AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

12 ಸಿಕ್ಸ್, 17 ಫೋರ್​, 198 ರನ್​… ಟಿ20 ಲೀಗ್​​ನಲ್ಲಿ ಶಿವಂ ಸಿಂಗ್ ಆರ್ಭಟ

Tamil Nadu Premier League 2025: ತಮಿಳುನಾಡು ಪ್ರೀಮಿಯರ್ ಲೀಗ್​ನಲ್ಲಿ ಬಲಗೈ ದಾಂಡಿಗ ಶಿವಂ ಸಿಂಗ್ ಭರ್ಜರಿ ಪ್ರದರ್ಶನ ನೀಡುತ್ತಿದ್ದಾರೆ. ದಿಂಡಿಗಲ್ ಡ್ರಾಗನ್ಸ್ ತಂಡದ ಆರಂಭಿಕನಾಗಿ ಕಣಕ್ಕಿಳಿಯುತ್ತಿರುವ ಶಿವಂ ಈಗಾಗಲೇ 12 ಸಿಕ್ಸ್ ಹಾಗೂ 17 ಫೋರ್​ಗಳನ್ನು ಬಾರಿಸಿ ಸಂಚಲನ ಸೃಷ್ಟಿಸಿದ್ದಾರೆ.

12 ಸಿಕ್ಸ್, 17 ಫೋರ್​, 198 ರನ್​... ಟಿ20 ಲೀಗ್​​ನಲ್ಲಿ ಶಿವಂ ಸಿಂಗ್ ಆರ್ಭಟ
Shivam Singh
ಝಾಹಿರ್ ಯೂಸುಫ್
|

Updated on: Jun 15, 2025 | 2:08 PM

Share

ತಮಿಳುನಾಡು ಪ್ರೀಮಿಯರ್ ಲೀಗ್​ನಲ್ಲಿ (TNPL 2025) ಬ್ಯಾಟರ್​ಗಳ ಅಬ್ಬರ ಮುಂದುವರೆದಿದೆ. ಈ ಲೀಗ್​ನಲ್ಲಿ ಕಣಕ್ಕಿಳಿಯುತ್ತಿರುವ ಶಿವಂ ಸಿಂಗ್ ಸಿಕ್ಸರ್​ಗಳ ಸುರಿಮಳೆಗೈಯ್ಯುತ್ತಿದ್ದಾರೆ. ಈ ಹಿಂದೆ ಐಪಿಎಲ್​ನಲ್ಲಿ ಪಂಜಾಬ್ ಕಿಂಗ್ಸ್ ತಂಡದಲ್ಲಿ ಕಾಣಿಸಿಕೊಂಡಿದ್ದ ಶಿವಂ ಅವರಿಗೆ ಒಂದೇ ಒಂದು ಚಾನ್ಸ್ ಸಿಕ್ಕಿರಲಿಲ್ಲ. ಇಡೀ ಟೂರ್ನಿ ಬೆಂಚ್ ಕಾದಿದ್ದ ಆಟಗಾರ ಇದೀಗ ತಮಿಳುನಾಡು ಪ್ರೀಮಿಯರ್ ಲೀಗ್​ನಲ್ಲಿ ತನ್ನ ಬ್ಯಾಟಿಂಗ್ ಪರಾಕ್ರಮವನ್ನು ತೆರೆದಿಟ್ಟಿದ್ದಾರೆ.

ತಮಿಳುನಾಡು ಪ್ರೀಮಿಯರ್ ಲೀಗ್​ನಲ್ಲಿ ದಿಂಡಿಗಲ್ ಡ್ರಾಗನ್ಸ್ ತಂಡದ ಪರ ಕಣಕ್ಕಿಳಿಯುತ್ತಿರುವ ಶಿವಂ ಸಿಂಗ್ ಕಳೆದ ಮೂರು ಪಂದ್ಯಗಳಲ್ಲಿ 2 ಭರ್ಜರಿ ಅರ್ಧಶತಕ ಬಾರಿಸಿದ್ದಾರೆ. ಈ ಮೂಲಕ ಮೂರು ಪಂದ್ಯಗಳಿಂದ ಕಲೆಹಾಕಿರುವುದು ಬರೋಬ್ಬರಿ 198 ರನ್​ಗಳು. ಇದೇ ವೇಳೆ ಶಿವಂ ಸಿಂಗ್ ಅವರ ಬ್ಯಾಟ್​ನಿಂದ ಸಿಡಿದ ಸಿಕ್ಸರ್​ಗಳ ಸಂಖ್ಯೆ ಬರೋಬ್ಬರಿ 12.

ಸಿಕ್ಸ್-ಫೋರ್​ಗಳೊಂದಿಗೆ ತಮಿಳುನಾಡು ಪ್ರೀಮಿಯರ್ ಲೀಗ್​ನಲ್ಲಿ ಸಂಚಲನ ಸೃಷ್ಟಿಸಿರುವ ಶಿವಂ ಸಿಂಗ್ ಮೂರು ಪಂದ್ಯಗಳಲ್ಲಿ ಎರಡು ಬಾರಿ ಅಜೇಯರಾಗಿ ಉಳಿದಿದ್ದಾರೆ. ಅದರಲ್ಲೂ ಮಧುರೈ ಪ್ಯಾಂಥರ್ಸ್ ವಿರುದ್ಧದ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಶಿವಂ 41 ಎಸೆತಗಳಲ್ಲಿ 8 ಬೌಂಡರಿ ಮತ್ತು 6 ಸಿಕ್ಸರ್‌ಗಳೊಂದಿಗೆ ಅಜೇಯ 86 ರನ್ ಬಾರಿಸಿದ್ದರು.

ಶಿವಂ ಸಿಂಗ್ ಅವರ ಈ ಸ್ಫೋಟಕ ಬ್ಯಾಟಿಂಗ್ ನೆರವಿನಿಂದಾಗಿ ದಿಂಡಿಗಲ್ ಡ್ರಾಗನ್ಸ್ ತಂಡವು ಈ ಪಂದ್ಯವನ್ನು 45 ಎಸೆತಗಳು ಬಾಕಿಯಿರುವಂತೆ ಗೆದ್ದುಕೊಂಡರು. ಇದಕ್ಕೂ ಹಿಂದಿನ ಎರಡು ಪಂದ್ಯಗಳಲ್ಲಿ ಶಿವಂ ಸಿಂಗ್ 30  ಮತ್ತು ಅಜೇಯ 82 ರನ್ ಬಾರಿಸಿದ್ದರು.

ಅಲ್ಲದೆ ಈ ಬಾರಿಯ ತಮಿಳುನಾಡು ಪ್ರೀಮಿಯರ್ ಲೀಗ್​ನಲ್ಲಿ ಆಡಿದ ಮೂರು ಪಂದ್ಯಗಳಲ್ಲಿ 12 ಭರ್ಜರಿ ಸಿಕ್ಸ್ ಹಾಗೂ 17 ಫೋರ್​ಗಳನ್ನು ಸಿಡಿಸಿ ಅಬ್ಬರಿಸಿದ್ದಾರೆ. ಈ ಅಬ್ಬರದೊಂದಿಗೆ ಎರಡು ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಸಹ ಪಡೆದಿದ್ದಾರೆ.

ಇದನ್ನೂ ಓದಿ: ಸೋಲಿನ ಸರಪಳಿ ಬ್ರೇಕ್… 3 ತಂಡಗಳಿಗೆ ಒಲಿದ ಚಾಂಪಿಯನ್ ಪಟ್ಟ

ಅತ್ತ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಒಂದು ಸೀಸನ್​​ ಬೆಂಚ್ ಕಾದಿದ್ದ ಶಿವಂ ಸಿಂಗ್ ಇದೀಗ ತಮಿಳುನಾಡು ಪ್ರೀಮಿಯರ್ ಲೀಗ್​ನಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ಐಪಿಎಲ್ ಫ್ರಾಂಚೈಸಿಗಳ ಗಮನ ಸೆಳೆದಿದ್ದಾರೆ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ