ಶಾಕಿಂಗ್: ಸಾನಿಯಾ ಮಿರ್ಜಾಗೆ ಡಿವೋರ್ಸ್: ಖ್ಯಾತ ಪಾಕಿಸ್ತಾನ ನಟಿಯನ್ನು ಮದುವೆಯಾದ ಶೋಯೆಬ್ ಮಲಿಕ್
Shoaib Malik Sana Javed Marriage: ಶೋಯೆಬ್ ಮಲಿಕ್ ಮತ್ತು ಸಾನಿಯಾ ಮಿರ್ಜಾ ಅವರ ಮದುವೆಯು 12 ಏಪ್ರಿಲ್ 2010 ರಂದು ನಡೆದಿತ್ತು. ಆದರೀಗ ಶೋಯೆಬ್ ಜನಪ್ರಿಯ ಪಾಕಿಸ್ತಾನಿ ನಟಿ ಸನಾ ಜಾವೇದ್ ಅವರನ್ನು ವಿವಾಹವಾಗಿದ್ದಾರೆ. ಮದುವೆಯ ಫೋಟೋವನ್ನು ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶೋಯೆಬ್ ಮಲಿಕ್ (Shoaib Malik) ಎರಡನೇ ಬಾರಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಶನಿವಾರ ಬೆಳಿಗ್ಗೆ ಅವರು ತಮ್ಮ ಮದುವೆಯ ಫೋಟೋವನ್ನು ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ, ಶೋಯೆಬ್ ಜನಪ್ರಿಯ ಪಾಕಿಸ್ತಾನಿ ನಟಿ ಸನಾ ಜಾವೇದ್ ಅವರನ್ನು ವಿವಾಹವಾಗಿದ್ದಾರೆ. ಶೋಯೆಬ್ ಈ ಹಿಂದೆ ಭಾರತದ ಟೆನಿಸ್ ಸೆನ್ಸೇಷನ್ ಸಾನಿಯಾ ಮಿರ್ಜಾ ಅವರನ್ನು ಮದುವೆಯಾಗಿದ್ದರು. ಆದರೆ , ಕಳೆದ ಕೆಲವು ಸಮಯದಿಂದ ಇಬ್ಬರ ನಡುವೆ ಎಲ್ಲವೂ ಸರಿಯಿಲ್ಲ ಎಂಬ ಸುದ್ದಿ ಹರಿದಾಡಿತ್ತು. ಇಬ್ಬರು ಬೇರ್ಪಟ್ಟಿದ್ದಾರೆ ಎಂದು ಹೇಳಲಾಗಿತ್ತು. ಇವುಗಳ ನಡುವೆ ಶೋಯಬ್ ಮಲಿಕ್ ಅವರ ಮದುವೆಯ ಸುದ್ದಿ ಬೆಳಕಿಗೆ ಬಂದಿದೆ.
ಎರಡು ದಿನಗಳ ಹಿಂದೆಯಷ್ಟೇ ಸಾನಿಯಾ ಮಿರ್ಜಾ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದರು. ಅದರಲ್ಲಿ, ”ವಿಚ್ಛೇದನ ತುಂಬಾ ಕಷ್ಟ, ಮದುವೆ ಕೂಡ ತುಂಬಾ ಕಷ್ಟ,” ಎಂದು ಬರೆದುಕೊಂಡಿದ್ದರು. ಈ ಮೂಲಕ ಶೋಯೆಬ್ ಮಲಿಕ್ ಮತ್ತು ಸಾನಿಯಾ ಮಿರ್ಜಾ ವಿಚ್ಛೇದನ ಪಡೆದಿದ್ದಾರೆ ಎಂಬ ಸೂಚನೆ ಸಿಕ್ಕಿದ್ದವು. ಇದೀಗ ಅಧಿಕೃತವಾಗಿದೆ.
View this post on Instagram
ಶೋಯೆಬ್ ಮಲಿಕ್ ಮತ್ತು ಸಾನಿಯಾ ಮಿರ್ಜಾ ಅವರ ವಿವಾಹವು 12 ಏಪ್ರಿಲ್ 2010 ರಂದು ನಡೆಯಿತು. ಇವರಿಬ್ಬರ ವಿವಾಹದ ಬಗ್ಗೆ ಭಾರತದಲ್ಲಿ ಸಾಕಷ್ಟು ವಿವಾದಗಳು ನಡೆದವು. ಇಬ್ಬರೂ ಹೈದರಾಬಾದ್‌ನಲ್ಲಿ ಮದುವೆಯಾಗಿದ್ದರು ಮತ್ತು 2018 ರಲ್ಲಿ ಸಾನಿಯಾ ಗಂಡು ಮಗುವಿಗೆ ಜನ್ಮ ನೀಡಿದ್ದರು. ಆದರೆ ಕೊರೋನ ನಂತರ, ಇಬ್ಬರ ನಡುವೆ ಅಸಮಾಧಾನ ಉಂಟಾಗಿತ್ತು. ಇಬ್ಬರೂ ಪ್ರತ್ಯೇಕವಾಗಿ ವಾಸಿಸುತ್ತಿದ್ದರು.
ಸನಾಗೆ ಎರಡನೇ ಮದುವೆ:
41 ವರ್ಷದ ಶೋಯೆಬ್ ಮಲಿಕ್ ಅವರನ್ನು ವಿವಾಹ ಆಗಿರುವ ಸನಾ ಜಾವೇದ್ ಅವರಿಗೆ ಕೂಡ ಇದು ಎರಡನೇ ಮದುವೆ. ಸನಾ ಈ ಹಿಂದೆ ಪಾಕಿಸ್ತಾನಿ ಗಾಯಕ ಉಮರ್ ಜಸ್ವಾಲ್ ಅವರನ್ನು ವಿವಾಹ ಆಗಿದ್ದರು. ಸದ್ಯ ಸನಾ ಮತ್ತು ಉಮರ್ ತಮ್ಮ ಹಳೆಯ ಫೋಟೋಗಳನ್ನು ಇನ್ಸ್ಟಾಗ್ರಾಮ್ನಿಂದ ಡಿಲೀಟ್ ಮಾಡಿದ್ದಾರೆ. ಸನಾ ಅವರ ಮೊದಲ ಮದುವೆ 2020 ರಲ್ಲಿ ನಡೆದಿದ್ದರೆ, ಈಗ ಅವರ ಎರಡನೇ ಮದುವೆ 2024 ರಲ್ಲಿ ಆಗಿದೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 12:30 pm, Sat, 20 January 24