
ಸೆಪ್ಟೆಂಬರ್ 9 ರಿಂದ ಯುಎಇಯಲ್ಲಿ ಟಿ20 ಏಷ್ಯಾಕಪ್ (Asia Cup 2025) ಶುರುವಾಗಲಿದೆ. ಈ ಟೂರ್ನಿಗೆ ಎಲ್ಲಾ ತಂಡಗಳು ಈಗಾಗಲೇ ಅಂತಿಮ ಹಂತದ ಸಿದ್ಧತೆಯಲ್ಲಿವೆ. ಇತ್ತ ಟೀಂ ಇಂಡಿಯಾ ಕೂಡ ತರಬೇತಿಯಲ್ಲಿ ನಿರತವಾಗಿದೆ. ಈ ನಡುವೆ ಮತ್ತೊಂದು ಸರಣಿಗಾಗಿ ಭಾರತ ಎ ತಂಡವನ್ನು ಇಂದು ಬಿಸಿಸಿಐ ಪ್ರಕಟಿಸಿದೆ. ವಾಸ್ತವವಾಗಿ ಭಾರತ ಎ ತಂಡ ಆಸ್ಟ್ರೇಲಿಯಾ ಎ ವಿರುದ್ಧ ಇದೇ ಸೆಪ್ಟೆಂಬರ್ 16 ರಿಂದ ನಾಲ್ಕು ದಿನಗಳ 2 ಪಂದ್ಯಗಳನ್ನು ಆಡಲಿದೆ. ಈ ಸರಣಿಯಲ್ಲಿ ಭಾರತ ತಂಡವನ್ನು ಶ್ರೇಯಸ್ ಅಯ್ಯರ್ (Shreyas Iyer) ಮುನ್ನಡೆಸಲಿದ್ದಾರೆ. ಹಾಗೆಯೇ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಧ್ರುವ್ ಜುರೆಲ್ ಅವರಿಗೆ ಉಪನಾಯಕತ್ವದ ಜವಾಬ್ದಾರಿಯನ್ನು ನೀಡಲಾಗಿದೆ.
ಆಸ್ಟ್ರೇಲಿಯಾ ವಿರುದ್ಧದ ಈ ಸರಣಿಗೆ ಭಾರತ ಎ ತಂಡದಲ್ಲಿ ಅನೇಕ ಅನುಭವಿ ಆಟಗಾರರಿಗೆ ಅವಕಾಶ ನೀಡಲಾಗಿದೆ. ದುಲೀಪ್ ಟ್ರೋಫಿಯ ಸೆಮಿಫೈನಲ್‌ನಲ್ಲಿ ದ್ವಿಶತಕದಂಚಿನಲ್ಲಿ ಎಡವಿದ್ದ ತಮಿಳುನಾಡು ಮೂಲದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಎನ್. ಜಗದೀಸನ್ ಅವರಿಗೆ ತಂಡದಲ್ಲಿ ಸ್ಥಾನ ನೀಡಲಾಗಿದೆ. ಆದರೆ ದುಲೀಪ್ ಟ್ರೋಫಿಯ ಮತ್ತೊಂದು ಸೆಮಿಫೈನಲ್ ಪಂದ್ಯದಲ್ಲಿ 184 ರನ್ಗಳ ಇನ್ನಿಂಗ್ಸ್ ಆಡಿದ್ದ ರುತುರಾಜ್ ಗಾಯಕ್ವಾಡ್ ಅವರನ್ನು ಮತ್ತೊಮ್ಮೆ ನಿರ್ಲಕ್ಷಿಸಲಾಗಿದೆ.
ಆಸ್ಟ್ರೇಲಿಯಾ-ಎ ಮತ್ತು ಭಾರತ-ಎ ನಡುವಿನ ನಾಲ್ಕು ದಿನಗಳ 2 ಪಂದ್ಯಗಳಲ್ಲಿ ಮೊದಲ ಪಂದ್ಯ ಸೆಪ್ಟೆಂಬರ್ 16 ರಿಂದ 19 ರವರೆಗೆ ಲಕ್ನೋದಲ್ಲಿ ನಡೆಯಲಿದೆ. ಎರಡನೇ ಪಂದ್ಯ ಸೆಪ್ಟೆಂಬರ್ 23 ರಿಂದ 26 ರವರೆಗೆ ಲಕ್ನೋದಲ್ಲಿ ನಡೆಯಲಿದೆ. ಇದರ ನಂತರ, ಸೆಪ್ಟೆಂಬರ್ 30 ರಿಂದ ಅಕ್ಟೋಬರ್ 5 ರವರೆಗೆ ಕಾನ್ಪುರದಲ್ಲಿ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಏಕದಿನ ಸರಣಿಗೆ ಭಾರತ-ಎ ತಂಡವನ್ನು ಇನ್ನೂ ಘೋಷಿಸಲಾಗಿಲ್ಲ. ವರದಿಗಳ ಪ್ರಕಾರ, ರೋಹಿತ್ ಶರ್ಮಾ ಏಕದಿನ ಸರಣಿಗೆ ಭಾರತ-ಎ ತಂಡದಲ್ಲಿ ಸ್ಥಾನ ಪಡೆಯಬಹುದು.
🚨 NEWS 🚨
India A squad for two multi-day matches against Australia A announced.
Details 🔽 #TeamIndiahttps://t.co/PJI6lWxeEQ pic.twitter.com/2gqZogQKnN
— BCCI (@BCCI) September 6, 2025
ಭಾರತ-ಎ ತಂಡ: ಶ್ರೇಯಸ್ ಅಯ್ಯರ್ (ನಾಯಕ), ಅಭಿಮನ್ಯು ಈಶ್ವರನ್, ನಾರಾಯಣ್ ಜಗದೀಸನ್ (ವಿಕೆಟ್ ಕೀಪರ್), ಸಾಯಿ ಸುದರ್ಶನ್, ಧ್ರುವ್ ಜುರೆಲ್ (ಉಪನಾಯಕ ಮತ್ತು ವಿಕೆಟ್ ಕೀಪರ್), ದೇವದತ್ ಪಡಿಕ್ಕಲ್, ಹರ್ಷ್ ದುಬೆ, ಆಯುಷ್ ಬಡೋನಿ, ನಿತೀಶ್ ಕುಮಾರ್ ರೆಡ್ಡಿ, ತನುಷ್ ಕೋಟ್ಯಾನ್, ಕೆ. ಸುತಾರ್, ಯಶ್ ಠಾಕೂರ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 3:23 pm, Sat, 6 September 25