Shreyas Iyer: ಭಾರತದಿಂದ ಹೊರಕ್ಕೆ, ರಣಜಿ ಆಡಲು ಇಂಜುರಿ: ಆದರೆ, ಐಪಿಎಲ್ ಜಾಹೀರಾತು ಶೂಟ್​ಗೆ ಹಾಜರ್

Shreyas Iyer ad shooting IPL 2024: ಶ್ರೇಯಸ್ ಅಯ್ಯರ್ ತನಗೆ ಇಂಜುರಿ ಎಂದು ಹೇಳಿ ಟೀಮ್ ಇಂಡಿಯಾದಿಂದ ಹೊರಬಂದರು. ಆದರೆ, ಎನ್​ಸಿಎನಲ್ಲಿ ಪರೀಕ್ಷಿಸಿದ ಬಳಿಕ ಅವರಿಗೆ ಯಾವುದೇ ತೊಂದರೆಯಿಲ್ಲ, ಕ್ರಿಕೆಟ್ ಆಡಬಹುದು ಎಂಬ ರಿಪೋರ್ಟ್ ಬಂದಿತ್ತು. ಆಗ ಬಿಸಿಸಿಐ ಅಯ್ಯರ್ ರಣಜಿ ಆಡಲಿ ಎಂದಿತ್ತು. ಆದರೆ, ಇವರು ರಣಜಿಯಲ್ಲಿ ಕಾಣಿಸಿಕೊಳ್ಳದೆ ಐಪಿಎಲ್ 2024 ಜಾಹೀರಾತುಗಳಲ್ಲಿ ಬ್ಯುಸಿಯಾಗಿದ್ದಾರೆ.

Shreyas Iyer: ಭಾರತದಿಂದ ಹೊರಕ್ಕೆ, ರಣಜಿ ಆಡಲು ಇಂಜುರಿ: ಆದರೆ, ಐಪಿಎಲ್ ಜಾಹೀರಾತು ಶೂಟ್​ಗೆ ಹಾಜರ್
Shreyas Iyer
Follow us
Vinay Bhat
|

Updated on: Feb 24, 2024 | 8:35 AM

ಇಂಡಿಯನ್ ಪ್ರೀಮಿಯರ್ ಲೀಗ್ 2024 (IPL 2024) ಆರಂಭಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆಷ್ಟೆ. ಈಗಾಗಲೇ ಈ ಟೂರ್ನಿಯ ಮೊದಲ 21 ಪಂದ್ಯಗಳ ವೇಳಾಪಟ್ಟಿ ಕೂಡ ಬಿಡುಗಡೆಯಾಗಿದ್ದು, ಮಾರ್ಚ್ 22ರಿಂದ ಚೆನ್ನೈನಲ್ಲಿ ಐಪಿಎಲ್ 2024 ಆರಂಭವಾಗಲಿದೆ. ಉದ್ಘಾಟನಾ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿ ಆಗಲಿವೆ. ಐಪಿಎಲ್‌ ವೇಳಾಪಟ್ಟಿ ಪ್ರಕಟವಾದ ಬೆನ್ನಲ್ಲೇ, ಹಲವು ದಿಗ್ಗಜ ಕ್ರಿಕೆಟಿಗರು ಜಾಹೀರಾತುಗಳ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ. ಇದರಲ್ಲಿ ಎಲ್ಲರ ಕಣ್ಣುಕುಕ್ಕುವಂತೆ ಮಾಡಿದ್ದು ಶ್ರೇಯಸ್ ಅಯ್ಯರ್.

ಶ್ರೇಯಸ್ ಅಯ್ಯರ್ ತನಗೆ ಬೆನ್ನು ನೋವು ಎಂದು ಇಂಗ್ಲೆಂಡ್ ವಿರುದ್ಧದ ಸರಣಿಯಿಂದ ಹೊರಬಿದ್ದರು. ತನಗೆ ಬೆನ್ನಿನಲ್ಲಿ ಸಮಸ್ಯೆ ಇದೆ ಎಂದು ಹೇಳಿದ್ದರು. ಆದರೆ ನಂತರ NCA ವರದಿಯನ್ನು ಬಿಡುಗಡೆ ಮಾಡಿದಾಗ, ಶ್ರೇಯಸ್ ಸಂಪೂರ್ಣವಾಗಿ ಫಿಟ್ ಆಗಿದ್ದಾರೆ ಮತ್ತು ಅವರ ಬೆನ್ನಿನಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ಕಂಡುಬಂದಿದೆ. ಹೀಗಾಗಿ ಅಯ್ಯರ್ ರಣಜಿ ಆಡಲಿ ಎಂದು ಬಿಸಿಸಿಐ ಹೇಳಿತ್ತು. ಆದರೆ, ಅಯ್ಯರ್ ಅವರು ಗಾಯವನ್ನು ಉಲ್ಲೇಖಿಸಿ ರಣಜಿ ಪಂದ್ಯಗಳನ್ನು ಆಡುತ್ತಿಲ್ಲ. ಇದರ ಮಧ್ಯೆ ಜಾಹೀರಾತುಗಳ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ. ಇದು ಅನೇಕರ ಕೆಂಗಣ್ಣಿಗೆ ಗುರಿಯಾಗಿದೆ.

ಭಾರತಕ್ಕೆ ಬೇಕು ರೂಟ್ ವಿಕೆಟ್: ಎರಡನೇ ದಿನಕ್ಕೆ ರೋಹಿತ್ ಮಾಸ್ಟರ್ ಪ್ಲಾನ್ ಏನು?

ಐಪಿಎಲ್ 2024 ಜಾಹೀರಾತುವಿನಲ್ಲಿ ಶ್ರೇಯಸ್ ಅಯ್ಯರ್:

ಐಪಿಎಲ್‌ಗೂ ಮುನ್ನ ಶ್ರೇಯಸ್‌ ಅಯ್ಯರ್‌ ಗಾಯದ ನೆಪದಲ್ಲಿ ಟೀಮ್ ಇಂಡಿಯಾದಿಂದ ಬೇರ್ಪಟ್ಟಿದ್ದಕ್ಕೆ ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಯ್ಯರ್ ಜಾಹೀರಾತಿನ ಚಿತ್ರೀಕರಣದಲ್ಲಿ ನಿರತರಾಗಿರುವ ವಿಡಿಯೋ ಹೊರಬಿದ್ದಿದ್ದು, ಇದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇಲ್ಲಿ ಶ್ರೇಯಸ್ ಅಯ್ಯರ್ ಲುಂಗಿ ಧರಿಸಿ ಆ್ಯಡ್ ಶೂಟ್ ಮಾಡುತ್ತಿದ್ದಾರೆ. ಅಯ್ಯರ್ ಅವರು ಐಪಿಎಲ್‌ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ನಾಯಕರಾಗಿದ್ದಾರೆ, ಅವರು ಗಾಯದ ಕಾರಣ ಕಳೆದ ಋತುವಿನಲ್ಲಿ ಆಡಲು ಸಾಧ್ಯವಾಗಲಿಲ್ಲ. ಆದರೆ ಈ ಬಾರಿ ನಾಯಕತ್ವದ ಮೂಲಕ ಕೆಕೆರ್ ಅನ್ನು ಮುನ್ನಡೆಸಲಿದ್ದಾರೆ.

ಚಿನ್ನಸ್ವಾಮಿಯಲ್ಲಿ ರಂಗೇರಿದ ಮಹಿಳಾ ಪ್ರೀಮಿಯರ್ ಲೀಗ್ ಉದ್ಘಾಟನಾ ಸಮಾರಂಭ: ಬಾಲಿವುಡ್ ತಾರೆಯರ ಭರ್ಜರಿ ಸ್ಟೆಪ್ಸ್

ಶ್ರೇಯಸ್ ಅಯ್ಯರ್ ಮಾತ್ರವಲ್ಲದೆ ಡೆಲ್ಲಿ ಕ್ಯಾಪಿಟಲ್ಸ್​ನ ರಿಷಬ್ ಪಂತ್, ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಮತ್ತು ಲಕ್ನೋ ಸೂಪರ್ ಜೇಂಟ್ಸ್ ಕ್ಯಾಪ್ಟನ್ ಕೆಎಲ್ ರಾಹುಲ್ ಕೂಡ ಜಾಹೀರಾತು ಶೂಟಿಂಗ್​ನಲ್ಲಿ ಪಾಲ್ಗೊಂಡ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ. ಈ ಸೋರಿಕೆಯಾದ ಕ್ಲಿಪ್‌ಗಳು ಸ್ಟಾರ್ ಸ್ಪೋರ್ಟ್ಸ್ ಸೆಟ್‌ಗಳಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024 ರ ಪ್ರೋಮೋ ಶೂಟ್‌ನ ಸೆಟ್‌ನಿಂದ ಎಂದು ವರದಿಯಾಗಿದೆ.

ಇನ್ನು ಐಪಿಎಲ್ ಬಗ್ಗೆ ಮಾತನಾಡುವುದಾದರೆ ಈ ಬಾರಿಯ ಟೂರ್ನಿ ಮಾರ್ಚ್ 22ರಿಂದ ಆರಂಭವಾಗಲಿದೆ. ಸದ್ಯ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮೊದಲ 17 ದಿನಗಳ ವೇಳಾಪಟ್ಟಿ ಮಾತ್ರ ಬಿಡುಗಡೆಯಾಗಿದ್ದು, ಚುನಾವಣಾ ದಿನಾಂಕ ಪ್ರಕಟವಾದ ಬಳಿಕ ಉಳಿದ ವೇಳಾಪಟ್ಟಿಯನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಬಹಿರಂಗಪಡಿಸಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್