Shreyanka Patil: ಏಷ್ಯಾಕಪ್​ನಿಂದ ಕನ್ನಡತಿ ಶ್ರೇಯಾಂಕಾ ಪಾಟೀಲ್ ಔಟ್

Shreyanka Patil: 21 ವರ್ಷದ ಶ್ರೇಯಾಂಕಾ ಪಾಟೀಲ್ ಟೀಮ್ ಇಂಡಿಯಾ ಪರ ಈವರೆಗೆ 12 ಟಿ20 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 16 ವಿಕೆಟ್​ಗಳನ್ನು ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದೀಗ ಏಷ್ಯಾಕಪ್ ಮೂಲಕ ಟಿ20 ವಿಶ್ವಕಪ್​ ತಂಡದಲ್ಲಿ ಸ್ಥಾನ ಖಚಿತಪಡಿಸಿಕೊಳ್ಳುವ ನಿರೀಕ್ಷೆಯಲ್ಲಿದ್ದ ಶ್ರೇಯಾಂಕಾ ಗಾಯಗೊಂಡು ಭಾರತ ತಂಡದಿಂದ ಹೊರಬಿದ್ದಿದ್ದಾರೆ.

Shreyanka Patil: ಏಷ್ಯಾಕಪ್​ನಿಂದ ಕನ್ನಡತಿ ಶ್ರೇಯಾಂಕಾ ಪಾಟೀಲ್ ಔಟ್
Shreyanka Patil
Follow us
ಝಾಹಿರ್ ಯೂಸುಫ್
|

Updated on:Jul 21, 2024 | 8:22 AM

ಟೀಮ್ ಇಂಡಿಯಾದ ಯುವ ಸ್ಟಾರ್ ಆಲ್​ರೌಂಡರ್ ಶ್ರೇಯಾಂಕಾ ಪಾಟೀಲ್ (Shreyanka Patil) ಮಹಿಳಾ ಏಷ್ಯಾಕಪ್ 2024 ಟೂರ್ನಿಯಿಂದ ಹೊರಬಿದ್ದಿದ್ದಾರೆ. ಬೆರಳಿನ ಮೂಳೆ ಮುರಿತದಿಂದಾಗಿ ಅವರು ಭಾರತ ತಂಡದಿಂದ ಹೊರಗುಳಿದಿದ್ದಾರೆ ಎಂದು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಶನಿವಾರ (ಜುಲೈ 20) ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.

ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಕನ್ನಡತಿ ಶ್ರೇಯಾಂಕಾ ಪಾಟೀಲ್ 3.4 ಓವರ್​ಗಳಲ್ಲಿ 14 ರನ್ ನೀಡಿ 2 ವಿಕೆಟ್ ಕಬಳಿಸಿ ಮಿಂಚಿದ್ದರು. ಇದೇ ಪಂದ್ಯದಲ್ಲಿ ಕ್ಯಾಚ್ ಹಿಡಿಯುವ ಯತ್ನದಲ್ಲಿ ಶ್ರೇಯಾಂಕಾ ಗಾಯಗೊಂಡಿದ್ದರು. ಆಕೆಯ ಎಡಗೈಯ ನಾಲ್ಕನೇ ಬೆರಳಿಗೆ ಮುರಿತವಾಗಿದ್ದು, ಹೀಗಾಗಿ ಟೂರ್ನಿಯಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ.

ಶ್ರೇಯಾಂಕಾ ಬದಲಿಗೆ ಯಾರು?

ಶ್ರೇಯಾಂಕಾ ಪಾಟೀಲ್ ಏಷ್ಯಾಕಪ್​ನಿಂದ ಹೊರಬೀಳುತ್ತಿದ್ದಂತೆ ಬದಲಿ ಆಟಗಾರ್ತಿಯಾಗಿ ಹೊರಗುಳಿಯುತ್ತಿದ್ದಂತೆ ತನುಜಾ ಕನ್ವರ್ ಅವರನ್ನು ಅಯ್ಕೆ ಮಾಡಲಾಗಿದೆ. 26 ವರ್ಷ ವಯಸ್ಸಿನ ಎಡಗೈ ಸ್ಪಿನ್ನರ್‌ ತುನುಜಾಗೆ ಇದು ಚೊಚ್ಚಲ ಅವಕಾಶ.

ಇದಕ್ಕೂ ಮುನ್ನ ಏಷ್ಯಾಕಪ್​ಗಾಗಿ ಹೆಸರಿಲ್ಪಟ್ಟ ತಂಡದಲ್ಲಿ ತನುಜಾ ಮೀಸಲು ಆಟಗಾರ್ತಿಯರ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದರು. ಇದೀಗ ಸ್ಪಿನ್ ಆಲ್​ರೌಂಡರ್ ಶ್ರೇಯಾಂಕಾ ಪಾಟೀಲ್ ಹೊರಗುಳಿದಿರುವ ಕಾರಣ ತನುಜಾ ಕನ್ವರ್​ ಅವರನ್ನು ಬದಲಿ ಆಟಗಾರ್ತಿಯಾಗಿ ಆಯ್ಕೆ ಮಾಡಲಾಗಿದೆ.

ಭಾರತದ ಪಂದ್ಯ ಯಾವಾಗ?

ಭಾರತ ಮಹಿಳಾ ತಂಡವು ಏಷ್ಯಾಕಪ್​ನಲ್ಲಿ ಈಗಾಗಲೇ ಮೊದಲ ಪಂದ್ಯವನ್ನಾಡಿದ್ದು, ಈ ಪಂದ್ಯದಲ್ಲಿ ಪಾಕಿಸ್ತಾನ್ ತಂಡವನ್ನು 7 ವಿಕೆಟ್​ಗಳಿಂದ ಮಣಿಸಿದೆ. ದಂಬುಲ್ಲಾದ ರಂಗಿರಿ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡವು 19.2 ಓವರ್​ಗಳಲ್ಲಿ 108 ರನ್ ಬಾರಿಸಿ ಆಲೌಟ್ ಆಗಿದ್ದರು. ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ 14.1 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು 109 ರನ್​ ಬಾರಿಸಿ ಅಮೋಘ ಗೆಲುವು ದಾಖಲಿಸಿತು.

ಇದೀಗ ಟೀಮ್ ಇಂಡಿಯಾ 2ನೇ ಪಂದ್ಯಕ್ಕಾಗಿ ಸಜ್ಜಾಗಿದೆ. ಭಾನುವಾರ (ಜು.21) ನಡೆಯಲಿರುವ ಏಷ್ಯಾಕಪ್​ನ 5ನೇ ಪಂದ್ಯದಲ್ಲಿ ಭಾರತ ಮತ್ತು ಯುಎಇ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿದರೆ, ಏಷ್ಯಾಕಪ್ 2024 ರಲ್ಲಿ ಸೆಮಿಫೈನಲ್ ಆಡುವುದು ಖಚಿತವಾಗಲಿದೆ.

ಇದನ್ನೂ ಓದಿ: RCB… ಅದೊಂದು ತಂಡವೇ ಅಲ್ಲ: ಮಾಜಿ ಆಟಗಾರ ಕಿಡಿ

ಭಾರತ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ರಿಚಾ ಘೋಷ್ (ವಿಕೆಟ್ ಕೀಪರ್), ಉಮಾ ಚೆಟ್ರಿ (ವಿಕೆಟ್ ಕೀಪರ್), ಸ್ಮೃತಿ ಮಂಧಾನ (ಉಪನಾಯಕಿ), ಶಫಾಲಿ ವರ್ಮಾ, ದೀಪ್ತಿ ಶರ್ಮಾ, ಪೂಜಾ ವಸ್ತ್ರಾಕರ್, ಅರುಂಧತಿ ರೆಡ್ಡಿ, ಜೆಮಿಮಾ ರೊಡ್ರಿಗಸ್, ರೇಣುಕಾ ಠಾಕೂರ್, ದಯಾಲನ್ ಹೇಮಲತಾ, ಆಶಾ ಶೋಭಾನಾ, ರಾಧಾ ಯಾದವ್, ಸಜನಾ ಸಜೀವನ್, ತನುಜಾ ಕನ್ವರ್.

Published On - 8:21 am, Sun, 21 July 24