IND vs AUS: ಸೂಪರ್​ಮ್ಯಾನ್ ಶ್ರೇಯಸ್; ಕ್ಯಾಚ್ ಹಿಡಿದು ನೋವಿನಿಂದ ನರಳಾಡಿದ ಅಯ್ಯರ್

Updated on: Oct 25, 2025 | 12:31 PM

Shreyas Iyer Injury: ಆಸ್ಟ್ರೇಲಿಯಾ ವಿರುದ್ಧ ಸಿಡ್ನಿ ಏಕದಿನ ಪಂದ್ಯದಲ್ಲಿ ಕ್ಯಾಚ್ ಹಿಡಿಯುವಾಗ ಟೀಂ ಇಂಡಿಯಾ ಉಪನಾಯಕ ಶ್ರೇಯಸ್ ಅಯ್ಯರ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಇದರಿಂದ ಅವರು ಮೈದಾನ ತೊರೆದಿದ್ದು, ತಂಡಕ್ಕೆ ದೊಡ್ಡ ಆಘಾತ ಎದುರಾಗಿದೆ. ಗಾಯದ ತೀವ್ರತೆ ಬಗ್ಗೆ ಸ್ಪಷ್ಟ ಮಾಹಿತಿ ಲಭ್ಯವಿಲ್ಲ, ಆದರೆ ಅಭಿಮಾನಿಗಳು ಅಯ್ಯರ್ ಶೀಘ್ರ ಚೇತರಿಕೆಗಾಗಿ ಪ್ರಾರ್ಥಿಸುತ್ತಿದ್ದಾರೆ. ಇದು ಟೀಂ ಇಂಡಿಯಾ ಬ್ಯಾಟಿಂಗ್‌ಗೆ ಮುನ್ನವೇ ಕಳವಳ ಮೂಡಿಸಿದೆ.

ಆಸ್ಟ್ರೇಲಿಯಾ ವಿರುದ್ಧ ಸಿಡ್ನಿಯಲ್ಲಿ ನಡೆಯುತ್ತಿರುವ ಮೂರನೇ ಏಕದಿನ ಪಂದ್ಯದ ನಡುವೆ ಟೀಂ ಇಂಡಿಯಾಕ್ಕೆ ಆಘಾತ ಎದುರಾಗಿದೆ. ತಂಡದ ಉಪನಾಯಕ ಶ್ರೇಯಸ್ ಅಯ್ಯರ್ ಕ್ಯಾಚ್ ಹಿಡಿಯುವ ಸಮಯದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇದರಿಂದಾಗಿ ಶ್ರೇಯಸ್ ಮೈದಾನ ತೊರೆದು ಡಗೌಟ್ ಸೇರಿಕೊಂಡಿದ್ದಾರೆ. ಪ್ರಸ್ತುತ ಶ್ರೇಯಸ್ ಅಯ್ಯರ್ ಅವರ ಇಂಜುರಿ ಎಷ್ಟು ಗಂಭೀರವಾಗಿದೆ ಎಂಬುದು ಖಚಿತವಾಗಿಲ್ಲದಿದ್ದರೂ, ಟೀಂ ಇಂಡಿಯಾ ಬ್ಯಾಟಿಂಗ್ ಆರಂಭಿಸಬೇಕಾಗಿರುವುದರಿಂದ ಅವರು ಆ ವೇಳೆಗೆ ಚೇತರಿಸಿಕೊಳ್ಳಲಿ ಎಂಬುದು ಅಭಿಮಾನಿಗಳ ಪ್ರಾರ್ಥನೆಯಾಗಿದೆ.

ಆಸ್ಟ್ರೇಲಿಯಾದ ಇನ್ನಿಂಗ್ಸ್​ನ 33.4 ನೇ ಓವರ್‌ನಲ್ಲಿ ಆಸ್ಟ್ರೇಲಿಯಾದ ವಿಕೆಟ್ ಕೀಪರ್ ಅಲೆಕ್ಸ್ ಕ್ಯಾರಿ ಅವರನ್ನು ಹರ್ಷಿತ್ ರಾಣಾ ಔಟ್ ಮಾಡಿದರು. 24 ರನ್ ಗಳಿಸಿ ಆಡುತ್ತಿದ್ದ ಕ್ಯಾರಿ ಹೈ ಶಾಟ್ ಹೊಡೆದರು. ಓ ವೇಳೆ ಶ್ರೇಯಸ್ ಅಯ್ಯರ್ ಕ್ಯಾಚ್ ಹಿಡಯುವ ಸಲುವಾಗಿ ಹಿಂದಕ್ಕೆ ಓಡಿದರು. ಕೊನೆಗೆ ಕ್ಯಾಚ್ ಹಿಡಿಯುವಲ್ಲೂ ಯಶಸ್ವಿಯಾದರು. ಆದರೆ ಈ ಪ್ರಕ್ರಿಯೆಯಲ್ಲಿ ಅವರು ಗಂಭೀರವಾಗಿ ಗಾಯಗೊಂಡರು. ತೀವ್ರ ನೋವಿನಿಂದಾಗಿ ಅಯ್ಯರ್ ಮೈದಾನದಲ್ಲೇ ಬಿದ್ದು ನರಳಾಡುತ್ತಿದ್ದರು. ಈ ವೇಳೆ ಮೈದಾನಕ್ಕೆ ಬಂದ ಪಿಸಿಯೋ, ಅಯ್ಯರ್ ಅವರನ್ನು ಪರೀಕ್ಷಿಸಿ ಮೈದಾನದಿಂದ ಹೊರಕ್ಕೆ ಕರೆದುಕೊಂಡು ಹೋದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Oct 25, 2025 12:31 PM