ಟೀಮ್ ಇಂಡಿಯಾ ಪಾಲಿಗೆ ಶ್ರೇಯಸ್ ಅಯ್ಯರ್ ಅನಿವಾರ್ಯ..!

Shreyas Iyer: ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದ ಶ್ರೇಯಸ್ ಅಯ್ಯರ್ ಕಳೆದ ಐದಾರು ತಿಂಗಳುಗಳಿಂದ ಟೀಮ್ ಇಂಡಿಯಾದಿಂದ ಹೊರಗುಳಿದಿದ್ದಾರೆ. ಇದೀಗ ಚೇತರಿಸಿಕೊಂಡಿರುವ ಅಯ್ಯರ್ ಬ್ಯಾಟಿಂಗ್ ಅಭ್ಯಾಸವನ್ನು ಆರಂಭಿಸಿದ್ದಾರೆ. ಆದರೆ 50 ಓವರ್​ಗಳ ಪಂದ್ಯವಾಡಲು ಅವರು ಸಂಪೂರ್ಣ ಫಿಟ್​ನೆಸ್ ಹೊಂದಿದ್ದಾರೆ ಎಂಬುದರ ಬಗ್ಗೆ ಯಾವುದೇ ಖಚಿತತೆ ಇಲ್ಲ.

ಟೀಮ್ ಇಂಡಿಯಾ ಪಾಲಿಗೆ ಶ್ರೇಯಸ್ ಅಯ್ಯರ್ ಅನಿವಾರ್ಯ..!
Shreyas Iyer
Follow us
TV9 Web
| Updated By: ಝಾಹಿರ್ ಯೂಸುಫ್

Updated on: Aug 12, 2023 | 8:41 PM

ಏಕದಿನ ವಿಶ್ವಕಪ್​ ಆರಂಭಕ್ಕೆ ಇನ್ನು ದಿನಗಳು ಮಾತ್ರ ಉಳಿದಿವೆ. ಅದಕ್ಕೂ ಮುನ್ನ ಟೀಮ್ ಇಂಡಿಯಾ ಏಷ್ಯಾಕಪ್​ಗಾಗಿ ಸಜ್ಜಾಗಬೇಕಿದೆ. ಆದರೆ ಈ ಎರಡೂ ಟೂರ್ನಿಗಳಿಗಾಗಿ ಭಾರತ ಬಲಿಷ್ಠ ತಂಡವನ್ನು ಕಟ್ಟಬೇಕಿದೆ. ಅದರಲ್ಲೂ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿಯುವ ಬ್ಯಾಟರ್​ ಯಾರೆಂಬುದನ್ನು ನಿರ್ಧರಿಸಬೇಕಿದೆ.

ಏಕೆಂದರೆ ಕಳೆದ ಕೆಲ ವರ್ಷಗಳಿಂದ ಟೀಮ್ ಇಂಡಿಯಾ ಪರ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ್ದ ಶ್ರೇಯಸ್ ಅಯ್ಯರ್ ತಂಡದಿಂದ ಹೊರಗುಳಿದಿದ್ದಾರೆ. ಅವರು ಏಷ್ಯಾಕಪ್​ನಲ್ಲಿ ಕಣಕ್ಕಿಳಿಯಲಿದ್ದಾರಾ ಎಂಬುದರ ಬಗ್ಗೆ ಇನ್ನೂ ಕೂಡ ಯಾವುದೇ ಖಚಿತತೆ ಇಲ್ಲ.

ಇತ್ತ ಏಷ್ಯಾಕಪ್ ಆರಂಭಕ್ಕೆ  ದಿನಗಳು ಮಾತ್ರ ಉಳಿದಿದ್ದರೂ ಟೀಮ್ ಇಂಡಿಯಾ ಪರ 4ನೇ ಕ್ರಮಾಂಕದಲ್ಲಿ ಯಾರು ಬ್ಯಾಟ್ ಬೀಸಲಿದ್ದಾರೆ ಎಂಬುದು ಇನ್ನೂ ಕೂಡ ನಿರ್ಧಾರವಾಗಿಲ್ಲ. ವೆಸ್ಟ್ ಇಂಡೀಸ್ ವಿರುದ್ಧ ಹಲವು ಆಟಗಾರರು 4ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ್ದರೂ ನಿರೀಕ್ಷಿತ ಪ್ರದರ್ಶನ ಮೂಡಿಬಂದಿಲ್ಲ. ಇದುವೇ ಈಗ ಟೀಮ್ ಇಂಡಿಯಾ ಚಿಂತೆಯನ್ನು ಹೆಚ್ಚಿಸಿದೆ.

ಶ್ರೇಯಸ್ ಅಯ್ಯರ್ ಕಂಬ್ಯಾಕ್ ಅನಿವಾರ್ಯ:

ಪ್ರಸ್ತುತ ಸನ್ನಿವೇಶದಲ್ಲಿ ಟೀಮ್ ಇಂಡಿಯಾಗೆ ಶ್ರೇಯಸ್ ಅಯ್ಯರ್ ಕಂಬ್ಯಾಕ್ ಅನಿವಾರ್ಯ. ಏಕೆಂದರೆ ಕಳೆದ ಮೂರು ವರ್ಷಗಳಲ್ಲಿ ಭಾರತದ ಪರ ನಾಲ್ಕನೇ ಕ್ರಮಾಂಕದಲ್ಲಿ ಯಶಸ್ವಿಯಾಗಿ ಬ್ಯಾಟ್ ಬೀಸಿದ್ದು ಅಯ್ಯರ್. ಹೀಗಾಗಿಯೇ ಏಷ್ಯಾಕಪ್​ನಲ್ಲಿ ಶ್ರೇಯಸ್ ಅವರ ಕಂಬ್ಯಾಕ್ ಅನ್ನು ಎದುರು ನೋಡಲಾಗುತ್ತಿದೆ.

4ನೇ ಕ್ರಮಾಂಕದಲ್ಲಿ ಶ್ರೇಯಸ್ಸು:

2019ರ ಏಕದಿನ ವಿಶ್ವಕಪ್ ಬಳಿಕ ಟೀಮ್ ಇಂಡಿಯಾ ಪರ 4ನೇ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್ ಅತ್ಯುತ್ತಮ ಪ್ರದರ್ಶನ ನೀಡುತ್ತಾ ಬಂದಿದ್ದಾರೆ. ಅಲ್ಲದೆ ಕಳೆದ ಏಕದಿನ ವಿಶ್ವಕಪ್ ಬಳಿಕ ಭಾರತ ಪರ ನಾಲ್ಕನೇ ಕ್ರಮಾಂಕದಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ್ದಾರೆ. ಅಂದರೆ ಕಳೆದ ಮೂರು ವರ್ಷಗಳಲ್ಲಿ ಅಯ್ಯರ್ 4ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿ 47.35 ರ ಸರಾಸರಿಯಲ್ಲಿ ಒಟ್ಟು 805 ರನ್ ಪೇರಿಸಿದ್ದಾರೆ. ಹೀಗಾಗಿಯೇ ಏಷ್ಯಾಕಪ್ ಹಾಗೂ ಏಕದಿನ ವಿಶ್ವಕಪ್​ಗೆ ಟೀಮ್ ಇಂಡಿಯಾಗೆ ಶ್ರೇಯಸ್ ಅಯ್ಯರ್ ಅನಿವಾರ್ಯ ಎನ್ನಬಹುದು.

ಅಯ್ಯರ್ ಅಭ್ಯಾಸ ಶುರು:

ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದ ಶ್ರೇಯಸ್ ಅಯ್ಯರ್ ಕಳೆದ ಐದಾರು ತಿಂಗಳುಗಳಿಂದ ಟೀಮ್ ಇಂಡಿಯಾದಿಂದ ಹೊರಗುಳಿದಿದ್ದಾರೆ. ಇದೀಗ ಚೇತರಿಸಿಕೊಂಡಿರುವ ಅಯ್ಯರ್ ಬ್ಯಾಟಿಂಗ್ ಅಭ್ಯಾಸವನ್ನು ಆರಂಭಿಸಿದ್ದಾರೆ. ಆದರೆ 50 ಓವರ್​ಗಳ ಪಂದ್ಯವಾಡಲು ಅವರು ಸಂಪೂರ್ಣ ಫಿಟ್​ನೆಸ್ ಹೊಂದಿದ್ದಾರೆ ಎಂಬುದರ ಬಗ್ಗೆ ಯಾವುದೇ ಖಚಿತತೆ ಇಲ್ಲ.

ಹೀಗಾಗಿಯೇ ಏಷ್ಯಾಕಪ್​ಗೆ ತಂಡದ ಆಯ್ಕೆಗೂ ಮುನ್ನ ಬಿಸಿಸಿಐ ಆಯ್ಕೆ ಸಮಿತಿ ಶ್ರೇಯಸ್ ಅಯ್ಯರ್ ಅವರ ಫಿಟ್​ನೆಸ್ ಟೆಸ್ಟ್ ನಡೆಸಲು ನಿರ್ಧರಿಸಿದೆ. ಒಂದು ವೇಳೆ ಏಷ್ಯಾಕಪ್​ಗೆ ಅಯ್ಯರ್ ಫಿಟ್ ಆಗಿದ್ದರೆ ಮಾತ್ರ ಏಕದಿನ ವಿಶ್ವಕಪ್​ಗೆ ಆಯ್ಕೆ ಮಾಡಲಿದೆ. ಸದ್ಯ ಶ್ರೇಯಸ್ ಅಯ್ಯರ್ ಅವರ ಫಿಟ್​ನೆಸ್ ಸರ್ಟಿಫಿಕೇಟ್​ಗಾಗಿ ಆಯ್ಕೆ ಸಮಿತಿ ಕಾಯುತ್ತಿದ್ದು, ಈ ವರದಿ ಬಂದ ಬಳಿಕವಷ್ಟೇ ಏಷ್ಯಾಕಪ್ ತಂಡದ ಆಯ್ಕೆ ನಡೆಯಲಿದೆ.

ಇದನ್ನೂ ಓದಿ: ODI World Cup 2023: ಈ 4 ತಂಡಗಳು ಸೆಮಿಫೈನಲ್​ ಪ್ರವೇಶಿಸುವುದು ಖಚಿತ: ಸೆಹ್ವಾಗ್

ಅಂದರೆ ಕಳೆದ ಮೂರು ವರ್ಷಗಳಲ್ಲಿ ಟೀಮ್ ಇಂಡಿಯಾ ಪರ ನಾಲ್ಕನೇ ಕ್ರಮಾಂಕದಲ್ಲಿ ಯಶಸ್ವಿಯಾಗಿರುವ ಶ್ರೇಯಸ್ ಅಯ್ಯರ್ ಆಯ್ಕೆ ಸದ್ಯ ತೂಗುಯ್ಯಾಲೆಯಲ್ಲಿದ್ದು, ಒಂದು ವೇಳೆ ಅಯ್ಯರ್ ಅನ್​ಫಿಟ್​ ಆದರೆ ಬದಲಿ ಆಟಗಾರನ ಆಯ್ಕೆ ಮಾಡಬೇಕಾದ ಸಂದಿಗ್ಧ ಪರಿಸ್ಥಿತಿ ಎದುರಾಗಬಹುದು. ಇದು ಟೀಮ್ ಇಂಡಿಯಾ ಪಾಲಿಗೆ ಹಿನ್ನಡೆಯನ್ನುಂಟು ಮಾಡಿದರೂ ಅಚ್ಚರಿಪಡಬೇಕಿಲ್ಲ. ಏಕೆಂದರೆ ಕಳೆದ 3 ಮೂರ್ಷಗಳಲ್ಲಿ ಶ್ರೇಯಸ್ ಅಯ್ಯರ್ ಅವರನ್ನು ಹೊರತುಪಡಿಸಿ ಬೇರೆ ಯಾವುದೇ ಬ್ಯಾಟರ್ 4ನೇ ಕ್ರಮಾಂಕದಲ್ಲಿ 370 ಕ್ಕಿಂತ ಹೆಚ್ಚು ರನ್​ ಕಲೆಹಾಕಿಲ್ಲ.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ