Shoaib Akhtar: ಇದು ಅನ್ಯಾಯ…ವಾರ್ನರ್​ಗೆ ಪ್ರಶಸ್ತಿ ನೀಡಿದ ಬಗ್ಗೆ ಅಖ್ತರ್ ಆಕ್ರೋಶ

T20 World Cup 2021: ಭಾರತ, ಅಫ್ಘಾನಿಸ್ತಾನ, ನಮೀಬಿಯಾ ಮತ್ತು ಸ್ಕಾಟ್ಲೆಂಡ್ ವಿರುದ್ಧ ಅರ್ಧ ಶತಕಗಳನ್ನು ಬಾರಿಸಿದ್ದರು. ಅಂದರೆ ಇಲ್ಲಿ ಡೇವಿಡ್ ವಾರ್ನರ್ 7 ಪಂದ್ಯಗಳಿಂದ 289 ರನ್​ಗಳಿಸಿದರೆ, ಬಾಬರ್ ಆಜಂ 6 ಪಂದ್ಯಗಳಿಂದ 303 ರನ್​ ಕಲೆಹಾಕಿ ಅಗ್ರಸ್ಥಾನದಲ್ಲಿದ್ದಾರೆ.

Shoaib Akhtar: ಇದು ಅನ್ಯಾಯ...ವಾರ್ನರ್​ಗೆ ಪ್ರಶಸ್ತಿ ನೀಡಿದ ಬಗ್ಗೆ ಅಖ್ತರ್ ಆಕ್ರೋಶ
David Warner- Shoaib Akhtar
Follow us
TV9 Web
| Updated By: ಝಾಹಿರ್ ಯೂಸುಫ್

Updated on: Nov 15, 2021 | 6:03 PM

ಟಿ20 ವಿಶ್ವಕಪ್ (T20 World Cup 2021)​ ಮುಕ್ತಾಯಗೊಂಡಿದೆ. ಅಂತಿಮ ಹಣಾಹಣಿಯಲ್ಲಿ ನ್ಯೂಜಿಲೆಂಡ್ ತಂಡಕ್ಕೆ ಸೋಲುಣಿಸಿ ಆಸ್ಟ್ರೇಲಿಯಾ (Australia) ಚೊಚ್ಚಲ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಆಸ್ಟ್ರೇಲಿಯಾ ಟೂರ್ನಿಯುದ್ದಕ್ಕೂ ಭರ್ಜರಿ ಪ್ರದರ್ಶನ ನೀಡಿದ ಆರಂಭಿಕ ಆಟಗಾರ ಡೇವಿಡ್ ವಾರ್ನರ್ (David Warner) ಆಸೀಸ್ ಪಾಲಿನ ವಿಶ್ವಕಪ್ ಹೀರೋ ಎನಿಸಿಕೊಂಡಿದ್ದಾರೆ. ಏಕೆಂದರೆ ಕೊನೆಯ ಮೂರು ನಿರ್ಣಾಯಕ ಪಂದ್ಯಗಳಲ್ಲಿ ಅಬ್ಬರಿಸಿದ್ದು ವಾರ್ನರ್. ಅದರಲ್ಲೂ ಅದರಂತೆ ವೆಸ್ಟ್ ಇಂಡೀಸ್ ವಿರುದ್ದ 89*, ಪಾಕಿಸ್ತಾನ್ ವಿರುದ್ದದ ಸೆಮಿಫೈನಲ್​ನಲ್ಲಿ 49 ಮತ್ತು ಫೈನಲ್​ನಲ್ಲಿ 53 ರನ್​ ಬಾರಿಸಿ ತಂಡಕ್ಕೆ ಭರ್ಜರಿ ಆರಂಭ ಒದಗಿಸಿದ್ದರು. ಅಷ್ಟೇ ಅಲ್ಲದೆ 7 ಪಂದ್ಯಗಳಿಂದ 289 ರನ್ ಗಳಿಸಿ ಪ್ಲೇಯರ್​ ಆಫ್ ದಿ ಟೂರ್ನಮೆಂಟ್ ಪ್ರಶಸ್ತಿಗೆ ಭಾಜನರಾದರು. ಆದರೆ ಐಸಿಸಿ ಈ ಪ್ರಶಸ್ತಿಯನ್ನು ಡೇವಿಡ್​ ವಾರ್ನರ್​ಗೆ ನೀಡಿರುವ ಬಗ್ಗೆ ಪಾಕಿಸ್ತಾನ್ ಮಾಜಿ ವೇಗಿ ಶೊಯೇಬ್ ಅಖ್ತರ್ (Shoaib Akhtar) ಅಸಮಾಧಾನ ಹೊರಹಾಕಿದ್ದಾರೆ.

ಡೇವಿಡ್ ವಾರ್ನರ್​ಗೆ ಪಂದ್ಯ ಪುರುಷೋತ್ತಮ ಪ್ರಶಸ್ತಿ ನೀಡಿದ್ದು ಅನ್ಯಾಯ. ನಾನು ನಿಜವಾಗಿಯೂ ಪ್ಲೇಯರ್ ಆಫ್ ದಿ ಟೂರ್ನಮೆಂಟ್ ಪ್ರಶಸ್ತಿ ಪಾಕಿಸ್ತಾನ್​ ತಂಡದ ನಾಯಕ ಬಾಬರ್ ಆಜಂಗೆ ಸಿಗುವುದನ್ನು ಎದುರು ನೋಡುತ್ತಿದ್ದೆ. ಆದರೆ ಬಾಬರ್​ ಅನ್ನು ಕಡೆಗಣಿಸಿ ವಾರ್ನರ್​ಗೆ ಟ್ರೋಫಿ ನೀಡಿದ್ದು ಅನ್ಯಾಯ ಎಂದು ಶೊಯೇಬ್ ಅಖ್ತರ್ ಹೇಳಿದ್ದಾರೆ.

ಅಖ್ತರ್ ಇಂತಹದೊಂದು ಹೇಳಿಕೆ ನೀಡಲು ಮುಖ್ಯ ಕಾರಣ ಈ ಬಾರಿಯ ಟೂರ್ನಿಯಲ್ಲಿ ಬಾಬರ್ ಆಜಂ ಅವರ ಪ್ರದರ್ಶನ. 6 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಪಾಕ್ ನಾಯಕ 60ರ ಸರಾಸರಿಯಲ್ಲಿ 303 ರನ್ ಗಳಿಸಿದ್ದರು. ಭಾರತ, ಅಫ್ಘಾನಿಸ್ತಾನ, ನಮೀಬಿಯಾ ಮತ್ತು ಸ್ಕಾಟ್ಲೆಂಡ್ ವಿರುದ್ಧ ಅರ್ಧ ಶತಕಗಳನ್ನು ಬಾರಿಸಿದ್ದರು. ಅಂದರೆ ಇಲ್ಲಿ ಡೇವಿಡ್ ವಾರ್ನರ್ 7 ಪಂದ್ಯಗಳಿಂದ 289 ರನ್​ಗಳಿಸಿದರೆ, ಬಾಬರ್ ಆಜಂ 6 ಪಂದ್ಯಗಳಿಂದ 303 ರನ್​ ಕಲೆಹಾಕಿ ಅಗ್ರಸ್ಥಾನದಲ್ಲಿದ್ದಾರೆ. ಹೀಗಾಗಿ ಪ್ಲೇಯರ್ ಆಫ್ ದಿ ಟೂರ್ನಮೆಂಟ್ ಪ್ರಶಸ್ತಿ ಬಾಬರ್ ಆಜಂಗೆ ಒಲಿಯಬೇಕಿತ್ತು. ಇದು ಅನ್ಯಾಯ ಎಂದು ಶೊಯೇಬ್ ಅಖ್ತರ್ ಹೇಳಿದ್ದಾರೆ.

ಇದನ್ನೂ ಓದಿ: T20 World Cup 2021: ವಿಶ್ವ ಚಾಂಪಿಯನ್ ಆಸ್ಟ್ರೇಲಿಯಾಗೆ ಸಿಕ್ಕ ಪ್ರಶಸ್ತಿ ಮೊತ್ತವೆಷ್ಟು ಗೊತ್ತಾ?

ಇದನ್ನೂ ಓದಿ: T20 World Cup Winners: 7 ಟಿ20 ವಿಶ್ವಕಪ್​: ಚಾಂಪಿಯನ್​ ಪಟ್ಟಕ್ಕೇರಿದ 6 ತಂಡಗಳು

ಇದನ್ನೂ ಓದಿ:  Sourav Ganguly: ದ್ರಾವಿಡ್ ಅವರ ಮಗ ಕರೆ ಮಾಡಿ ಅಪ್ಪ ತುಂಬಾ ಕಟ್ಟುನಿಟ್ಟು, ನೀವು ಅವರನ್ನು ಕರ್ಕೊಂಡು ಹೋಗಿ ಎಂದರು..!

(Shoaib Akhtar Feels Babar Azam Deserved To “Man Of The Tournament”)

ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ