ದುಬಾರಿ ಬೆಲೆಯ ಕಾರು ಖರೀದಿಸಿ ಫೋಟೋ ಹಂಚಿಕೊಂಡ ಶ್ರೇಯಸ್ ಅಯ್ಯರ್
Shreyas Iyer's Luxurious New Car: ಭಾರತೀಯ ಕ್ರಿಕೆಟ್ ತಂಡದಿಂದ ಹೊರಗಿರುವ ಶ್ರೇಯಸ್ ಅಯ್ಯರ್ ಅವರು 3 ಕೋಟಿ ರೂಪಾಯಿಗಳಿಗೂ ಅಧಿಕ ಬೆಲೆಯ ಮರ್ಸಿಡಿಸ್ ಜಿ-ವ್ಯಾಗನ್ ಕಾರನ್ನು ಖರೀದಿಸಿದ್ದಾರೆ. ಐಪಿಎಲ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದರೂ, ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಿಂದ ಹೊರಗುಳಿದ ಅವರು, ರಜಾದಿನಗಳನ್ನು ಆಚರಿಸುತ್ತಿದ್ದಾರೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ ಕಾರಿನ ಫೋಟೋ ಹಂಚಿಕೊಂಡಿದ್ದಾರೆ.

ಟೀಂ ಇಂಡಿಯಾದ ಅನುಭವಿ ಬ್ಯಾಟ್ಸ್‌ಮನ್ ಶ್ರೇಯಸ್ ಅಯ್ಯರ್ (Shreyas Iyer) ಪ್ರಸ್ತುತ ಟೀಂ ಇಂಡಿಯಾದಿಂದ ಹೊರಗಿದ್ದು, ರಜಾದಿನಗಳನ್ನು ಕಳೆಯುತ್ತಿದ್ದಾರೆ. ವಾಸ್ತವವಾಗಿ ಐದು ಪಂದ್ಯಗಳ ಟೆಸ್ಟ್ ಸರಣಿಗಾಗಿ ಇಂಗ್ಲೆಂಡ್ ಪ್ರವಾಸ ಮಾಡಿರುವ ಭಾರತ ಟೆಸ್ಟ್ ತಂಡದಲ್ಲಿ ಶ್ರೇಯಸ್ ಅಯ್ಯರ್ ಸ್ಥಾನ ಪಡೆದಿಲ್ಲ. ಹೀಗಾಗಿ ಕುಟುಂಬದೊಂದಿಗೆ ಸಮಯ ಕಳೆಯುತ್ತಿರುವ ಶ್ರೇಯಸ್ ಅಯ್ಯರ್, ಇದೀಗ ದುಬಾರಿ ಬೆಲೆಯ ಕಾರೊಂದನ್ನು ಖರೀದಿಸಿದ್ದು, ಅದರ ಜೊತೆಗೆ ತೆಗೆಸಿಕೊಂಡಿರುವ ಫೋಟೋಗಳನ್ನು ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅಯ್ಯರ್ ಮರ್ಸಿಡಿಸ್ ಜಿ-ವ್ಯಾಗನ್ (Mercedes G-Wagon) ಹೆಸರಿನ ಕಾರನ್ನು ಖರೀದಿ ಮಾಡಿದ್ದು, ಇದರ ಬೆಲೆ 3 ಕೋಟಿ ರೂ.ಗಳಿಗಿಂತ ಹೆಚ್ಚು ಎಂದು ಹೇಳಲಾಗಿದೆ.
ಫೋಟೋ ಹಂಚಿಕೊಂಡ ಶ್ರೇಯಸ್
ಶ್ರೇಯಸ್ ಅಯ್ಯರ್ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿರುವ ಫೋಟೋಗಳಲ್ಲಿ ಅವರು ತಮ್ಮ ಕಾರಿನಲ್ಲಿ ಕುಳಿತು ಪೋಸ್ ನೀಡುತ್ತಿರುವುದನ್ನು ಕಾಣಬಹುದು. ಈ ಫೋಟೋದಲ್ಲಿ ಅಯ್ಯರ್ ಕಪ್ಪು ಟಿ-ಶರ್ಟ್, ಕಪ್ಪು ಪ್ಯಾಂಟ್ ಹಾಗೂ ಕಪ್ಪು ಬೂಟುಗಳನ್ನು ಧರಿಸಿರುವುದು ವಿಶೇಷ ಎನ್ನಬಹುದು. ಫೋಟೋ ಹಂಚಿಕೊಂಡಿರುವುದರ ಜೊತೆಗೆ ‘ವಿವಿಧ ಸ್ಥಳಗಳಿಗೆ ಹೋಗುವುದು’ ಎಂಬ ಶೀರ್ಷಿಕೆಯನ್ನು ನೀಡಿದ್ದಾರೆ.
View this post on Instagram
ಐಪಿಎಲ್‌ನಲ್ಲಿ ಮಿಂಚಿದ್ದ ಅಯ್ಯರ್
ಶ್ರೇಯಸ್ ಅಯ್ಯರ್ ಇಂಡಿಯನ್ ಪ್ರೀಮಿಯರ್ ಲೀಗ್ 2025 ರಲ್ಲಿ ಪಂಜಾಬ್ ಕಿಂಗ್ಸ್ ತಂಡದ ನಾಯಕತ್ವ ವಹಿಸಿದ್ದರು. ಅವರ ನಾಯಕತ್ವದಲ್ಲಿ, ಪಂಜಾಬ್ ತಂಡವು ಫೈನಲ್‌ಗೇರಿತ್ತು. ಆದರೆ ಫೈನಲ್‌ನಲ್ಲಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಸೋಲನ್ನು ಎದುರಿಸಬೇಕಾಯಿತು. ಈ ಇಡೀ ಪಂದ್ಯಾವಳಿಯಲ್ಲಿ, ಶ್ರೇಯಸ್ ಅಯ್ಯರ್ ನಾಯಕತ್ವ ಮತ್ತು ಬ್ಯಾಟಿಂಗ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದರು. ಅವರು 17 ಪಂದ್ಯಗಳಲ್ಲಿ 50.33 ಸರಾಸರಿ ಮತ್ತು 175.07 ಸ್ಟ್ರೈಕ್ ರೇಟ್‌ನಲ್ಲಿ 604 ರನ್ ಕಲೆಹಾಕಿದ್ದರು. ಹಾಗೆಯೇ 6 ಅರ್ಧಶತಕಗಳನ್ನು ಬಾರಿಸಿದ್ದರು.
ಐಪಿಎಲ್ ಬಳಿಕ ಮತ್ತೊಂದು ತಂಡವನ್ನು ಪ್ಲೇಆಫ್‌ಗೇರಿಸಿದ ಶ್ರೇಯಸ್ ಅಯ್ಯರ್
ಇದರ ಹೊರತಾಗಿಯೂ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಐದು ಪಂದ್ಯಗಳ ಟೆಸ್ಟ್ ಸರಣಿಗೆ ಅವರಿಗೆ ಟೀಂ ಇಂಡಿಯಾದಲ್ಲಿ ಸ್ಥಾನ ಸಿಕ್ಕಿಲ್ಲ. ಇತ್ತೀಚೆಗೆ, ಶ್ರೇಯಸ್ ಅಯ್ಯರ್ ಕೂಡ ರಜೆಗಾಗಿ ಕಝಾಕಿಸ್ತಾನ್‌ಗೆ ಹೋಗಿದ್ದರು. ಅಲ್ಲಿನ ಅವರ ಫೋಟೋಗಳು ಕೂಡ ಸಖತ್ ವೈರಲ್ ಆಗಿದ್ದವು. ಪ್ರಸ್ತುತ, ರಜಾದಿನಗಳನ್ನು ಕಳೆಯುವುದರ ಜೊತೆಗೆ, ಶ್ರೇಯಸ್ ಅಯ್ಯರ್ ಟೀಂ ಇಂಡಿಯಾಕ್ಕೆ ಮರಳುವುದರ ಮೇಲು ಕೆಲಸ ಮಾಡುತ್ತಿದ್ದಾರೆ. 2025 ರ ಚಾಂಪಿಯನ್ಸ್ ಟ್ರೋಫಿಯ ಫೈನಲ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಅಯ್ಯರ್, ಟೀಂ ಇಂಡಿಯಾ ಪರ ತಮ್ಮ ಕೊನೆಯ ಏಕದಿನ ಪಂದ್ಯವನ್ನು ಆಡಿದ್ದರು. ಅಂದಿನಿಂದ ಅವರಿಗೆ ಭಾರತ ತಂಡದಲ್ಲಿ ಸ್ಥಾನ ಸಿಕ್ಕಿಲ್ಲ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
