Shreyas Iyer: ರಾಂಚಿಯಲ್ಲಿ ಅಯ್ಯರ್ ಅಬ್ಬರ: ಕೊಹ್ಲಿ ಬಳಿಕ ವಿಶೇಷ ದಾಖಲೆ ಬರೆದ ಶ್ರೇಯಸ್

India vs South Africa: ಶ್ರೇಯಸ್ ಅಯ್ಯರ್ (Shreyas Iyer) 111 ಎಸೆತಗಳಲ್ಲಿ 15 ಫೋರ್ ಬಾರಿಸಿ ಅಜೇಯ 113 ರನ್ ಚಚ್ಚಿದರು. ಈ ಮೂಲಕ ವಿಶೇಷ ದಾಖಲೆ ಬರೆದಿದ್ದಾರೆ. ಟೀಮ್ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಸಾಲಿಗೆ ಸೇರಿದ್ದಾರೆ.

Shreyas Iyer: ರಾಂಚಿಯಲ್ಲಿ ಅಯ್ಯರ್ ಅಬ್ಬರ: ಕೊಹ್ಲಿ ಬಳಿಕ ವಿಶೇಷ ದಾಖಲೆ ಬರೆದ ಶ್ರೇಯಸ್
Shreyas Iyer and Virat Kohli
Follow us
TV9 Web
| Updated By: Vinay Bhat

Updated on: Oct 10, 2022 | 7:52 AM

ರಾಂಚಿಯ ಜೆಎಸ್​​ಸಿಎ ಅಂತರರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ದ್ವಿತೀಯ ಏಕದಿನ ಪಂದ್ಯದಲ್ಲಿ ಭಾರತ (India vs South Africa) ಭರ್ಜರಿ ಜಯ ಸಾಧಿಸಿದೆ. ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಬೌಲರ್​ಗಳು ನಿರೀಕ್ಷೆಗೆ ತಕ್ಕಂತೆ ಯಶಸ್ಸು ಸಾಧಿಸಲು ಸಾಧ್ಯವಾಗಲಿಲ್ಲ. ಆದರೆ, ಟೀಮ್ ಇಂಡಿಯಾ ಬ್ಯಾಟರ್​ಗಳು ಅಮೋಘ ಆಟ ಪ್ರದರ್ಶಿಸಿದರು. ಅದರಲ್ಲೂ ಶ್ರೇಯಸ್ ಅಯ್ಯರ್ ಹಾಗೂ ಇಶಾನ್ ಕಿಶನ್ (Ishan Kishan) ಶತಕದ ಜೊತೆಯಾಟ ಆಡಿ ತಂಡಕ್ಕೆ 7 ವಿಕೆಟ್​ಗಳ ಜಯ ತಂದುಕೊಟ್ಟರು. ಈ ಮೂಲಕ ಭಾರತ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-1 ಅಂಕಗಳ ಅಂತರದ ಸಮಬಲ ಸಾಧಿಸಿದೆ. ಶ್ರೇಯಸ್ ಅಯ್ಯರ್ (Shreyas Iyer) 111 ಎಸೆತಗಳಲ್ಲಿ 15 ಫೋರ್ ಬಾರಿಸಿ ಅಜೇಯ 113 ರನ್ ಚಚ್ಚಿದರು. ಈ ಮೂಲಕ ವಿಶೇಷ ದಾಖಲೆ ಬರೆದಿದ್ದಾರೆ. ಟೀಮ್ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಸಾಲಿಗೆ ಸೇರಿದ್ದಾರೆ.

ಆಕರ್ಷಕ ಶತಕ ಸಿಡಿಸುವ ಮೂಲಕ ಶ್ರೇಯಸ್ ಅಯ್ಯರ್ ಅವರು ವಿರಾಟ್ ಕೊಹ್ಲಿ ಬಳಿಕ ರಾಂಚಿ ಮೈದಾನದಲ್ಲಿ ಸೆಂಚುರಿ ಸಿಡಿಸಿದ ಎರಡನೇ ಭಾರತೀಯ ಬ್ಯಾಟರ್ ಎಂಬ ಸಾಧನೆ ಮಾಡಿದ್ದಾರೆ. ಕೊಹ್ಲಿ ಈ ಮೈದಾನದಲ್ಲಿ ಒಟ್ಟು 4 ಇನ್ನಿಂಗ್ಸ್​ಗಳಲ್ಲಿ ಎರಡು ಶತಕ ಬಾರಿಸಿದ್ದಾರೆ. 2019 ರಲ್ಲಿ ಆಸ್ಟ್ರೇಲಿಯಾ ವಿರುದ್ಧ 123 ಮತ್ತು 2012 ರಲ್ಲಿ ಶ್ರೀಲಂಕಾ ವಿರುದ್ಧ 139 ರನ್ ಗಳಿಸಿದ್ದರು. ಇತರೆ ಯಾವುದೇ ಭಾರತೀಯ ಬ್ಯಾಟರ್​ಗಳು ಇಲ್ಲಿ ಮೂರಂಕಿ ಗಡಿ ಮುಟ್ಟಿರಲಿಲ್ಲ. ಇದೀಗ ಅಯ್ಯರ್ ಕೊಹ್ಲಿ ಬಳಿಕ ಈ ಮೈದಾನದಲ್ಲಿ ಶತಕ ಸಿಡಿಸಿದ್ದಾರೆ. ಒಟ್ಟಾರೆಯಾಗಿ ರಾಂಚಿಯಲ್ಲಿ ಸೆಂಚುರಿ ಬಾರಿಸಿದ ನಾಲ್ಕನೇ ಬ್ಯಾಟರ್ ಶ್ರೇಯಸ್ ಆಗಿದ್ದಾರೆ. ಇದಕ್ಕೂ ಮುನ್ನ ಆ್ಯಂಜಲೊ ಮ್ಯಾಥ್ಯೂಸ್ ಹಾಗೂ ಉಸ್ಮಾನ್ ಖ್ವಾಜಾ ಇಲ್ಲಿ ಶತಕ ಗಳಿಸಿದ್ದರು.

ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ದಕ್ಷಿಣ ಆಫ್ರಿಕಾ ತಂಡವು ನಿಗದಿತ 50 ಓವರ್​ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ 278 ರನ್ ಗಳಿಸಿತು. ಓಪನರ್​ಗಳಾದ ಕ್ವಿಂಟನ್ ಡಿ ಕಾಕ್ (5) ಹಾಗೂ ಜೆನ್ಮನ್ ಮಲಾನ್ (25) ವಿಕೆಟ್‌ಗಳು ತಂಡವು 40 ರನ್ ಗಳಿಸುವಷ್ಟರಲ್ಲಿ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಈ ಹಂತದಲ್ಲಿ ಜೊತೆ ಸೇರಿದ ಆ್ಯಡನ್ ಮರ್ಕ್ರಮ್ ಹಾಗೂ ರೀಜಾ ಹೆನ್ರಿಕ್ಸ್ ಮೂರನೇ ವಿಕೆಟ್‌ಗೆ 129 ರನ್‌ಗಳ ಜೊತೆಯಾಟ ಆಡಿದರು.

ಇದನ್ನೂ ಓದಿ
Image
IND vs SA: 15 ಫೋರ್, ಅಜೇಯ 113 ರನ್; ಏಕದಿನ ಕ್ರಿಕೆಟ್​ನಲ್ಲಿ 2ನೇ ಶತಕ ಸಿಡಿಸಿದ ಶ್ರೇಯಸ್​ ಅಯ್ಯರ್!
Image
IND vs SA: 4 ಬೌಂಡರಿ, 7 ಸಿಕ್ಸರ್.. 93 ರನ್..! ಆಫ್ರಿಕನ್ ಬೌಲರ್​ಗಳ ಚಳಿ ಬಿಡಿಸಿದ ಕಿಶನ್
Image
IND vs SA: ಶ್ರೇಯಸ್ ಶತಕ.. ಕಿಶನ್ ಸಿಡಿಲಬ್ಬರದ ಬ್ಯಾಟಿಂಗ್; 2ನೇ ಏಕದಿನ ಪಂದ್ಯ ಗೆದ್ದ ಟೀಂ ಇಂಡಿಯಾ
Image
ಸೋಲು ಸನಿಹವಾಗುತ್ತಿದ್ದಂತೆ ಕ್ರೀಡಾಸ್ಫೂರ್ತಿ ಮರೆತ ವೇಡ್! ಛೀಮಾರಿ ಹಾಕಿದ ನೆಟ್ಟಿಗರು; ವಿಡಿಯೋ ನೋಡಿ

76 ಎಸೆತಗಳನ್ನು ಎದುರಿಸಿದ ರೀಜಾ 9 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ 74 ರನ್ ಗಳಿಸಿದರು. ಇನ್ನೊಂದೆಡೆ ಮರ್ಕ್ರಮ್ 89 ಎಸೆತಗಳಲ್ಲಿ 7 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ 79 ರನ್ ಚಚ್ಚಿದರು. ನಂತರ ಹೆನ್ರಿಚ್ ಕ್ಲಾಸೆನ್ (30) ಹಾಗೂ ಡೇವಿಡ್ ಮಿಲ್ಲರ್ (ಅಜೇಯ 35) ಉಪಯುಕ್ತ ಕಾಣಿಕೆ ನೀಡಿದರು. ಭಾರತದ ಪರ ಮೊಹಮ್ಮದ್ ಸಿರಾಜ್ 3 ವಿಕೆಟ್ ಕಿತ್ತರು.

279 ರನ್​ಗಳ ಟಾರ್ಗೆಟ್ ಬೆನ್ನಟ್ಟಿದ ಟೀಮ್ ಇಂಡಿಯಾ 45.5 ಓವರ್​ಗಳಲ್ಲಿ 3 ವಿಕೆಟ್​ ನಷ್ಟಕ್ಕೆ ಗುರಿ ತಲುಪುವ ಮೂಲಕ ಗೆಲುವಿನ ನಗೆ ಬೀರಿತು. ಭಾರತದ ಆರಂಭ ಕೂಡ ಚೆನ್ನಾಗಿರಲಿಲ್ಲ. 48 ರನ್​ಗಳಿಗೆ 2 ವಿಕೆಟ್​ ಕಳೆದುಕೊಂಡು ಆಘಾತ ಅನುಭವಿಸಿತು. ನಾಯಕ ಶಿಖರ್​ ಧವನ್ 13​ ಹಾಗೂ ಶುಭ್ಮನ್​ ಗಿಲ್​ 28 ರನ್​ ಗಳಿಸಿ ಪೆವಿಲಿಯನ್​ ಸೇರಿಕೊಂಡರು. ಈ ಸಂದರ್ಭ ಶ್ರೇಯಸ್​ ಅಯ್ಯರ್ ಹಾಗೂ ಇಶಾನ್​ ಕಿಶನ್​ ಜೋಡಿ ಮೂರನೇ ವಿಕೆಟ್​ಗೆ 161 ರನ್​ ಜೊತೆಯಾಟವಾಡಿದರು. ಹರಿಣಗಳ ಬೌಲಿಂಗ್​ ದಾಳಿಯನ್ನು ಸಮರ್ಥವಾಗಿ ಎದುರಿಸಿದ ಇಬ್ಬರೂ ಬ್ಯಾಟರ್​ಗಳು ತಂಡಕ್ಕೆ ಆಸರೆಯಾಗಿ ನಿಂತರು.

84 ಎಸೆತಗಳಲ್ಲಿ 4 ಬೌಂಡರಿ ಹಾಗೂ 7 ಸಿಕ್ಸರ್​ ನೆರವಿನಿಂದ 93 ರನ್​ ಬಾರಿಸಿದ ಕಿಶನ್​ 7 ರನ್​ ಅಂತರದಲ್ಲಿ ಶತಕವನ್ನು ಮಿಸ್ ಮಾಡಿಕೊಂಡರು. ಫೋರ್ಟಿನ್​ ಬೌಲಿಂಗ್​ನಲ್ಲಿ ಹೆಂಡ್ರಿಕ್ಸ್​ಗೆ ಕ್ಯಾಚ್​ ನೀಡಿ ನಿರಾಸೆ ಅನುಭವಿಸಿದರು. ಇನ್ನೊಂದೆಡೆ ಅಜೇಯ ಆಟವಾಡಿದ ಶ್ರೇಯಸ್​ ಅಯ್ಯರ್ (113) ಭರ್ಜರಿ ಶತಕ ದಾಖಲಿಸಿ ಸಂಭ್ರಮಿಸಿದರು. ಕಿಶನ್ ನಿರ್ಗಮನದ ಬಳಿಕ ಬಂದ ಸಂಜು ಸ್ಯಾಮ್ಸನ್​ 30 ರನ್​ ಬಾರಿಸಿ ಅಜೇಯರಾಗುಳಿದರು. ಶ್ರೇಯಸ್ ಅಯ್ಯರ್ ಪಂದ್ಯಶ್ರೇಷ್ಠ ಪ್ರಶಸ್ತಿ ಬಾಚಿಕೊಂಡರು.

ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ