AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಹಿರಿಯ ಆಟಗಾರರಿಗೆ ಮತ್ತೆ ವಿಶ್ರಾಂತಿ! ಹರಿಣಗಳ ವಿರುದ್ಧದ ಸರಣಿಗೆ ಧವನ್​ ನಾಯಕ

IND vs SA: ಟಿ20 ವಿಶ್ವಕಪ್‌ಗೂ ಮುನ್ನ ಭಾರತ ತಂಡ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧ ಈ ತಿಂಗಳ ಕೊನೆಯಲ್ಲಿ ಮತ್ತು ಮುಂದಿನ ತಿಂಗಳ ಆರಂಭದಲ್ಲಿ 3 ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ.

IND vs SA: ಹಿರಿಯ ಆಟಗಾರರಿಗೆ ಮತ್ತೆ ವಿಶ್ರಾಂತಿ! ಹರಿಣಗಳ ವಿರುದ್ಧದ ಸರಣಿಗೆ ಧವನ್​ ನಾಯಕ
Shikhar Dhawan
TV9 Web
| Updated By: ಪೃಥ್ವಿಶಂಕರ|

Updated on:Sep 11, 2022 | 8:21 PM

Share

ಭಾರತ ಕ್ರಿಕೆಟ್ ತಂಡದ ನಿರೀಕ್ಷೆಗೆ ತಕ್ಕಂತೆ ಏಷ್ಯಾಕಪ್ ನಡೆಯದಿರಬಹುದು, ಆದರೆ ಮುಂದಿನ ತಿಂಗಳು ನಡೆಯಲಿರುವ ಟಿ20 ವಿಶ್ವಕಪ್‌ಗೆ ಸಂಬಂಧಿಸಿದಂತೆ ಭಾರತ ತಂಡವನ್ನು ಕಡಿಮೆ ಅಂದಾಜು ಮಾಡಲು ಸಾಧ್ಯವಿಲ್ಲ. ಅದೇನೇ ಇರಲಿ, ಈ ಟೂರ್ನಿಗೂ ಮುನ್ನ ಭಾರತ ತಂಡ ಎರಡು ಮಹತ್ವದ ಟಿ20 ಸರಣಿಗಳನ್ನು ಆಡಲಿದ್ದು, ಸಿದ್ಧತೆಗಳನ್ನು ಸುಧಾರಿಸಿಕೊಳ್ಳಲು ಮತ್ತೊಂದು ಅವಕಾಶ ಸಿಗಲಿದೆ. ಆದಾಗ್ಯೂ, ವಿಶ್ವಕಪ್‌ಗೆ ಸ್ವಲ್ಪ ಮೊದಲು, ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾ ವಿರುದ್ಧ ಸರಣಿಯನ್ನು ಆಡಬೇಕಾಗಿದೆ, ಇದರಲ್ಲಿ ರೋಹಿತ್ ಶರ್ಮಾ ಮತ್ತು ಕೆಎಲ್ ರಾಹುಲ್ ಬದಲಿಗೆ ಅನುಭವಿ ಆರಂಭಿಕ ಶಿಖರ್ ಧವನ್ ತಂಡದಲ್ಲಿ ಆಡಲಿದ್ದಾರೆ.

ಟಿ20 ವಿಶ್ವಕಪ್‌ಗೂ ಮುನ್ನ ಭಾರತ ತಂಡ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧ ಈ ತಿಂಗಳ ಕೊನೆಯಲ್ಲಿ ಮತ್ತು ಮುಂದಿನ ತಿಂಗಳ ಆರಂಭದಲ್ಲಿ 3 ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ. ಈ ಸರಣಿಯಲ್ಲಿ ಭಾರತ ತಂಡ ರೋಹಿತ್ ಶರ್ಮಾ ನಾಯಕತ್ವದಲ್ಲಿ ಮೈದಾನಕ್ಕಿಳಿಯಲಿದ್ದು, ವಿಶ್ವಕಪ್‌ಗೆ ಸಿದ್ಧತೆಗಳನ್ನು ಅಂತಿಮಗೊಳಿಸಲಿದೆ. ಈ ಎರಡೂ ಸರಣಿಗಳ ನಂತರ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿ ಕೂಡ ಆಯೋಜನೆಯಾಗಲಿದ್ದು, ಇದರಲ್ಲಿ ಧವನ್ ಟೀಂ ಇಂಡಿಯಾದ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ.

ಧವನ್​ಗೆ ನಾಯಕತ್ವ

ವಾಸ್ತವವಾಗಿ, T20 ವಿಶ್ವಕಪ್​ಗೂ ಮೊದಲು ಹಿಂದೆ ನಿಗದಿಯಾಗಿದ್ದ ದ್ವಿಪಕ್ಷೀಯ ಸರಣಿಗಳನ್ನು ಪೂರ್ಣಗೊಳಿಸಲು ಈ ODI ಸರಣಿಯನ್ನು ಆಯೋಜಿಸಲಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಸರಣಿ ನಡೆಯಬೇಕಿದ್ದರೂ ನಿರೀಕ್ಷೆಯಂತೆ ವಿಶ್ವಕಪ್​ಗೆ ತೆರಳುವ ತಂಡದ ಬಹುತೇಕ ಆಟಗಾರರು ಈ ಸರಣಿಯಿಂದ ಹೊರಗುಳಿಯಲಿದ್ದಾರೆ.

ಸ್ಪೋರ್ಟ್ಸ್ ಪೋರ್ಟಲ್ ಇನ್ಸೈಡ್‌ಸ್ಪೋರ್ಟ್ ಬಿಸಿಸಿಐ ಅಧಿಕಾರಿಯೊಬ್ಬರನ್ನು ಉಲ್ಲೇಖಿಸಿ, ಹೌದು, ಟಿ20 ವಿಶ್ವಕಪ್‌ಗೂ ಮುನ್ನ ಏಕದಿನ ಸರಣಿ ಆಡುವುದು ಸರಿಯಲ್ಲ. ಆದರೆ ಕೆಲವೊಮ್ಮೆ ಇದು ಕೂಡ ಸಂಭವಿಸುತ್ತದೆ. ಆದರೆ ಈ ಸರಣಿಯಲ್ಲಿ ರೋಹಿತ್-ವಿರಾಟ್ ಸೇರಿದಂತೆ ವಿಶ್ವಕಪ್‌ನಲ್ಲಿ ಆಡುವ ಎಲ್ಲಾ ಆಟಗಾರರು ವಿಶ್ರಾಂತಿ ಪಡೆಯಲಿದ್ದಾರೆ. ಆಸ್ಟ್ರೇಲಿಯಕ್ಕೆ ತೆರಳುವ ಮುನ್ನ ಅವರಿಗೆ ಅಲ್ಪ ವಿರಾಮ ಸಿಗಲಿದೆ. ಹೀಗಾಗಿ ಶಿಖರ್ ತಂಡವನ್ನು ಮುನ್ನಡೆಸಲಿದ್ದಾರೆ ಎಂದಿದ್ದಾರೆ.

ನಾಯಕತ್ವದ ಅನುಭವ

ಅಕ್ಟೋಬರ್ 6 ರಿಂದ ಅಕ್ಟೋಬರ್ 11 ರವರೆಗೆ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ 3 ಪಂದ್ಯಗಳ ಏಕದಿನ ಸರಣಿ ನಡೆಯಲಿದ್ದು, ಧವನ್ ಮತ್ತೊಮ್ಮೆ ತಂಡದ ನಾಯಕರಾಗಲಿದ್ದಾರೆ. ಕಳೆದ ಒಂದು ವರ್ಷದಲ್ಲಿ ಧವನ್ ವಿವಿಧ ಸಂದರ್ಭಗಳಲ್ಲಿ ಭಾರತ ತಂಡದ ನಾಯಕತ್ವ ವಹಿಸಿದ್ದಾರೆ. ಕಳೆದ ವರ್ಷ ಶ್ರೀಲಂಕಾ ಪ್ರವಾಸದ ವೇಳೆ ಏಕದಿನ ಮತ್ತು ಟಿ20 ತಂಡಗಳ ನಾಯಕರಾಗಿದ್ದರು. ನಂತರ ಜುಲೈನಲ್ಲಿ ಅವರು ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ODI ಸರಣಿಯಲ್ಲಿ ಜವಾಬ್ದಾರಿ ವಹಿಸಿಕೊಂಡಿದ್ದರು. ನಂತರ ಆಗಸ್ಟ್‌ನಲ್ಲಿ, ಜಿಂಬಾಬ್ವೆ ಪ್ರವಾಸದಲ್ಲಿ ಅವರನ್ನು ನಾಯಕರನ್ನಾಗಿ ನೇಮಿಲಾಯಿತು. ಆದರೆ ಕೆಎಲ್ ರಾಹುಲ್ ತಂಡಕ್ಕೆ ಸೇರ್ಪಡೆಗೊಂಡ ನಂತರ ಧವನ್ ಬದಲಿಗೆ ರಾಹುಲ್ ತಂಡದ ನಾಯಕತ್ವವಹಿಸಿಕೊಂಡಿದ್ದರು.

Published On - 8:21 pm, Sun, 11 September 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?