IND vs NZ: ಟೀಮ್ ಇಂಡಿಯಾಗೆ ಬಿಗ್ ಶಾಕ್: ಸ್ಟಾರ್ ಆಟಗಾರ ಔಟ್
India vs New Zealand: ಜನವರಿ 18 ರಿಂದ ಶುರುವಾಗಲಿರುವ ಈ ಸರಣಿಯಲ್ಲಿ ಭಾರತ ತಂಡವು 3 ಏಕದಿನ ಹಾಗೂ 3 ಟಿ20 ಪಂದ್ಯಗಳನ್ನು ಆಡಲಿದೆ. ಮೊದಲಿಗೆ ಏಕದಿನ ಸರಣಿ ನಡೆಯಲಿದ್ದು, ಇದಾದ ಬಳಿಕ ಟಿ20 ಸರಣಿ ಜರುಗಲಿದೆ.
ನ್ಯೂಜಿಲೆಂಡ್ ವಿರುದ್ಧದ ಸರಣಿ ಆರಂಭಕ್ಕೂ ಮುನ್ನ ಟೀಮ್ ಇಂಡಿಯಾಗೆ (Team India) ಆಘಾತ ಎದುರಾಗಿದೆ. ತಂಡದ ಸ್ಟಾರ್ ಆಟಗಾರ ಶ್ರೇಯಸ್ ಅಯ್ಯರ್ (Shreyas Iyer) ಸರಣಿಯಿಂದ ಹೊರಗುಳಿದಿದ್ದಾರೆ. ಬೆನ್ನು ನೋವಿನ ಕಾರಣ ಅಯ್ಯರ್ ತಂಡದಿಂದ ಹೊರಗುಳಿಯಲು ನಿರ್ಧರಿಸಿದ್ದು, ಹೀಗಾಗಿ ಕಿವೀಸ್ ವಿರುದ್ಧದ ಮೂರು ಏಕದಿನ ಪಂದ್ಯಗಳಲ್ಲಿ ಕಾಣಿಸಿಕೊಳ್ಳುವುದಿಲ್ಲ. ಇನ್ನು ಟಿ20 ಸರಣಿಯ ವೇಳೆಗೆ ಚೇತರಿಸಿಕೊಂಡರೆ ಅವರು ತಂಡಕ್ಕೆ ಮರಳಲಿದ್ದಾರೆ.
ಜನವರಿ 18 ರಿಂದ ಶುರುವಾಗಲಿರುವ ಈ ಸರಣಿಯಲ್ಲಿ ಭಾರತ ತಂಡವು 3 ಏಕದಿನ ಹಾಗೂ 3 ಟಿ20 ಪಂದ್ಯಗಳನ್ನು ಆಡಲಿದೆ. ಮೊದಲಿಗೆ ಏಕದಿನ ಸರಣಿ ನಡೆಯಲಿದ್ದು, ಇದಾದ ಬಳಿಕ ಟಿ20 ಸರಣಿ ಜರುಗಲಿದೆ. ಏಕದಿನ ಸರಣಿಗಳಲ್ಲಿ ಕಾಣಿಸಿಕೊಳ್ಳಲಿರುವ ನಾಯಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಟಿ20 ಸರಣಿಗೆ ಆಯ್ಕೆಯಾಗಿಲ್ಲ ಎಂಬುದೇ ಅಚ್ಚರಿ. ಅಂದರೆ ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಗೆ ಆಯ್ಕೆ ಮಾಡಲಾದ ಟೀಮ್ ಇಂಡಿಯಾದಲ್ಲಿ ಹಿಟ್ಮ್ಯಾನ್ ಹಾಗೂ ಕಿಂಗ್ ಕೊಹ್ಲಿಗೆ ಸ್ಥಾನ ಕಲ್ಪಿಸಿಲ್ಲ.
ಇನ್ನು ಅಕ್ಷರ್ ಪಟೇಲ್ ಹಾಗೂ ಕೆಎಲ್ ರಾಹುಲ್ ವೈಯುಕ್ತಿಕ ಕಾರಣಗಳಿಗಾಗಿ ತಂಡದಿಂದ ಹೊರಗುಳಿದಿದ್ದಾರೆ. ಹೀಗಾಗಿ ಟಿ20 ಬಳಗದಲ್ಲಿ ಜಿತೇಶ್ ಶರ್ಮಾ ಹಾಗೂ ಪೃಥ್ವಿ ಶಾ ಗೆ ಅವಕಾಶ ಲಭಿಸಿದೆ. ಹಿಟ್ಮ್ಯಾನ್ ಅನುಪಸ್ಥಿತಿಯ ನಡುವೆ ಟಿ20 ತಂಡವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸಲಿದ್ದು, ಉಪನಾಯಕನಾಗಿ ಸೂರ್ಯಕುಮಾರ್ ಯಾದವ್ ಕಾಣಿಸಿಕೊಳ್ಳಲಿದ್ದಾರೆ.
ಮತ್ತೊಂದೆಡೆ ಏಕದಿನ ಸರಣಿಯಲ್ಲಿ ರೋಹಿತ್ ಶರ್ಮಾ ತಂಡ ಸಾರಥ್ಯವಹಿಸಲಿದ್ದಾರೆ. ಉಪನಾಯಕನಾಗಿ ಹಾರ್ದಿಕ್ ಪಾಂಡ್ಯ ಮುಂದುವರೆಯಲಿದ್ದಾರೆ. ಹಾಗೆಯೇ ಏಕದಿನ ತಂಡಕ್ಕೆ ಶಹಬಾಝ್ ಅಹ್ಮದ್ ಹಾಗೂ ಶಾರ್ದೂಲ್ ಠಾಕೂರ್ ಮರಳಿದ್ದಾರೆ. ಇವರ ಜೊತೆಗೆ ವಿಕೆಟ್ ಕೀಪರ್ ಬ್ಯಾಟರ್ ಕೆಎಸ್ ಭರತ್ ಚೊಚ್ಚಲ ಬಾರಿಗೆ ಅವಕಾಶ ಪಡೆದಿದ್ದಾರೆ. ಆದರೀಗ ತಂಡದ ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಶ್ರೇಯಸ್ ಅಯ್ಯರ್ ಏಕದಿನ ಸರಣಿಯಿಂದ ಹೊರಬಿದ್ದಿದ್ದಾರೆ.
ಟೀಮ್ ಇಂಡಿಯಾ ಏಕದಿನ ತಂಡ:
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಕೆಎಸ್ ಭರತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ವಾಷಿಂಗ್ಟನ್ ಸುಂದರ್, ಶಹಬಾಝ್ ಅಹ್ಮದ್, ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್.