Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏನ್ರೋ ನಿಮ್ ಕಥೆ… ಚಾಂಪಿಯನ್ಸ್ ಟ್ರೋಫಿ ಫೈನಲ್ ಬೆನ್ನಲ್ಲೇ ಶೊಯೆಬ್ ಅಖ್ತರ್ ಆಕ್ರೋಶ

Champions Trophy Final 2025: ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡ 50 ಓವರ್​ಗಳಲ್ಲಿ 251 ರನ್ ಕಲೆಹಾಕಿತು. ಈ ಗುರಿಯನ್ನು ಟೀಮ್ ಇಂಡಿಯಾ 49 ಓವರ್​ಗಳಲ್ಲಿ ಚೇಸ್ ಮಾಡಿದೆ. ಈ ಮೂಲಕ 4 ವಿಕೆಟ್​ಗಳ ಜಯ ಸಾಧಿಸಿ ಮೂರನೇ ಬಾರಿ ಚಾಂಪಿಯನ್ಸ್ ಟ್ರೋಫಿಯನ್ನು ಎತ್ತಿ ಹಿಡಿದಿದೆ.

ಏನ್ರೋ ನಿಮ್ ಕಥೆ... ಚಾಂಪಿಯನ್ಸ್ ಟ್ರೋಫಿ ಫೈನಲ್ ಬೆನ್ನಲ್ಲೇ ಶೊಯೆಬ್ ಅಖ್ತರ್ ಆಕ್ರೋಶ
Shoaib Akhtar
Follow us
ಝಾಹಿರ್ ಯೂಸುಫ್
|

Updated on:Mar 10, 2025 | 1:02 PM

ಚಾಂಪಿಯನ್ಸ್ ಟ್ರೋಫಿಗೆ ತೆರೆಬಿದ್ದಿದೆ. ಈ ಬಾರಿ ನ್ಯೂಝಿಲೆಂಡ್ ತಂಡವನ್ನು ಮಣಿಸಿ ಭಾರತ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಆದರೆ ಈ ಟೂರ್ನಿಯ ಸಮಾರೋಪ ಸಮಾರಂಭದ ವೇದಿಕೆಯಲ್ಲಿ ಪಾಕಿಸ್ತಾನ್ ಕ್ರಿಕೆಟ್ ಮಂಡಳಿಯ ಯಾವೊಬ್ಬ ಸದಸ್ಯ ಕೂಡ ಕಾಣಿಸಿಕೊಂಡಿಲ್ಲ ಎಂಬುದೇ ಅಚ್ಚರಿ. ಟೀಮ್ ಇಂಡಿಯಾ ಹಾಗೂ ನ್ಯೂಝಿಲೆಂಡ್ ತಂಡಗಳಿಗೆ ಪ್ರಶಸ್ತಿ ನೀಡುವ ಸಂದರ್ಭದಲ್ಲಿ ವೇದಿಕೆ ಮೇಲೆ ಐಸಿಸಿ ಅಧ್ಯಕ್ಷರಾದ ಜಯ್ ಶಾ ಹಾಗೂ ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ ಕಾಣಿಸಿಕೊಂಡಿದ್ದರು. ಇದಾಗ್ಯೂ ಟೂರ್ನಿಯ ಆಯೋಜಕರಾದ ಪಾಕಿಸ್ತಾನ್ ಕ್ರಿಕೆಟ್ ಮಂಡಳಿಯ ಅಧ್ಯಕ್ಷ ಅಥವಾ ಇನ್ನಿತರ ಸದಸ್ಯರು ಹಾಜರಿರಲಿಲ್ಲ. ಇದನ್ನೇ ಈಗ ಪಾಕಿಸ್ತಾನ್ ತಂಡದ ಮಾಜಿ ಆಟಗಾರ ಶೊಯೆಬ್ ಅಖ್ತರ್ ಪ್ರಶ್ನಿಸಿದ್ದಾರೆ. ಭಾರತ ಚಾಂಪಿಯನ್ಸ್ ಟ್ರೋಫಿಯನ್ನು ಗೆದ್ದಿದೆ. ಅದರಂತೆ ಅವರು ಪ್ರಶಸ್ತಿಯನ್ನು ಸಹ ಸ್ವೀಕರಿಸಿದ್ದಾರೆ. ಆದರೆ ಈ ವೇಳೆ ನನಗೊಂದು ವಿಚಿತ್ರ ಕಾಣಿಸಿತು.

ಪ್ರಶಸ್ತಿ ಪ್ರಧಾನ ಸಮಾರಂಭದ ಸಮಯದಲ್ಲಿ ಪಾಕಿಸ್ತಾನ ಕ್ರಿಕೆಟ್ ಮಂಡಳಿಯನ್ನು ಪ್ರತಿನಿಧಿಸುವ ಯಾರೂ ಸಹ ಇರಲಿಲ್ಲ. ಅಚ್ಚರಿ ಎಂದರೆ ಇದು ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಆಯೋಜಿಸಿದ್ದ ಪಂದ್ಯಾವಳಿಯಾಗಿತ್ತು. ಇದಾಗ್ಯೂ ಪಾಕಿಸ್ತಾನವನ್ನು ಪ್ರತಿನಿಧಿಸುವ ಯಾರೂ ಸಹ ಅಲ್ಲಿ ಹಾಜರಿರಲಿಲ್ಲ ಎಂದು ಶೊಯೆಬ್ ಅಖ್ತರ್ ಅಚ್ಚರಿ ವ್ಯಕ್ತಪಡಿಸಿದ್ದಾರೆ.

ನಿಮ್ಮ ನಡೆಗಳು ನಿಜಕ್ಕೂ ನನಗೆ ಅರ್ಥವಾಗುತ್ತಿಲ್ಲ. ನಾವೇ ಆಯೋಜಿಸಿದ ಟೂರ್ನಿಯ ಸಮಾರೋಪ ಸಮಾರಂಭವನ್ನು ಪ್ರತಿನಿಧಿಸಲು ಮತ್ತು ಟ್ರೋಫಿಗಳನ್ನು ಹಸ್ತಾಂತರಿಸಲು ಯಾರೂ ಸಹ ಅಲ್ಲಿ ಏಕೆ ಇರಲಿಲ್ಲ? ಎಂಬುದೇ ನನ್ನ ಪ್ರಶ್ನೆ. ಅದು ವಿಶ್ವ ಕ್ರಿಕೆಟ್ ವೇದಿಕೆ, ಪಿಸಿಬಿಯ ಯಾರಾದರೂ ಅಲ್ಲಿ ಹಾಜರಿರಬೇಕಿತ್ತು.

ಇದನ್ನೂ ಓದಿ
Image
ವಿರಾಟ್ ಕೊಹ್ಲಿಗೆ 100 ಕೋಟಿ ರೂ: ಶುಭ್​ಮನ್ ಗಿಲ್​ಗೆ ಎಷ್ಟು?
Image
VIDEO: ಅಳುತ್ತಿದ್ದ ಅಭಿಮಾನಿಯನ್ನು ಸಮಾಧಾನ ಮಾಡಿದ ಕೆಎಲ್ ರಾಹುಲ್
Image
ನಾನು ಹೊಡೀತಿದ್ದೆ ಅಲ್ವಾ... ವಿರಾಟ್ ಕೊಹ್ಲಿ ಮುಂದೆ ಕೆಎಲ್ ರಾಹುಲ್ ಹತಾಶೆ
Image
Virat Kohli: ಮಾಸ್ಟರ್ ಚೇಸ್ ಮಾಸ್ಟರ್​ನ ವಿಶ್ವ ದಾಖಲೆ

ದುಃಖಕರ ವಿಷಯ ಎಂದರೆ, ಅಲ್ಲಿ ಪಾಕಿಸ್ತಾನ್ ಕ್ರಿಕೆಟ್ ಮಂಡಳಿಯ ಯಾವೊಬ್ಬ ಸದಸ್ಯರು ಸಹ ಇರಲಿಲ್ಲ. ಯಾಕೆ ಯಾರು ಕೂಡ ಹಾಜರಿರಲಿಲ್ಲ ಎಂಬುದೇ ಅರ್ಥವಾಗುತ್ತಿಲ್ಲ. ಇದು ಯೋಚಿಸಬೇಕಾದ ವಿಷಯ ಎಂದು ಶೊಯೆಬ್ ಅಖ್ತರ್ ಪಾಕಿಸ್ತಾನ್ ಕ್ರಿಕೆಟ್ ಮಂಡಳಿಯ ನಡೆಯ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: Champions Trophy 2025: ಒಂದೇ ಒಂದು ಪಂದ್ಯವಾಡದ ಮೂವರು ಆಟಗಾರರು ಇವರೇ

ಇದಾಗ್ಯೂ ಪಾಕಿಸ್ತಾನ್ ಕ್ರಿಕೆಟ್ ಮಂಡಳಿಯ ಸದಸ್ಯರು ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಸಮಾರೋಪ ಸಮಾರಂಭದಲ್ಲಿ ಯಾಕೆ ಕಾಣಿಸಿಕೊಂಡಿಲ್ಲ ಎಂಬುದು ಇನ್ನು ಸಹ ಪ್ರಶ್ನಾರ್ಥಕವಾಗಿ ಉಳಿದಿದೆ. ಈ ಬಗ್ಗೆ ಪಿಸಿಬಿ ಏನು ಸ್ಪಷ್ಟನೆ ನೀಡಲಿದೆ ಎಂಬುದನ್ನು ಕಾದು ನೋಡಬೇಕಿದೆ.

Published On - 1:00 pm, Mon, 10 March 25