AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

5 ಸಿಕ್ಸರ್, 7 ಬೌಂಡರಿ.. 29 ಎಸೆತಗಳಲ್ಲಿ 76 ರನ್ ಚಚ್ಚಿದ ಶ್ರೇಯಾಂಕಾ ಪಾಟೀಲ್

ಭಾರತ ಮಹಿಳಾ ತಂಡದಿಂದ ಹೊರಗುಳಿದಿದ್ದ ಶ್ರೇಯಾಂಕಾ ಪಾಟೀಲ್, ಸೀನಿಯರ್ ಮಹಿಳಾ ಟಿ20 ಟ್ರೋಫಿಯಲ್ಲಿ ಅಬ್ಬರಿಸಿದ್ದಾರೆ. ದೆಹಲಿ ವಿರುದ್ಧ ಕೇವಲ 29 ಎಸೆತಗಳಲ್ಲಿ ಅಜೇಯ 76 ರನ್ ಸಿಡಿಸಿ ಆಲ್‌ರೌಂಡ್ ಪ್ರದರ್ಶನ ನೀಡಿದರು. 7ನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಮೊದಲ ಅರ್ಧಶತಕ ದಾಖಲಿಸಿದ ಅವರು, ಭಾರತ ತಂಡಕ್ಕೆ ಮರಳುವ ತಮ್ಮ ಇಂಗಿತವನ್ನು ಆಯ್ಕೆಗಾರರಿಗೆ ಸ್ಪಷ್ಟ ಸಂದೇಶದ ಮೂಲಕ ತಲುಪಿಸಿದ್ದಾರೆ.

5 ಸಿಕ್ಸರ್, 7 ಬೌಂಡರಿ.. 29 ಎಸೆತಗಳಲ್ಲಿ 76 ರನ್ ಚಚ್ಚಿದ ಶ್ರೇಯಾಂಕಾ ಪಾಟೀಲ್
Shreyanka Patil
ಪೃಥ್ವಿಶಂಕರ
|

Updated on: Nov 18, 2026 | 6:57 PM

Share

ಭಾರತ ಮಹಿಳಾ ತಂಡ ನವೆಂಬರ್ 9ರಂದು ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿದೆ. ಈ ಪ್ರವಾಸಕ್ಕಾಗಿ ಬಿಸಿಸಿಐ ಕೂಡ 3 ತಂಡಗಳನ್ನು ಪ್ರಕಟಿಸಿತ್ತು. ಈ ಪ್ರವಾಸದಲ್ಲಿ ಭಾರತ ತಂಡ ಮೂರು ಮಾದರಿಯ ಕ್ರಿಕೆಟ್ ಸರಣಿಗಳಲ್ಲಿ ಆಡಲಿದೆ. ಆದರೆ, ಕರ್ನಾಟಕದ ಆಟಗಾರ್ತಿ ಶ್ರೇಯಾಂಕಾ ಪಾಟೀಲ್‌ಗೆ ಯಾವುದೇ ಸರಣಿಯಲ್ಲೂ ಸ್ಥಾನ ನೀಡಲಾಗಿಲ್ಲ. ಗಾಯದಿಂದ ಚೇತರಿಸಿಕೊಂಡು ತಂಡಕ್ಕೆ ಮರಳುವ ನಿರೀಕ್ಷೆಯಲ್ಲಿದ್ದ ಶ್ರೇಯಾಂಕಾಗೆ ಆಯ್ಕೆ ಸಮಿತಿ ನಿರಾಸೆ ಮೂಡಿಸಿತ್ತು. ಇದಕ್ಕೂ ಮೊದಲು ಜಿಂಬಾಬ್ವೆ ವಿರುದ್ಧದ ಸರಣಿಗೂ ಅವರನ್ನು ಆಯ್ಕೆ ಮಾಡಿರಲಿಲ್ಲ. ಹೀಗಾಗಿ, ಭಾರತ ತಂಡಕ್ಕೆ ಮರಳಲು ಎದುರು ನೋಡುತ್ತಿದ್ದ ಶ್ರೇಯಾಂಕಾ ಇದೀಗ ದೇಶೀಯ ಕ್ರಿಕೆಟ್‌ನಲ್ಲಿ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ. ಸೀನಿಯರ್ ಮಹಿಳಾ ಟಿ20 ಟ್ರೋಫಿ ಟೂರ್ನಿಯಲ್ಲಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

7ನೇ ಕ್ರಮಾಂಕದಲ್ಲಿ ಅಬ್ಬರಿಸಿದ ಶ್ರೇಯಾಂಕಾ

ನವೆಂಬರ್ 18ರಂದು ನಡೆದ ಸೀನಿಯರ್ ಮಹಿಳಾ ಟಿ20 ಟ್ರೋಫಿ 2026ರ ಪಂದ್ಯದಲ್ಲಿ ಕರ್ನಾಟಕ ಮಹಿಳಾ ತಂಡ ದೆಹಲಿ ತಂಡವನ್ನು ಎದುರಿಸಿತು. ಈ ಪಂದ್ಯದಲ್ಲಿ ದೆಹಲಿ ಗೆಲುವು ಸಾಧಿಸಿದರೂ, ಕರ್ನಾಟಕದ ಪರ ಆಡಿದ ಶ್ರೇಯಾಂಕಾ ಪಾಟೀಲ್ ತಮ್ಮ ಬ್ಯಾಟಿಂಗ್ ಮೂಲಕ ಅಭಿಮಾನಿಗಳ ಮನ ಗೆದ್ದರು. 7ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಇಳಿದ ಶ್ರೇಯಾಂಕಾ, ದೆಹಲಿ ಬೌಲರ್‌ಗಳ ಬೆವರಿಳಿಸಿದರು. ಸಿಕ್ಸರ್ ಹಾಗೂ ಬೌಂಡರಿಗಳ ಸುರಿಮಳೆಗೈದ ಅವರು, ತಮ್ಮ ಟಿ20 ವೃತ್ತಿಜೀವನದ ಚೊಚ್ಚಲ ಅರ್ಧಶತಕ ಸಿಡಿಸಿದರು. ಅಷ್ಟೇ ಅಲ್ಲ, ಕೊನೆಯವರೆಗೂ ಅಜೇಯರಾಗಿ ಉಳಿದು ತಂಡದ ಮೊತ್ತ ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು.

29 ಎಸೆತಗಳಲ್ಲಿ ಅಜೇಯ 76 ರನ್

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಶ್ರೇಯಾಂಕಾ ಪಾಟೀಲ್ ಕೇವಲ 29 ಎಸೆತಗಳಲ್ಲಿ ಅಜೇಯ 76 ರನ್ ಸಿಡಿಸಿದರು. ಬರೋಬ್ಬರಿ 245ರ ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್ ಬೀಸಿದ ಅವರು, ತಮ್ಮ ಇನ್ನಿಂಗ್ಸ್‌ನಲ್ಲಿ 5 ಭರ್ಜರಿ ಸಿಕ್ಸರ್ ಹಾಗೂ 7 ಬೌಂಡರಿಗಳನ್ನು ಬಾರಿಸಿದರು. ಇದು ಶ್ರೇಯಾಂಕಾ ಅವರ ಟಿ20 ವೃತ್ತಿಜೀವನದ ಮೊದಲ ಅರ್ಧಶತಕವಾಗಿದ್ದು, ಅವರ ವೈಯಕ್ತಿಕ ಗರಿಷ್ಠ ಮೊತ್ತವೂ ಆಗಿದೆ. ಬಹಳ ದಿನಗಳ ಬಳಿಕ ಬ್ಯಾಟಿಂಗ್‌ನಲ್ಲಿ ಇಂತಹ ಸ್ಫೋಟಕ ಆಟ ಪ್ರದರ್ಶಿಸುವ ಮೂಲಕ ಆಯ್ಕೆಗಾರರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ.

IND vs AUS: ಭಾರತ ಮಹಿಳಾ ತಂಡ ಪ್ರಕಟ: ಶ್ರೇಯಾಂಕಾ ಪಾಟೀಲ್​ಗೆ ಇಲ್ಲ ಸ್ಥಾನ

ಕರ್ನಾಟಕಕ್ಕೆ ಗೆಲುವು ದಕ್ಕಲಿಲ್ಲ

ಮೊದಲು ಬ್ಯಾಟಿಂಗ್ ಮಾಡಿದ ಕರ್ನಾಟಕ ಮಹಿಳಾ ತಂಡ, ಶ್ರೇಯಾಂಕಾ ಪಾಟೀಲ್ ಅವರ ಅಬ್ಬರದ ಬ್ಯಾಟಿಂಗ್ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 175 ರನ್ ಗಳಿಸಿತು. 176 ರನ್‌ಗಳ ಗುರಿ ಬೆನ್ನಟ್ಟಿದ ದೆಹಲಿ ತಂಡ ಕೇವಲ 17 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿ ಗೆಲುವಿನ ನಗೆ ಬೀರಿತು. ಬ್ಯಾಟಿಂಗ್‌ನಲ್ಲಿ 76 ರನ್ ಸಿಡಿಸಿ ಮಿಂಚಿದ ಶ್ರೇಯಾಂಕಾ, ಬೌಲಿಂಗ್‌ನಲ್ಲೂ ತಮ್ಮ ಕೈಚಳಕ ತೋರಿಸಿದರು. ದೆಹಲಿ ತಂಡದ ಎರಡು ವಿಕೆಟ್ ಕಬಳಿಸಿ ಆಲ್‌ರೌಂಡ್ ಪ್ರದರ್ಶನ ನೀಡಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಬಾಳಾಸಾಹೇಬ್ ಠಾಕ್ರೆ ಫೋಟೋ ಹರಿದ ಶಿವಸೇನೆ ನಾಯಕಿ; ಭುಗಿಲೆದ್ದ ವಿವಾದ
ಬಾಳಾಸಾಹೇಬ್ ಠಾಕ್ರೆ ಫೋಟೋ ಹರಿದ ಶಿವಸೇನೆ ನಾಯಕಿ; ಭುಗಿಲೆದ್ದ ವಿವಾದ
ದೇವರನ್ನು ಪೂಜಿಸಲ್ಲ,ಹಾಗಂತ ದೇವರಿಲ್ಲ ಅಂತಾ ಹೇಳಲ್ಲ ಎಂದ ಸಿದ್ದರಾಮಯ್ಯ
ದೇವರನ್ನು ಪೂಜಿಸಲ್ಲ,ಹಾಗಂತ ದೇವರಿಲ್ಲ ಅಂತಾ ಹೇಳಲ್ಲ ಎಂದ ಸಿದ್ದರಾಮಯ್ಯ
ತಾವೇ ಖುದ್ದಾಗಿ ತೆರಳಿ ಟ್ರಂಪ್​ಗೆ ಅದ್ದೂರಿ ಸ್ವಾಗತ ಕೋರಿದ ಚೀನಾ ಅಧ್ಯಕ್ಷ
ತಾವೇ ಖುದ್ದಾಗಿ ತೆರಳಿ ಟ್ರಂಪ್​ಗೆ ಅದ್ದೂರಿ ಸ್ವಾಗತ ಕೋರಿದ ಚೀನಾ ಅಧ್ಯಕ್ಷ
ಜಕ್ಕೂರು-ಯಲಹಂಕ ಜನರ ಕನಸು ನನಸು: ಜಕ್ಕೂರು ಫ್ಲೈಓವರ್ ಉದ್ಘಾಟಿಸಿದ ಸಿಎಂ
ಜಕ್ಕೂರು-ಯಲಹಂಕ ಜನರ ಕನಸು ನನಸು: ಜಕ್ಕೂರು ಫ್ಲೈಓವರ್ ಉದ್ಘಾಟಿಸಿದ ಸಿಎಂ
ಸಕ್ಕರೆ ಕಾರ್ಖಾನೆಗಳ ಜಿದ್ದಾಜಿದ್ದಿಯಲ್ಲಿ ಕಬ್ಬು ಬೆಳೆಗಾರರಿಗೆ ಬಂಪರ್
ಸಕ್ಕರೆ ಕಾರ್ಖಾನೆಗಳ ಜಿದ್ದಾಜಿದ್ದಿಯಲ್ಲಿ ಕಬ್ಬು ಬೆಳೆಗಾರರಿಗೆ ಬಂಪರ್
ಲಷ್ಕರ್ ಕಮಾಂಡರ್ ಲತೀಫ್ ಭಟ್ ಹತ್ಯೆ, ಭದ್ರತಾ ಪಡೆಗಳ ಶೌರ್ಯ ಕೊಂಡಾಡಿದ ಶಾ
ಲಷ್ಕರ್ ಕಮಾಂಡರ್ ಲತೀಫ್ ಭಟ್ ಹತ್ಯೆ, ಭದ್ರತಾ ಪಡೆಗಳ ಶೌರ್ಯ ಕೊಂಡಾಡಿದ ಶಾ
"ಬಿಜೆಪಿ ಸರ್ಕಾರವಿದ್ದಾಗಲೇ ಪರಿಹಾರ ಕೊಡದವರು ಈಗ ಕೊಡ್ತಾರಾ?"
'ಕುಮಾರಸ್ವಾಮಿ ಹೇಳಿಕೆ ಸುಳ್ಳು': ಎಂ.ಬಿ. ಪಾಟೀಲ್​​ ತಿರುಗೇಟು
'ಕುಮಾರಸ್ವಾಮಿ ಹೇಳಿಕೆ ಸುಳ್ಳು': ಎಂ.ಬಿ. ಪಾಟೀಲ್​​ ತಿರುಗೇಟು
ಸಿದ್ದರಾಮಯ್ಯ ಕಡೆಗಣನೆ ಆರೋಪಕ್ಕೆ ಡಿಸಿಎಂ ಪರಮೇಶ್ವರ್ ಸ್ಪಷ್ಟನೆ
ಸಿದ್ದರಾಮಯ್ಯ ಕಡೆಗಣನೆ ಆರೋಪಕ್ಕೆ ಡಿಸಿಎಂ ಪರಮೇಶ್ವರ್ ಸ್ಪಷ್ಟನೆ
ಮಂಡ್ಯ ಹೆದ್ದಾರಿಯಲ್ಲಿ ಕಾಂಗ್ರೆಸ್ ಮುಖಂಡನ ಬರ್ತ್‌ಡೇ ದರ್ಬಾರ್
ಮಂಡ್ಯ ಹೆದ್ದಾರಿಯಲ್ಲಿ ಕಾಂಗ್ರೆಸ್ ಮುಖಂಡನ ಬರ್ತ್‌ಡೇ ದರ್ಬಾರ್