ಮೊದಲ ಪ್ರವೇಶ ಪಡೆದಿದ್ದಾರೆ. ಆದರೆ ತಮ್ಮ ವೇಗದ ಬ್ಯಾಟಿಂಗ್ ಮೂಲಕ ಟೀಂ ಇಂಡಿಯಾಗೆ ಹಲವು ಪಂದ್ಯಗಳನ್ನು ಗೆಲ್ಲಿಸಿಕೊಟ್ಟ ಆಟಗಾರನಿಗೆ ತಂಡದಲ್ಲಿ ಅವಕಾಶ ನೀಡಲಾಗಿಲ್ಲ. ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಟೀಮ್ ಇಂಡಿಯಾವನ್ನು ಚಾಂಪಿಯನ್ ಮಾಡಿದ್ದ ಆಟಗಾರನಿಗೆ ಭಾರತದ ‘ಬಿ’ ತಂಡದಲ್ಲೂ ಅವಕಾಶ ನೀಡಲಾಗಿಲ್ಲ. ನಾವಿಲ್ಲಿ ಈ ಹಿಂದೆ ದಕ್ಷಿಣ ಆಫ್ರಿಕಾ ವಿರುದ್ಧದ ಸ್ವದೇಶಿ ಟಿ 20 ಸರಣಿಗೆ ಆಯ್ಕೆಯಾಗದ ಶಿಖರ್ ಧವನ್ (Shikhar Dhawan) ಬಗ್ಗೆ ಮಾತನಾಡುತ್ತಿದ್ದೇವೆ. ಧವನ್​ಗೆ ಈಗ ಐರ್ಲೆಂಡ್‌ನಂತಹ ದುರ್ಬಲ ತಂಡದ ವಿರುದ್ಧದ ಟಿ 20 ಸರಣಿಗೂ ತಂಡದಲ್ಲಿ ಸ್ಥಾನ ನೀಡಲಾಗಿಲ್ಲ.

ಇದು ಧವನ್ ತಪ್ಪೇ?

ಇದನ್ನೂ ಓದಿ
Image
IND vs IRE: 6 ಎಸೆತಗಳಲ್ಲಿ 6 ಸಿಕ್ಸರ್! ಐಪಿಎಲ್​ನಲ್ಲಿ 413 ರನ್ ಚಚ್ಚಿದ ಬ್ಯಾಟರ್​ಗೆ ಟೀಂ ಇಂಡಿಯಾದಲ್ಲಿ ಸ್ಥಾನ
Image
IND vs IRE: ಐರ್ಲೆಂಡ್ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾ ಪ್ರಕಟ; ಹಾರ್ದಿಕ್​ಗೆ ನಾಯಕತ್ವ! ಹೊಸಬರಿಗೆ ಅವಕಾಶ

ಶಿಖರ್ ಧವನ್ ಅವರಿಗೆ ವಯಸ್ಸಾಗಿದೆ ಮತ್ತು ಅವರ ಸ್ಟ್ರೈಕ್ ರೇಟ್ ಕೂಡ ತುಂಬಾ ಕಡಿಮೆಯಾಗಿದೆ ಎಂದು ಆಗಾಗ್ಗೆ ಆರೋಪಿಸುತ್ತಾರೆ, ಆದರೆ ದಿನೇಶ್ ಕಾರ್ತಿಕ್ ತಂಡದಲ್ಲಿ ಏನು ಮಾಡುತ್ತಿದ್ದಾರೆ? ಅವರ ವಯಸ್ಸು ಶಿಖರಕ್ಕಿಂತ ಹೆಚ್ಚು. ಅಲ್ಲದೆ, ಸ್ಟ್ರೈಕ್ ರೇಟ್ ವಿಚಾರಕ್ಕೆ ಬಂದರೆ ರಿಷಬ್ ಪಂತ್ ಕೂಡ ವೇಗವಾಗಿ ರನ್ ಗಳಿಸುವುದಿಲ್ಲ. ಅವರ ಸ್ಟ್ರೈಕ್ ರೇಟ್ 130ಕ್ಕಿಂತ ಕಡಿಮೆ ಇದೆ. ಅಂದಹಾಗೆ, ದಕ್ಷಿಣ ಆಫ್ರಿಕಾ ವಿರುದ್ಧ ಟಿ20 ತಂಡವನ್ನು ಆಯ್ಕೆ ಮಾಡಿದಾಗ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರು ಶಿಖರ್ ಧವನ್‌ಗೆ ಕರೆ ಮಾಡಿ ಟಿ20ಯಲ್ಲಿ ಯುವಕರಿಗೆ ಅವಕಾಶ ನೀಡುವ ಚಿಂತನೆಯಲ್ಲಿದ್ದೇವೆ ಎಂದು ಧವನ್ ಬಳಿ ಹೇಳಿದ್ದಾರೆ ಎಂದು ವರದಿಯಾಗಿದೆ. ಬಹುಶಃ ಅದಕ್ಕೇ ಧವನ್ ಐರ್ಲೆಂಡ್ ಸರಣಿಗೂ ಆಯ್ಕೆಯಾಗಲಿಲ್ಲ.

ಇದನ್ನೂ ಓದಿ:Shikhar Dhawan Acting Debut: ನಟನೆಯಲ್ಲಿ ಅದೃಷ್ಟ ಪರೀಕ್ಷೆಗಿಳಿದ ಶಿಖರ್ ಧವನ್; ಮೊದಲ ಚಿತ್ರ ಇದೇ ವರ್ಷ ರಿಲೀಸ್!

ಫಿಟ್ನೆಸ್, ಫಾರ್ಮ್ ಚೆನ್ನಾಗಿದ್ದಾಗ ಏನು ಸಮಸ್ಯೆ?

ಶಿಖರ್ ಧವನ್ ಐಪಿಎಲ್ 2022 ರಲ್ಲಿ ಪಂಜಾಬ್ ಕಿಂಗ್ಸ್ ಪರ ಆಡಿ, 14 ಪಂದ್ಯಗಳಲ್ಲಿ 38 ಕ್ಕಿಂತ ಹೆಚ್ಚು ಸರಾಸರಿಯಲ್ಲಿ 460 ರನ್ ಗಳಿಸಿದ್ದಾರೆ. ಈ ಆಟಗಾರ 2016 ರಿಂದ ಐಪಿಎಲ್‌ನ ಪ್ರತಿ ಸೀಸನ್​ನಲ್ಲಿ 400 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. ಆದರೆ ರೋಹಿತ್ ಶರ್ಮಾ ಮತ್ತು ವಿರಾಟ್ ಅವರ ಪ್ರದರ್ಶನ ಕೊಹ್ಲಿ ಕೂಡ ಹೀಗಿರಲಿಲ್ಲ. ಆದರೆ ವಯಸ್ಸಿನ ಕಾರಣ ನೀಡಿ ಧವನ್ ಅವರನ್ನು ತಂಡದಿಂದ ಹೊರಗಿಡಲಾಗಿದೆ. ಈಗ ಅವರು ಐರ್ಲೆಂಡ್ ಸರಣಿಗೂ ಆಯ್ಕೆಯಾಗಿಲ್ಲ. ಆದ್ದರಿಂದ ಅಭಿಮಾನಿಗಳು ಶಿಖರ್ ಧವನ್ ಅವರ ಟಿ20 ಕೆರಿಯರ್ ಮುಗಿಯಿತು ಎಂಬ ಭಾವನೆಯಲ್ಲಿದ್ದಾರೆ.

Published On - 2:56 pm, Thu, 16 June 22

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು