AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

10 ಭರ್ಜರಿ ಸಿಕ್ಸರ್​ಗಳೊಂದಿಗೆ ಸ್ಪೋಟಕ ಸೆಂಚುರಿ ಸಿಡಿಸಿದ ಶ್ರೇಯಸ್ ಅಯ್ಯರ್

Vijay Hazare Trophy 2024-25: ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದ ಶ್ರೇಯಸ್ ಅಯ್ಯರ್ ಇದೀಗ ವಿಜಯ ಹಝಾರೆ ಟೂರ್ನಿಯ ಮೊದಲ ಮ್ಯಾಚ್​ನಲ್ಲೇ ಅಬ್ಬರಿಸಿದ್ದಾರೆ. ಅದು ಕೂಡ ಸ್ಪೋಟಕ ಸೆಂಚುರಿ ಸಿಡಿಸುವ ಮೂಲಕ ಎಂಬುದು ವಿಶೇಷ. ಈ ಶತಕದೊಂದಿಗೆ ಮುಂಬೈ ತಂಡ ಕರ್ನಾಟಕ ವಿರುದ್ಧ ಬೃಹತ್ ಮೊತ್ತ ಪೇರಿಸಿದೆ.

10 ಭರ್ಜರಿ ಸಿಕ್ಸರ್​ಗಳೊಂದಿಗೆ ಸ್ಪೋಟಕ ಸೆಂಚುರಿ ಸಿಡಿಸಿದ ಶ್ರೇಯಸ್ ಅಯ್ಯರ್
Shreyas Iyer
ಝಾಹಿರ್ ಯೂಸುಫ್
|

Updated on: Dec 21, 2024 | 1:23 PM

Share

ವಿಜಯ ಹಝಾರೆ ಟೂರ್ನಿಯ ಮೊದಲ ಪಂದ್ಯದಲ್ಲೇ ಶ್ರೇಯಸ್ ಅಯ್ಯರ್ ಸ್ಪೋಟಕ ಸೆಂಚುರಿ ಸಿಡಿಸಿದ್ದಾರೆ. ಅಹದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನ ಬಿ ಗ್ರೌಂಡ್​ನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಕರ್ನಾಟಕ ತಂಡದ ನಾಯಕ ಮಯಾಂಕ್ ಅಗರ್ವಾಲ್ ಬೌಲಿಂಗ್ ಆಯ್ದುಕೊಂಡರು. ಅದರಂತೆ ಇನಿಂಗ್ಸ್ ಆರಂಭಿಸಿದ ಮುಂಬೈ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ.

ಆರಂಭಿಕನಾಗಿ ಕಣಕ್ಕಿಳಿದ ಅಂಗ್​ಕ್ರಿಶ್ ರಘುವಂಶಿ ಕೇವಲ 6 ರನ್​ಗಳಿಸಿ ವಿದ್ಯಾಧರ್ ಪಾಟೀಲ್​ಗೆ ವಿಕೆಟ್ ಒಪ್ಪಿಸಿದ್ದರು. ಈ ವೇಳೆ ಜೊತೆಗೂಡಿ ಆಯುಷ್ ಮ್ಹಾತ್ರೆ (78) ಹಾಗೂ ಹಾರ್ದಿಕ್ ತಮೋರ್ (84) 2ನೇ ವಿಕೆಟ್​ಗೆ 141 ರನ್​ಗಳ ಜೊತೆಯಾಟವಾಡಿದರು.

ಅಯ್ಯರ್ ಅಬ್ಬರ ಸಿಡಿಲಬ್ಬರ:

ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ನಾಯಕ ಶ್ರೇಯಸ್ ಅಯ್ಯರ್ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದರು. ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ್ದ ಅಯ್ಯರ್ ಕರ್ನಾಟಕ ಬೌಲರ್​ಗಳನ್ನು ಹಿಗ್ಗಮುಗ್ಗಾ ದಂಡಿಸಿದರು. ಪರಿಣಾಮ ಶ್ರೇಯಸ್ ಬ್ಯಾಟ್​ನಿಂದ 10 ಭರ್ಜರಿ ಸಿಕ್ಸ್​ಗಳು ಮೂಡಿಬಂದವು.

ಈ ಸಿಡಿಲಬ್ಬರದೊಂದಿಗೆ ಶ್ರೇಯಸ್ ಅಯ್ಯರ್ ಕೇವಲ 51 ಎಸೆತಗಳಲ್ಲಿ ಶತಕ ಪೂರೈಸಿದರು. ಇನ್ನು ಶತಕದ ಬಳಿಕ ಕೂಡ ಅಬ್ಬರ ಮುಂದುವರೆಸಿದ ಅಯ್ಯರ್ 55 ಎಸೆತಗಳಲ್ಲಿ 5 ಫೋರ್ ಹಾಗೂ 10 ಸಿಕ್ಸ್​ಗಳೊಂದಿಗೆ ಅಜೇಯ 114 ರನ್ ಬಾರಿಸಿದರು. ಈ ಭರ್ಜರಿ ಶತಕದ ನೆರವಿನೊಂದಿಗೆ ಮುಂಬೈ ತಂಡವು 50 ಓವರ್​​ಗಳಲ್ಲಿ 4 ವಿಕೆಟ್ ಕಳೆದುಕೊಂಡು 382 ರನ್ ಕಲೆಹಾಕಿದೆ.

ಈ ಪಂದ್ಯವನ್ನು ಗೆಲ್ಲಲು ಕರ್ನಾಟಕ ತಂಡವು 50 ಓವರ್​ಗಳಲ್ಲಿ 382 ರನ್​ ಕಲೆಹಾಕಬೇಕಿದೆ. ಈ ಮೊತ್ತವನ್ನು ಚೇಸ್ ಮಾಡಿದರೆ ಕರ್ನಾಟಕ ತಂಡದ ಹೆಸರಿಗೆ ಹೊಸ ದಾಖಲೆ ಸೇರ್ಪಡೆಯಾಗಲಿದೆ.

ಮುಂಬೈ ಪ್ಲೇಯಿಂಗ್ 11: ಅಂಗ್​ಕ್ರಿಶ್ ರಘುವಂಶಿ , ಆಯುಷ್ ಮ್ಹಾತ್ರೆ , ಶ್ರೇಯಸ್ ಅಯ್ಯರ್ (ನಾಯಕ) , ಸೂರ್ಯಕುಮಾರ್ ಯಾದವ್ , ಹಾರ್ದಿಕ್ ತಮೋರೆ (ವಿಕೆಟ್ ಕೀಪರ್) , ಶಿವಂ ದುಬೆ , ಸೂರ್ಯಾಂಶ್ ಶೆಡ್ಗೆ , ಅಥರ್ವ ಅಂಕೋಲೇಕರ್ , ತನುಷ್ ಕೋಟ್ಯಾನ್ , ಶಾರ್ದೂಲ್ ಠಾಕೂರ್ , ಜುನೇದ್ ಖಾನ್.

ಇದನ್ನೂ ಓದಿ: ಒಂದೇ ವರ್ಷ ಟೀಮ್ ಇಂಡಿಯಾದ 11 ಆಟಗಾರರು ನಿವೃತ್ತಿ..!

ಕರ್ನಾಟಕ ಪ್ಲೇಯಿಂಗ್ 11: ಮಯಾಂಕ್ ಅಗರವಾಲ್ (ನಾಯಕ) , ಅನೀಶ್ ಕೆವಿ , ನಿಕಿನ್ ಜೋಸ್ , ಸ್ಮರಣ್ ರವಿಚಂದ್ರನ್ , ಅಭಿನವ್ ಮನೋಹರ್ , ಕೃಷ್ಣನ್ ಶ್ರೀಜಿತ್ (ವಿಕೆಟ್ ಕೀಪರ್) , ಶ್ರೇಯಸ್ ಗೋಪಾಲ್ , ವೈಶಾಕ್ ವಿಜಯಕುಮಾರ್ , ಪ್ರವೀಣ್ ದುಬೆ , ವಾಸುಕಿ ಕೌಶಿಕ್ , ವಿದ್ಯಾಧರ್ ಪಾಟೀಲ್.

ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್