ಭಾರತ -ಇಂಗ್ಲೆಂಡ್‌ ನಡುವಿನ ಮೊದಲ ಟಿ20 ಪಂದ್ಯ ನಡೆಯುವುದು ಅನುಮಾನ

IND vs ENG T20 Rain Forecast: ಐರ್ಲೆಂಡ್ ಸರಣಿ ನಂತರ ಟೀಂ ಇಂಡಿಯಾ ಇಂಗ್ಲೆಂಡ್ ವಿರುದ್ಧ ಐದು ಪಂದ್ಯಗಳ T20 ಸರಣಿಗೆ ಸಜ್ಜಾಗಿದೆ. ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ಮೊದಲ ಪಂದ್ಯ ಜುಲೈ 1 ರಂದು ರಿವರ್‌ಸೈಡ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಆದರೆ ಪಂದ್ಯದ ದಿನದಂದು ಶೇ. 66 ರಷ್ಟು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ಹಿಂದೆ ಇದೇ ಮೈದಾನದಲ್ಲಿ ನಡೆದ ಭಾರತದ ಎರಡು ಪಂದ್ಯಗಳು ಮಳೆಯಿಂದ ರದ್ದಾಗಿದ್ದವು.

ಭಾರತ -ಇಂಗ್ಲೆಂಡ್‌ ನಡುವಿನ ಮೊದಲ ಟಿ20 ಪಂದ್ಯ ನಡೆಯುವುದು ಅನುಮಾನ
Ind Vs Eng

Updated on: Jul 01, 2026 | 4:40 PM

ಐರ್ಲೆಂಡ್ ವಿರುದ್ಧ ಟಿ20 ಸರಣಿ ಸೋತಿರುವ ಟೀಂ ಇಂಡಿಯಾ ಇದೀಗ ಇಂಗ್ಲೆಂಡ್‌ (India vs England) ತಂಡವನ್ನು ಎದುರಿಸಲು ಸಜ್ಜಾಗಿದೆ. ಕಳೆದ ವರ್ಷ, ಹೊಸ ನಾಯಕ ಶುಭ್​ಮನ್ ಗಿಲ್ ನೇತೃತ್ವದಲ್ಲಿ ಟೀಮ್ ಇಂಡಿಯಾ ಇಲ್ಲಿ ಐದು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಿತ್ತು. ಈ ಬಾರಿ, ಹೊಸ ಟಿ20 ನಾಯಕ ಶ್ರೇಯಸ್ ಅಯ್ಯರ್ ಅವರ ನಾಯಕತ್ವದಲ್ಲಿ ಐದು ಪಂದ್ಯಗಳ ಟಿ20 ಸರಣಿ ಆಡಲು ಸಜ್ಜಾಗಿದೆ. ಸರಣಿಯ ಮೊದಲ ಪಂದ್ಯ ಜುಲೈ 1 ರ ಬುಧವಾರದಂದು ಡರ್ಹ್ಯಾಮ್ ಕೌಂಟಿಯ ತವರು ಮೈದಾನವಾದ ರಿವರ್‌ಸೈಡ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಟೀಂ ಇಂಡಿಯಾ ಈ ಮೈದಾನದಲ್ಲಿ ಮೊದಲ ಬಾರಿಗೆ ಟಿ20 ಪಂದ್ಯವನ್ನು ಆಡಲಿದೆ. ಆದರೆ ಈ ಪಂದ್ಯ ನಡೆಯುವುದು ಅನುಮಾನವಾಗಿದೆ. ಏಕೆಂದರೆ ಪಂದ್ಯದ ದಿನದಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಹವಾಮಾನ ಹೇಗಿರಲಿದೆ?

ಇಂಗ್ಲೆಂಡ್‌ನಲ್ಲಿ ಯಾವಾಗ ಮಳೆ ಬರುತ್ತದೆ ಎಂದು ಊಹಿಸುವುದು ಕಷ್ಟ. ಅಲ್ಲಿ ಬೇಸಿಗೆ ಇದ್ದರೂ ಮಳೆ ಬೀಳುತ್ತದೆ, ಇದರಿಂದ ಅನೇಕ ಕ್ರಿಕೆಟ್ ಪಂದ್ಯಗಳು ರದ್ದಾಗಿವೆ. ಹೀಗಾಗಿ ಭಾರತ ಮತ್ತು ಇಂಗ್ಲೆಂಡ್ ನಡುವಿನ ಪಂದ್ಯಕ್ಕೂ ಮಳೆ ಅಡ್ಡಿಪಡಿಸುವ ಸಾಧ್ಯತೆಗಳಿವೆ. ಉಭಯ ತಂಡಗಳ ನಡುವಿನ ಈ ಪಂದ್ಯವು ಭಾರತೀಯ ಕಾಲಮಾನ ರಾತ್ರಿ 10ಗಂಟೆಗೆ ಆರಂಭವಾಗಲಿದೆ. ಅಂದರೆ ಇಂಗ್ಲೆಂಡ್‌ನಲ್ಲಿ ಪಂದ್ಯ ಪ್ರಾರಂಭವಾಗುವ ಸಮಯ ಸಂಜೆ 5:30. ಚೆಸ್ಟರ್-ಲೆ-ಸ್ಟ್ರೀಟ್‌ನಲ್ಲಿ ಸಂಜೆ 5 ಗಂಟೆಯ ನಂತರ ಮಳೆ ಬೀಳುವ ಸಾಧ್ಯತೆ ಶೇ. 43 ರಷ್ಟು ಇದೆ ಎಂದು ಬಿಬಿಸಿ ಹವಾಮಾನ ಸೂಚಿಸುತ್ತದೆ. ಈ ವರದಿಯ ಪ್ರಕಾರ, ಸಂಜೆ 5 ಗಂಟೆಯ ನಂತರ ಮಳೆಯಾಗುವ ಸಾಧ್ಯತೆ ಶೇ. 43 ರಷ್ಟು ಇದೆ. ಸಂಜೆ 6 ರಿಂದ ರಾತ್ರಿ 8 ರವರೆಗೆ ಮಳೆಯಾಗುವ ಸಾಧ್ಯತೆ ಶೇ. 66 ರಷ್ಟು ಇದೆ. ಇದರ ನಂತರವೂ, ರಾತ್ರಿಯಿಡೀ ನಿರಂತರ ಮಳೆಯಾಗುವ ಸಾಧ್ಯತೆ ಶೇ. 44 ರಿಂದ 45 ರಷ್ಟು ಇದೆ. ಇದರರ್ಥ ಭಾರತೀಯ ಕಾಲಮಾನ ರಾತ್ರಿ 10:00 ಗಂಟೆಗೆ ಪ್ರಾರಂಭವಾಗಿ ಬೆಳಗಿನ ಜಾವ 2:00 ರವರೆಗೆ ನಡೆಯಬೇಕಿದ್ದ ಪಂದ್ಯವು ಮಳೆಯಿಂದ ಸಂಪೂರ್ಣವಾಗಿ ರದ್ದಾಗಬಹುದು.

IND vs IRE: ಸೋಲಿನ ಆಘಾತದ ನಡುವೆ ಕೊನೆಯ ಟಿ20 ಪಂದ್ಯಕ್ಕೆ ಟೀಂ ಇಂಡಿಯಾ ರೆಡಿ

ಹಿಂದಿನ 2 ಪಂದ್ಯಗಳು ರದ್ದಾಗಿದ್ದವು

ಈ ಮೈದಾನದಲ್ಲಿ ಟೀಂ ಇಂಡಿಯಾ ಟಿ20 ಪಂದ್ಯ ಆಡುತ್ತಿರುವುದು ಇದೇ ಮೊದಲು. ಭಾರತ ಇಲ್ಲಿಯವರೆಗೆ ಅಲ್ಲಿ ಕೇವಲ ಎರಡು ಪಂದ್ಯಗಳನ್ನು ಮಾತ್ರ ಆಡಿದೆ, ಎರಡೂ ಏಕದಿನ ಪಂದ್ಯಗಳಾಗಿದ್ದವು. ಆದಾಗ್ಯೂ, ಕಾಕತಾಳೀಯವಾಗಿ, ಎರಡೂ ಮಳೆಯಿಂದಾಗಿ ರದ್ದಾಗಿದ್ದವು. ಮೊದಲ ಪಂದ್ಯವನ್ನು 2002 ರಲ್ಲಿ ನ್ಯಾಟ್‌ವೆಸ್ಟ್ ಟ್ರೋಫಿಯಲ್ಲಿ ಆಡಲಾಗಿದ್ದರೆ, ಎರಡನೆಯ ಪಂದ್ಯವನ್ನು 2011 ರಲ್ಲಿ ಏಕದಿನ ಸರಣಿಯಲ್ಲಿ ಆಡಲಾಯಿತು. ಎರಡೂ ಪಂದ್ಯಗಳಲ್ಲಿ, ಭಾರತ ತಂಡವು ಮೊದಲು ಬ್ಯಾಟಿಂಗ್ ಮಾಡಿತ್ತಾದರೂ ಆ ನಂತರ ಇಂಗ್ಲೆಂಡ್‌ನ ಇನ್ನಿಂಗ್ಸ್ ಸಮಯದಲ್ಲಿ ಮಳೆ ಸುರಿದ ಪರಿಣಾಮವಾಗಿ ಪಂದ್ಯವನ್ನು ರದ್ದುಗೊಳಿಸಲಾಗಿತ್ತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us