AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಟ್ರೇಲಿಯಾ ಎ ವಿರುದ್ಧದ ಸರಣಿಗೆ ಟೀಂ ಇಂಡಿಯಾ ಪ್ರಕಟ; ಶ್ರೇಯಸ್ ಅಯ್ಯರ್​ಗೆ ನಾಯಕತ್ವ

India A vs Australia A: ಆಸ್ಟ್ರೇಲಿಯಾ ಎ ವಿರುದ್ಧದ ಎರಡು ಪಂದ್ಯಗಳ ಸರಣಿಗೆ ಬಿಸಿಸಿಐ ಭಾರತ ಎ ತಂಡವನ್ನು ಆಯ್ಕೆ ಮಾಡಿದೆ. ಶ್ರೇಯಸ್ ಅಯ್ಯರ್ ನಾಯಕನಾಗಿ, ಧ್ರುವ್ ಜುರೆಲ್ ಉಪನಾಯಕನಾಗಿ ಕಾರ್ಯನಿರ್ವಹಿಸಲಿದ್ದಾರೆ. ಜಗದೀಶನ್ ತಂಡದಲ್ಲಿದ್ದಾರೆ ಆದರೆ ರುತುರಾಜ್ ಗಾಯಕ್ವಾಡ್ ಅವರನ್ನು ನಿರ್ಲಕ್ಷಿಸಲಾಗಿದೆ. ಸೆಪ್ಟೆಂಬರ್ 16 ರಿಂದ 4 ದಿನಗಳ 2 ಪಂದ್ಯಗಳ ಸರಣಿ ಆರಂಭವಾಗಲಿದೆ.

ಆಸ್ಟ್ರೇಲಿಯಾ ಎ ವಿರುದ್ಧದ ಸರಣಿಗೆ ಟೀಂ ಇಂಡಿಯಾ ಪ್ರಕಟ; ಶ್ರೇಯಸ್ ಅಯ್ಯರ್​ಗೆ ನಾಯಕತ್ವ
ಶ್ರೇಯಸ್ ಅಯ್ಯರ್
ಪೃಥ್ವಿಶಂಕರ
|

Updated on:Sep 06, 2025 | 7:11 PM

Share

ಸೆಪ್ಟೆಂಬರ್ 9 ರಿಂದ ಯುಎಇಯಲ್ಲಿ ಟಿ20 ಏಷ್ಯಾಕಪ್ (Asia Cup 2025) ಶುರುವಾಗಲಿದೆ. ಈ ಟೂರ್ನಿಗೆ ಎಲ್ಲಾ ತಂಡಗಳು ಈಗಾಗಲೇ ಅಂತಿಮ ಹಂತದ ಸಿದ್ಧತೆಯಲ್ಲಿವೆ. ಇತ್ತ ಟೀಂ ಇಂಡಿಯಾ ಕೂಡ ತರಬೇತಿಯಲ್ಲಿ ನಿರತವಾಗಿದೆ. ಈ ನಡುವೆ ಮತ್ತೊಂದು ಸರಣಿಗಾಗಿ ಭಾರತ ಎ ತಂಡವನ್ನು ಇಂದು ಬಿಸಿಸಿಐ ಪ್ರಕಟಿಸಿದೆ. ವಾಸ್ತವವಾಗಿ ಭಾರತ ಎ ತಂಡ ಆಸ್ಟ್ರೇಲಿಯಾ ಎ ವಿರುದ್ಧ ಇದೇ ಸೆಪ್ಟೆಂಬರ್ 16 ರಿಂದ ನಾಲ್ಕು ದಿನಗಳ 2 ಪಂದ್ಯಗಳನ್ನು ಆಡಲಿದೆ. ಈ ಸರಣಿಯಲ್ಲಿ ಭಾರತ ತಂಡವನ್ನು ಶ್ರೇಯಸ್ ಅಯ್ಯರ್ (Shreyas Iyer) ಮುನ್ನಡೆಸಲಿದ್ದಾರೆ. ಹಾಗೆಯೇ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಧ್ರುವ್ ಜುರೆಲ್ ಅವರಿಗೆ ಉಪನಾಯಕತ್ವದ ಜವಾಬ್ದಾರಿಯನ್ನು ನೀಡಲಾಗಿದೆ.

ಆಸ್ಟ್ರೇಲಿಯಾ ವಿರುದ್ಧದ ಈ ಸರಣಿಗೆ ಭಾರತ ಎ ತಂಡದಲ್ಲಿ ಅನೇಕ ಅನುಭವಿ ಆಟಗಾರರಿಗೆ ಅವಕಾಶ ನೀಡಲಾಗಿದೆ. ದುಲೀಪ್ ಟ್ರೋಫಿಯ ಸೆಮಿಫೈನಲ್‌ನಲ್ಲಿ ದ್ವಿಶತಕದಂಚಿನಲ್ಲಿ ಎಡವಿದ್ದ ತಮಿಳುನಾಡು ಮೂಲದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಎನ್. ಜಗದೀಸನ್ ಅವರಿಗೆ ತಂಡದಲ್ಲಿ ಸ್ಥಾನ ನೀಡಲಾಗಿದೆ. ಆದರೆ ದುಲೀಪ್ ಟ್ರೋಫಿಯ ಮತ್ತೊಂದು ಸೆಮಿಫೈನಲ್‌ ಪಂದ್ಯದಲ್ಲಿ 184 ರನ್​ಗಳ ಇನ್ನಿಂಗ್ಸ್ ಆಡಿದ್ದ ರುತುರಾಜ್ ಗಾಯಕ್ವಾಡ್ ಅವರನ್ನು ಮತ್ತೊಮ್ಮೆ ನಿರ್ಲಕ್ಷಿಸಲಾಗಿದೆ.

ವೇಳಾಪಟ್ಟಿ ಹೀಗಿದೆ

ಆಸ್ಟ್ರೇಲಿಯಾ-ಎ ಮತ್ತು ಭಾರತ-ಎ ನಡುವಿನ ನಾಲ್ಕು ದಿನಗಳ 2 ಪಂದ್ಯಗಳಲ್ಲಿ ಮೊದಲ ಪಂದ್ಯ ಸೆಪ್ಟೆಂಬರ್ 16 ರಿಂದ 19 ರವರೆಗೆ ಲಕ್ನೋದಲ್ಲಿ ನಡೆಯಲಿದೆ. ಎರಡನೇ ಪಂದ್ಯ ಸೆಪ್ಟೆಂಬರ್ 23 ರಿಂದ 26 ರವರೆಗೆ ಲಕ್ನೋದಲ್ಲಿ ನಡೆಯಲಿದೆ. ಇದರ ನಂತರ, ಸೆಪ್ಟೆಂಬರ್ 30 ರಿಂದ ಅಕ್ಟೋಬರ್ 5 ರವರೆಗೆ ಕಾನ್ಪುರದಲ್ಲಿ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಏಕದಿನ ಸರಣಿಗೆ ಭಾರತ-ಎ ತಂಡವನ್ನು ಇನ್ನೂ ಘೋಷಿಸಲಾಗಿಲ್ಲ. ವರದಿಗಳ ಪ್ರಕಾರ, ರೋಹಿತ್ ಶರ್ಮಾ ಏಕದಿನ ಸರಣಿಗೆ ಭಾರತ-ಎ ತಂಡದಲ್ಲಿ ಸ್ಥಾನ ಪಡೆಯಬಹುದು.

ಭಾರತ-ಎ ತಂಡ: ಶ್ರೇಯಸ್ ಅಯ್ಯರ್ (ನಾಯಕ), ಅಭಿಮನ್ಯು ಈಶ್ವರನ್, ನಾರಾಯಣ್ ಜಗದೀಸನ್ (ವಿಕೆಟ್ ಕೀಪರ್), ಸಾಯಿ ಸುದರ್ಶನ್, ಧ್ರುವ್ ಜುರೆಲ್ (ಉಪನಾಯಕ ಮತ್ತು ವಿಕೆಟ್ ಕೀಪರ್), ದೇವದತ್ ಪಡಿಕ್ಕಲ್, ಹರ್ಷ್ ದುಬೆ, ಆಯುಷ್ ಬಡೋನಿ, ನಿತೀಶ್ ಕುಮಾರ್ ರೆಡ್ಡಿ, ತನುಷ್ ಕೋಟ್ಯಾನ್, ಕೆ. ಸುತಾರ್, ಯಶ್ ಠಾಕೂರ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:23 pm, Sat, 6 September 25

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ