Shreyas Iyer: ಪದಾರ್ಪಣೆ ಪಂದ್ಯದಲ್ಲೇ ಶತಕ ಸಿಡಿಸಿ ದಾಖಲೆ ಬರೆದ ಶ್ರೇಯಸ್ ಅಯ್ಯರ್

IND vs NZ Test: ಕಾನ್ಪುರದಲ್ಲಿ ನಡೆಯುತ್ತಿರುವ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ಪರ ಪದಾರ್ಪಣೆ ಪಂದ್ಯದಲ್ಲೇ ಶ್ರೇಯಸ್ ಅಯ್ಯರ್ ಶತಕ ಸಿಡಿಸಿ ವಿಶೇಷ ಸಆಧನೆ ಮಾಡಿದ್ದಾರೆ. ಚೊಚ್ಚಲ ಪಂದ್ಯದಲ್ಲೇ ಸೆಂಚುರಿ ಬಾರಿಸಿದ ಭಾರತದ 16ನೇ ಆಟಗಾರ ಅಯ್ಯರ್ ಆಗಿದ್ದಾರೆ.

Shreyas Iyer: ಪದಾರ್ಪಣೆ ಪಂದ್ಯದಲ್ಲೇ ಶತಕ ಸಿಡಿಸಿ ದಾಖಲೆ ಬರೆದ ಶ್ರೇಯಸ್ ಅಯ್ಯರ್
Shreyas Iyer century
Follow us
TV9 Web
| Updated By: Vinay Bhat

Updated on: Nov 26, 2021 | 10:57 AM

ಶ್ರೇಯಸ್ಯ ಅಯ್ಯರ್ (Shreyas Iyer) ತಮ್ಮ ಟೆಸ್ಟ್​ ಕ್ರಿಕೆಟ್ ಕೆರಿಯರ್ ಅನ್ನು ಅದ್ಭುತವಾಗಿ ಆರಂಭಸಿದ್ದಾರೆ. ಕಾನ್ಪುರದ (Kanpur Test) ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ನ್ಯೂಜಿಲೆಂಡ್ (India vs New Zealand 1st Test) ವಿರುದ್ಧದ ಮೊದಲ ಟೆಸ್ಟ್​ ಪಂದ್ಯದಲ್ಲಿ ಪದಾರ್ಪಣೆ ಮಾಡಿದ ಶ್ರೇಯಸ್ ಅಯ್ಯರ್ ಶತಕ ಸಿಡಿಸಿ ವಿಶೇಷ ಸಾಧನೆ ಮಾಡಿದ್ದಾರೆ. ವಿರಾಟ್ ಕೊಹ್ಲಿ (Virat Kohli) ಜಾಗದಲ್ಲಿ ಸ್ಥಾನ ಪಡೆದಿರುವ ಅಯ್ಯರ್ ಟೆಸ್ಟ್ ಕ್ರಿಕೆಟ್​ನಲ್ಲಿ ತಮ್ಮ ಸ್ಥಾನವನ್ನು ಖಚಿತ ಪಡಿಸಿದ್ದಾರೆ. ಆರಂಭಿಕರ ವೈಫಲ್ಯದ ನಡುವೆ ಜವಾಬ್ದಾರಿಯುತ ಬ್ಯಾಟ್‌ ಮಾಡಿ ತಂಡವನ್ನು ಅಪಾಯದಿಂದ ಪಾರು ಮಾಡಿದ ಅಯ್ಯರ್‌ ಚೊಚ್ಚಲ ಪಂದ್ಯದಲ್ಲೇ ಆಕರ್ಷಕ ಶತಕ (Shreyas Iyer Century) ಸಿಡಿಸಿ ದಾಖಲೆ ಬರೆದಿದ್ದಾರೆ. ಪದಾರ್ಪಣೆ ಪಂದ್ಯದಲ್ಲೇ ಸೆಂಚುರಿ ಬಾರಿಸಿದ ಭಾರತದ 16ನೇ ಆಟಗಾರ ಅಯ್ಯರ್ ಆಗಿದ್ದಾರೆ. ಜೊತೆಗೆ ತವರಿನಲ್ಲಿ ಈ ಸಾಧನೆ ಮಾಡಿದ 10ನೇ ಪ್ಲೇಯರ್ ಆಗಿದ್ದಾರೆ.

ಮೊದಲ ದಿನದಾಟದ ಅಂತ್ಯದ ವೇಳೆಗೆ ಅಜೇಯ 75 ರನ್ ಗಳಿಸಿದ್ದ ಅಯ್ಯರ್, ಇಂದು ಎರಡನೇ ದಿನ ಉತ್ತಮವಾಗಿ ಆರಂಭಿಸಿದರು. ರವೀಂದ್ರ ಜಡೇಜಾ ದಿನದ ಆರಂಭದಲ್ಲೇ ಔಟ್ ಆದರೆ, ಅಯ್ಯರ್ ತಂಡಕ್ಕೆ ಮತ್ತೆ ಆಸರೆಯಾದರು. 157 ಎಸೆತಗಳಲ್ಲಿ 12 ಬೌಂಡರಿ, 2 ಸಿಕ್ಸರ್ ಸಿಡಿಸಿ ಅಯ್ಯರ್ ಸೆಂಚುರಿ ಪೂರ್ಣಗೊಳಿಸಿದರು. ಈ ಮೂಲಕ ಚೊಚ್ಚಲ ಪಂದ್ಯದಲ್ಲಿ ಶತಕ ಸಿಡಿಸಿದ ಮೂರನೇ ಹಿರಿಯ ಆಟಗಾರ ಎನಿಸಿಕೊಂಡರು. ಜೊತೆಗೆ ಡೆಬ್ಯೂ ಪಂದ್ಯದಲ್ಲಿ ವೇಗವಾಗಿ 100 ರನ್ ಗಳಿಸಿದ ನಾಲ್ಕನೇ ಪ್ಲೇಯರ್ ಎಂಬ ಸಾಧನೆ ಮಾಡಿದ್ದಾರೆ.

26 ವರ್ಷದ ಶ್ರೇಯಸ್ ಅಯ್ಯರ್ 2017 ರಲ್ಲಿ ಭಾರತ ಪರ ಏಕದಿನ ಮತ್ತು ಟಿ20 ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ್ದರು. ಆದರೆ, ಇವರಿಗೆ ಟೆಸ್ಟ್ ಕ್ಯಾಪ್ ಸಿಕ್ಕಲು 4 ವರ್ಷ ಕಾಯಬೇಕಾಯಿತು. ಆಡಿದ ಮೊದಲ ಟೆಸ್ಟ್ ಪಂದ್ಯದಲ್ಲಿ ಅಯ್ಯರ್ 171 ಎಸೆತಗಳಲ್ಲಿ 13 ಬೌಂಡರಿ, 2 ಸಿಕ್ಸರ್​ನೊಂದಿಗೆ 105 ರನ್ ಬಾರಿಸಿದರು. ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ ಇವರ ಆಟ ಬೊಂಬಾಟ್ ಆಗಿದ್ದು, 4592 ರನ್ ಗಳಿಸಿದ್ದಾರೆ. ಇದರಲ್ಲಿ 12 ಶತಕ ಮತ್ತು 23 ಅರ್ಧಶತಕ ಸೇರಿವೆ. ಇತ್ತೀಚೆಗಷ್ಟೆ ಮುಕ್ತಾಯಗೊಂಡ ಟಿ20 ವಿಶ್ವಕಪ್​ನಲ್ಲಿ ಅಯ್ಯರ್​ಗೆ ಮೀಸಲು ಆಟಗಾರನಾಗಿಯಷ್ಟೆ ಅವಕಾಶ ನೀಡಲಾಗಿತ್ತು.

ಸದ್ಯ ಸಾಗುತ್ತಿರುವ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತದ ಮೊತ್ತ 300ರ ಗಡಿ ದಾಟಿದೆ. ಸಾಕಷ್ಟು ಕುತೂಹಲದಿಂದ ಕೂಡಿದ್ದ ಮೊದಲ ದಿನದಾಟದಲ್ಲಿ ಟೀಮ್ ಇಂಡಿಯಾ ಮೇಲುಗೈ ಸಾಧಿಸಿತು. ಆರಂಭಿಕರ ಬ್ಯಾಟರ್​ಗಳ ವೈಫಲ್ಯದ ಹೊರತಾಗಿಯೂ ಶ್ರೇಯಸ್ ಅಯ್ಯರ್ ಹಾಗೂ ರವೀಂದ್ರ ಜಡೇಜಾ ಅವರ ಜೊತೆಯಾಟದ ನೆರವಿನಿಂದ ಭಾರತ ಉತ್ತಮ ಮೊತ್ತ ಸಂಪಾದಿಸಿತು. ಮೊದಲ ದಿನದಾಟದ ಅಂತ್ಯಕ್ಕೆ ನಾಲ್ಕು ವಿಕೆಟ್‌ ಕಳೆದುಕೊಂಡು 258 ರನ್‌ ಗಳಿಸಿದ್ದ ಭಾರತ ಈಗ ಎರಡನೇ ದಿನದಾಟದಲ್ಲಿ ಬೇಗನೆ ವಿಕೆಟ್ ಕಳೆದುಕೊಳ್ಳುತ್ತಿದೆ.

IND vs NZ 1st Test, Day 2 LIVE Score:

(Shreyas Iyer slammed a hundred on his Test debut for India and joins elite list)

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ