ಶ್ರೇಯಸ್ ಅಯ್ಯರ್ ಆರೋಗ್ಯ ಸ್ಥಿತಿ ಈಗ ಹೇಗಿದೆ? ಹೊಸ ಅಪ್ಡೇಟ್ ನೀಡಿದ ಬಿಸಿಸಿಐ
ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಶ್ರೇಯಸ್ ಅಯ್ಯರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಅವರಿಗೆ ಸಿಡ್ನಿಯ ಆಸ್ಪತ್ರೆಯೊಂದರಲ್ಲಿ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಇನ್ನು ಅಯ್ಯರ್ ಅವರಿಗೆ ಏನಾಗಿದೆ. ಹೇಗಿದ್ದಾರೆ ಎನ್ನುವ ಆತಂಕ ಭಾರತೀಯರಲ್ಲಿ ಮನೆ ಮಾಡಿದ್ದು, ಇ ಹಿನ್ನೆಲೆಯಲ್ಲಿ ಬಿಸಿಸಿಐ, ಶ್ರೇಯಸ್ ಅಯ್ಯರ ಆರೋಗ್ಯದ ಬಗ್ಗೆ ಲೆಟೆಸ್ಟ್ ಅಪ್ಡೇಟ್ ನೀಡಿದೆ.

ಆಸ್ಟ್ರೇಲಿಯಾ (australia) ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಕ್ಯಾಚ್ ವೇಳೆ ಬಿದ್ದು ಗಾಯಗೊಂಡಿದ್ದ ಭಾರತ ಕ್ರಿಕೆಟ್ ತಂಡದ ಉಪನಾಯಕ ಶ್ರೇಯಸ್ ಅಯ್ಯರ್ (Shreyas Iyer) ಆರೋಗ್ಯದ ಬಗೆಗಿನ ಆತಂಕ ದೂರವಾಗಿದೆ. ಯಾಕಂದರೆ ಶ್ರೇಯಸ್ ಅಯ್ಯರ್ ಅವರನ್ನು ಅವರನ್ನು ಸಿಡ್ನಿ ಆಸ್ಪತ್ರೆಯ ತೀವ್ರ ನಿಗಾ ಘಟಕದಿಂದ (ಐಸಿಯು) ಸಾಮಾನ್ಯ ವಾರ್ಡ್ಗೆ ಶಿಫ್ಟ್ ಮಾಡಲಾಗಿದ್ದು, ಅವರ ಆರೋಗ್ಯದ ಸ್ಥಿತಿ ಉತ್ತಮವಾಗಿದೆ ಎಂದು ಬಿಸಿಸಿಐ ಅಧಿಕೃತ ಮಾಹಿತಿ ಹಂಚಿಕೊಂಡಿದೆ.
ಶ್ರೇಯಸ್ ಅಯ್ಯರ್ ಆರೋಗ್ಯದ ಬಗ್ಗೆ ಟ್ವೀಟ್ ಮೂಲಕ ಮಾಹಿತಿ ನೀಡಿರುವ ಬಿಸಿಸಿಐ, ಇಂದು(ಅಕ್ಟೋಬರ್ 28) ಶ್ರೇಯಸ್ ಅಯ್ಯರ್ ಅವರನ್ನು ಮತ್ತೊಂದು ಸ್ಕ್ಯಾನ್ಗೆ ಒಳಪಡಿಸಲಾಗಿದ್ದು, ಈ ಸ್ಕ್ಯಾನ್ನಲ್ಲಿ ಗಾಯದಲ್ಲಿ ಸುಧಾರಣೆ ಕಂಡುಬಂದಿದೆ. ಹೀಗಾಗಿ ಶ್ರೇಯಸ್ ಚೇತರಿಸಿಕೊಳ್ಳುತ್ತಿದ್ದು, ಅವರ ಆರೋಗ್ಯದ ಮೇಲೆ ಸಿಡ್ನಿ ಮತ್ತು ಭಾರತ ಕ್ರಿಕೆಟ್ ತಂಡದ ವೈದ್ಯರು ನಿಗಾ ವಹಿಸಿದ್ದಾರೆ ಎಂದು ತಿಳಿಸಿದೆ.
Further medical update on Shreyas Iyer 👇
A repeat scan done on Tuesday, 28th October, has shown significant improvement, and Shreyas is on the road to recovery.
Details 🔽 #TeamIndia | #AUSvINDhttps://t.co/1EgBRO3lRI
— BCCI (@BCCI) October 28, 2025
ಅಯ್ಯರ್ ಅವರ ಪ್ರಸ್ತುತ ಆರೋಗ್ಯ ಪರಿಸ್ಥಿತಿಯನ್ನು ಗಮನಿಸಿದರೆ, ಅವರು ತಂಡಕ್ಕೆ ಮರಳಲು ಸ್ವಲ್ಪ ಸಮಯ ಬೇಕಾಗುತ್ತದೆ. ಮುಂಬರುವ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಆಡುವುದು ಅನುಮಾನವಾಗಿದೆ.
ಇದನ್ನೂ ಓದಿ: Shreyas Iyer: ಶ್ರೇಯಸ್ ಅಯ್ಯರ್ ಆರೋಗ್ಯ ಸ್ಥಿತಿ ಈಗ ಹೇಗಿದೆ?
ಸಿಡ್ನಿಯಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದ ವೇಳೆ ಹರ್ಷಿತ್ ರಾಣಾ ಅವರ ಎಸೆತದಲ್ಲಿ ಅಲೆಕ್ಸ್ ಕ್ಯಾರಿ ಭರ್ಜರಿ ಹೊಡೆತ ಬಾರಿಸಿದ್ದರು. ಈ ವೇಳೆ ಬ್ಯಾಕ್‌ವರ್ಡ್ ಪಾಯಿಂಟ್‌ನಲ್ಲಿ ನಿಂತಿದ್ದ ಶ್ರೇಯಸ್ ಅಯ್ಯರ್ ವೇಗವಾಗಿ ಓಡಿ ಹೋಗಿ ಡೈವಿಂಗ್ ಕ್ಯಾಚ್ ಹಿಡಿದಿದ್ದರು. ಆದ್ರೆಈ ಡೈವಿಂಗ್ ವೇಳೆ ಅವರ ಎಡ ಪಕ್ಕೆಲುಬುಗಳಿಗೆ ಗಂಭೀರ ಗಾಯವಾಗಿತ್ತು.
ನೋವಿನಿಂದ ನರಳಿದ್ದ ಶ್ರೇಯಸ್ ಅಯ್ಯರ್ ಅವರನ್ನು ತಕ್ಷಣವೇ ವೈದ್ಯರಲ್ಲಿಗೆ ಕರೆದೊಯ್ಯಲಾಗಿತ್ತು. ಬಳಿಕ ನೋವು ತೀವ್ರ ಸ್ವರೂಪಗೊಳ್ಳುತ್ತಿದ್ದಂತೆಯೇ ಕೂಡಲೇ ಅವರನ್ನು ಸಿಡ್ನಿಯ ಆಸ್ಪತ್ರೆಯೊಂದಕ್ಕೆ ಕರೆದೊಯ್ದಿದ್ದಾರೆ. ಬಳಿಕ ವೈದ್ಯರು ವಿವಿಧ ತಪಾಸಣೆ ಮಾಡಿ ಐಸಿಯುನಲ್ಲಿ ಚಿಕಿತ್ಸೆ ನೀಡಿದ್ದಾರೆ. ಸದ್ಯ ಇದೀಗ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಹೀಗಾಗಿ ಅವರನ್ನು ಐಸಿಯುನಿಂದ ವಾರ್ಡ್ಗೆ ಶಿಫ್ಟ್ ಮಾಡಲಾಗಿದೆ.
Published On - 9:48 pm, Tue, 28 October 25
