IND vs SL Test Series: ರಹಾನೆ-ಪೂಜಾರ ಜಾಗದಲ್ಲಿ ಆಡಲಿರುವ ಆಟಗಾರರ ಹೆಸರು ಬಹಿರಂಗ: ಯಾರು ಗೊತ್ತೇ?

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡ ಪ್ರಕಟ ಮಾಡುವಾಗ ಇಬ್ಬರು ಹಿರಿಯ ಆಟಗಾರರನ್ನು ಕೈಬಿಡಲಾಯಿತು. ಕಳಪೆ ಫಾರ್ಮ್​ನಿಂದ ಕಂಗೆಟ್ಟಿದ್ದ ಸ್ಟಾರ್ ಬ್ಯಾಟರ್ ಅಜಿಂಕ್ಯಾ ರಹಾನೆ ಮತ್ತು ಚೇತೇಶ್ವರ್ ಪಜಾ ಅವರನ್ನು ಈ ಸರಣಿಗೆ ಆಯ್ಕೆ ಮಾಡಲಿಲ್ಲ.

IND vs SL Test Series: ರಹಾನೆ-ಪೂಜಾರ ಜಾಗದಲ್ಲಿ ಆಡಲಿರುವ ಆಟಗಾರರ ಹೆಸರು ಬಹಿರಂಗ: ಯಾರು ಗೊತ್ತೇ?
Ajinkya Rahane and Cheteshwar Pujara
Follow us
TV9 Web
| Updated By: Vinay Bhat

Updated on:Mar 01, 2022 | 11:34 AM

ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಮತ್ತು ಟಿ20 ಸರಣಿಯಲ್ಲಿ ವೈಟ್​ವಾಷ್ ಸಾಧನೆ ಮಾಡಿದ್ದ ಭಾರತ ಕ್ರಿಕೆಟ್ ತಂಡ ಶ್ರೀಲಂಕಾ (India vs Sri Lanka) ವಿರುದ್ಧದ ಟಿ20 ಸರಣಿಯನ್ನೂ ಕ್ಲೀನ್​ಸ್ವೀಪ್ ಮಾಡಿತು. ಈ ಮೂಲಕ ಕ್ರಿಕೆಟ್ ಇತಿಹಾಸದಲ್ಲಿ ಟೀಮ್ ಇಂಡಿಯಾ ವಿಶೇಷ ದಾಖಲೆ ಕೂಡ ಬರೆಯಿತು. ಇದೀಗ ಸೀಮಿತ ಓವರ್​ಗಳ ಸರಣಿ ಬಳಿಕ ರೋಹಿತ್ ಶರ್ಮಾ (Rohit Sharma) ಪಡೆ ಟೆಸ್ಟ್ ಸರಣಿಗೆ ಸಜ್ಜಾಗುತ್ತಿದೆ. ಮಾರ್ಚ್ 4 ರಂದು ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ಮೊದಲ ಟೆಸ್ಟ್ ಪಂದ್ಯ ಆರಂಭವಾಗಲಿದೆ. ಟಿ20 ಸರಣಿಯಿಂದ ವಿಶ್ರಾಂತಿಯಲ್ಲಿದ್ದ ಮಾಜಿ ನಾಯಕ ವಿರಾಟ್ ಕೊಹ್ಲಿ (Virat Kohli) ಹಾಗೂ ರಿಷಭ್ ಪಂತ್ ಈಗಾಗಲೇ ಮೊಹಾಲಿಯಲ್ಲಿ ಅಭ್ಯಾಸ ಶುರು ಮಾಡಿದ್ದಾರೆ. ರೋಹಿತ್ ಪಡೆ ಇಂದಿನಿಂದ ಪ್ರ್ಯಾಕ್ಟೀಸ್​ಗೆ ಇಳಿಯಲಿದ್ದಾರೆ. ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ಮೊದಲ ಟೆಸ್ಟ್ ಪಂದ್ಯ ಆಡುತ್ತಿರುವ ಕಾರಣ ಇದು ಸಾಕಷ್ಟು ಕುತೂಹಲ ಕೆರಳಿಸಿದೆ. ಸೀಮಿತ ಓವರ್​ಗಳ ಪಂದ್ಯದಲ್ಲಿ ರೋಹಿತ್ ಸೋಲಿಲ್ಲದ ಸರದಾರನಾಗಿ ಮೆರೆಯುತ್ತಿದ್ದು, ಟೆಸ್ಟ್​ನಲ್ಲಿ ಯಾವರೀತಿ ಪ್ರದರ್ಶನ ಮೂಡಿಬರಲಿದೆ ಎಂಬುದು ನೋಡಬೇಕಿದೆ.

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡ ಪ್ರಕಟ ಮಾಡುವಾಗ ಇಬ್ಬರು ಹಿರಿಯ ಆಟಗಾರರನ್ನು ಕೈಬಿಡಲಾಯಿತು. ಕಳಪೆ ಫಾರ್ಮ್​ನಿಂದ ಕಂಗೆಟ್ಟಿದ್ದ ಸ್ಟಾರ್ ಬ್ಯಾಟರ್ ಅಜಿಂಕ್ಯಾ ರಹಾನೆ ಮತ್ತು ಚೇತೇಶ್ವರ್ ಪೂಜಾರ ಅವರನ್ನು ಈ ಸರಣಿಗೆ ಆಯ್ಕೆ ಮಾಡಲಿಲ್ಲ. ರಣಜಿ ಟೂರ್ನಿಯಲ್ಲಿ ಆಡಿ ಫಾರ್ಮ್​ ಕಂಡುಕೊಳ್ಳಿ ಎಂದು ಬಿಸಿಸಿಐ ಸೂಚಿಸಿತ್ತು. ಆದರೆ, ಇವರು ರಣಜಿಯಲ್ಲೂ ನಿರೀಕ್ಷೆಗೆ ತಕ್ಕ ಪ್ರದರ್ಶನ ನೀಡಿಲ್ಲ. ಹೀಗಾಗಿ ಮುಂದಿನ ದಿನಗಳಲ್ಲಿ ಇವರು ಪುನಃ ಟೀಮ್ ಇಂಡಿಯಾಕ್ಕೆ ಆಯ್ಕೆ ಆಗುವುದು ಅನುಮಾನ ಎನ್ನಲಾಗುತ್ತಿದೆ.

ಹೀಗಿರುವಾಗ ಭಾರತ ಟೆಸ್ಟ್ ತಂಡದಲ್ಲಿ ಈ ಸೀನಿಯರ್ ಆಟಗಾರರ ಸ್ಥಾನ ಯಾರು ತುಂಬಲಿದ್ದಾರೆ ಎಂಬುದು ಕುತೂಹಲ ಕೆರಳಿಸಿದೆ. ಇದಕ್ಕೀಗ ಉತ್ತರ ಸಿಕ್ಕಿದೆ. ಭಾರತದ ಮೂರನೇ ಕ್ರಮಾಂಕದಲ್ಲಿ ಪೂಜಾರ ಮತ್ತು ಐದನೇ ಕ್ರಮಾಂಕದಲ್ಲಿ ರಹಾನೆ ಬದಲಿಗೆ ಈ ಸ್ಥಾನಕ್ಕೆ ಮೂವರು ಆಟಗಾರರು ಸ್ಪರ್ಧೆಯಲ್ಲಿದ್ದಾರೆ. ಶುಭ್ಮನ್ ಗಿಲ್, ಶ್ರೇಯಸ್ ಅಯ್ಯರ್ ಮತ್ತು ಆಲ್ರೌಂಡ್ ಹನುಮ ವಿಹಾರಿ ನಡುವೆ ಕಠಿಣ ಪೈಪೋಟಿ ಶುರುವಾಗಿದೆ. ಪೂಜಾರ ಅವರ ಮೂರನೇ ಸ್ಥಾನದಲ್ಲಿ ಗಿಲ್ ಆಡುವುದು ಬಹುತೇಕ ಖಚಿತವಾಗಿದೆ. ಅತ್ಯುತ್ತಮ ಬ್ಯಾಟಿಂಗ್ ತಂತ್ರದಿಂದ ಭವಿಷ್ಯದ ಆಟಗಾರನಾಗಿ ರೂಪಿಸುವ ಅಂದಾಜಿನಿಂದ ಗಿಲ್​ಗೆ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ಮ್ಯಾನೇಜ್ಮೆಂಟ್ ಸೂಚಿಸಿದೆ ಎನ್ನಲಾಗಿದೆ.

ರಹಾನೆಯ 5ನೇ ಕ್ರಮಾಂಕಕ್ಕೆ ಶ್ರೇಯಸ್ ಅಯ್ಯರ್ ಮತ್ತು ಹನುಮ ವಿಹಾರಿ ಅವರ ಪೈಕಿ ಯಾರಿಗೆ ಸ್ಥಾನ ಎಂಬುದು ನೋಡಬೇಕಿದೆ. ಕಳೆದ ವರ್ಷದ ಆರಂಭದಲ್ಲಿ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್‌ನಲ್ಲಿ ವಿರಾಟ್ ಕೊಹ್ಲಿ ಬದಲಿಗೆ ಬಂದಿದ್ದ ಶ್ರೇಯಸ್ ಮೊದಲ ಇನ್ನಿಂಗ್ಸ್‌ನಲ್ಲಿ ಶತಕ ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿ ಅರ್ಧಶತಕ ಗಳಿಸಿ ಚೊಚ್ಚಲ ಟೆಸ್ಟ್​ನಲ್ಲೇ ಸಂಚಲನ ಸೃಷ್ಟಿಸಿದ್ದರು. ಅಲ್ಲದೆ ಅಯ್ಯರ್ ಟಿ20ಯ ಮೂರೂ ಪಂದ್ಯಗಳಲ್ಲಿ ಅರ್ಧಶತಕ ಬಾರಿಸಿ ಬೊಂಬಾಟ್ ಫಾರ್ಮ್​ನಲ್ಲಿದ್ದಾರೆ. ಮತ್ತೊಂದೆಡೆ ವಿಹಾರಿ ಅವರು ತಮ್ಮ ಪ್ರತಿಭೆಯನ್ನು ಈಗಾಗಲೇ ತೋರಿಸಿದ್ದಾರೆ. ರಣಜಿಯಲ್ಲೂ ಉತ್ತಮ ಆಟವಾಡಿದ್ದಾರೆ. ಬೌಲಿಂಗ್ ಕೂಡ ಮಾಡುವ ಸಾಮರ್ಥ್ಯ ಹೊಂದಿದ್ದಾರೆ.

ಒಟ್ಟಾರೆ ಟೀಮ್ ಇಂಡಿಯಾ ಯಂಗ್ ಇಂಡಿಯಾವಾಗಿ ರೂಪುಗೊಳ್ಳುತ್ತಿದೆ. ಹಿರಿಯ ಆಟಗಾರರನ್ನು ಕೈಬಿಟ್ಟು ಭವಿಷ್ಯದ ದೃಷ್ಟಿಯಿಂದ ಯುವ ಆಟಗಾರರಿಗೆ ಅವಕಾಶ ನೀಡಲಾಗುತ್ತಿದೆ. ಲಂಕಾ ವಿರುದ್ಧದ ಟೆಸ್ಟ್​ ಸರಣಿಗೆ ಉತ್ತರ ಪ್ರದೇಶದ ಆಲ್​ರೌಂಡರ್​​​​​​​​ ಸೌರಭ್ ಕುಮಾರ್ ಚೊಚ್ಚಲ ಅವಕಾಶ ಪಡೆದಿದ್ದಾರೆ. ಸೌರಭ್​ ಟೆಸ್ಟ್​ ತಂಡದಲ್ಲಿ ಸ್ಥಾನ ಪಡೆದಿದ್ದು, ಲಂಕಾ ವಿರುದ್ಧ ಟೀಮ್​ ಇಂಡಿಯಾ ಪರ ಪದಾರ್ಪಣೆ ಮಾಡುವ ನಿರೀಕ್ಷೆಯಲ್ಲಿರೋ ಸೌರಭ್​, 46 ಪ್ರಥಮ ದರ್ಜೆ ಪಂದ್ಯಗಳಲ್ಲಿ ಬರೋಬ್ಬರಿ 196 ವಿಕೆಟ್​ ಕಬಳಿಸಿ ಗಮನ ಸೆಳೆದಿದ್ದಾರೆ.

Virat Kohli: 100ನೇ ಟೆಸ್ಟ್​ಗೆ ವಿರಾಟ್ ಕೊಹ್ಲಿ ಭರ್ಜರಿ ಅಭ್ಯಾಸ: ವೈರಲ್ ಆಗುತ್ತಿದೆ ಪ್ಯಾಕ್ಟೀಸ್ ಫೋಟೋಗಳು

IPL 2022: ಗುಜರಾತ್ ಟೈಟಾನ್ಸ್​ಗೆ ಬಿಗ್ ಶಾಕ್: 2 ಕೋಟಿಗೆ ಖರೀದಿಸಿದ ಸ್ಟಾರ್ ಆಟಗಾರ ಟೂರ್ನಿಯಿಂದ ಔಟ್

Published On - 11:33 am, Tue, 1 March 22

ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು