ಟೀಮ್ ಇಂಡಿಯಾ (Team India) ಆಸ್ಟ್ರೇಲಿಯಾ (India vs Australia) ವಿರುದ್ಧ ಟಿ20 ಸರಣಿ ಆಡುತ್ತಿದೆ. ಈ ಸರಣಿಯಿಂದ ಹೊರಗುಳಿದ ಇಬ್ಬರು ಸ್ಟಾರ್ ಆಟಗಾರರೆಂದರೆ ರವೀಂದ್ರ ಜಡೇಜಾ ಹಾಗೂ ಶಿಖರ್ ಧವನ್. ಜಡೇಜಾ ಗಾಯದ ಕಾರಣ ತಂಡದಿಂದ ಹೊರಗುಳಿದಿದ್ದರೆ ಧವನ್ ಅವರನ್ನು ಟಿ20 ತಂಡದ ಆಯ್ಕೆಗೆ ಪರಿಗಣಿಸಿಲ್ಲ. ಹೀಗಾಗಿ ಈ ಬಾರಿಯ ಸರಣಿಯಲ್ಲಿ ಇಬ್ಬರು ಎಡಗೈ ದಾಂಡಿಗರು ಕಾಣಿಸಿಕೊಂಡಿಲ್ಲ. ಇದಾಗ್ಯೂ ಧವನ್-ಜಡೇಜಾ ಜೋಡಿ ಸೋಷಿಯಲ್ ಮೀಡಿಯಾದಲ್ಲಿ ಜೊತೆಯಾಗುವ ಮೂಲಕ ಅಭಿಮಾನಿಗಳನ್ನು ರಂಜಿಸುವ ಪ್ರಯತ್ನ ಮಾಡಿದ್ದಾರೆ.
ಮೊಣಕಾಲಿನ ಗಾಯದ ಹಿನ್ನೆಲೆಯಲ್ಲಿ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಚಿಕಿತ್ಸೆ ಪಡೆಯುತ್ತಿರುವ ಜಡೇಜಾರನ್ನು ಶಿಖರ್ ಧವನ್ ಭೇಟಿಯಾಗಿದ್ದಾರೆ. ಈ ವಿಡಿಯೋ ಸೆರೆ ಹಿಡಿಲಾದ ವಿಡಿಯೋವನ್ನು ಧವನ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಈ ವಿಡಿಯೋದಲ್ಲಿ ಶಿಖರ್ ಧವನ್ ಡ್ಯಾನ್ಸ್ ಮಾಡುತ್ತಿದ್ದರೆ. ಜಡೇಜಾ, ಇವನಿಗೆ ಮದುವೆ ಮಾಡಿ ನೋಡಿ, ಜವಾಬ್ದಾರಿ ಬಂದ ಬಳಿಕ ಸುಧಾರಿಸಿಕೊಳ್ಳಬಹುದು ಎಂಬ ಬಾಲಿವುಡ್ ಚಿತ್ರದ ಡೈಲಾಗ್ಗೆ ಲಿಪ್ ಸಿಂಕ್ ಮಾಡಿದ್ದಾರೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಟೀಮ್ ಇಂಡಿಯಾ ಆಟಗಾರರಾದ ಅರ್ಷದೀಪ್ ಸಿಂಗ್ ಹಾಗೂ ಖಲೀಲ್ ಅಹ್ಮದ್ ಜಡ್ಡು-ಧವನ್ ಹಾಸ್ಯಾತ್ಮಕ ವಿಡಿಯೋಗೆ ನಗುವಿನ ಇಮೋಜಿ ಮೂಲಕ ಪ್ರತಿಕ್ರಿಯಿಸಿದ್ದಾರೆ.
ಸದ್ಯ ಟೀಮ್ ಇಂಡಿಯಾದಿಂದ ಹೊರಗುಳಿದಿರುವ ಶಿಖರ್ ಧವನ್ ಸೌತ್ ಆಫ್ರಿಕಾ ವಿರುದ್ಧದ ಏಕದಿನ ಸರಣಿಯ ಮೂಲಕ ಕಂಬ್ಯಾಕ್ ಮಾಡುವ ಸಾಧ್ಯತೆಯಿದೆ. ಏಕೆಂದರೆ ಈ ಹಿಂದೆ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯಲ್ಲಿ ಧವನ್ ಕಾಣಿಸಿಕೊಂಡಿದ್ದರು. ಹೀಗಾಗಿ 50 ಓವರ್ಗಳ ಪಂದ್ಯದಲ್ಲಿ ಶಿಖರ್ ಧವನ್ ಅವಕಾಶ ಪಡೆಯುವುದು ಖಚಿತ ಎನ್ನಬಹುದು. ಇನ್ನು ಗಾಯಗೊಂಡಿರುವ ರವೀಂದ್ರ ಜಡೇಜಾ ಸಂಪೂರ್ಣವಾಗಿ ಚೇತರಿಸಿಕೊಂಡರೆ ಮಾತ್ರ ಟೀಮ್ ಇಂಡಿಯಾದಲ್ಲಿ ಚಾನ್ಸ್ ಸಿಗಲಿದೆ. ಈಗಾಗಲೇ ಟಿ20 ವಿಶ್ವಕಪ್ಗೆ ತಂಡವನ್ನು ಘೋಷಿಸಲಾಗಿದ್ದು, ಹೀಗಾಗಿ ಜಡೇಜಾ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ನಲ್ಲಿ ಕಾಣಿಸಿಕೊಳ್ಳುವುದಿಲ್ಲ.