Shreyas Iyer: ಐಪಿಎಲ್ ಹರಾಜಿಗೂ ಮುನ್ನ ಸಿಡಿಲಬ್ಬರದ ಶತಕ ಸಿಡಿಸಿದ ಶ್ರೇಯಸ್ ಅಯ್ಯರ್

Syed Mushtaq Ali Trophy: ಸೈಯದ್ ಮುಷ್ಟಾಕ್ ಅಲಿ ಟ್ರೋಫಿಯಲ್ಲಿ ಶ್ರೇಯಸ್ ಅಯ್ಯರ್ ಅವರ ಅದ್ಭುತ ಪ್ರದರ್ಶನ ಮುಂಬೈ ತಂಡಕ್ಕೆ ಗೆಲುವನ್ನು ತಂದುಕೊಟ್ಟಿದೆ. ಅವರು 57 ಎಸೆತಗಳಲ್ಲಿ 130 ರನ್ ಗಳಿಸಿ ಅಜೇಯರಾಗಿ ಉಳಿದರು. 11 ಬೌಂಡರಿ ಮತ್ತು 10 ಸಿಕ್ಸರ್‌ಗಳನ್ನು ಸಿಡಿಸಿದ ಅಯ್ಯರ್ ಅವರ ಆಟ ಮುಂಬೈ 250 ರನ್ ಗಳಿಸಲು ಸಹಾಯ ಮಾಡಿತು.

Shreyas Iyer: ಐಪಿಎಲ್ ಹರಾಜಿಗೂ ಮುನ್ನ ಸಿಡಿಲಬ್ಬರದ ಶತಕ ಸಿಡಿಸಿದ ಶ್ರೇಯಸ್ ಅಯ್ಯರ್
ಶ್ರೇಯಸ್ ಅಯ್ಯರ್
Follow us
ಪೃಥ್ವಿಶಂಕರ
|

Updated on: Nov 23, 2024 | 4:08 PM

ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಮುಂಬೈ ತಂಡವನ್ನು ಮುನ್ನಡೆಸುತ್ತಿರುವ ಶ್ರೇಯಸ್ ಅಯ್ಯರ್ ಸ್ಫೋಟಕ ಶತಕ ಸಿಡಿಸಿ ಮಿಂಚಿದ್ದಾರೆ. ಇಂದು ನಡೆದ ಗೋವಾ ವಿರುದ್ಧದ ಪಂದ್ಯದಲ್ಲಿ ಬೌಂಡರಿ ಹಾಗೂ ಸಿಕ್ಸರ್​ಗಳ ಮಳೆಗರೆದ ಅಯ್ಯರ್ ಕೇವಲ 57 ಎಸೆತಗಳಲ್ಲಿ 11 ಬೌಂಡರಿ ಹಾಗೂ 10 ಭರ್ಜರಿ ಸಿಕ್ಸರ್​ಗಳ ಸಹಿತ ಅಜೇಯ 130 ರನ್ ಕಲೆಹಾಕಿದರು. ಅಯ್ಯರ್ ಅವರ ಈ ಸ್ಫೋಟಕ ಇನ್ನಿಂಗ್ಸ್​ನಿಂದಾಗಿ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ತಂಡ 20 ಓವರ್​ಗಳಲ್ಲಿ 4 ವಿಕೆಟ್ ನಷ್ಟಕ್ಕೆ 250 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಗೋವಾ ತಂಡ ಗೆಲುವಿಗಾಗಿ ಹೋರಾಟ ನೀಡಿತ್ತಾದರೂ 26 ರನ್​ಗಳಿಂದ ಸೋಲೊಪ್ಪಿಕೊಳ್ಳಬೇಕಾಯಿತು.

250 ರನ್ ಕಲೆಹಾಕಿದ ಮುಂಬೈ

ಪಂದ್ಯದಲ್ಲಿ ಟಾಸ್ ಗೆದ್ದ ಗೋವಾ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ತಂಡಕ್ಕೆ ಮೊದಲ ವಿಕೆಟ್​ಗೆ ಕೇವಲ 9 ರನ್​ಗಳ ಜೊತೆಯಾಟ ಸಿಕ್ಕಿತು. ಆಂಗ್ಕ್ರಿಶ್ ರಘುವಂಶಿ 6 ರನ್​ ಬಾರಿಸಿ ಔಟಾದರು. ಆ ಬಳಿಕ ಜೊತೆಯಾದ ಪೃಥ್ವಿ ಶಾ ಹಾಗೂ ಶ್ರೇಯಸ್ ಉತ್ತಮ ಜೊತೆಯಾಟ ಕಟ್ಟಿದರು. ಈ ವೇಳೆ ಪೃಥ್ವಿ 33 ರನ್ ಕಲೆಹಾಕಿ ವಿಕೆಟ್ ಒಪ್ಪಿಸಿದರೆ, ನಾಯಕ ಶ್ರೇಯಸ್ ಮಾತ್ರ ಸ್ಫೋಟಕ ಬ್ಯಾಟಿಂಗ್ ಮಾಡಿದರು. ಅಯ್ಯರ್​ಗೆ ಶಂಸ್ ಮುಲಾನಿ (42) ಅವರಿಂದ ಉತ್ತಮ ಜೊತೆಯಾಟವೂ ಸಿಕ್ಕಿತು. ಹೀಗಾಗಿ ತಂಡ 250 ರನ್ ಕಲೆಹಾಕಲು ಸಾಧ್ಯವಾಯಿತು.

ಹೋರಾಟ ನೀಡಿದ ಗೋವಾ

ಈ ಗುರಿ ಬೆನ್ನಟ್ಟಿದ ಗೋವಾ ಕೂಡ ಉತ್ತಮ ಹೋರಾಟ ನೀಡಿತು. ಆದಾಗ್ಯೂ ತಂಡಕ್ಕೆ ಮುಂಬೈ ನೀಡಿದ್ದ ಬೃಹತ್ ಮೊತ್ತ ಬೆನ್ನಟ್ಟಲು ಸಾಧ್ಯವಾಗಲಿಲ್ಲ. ತಂಡದ ಪರ ಆರಂಭಿಕ ಇಶಾನ್ ಗಡೇಕರ್ 16 ಎಸೆತಗಳಲ್ಲಿ 40 ರನ್​ಗಳ ಕಾಣಿಕೆ ನೀಡಿದರೆ, ಮಾಜಿ ಆರ್​ಸಿಬಿ ಆಟಗಾರ ಸುಯಶ್ ಪ್ರಭುದೇಸಾಯಿ 52 ರನ್​ಗಳ ಇನ್ನಿಂಗ್ಸ್ ಆಡಿದರು. ಕೊನೆಯಲ್ಲಿ ವಿಕಾಶ್ ಕನ್ವರ್ ಸಿಂಗ್ ಅಜೇಯ 47 ರನ್ ಬಾರಿಸಿದರಾದರೂ ತಂಡವನ್ನು ಗೆಲುವಿನ ದಡ ಮುಟ್ಟಿಸಲು ಸಾಧ್ಯವಾಗಲಿಲ್ಲ. ಅಂತಿಮವಾಗಿ ಗೋವಾ ತಂಡ 8 ವಿಕೆಟ್ ನಷ್ಟಕ್ಕೆ 224 ರನ್​ ಕಲೆಹಾಕಲಷ್ಟೇ ಶಕ್ತವಾಯಿತು.

ಸರಿಯಾದ ಸಮಯದಲ್ಲಿ ಸಿಡಿದ ಶತಕ

ಐಪಿಎಲ್ ಹರಾಜಿಗೂ ಮುನ್ನ ಶ್ರೇಯಸ್ ಅಯ್ಯರ್ ಬಿರುಸಿನ ಶತಕ ಸಿಡಿಸಿರುವುದು ಅವರಿಗೆ ಭರ್ಜರಿ ಲಾಭ ತಂದುಕೊಟ್ಟಿದೆ. ಏಕೆಂದರೆ ನಾಯಕತ್ವ ಸ್ಥಾನದ ಪ್ರಮುಖ ಆಕಾಂಕ್ಷಿಯಾಗಿರುವ ಅಯ್ಯರ್ ಇದೀಗ ಯಾವ ತಂಡ ಸೇರಿದರೂ ಅವರಿಗೆ ನಾಯಕತ್ವ ಸಿಗುವುದು ಖಚಿತವಾಗಿದೆ. ಅಲ್ಲದೆ ಅವರ ನಾಯಕತ್ವದಲ್ಲಿ ಕಳೆದ ಬಾರಿ ಕೆಕೆಆರ್ ಪ್ರಶಸ್ತಿಯನ್ನು ಸಹ ಗೆದ್ದುಕೊಂಡಿತು. ಹೀಗಾಗಿ ಅಯ್ಯರ್ ಅವರನ್ನು ಖರೀದಿಸಲು ಹಲವು ತಂಡಗಳು ಜಿದ್ದಿಗೆ ಬೀಳುವುದು ಖಚಿತವಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ