
ಭಾರತ-ನ್ಯೂಜಿಲೆಂಡ್ (India vs New Zealand) ನಡುವಣ 2ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ (Team India) ಭರ್ಜರಿ ಬೌಲಿಂಗ್ ಪ್ರದರ್ಶಿಸಿದೆ. ಮೊದಲ ಇನಿಂಗ್ಸ್ನಲ್ಲಿ 325 ರನ್ಗಳಿಗೆ ಆಲೌಟ್ ಆಗಿದ್ದ ಭಾರತ ತಂಡವು ನ್ಯೂಜಿಲೆಂಡ್ ತಂಡವನ್ನು ಕೇವಲ 62 ರನ್ಗಳಿಗೆ ಕಟ್ಟಿಹಾಕಿರುವುದು ವಿಶೇಷ. ಟೀಮ್ ಇಂಡಿಯಾ ಪರ ರವಿಚಂದ್ರನ್ ಅಶ್ವಿನ್ 4 ವಿಕೆಟ್ ಪಡೆದರೆ, ಮೊಹಮ್ಮದ್ ಸಿರಾಜ್ 3 ವಿಕೆಟ್ ಉರುಳಿಸಿದ್ದರು. ಇನ್ನು ಅಕ್ಷರ್ ಪಟೇಲ್ 2 ಹಾಗೂ ಜಯಂತ್ ಯಾದವ್ 1 ವಿಕೆಟ್ ಪಡೆದರು. ಈ ಮೂಲಕ ಭಾರತದ ಬೌಲರುಗಳು ನ್ಯೂಜಿಲೆಂಡ್ ತಂಡವನ್ನು ಟೆಸ್ಟ್ ಕ್ರಿಕೆಟ್ನಲ್ಲಿ ಅತೀ ಕಡಿಮೆಗೆ ಆಲೌಟ್ ಮಾಡುವಲ್ಲಿ ಯಶಸ್ವಿಯಾಗಿದ್ದರು.
ಈ ಇನಿಂಗ್ಸ್ನಲ್ಲಿ ಮೊದಲ ವಿಕೆಟ್ ಮೊಹಮ್ಮದ್ ಸಿರಾಜ್ ಉರುಳಿಸಿದರೆ, ಕೊನೆಯ ವಿಕೆಟ್ ಅಕ್ಷರ್ ಪಟೇಲ್ ಪಡೆದಿದ್ದರು. ಅದರಲ್ಲೂ ಅಂತಿಮ ವಿಕೆಟ್ ಪಡೆದಿರುವುದು ಅದ್ಭುತವಾಗಿ ಎಂಬುದು ವಿಶೇಷ. ನ್ಯೂಜಿಲೆಂಡ್ ತಂಡವು 62 ರನ್ಗಳಿಗೆ 9 ವಿಕೆಟ್ ಕಳೆದುಕೊಂಡಿದ್ದ ವೇಳೆ ಕೈಲ್ ಜೇಮಿಸನ್ ಹಾಗೂ ಎಜಾಝ್ ಪಟೇಲ್ ಕ್ರೀಸ್ನಲ್ಲಿದ್ದರು.
ಈ ವೇಳೆ ದಾಳಿಗಿಳಿದ ಅಕ್ಷರ್ ಪಟೇಲ್ ಎಸೆತದಲ್ಲಿ ಕೈಲ್ ಜೇಮಿಸನ್ ಭರ್ಜರಿ ಹೊಡೆತಕ್ಕೆ ಮುಂದಾದರು. ಆದರೆ ಬ್ಯಾಟ್ ಬದಿಗೆ ತಗುಲಿದ ಚೆಂಡು ವಿಕೆಟ್ ಕೀಪರ್ನತ್ತ ಮುನ್ನುಗ್ಗಿತು. ಆದರೆ ವಿಕೆಟ್ ಕೀಪರ್ ಸಾಹ ಚೆಂಡನ್ನು ಗುರುತಿಸುವಲ್ಲಿ ಎಡವಿದರು. ಚೆಂಡು ಸಾಹ ಕಾಲಿಗೆ ತಗುಲಿ ಚಿಮ್ಮಿತು. ಅತ್ತ ಸಿಲ್ಲಿ ಪಾಯಿಂಟ್ನಲ್ಲಿ ಫೀಲ್ಡಿಂಗ್ನಲ್ಲಿದ್ದ ಶ್ರೇಯಸ್ ಅಯ್ಯರ್ ಕ್ಷಣಾರ್ಧದಲ್ಲೇ ಚೆಂಡನ್ನು ಗುರುತಿಸಿ ಅದ್ಭುತವಾಗಿ ಡೈವ್ ಹೊಡೆದರು. ಅಷ್ಟೇ ಅಲ್ಲದೆ ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿಯುವ ಮೂಲಕ ಜೇಮಿಸನ್ ಔಟ್ ಆಗಲು ಪ್ರಮುಖ ಕಾರಣರಾದರು. ಅದರಂತೆ ನ್ಯೂಜಿಲೆಂಡ್ ತಂಡವು ಕೇವಲ 62 ರನ್ಗಳಿಗೆ ಇನಿಂಗ್ಸ್ ಅಂತ್ಯಗೊಳಿಸುವಂತಾಯಿತು.
ಶ್ರೇಯಸ್ ಅಯ್ಯರ್ ಅವರ ಫೆಂಟಾಸ್ಟಿಕ್ ಕ್ಯಾಚ್ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಲ್ಲದೆ ಅದ್ಭುತ ಡೈವಿಂಗ್ ಕ್ಯಾಚ್ ಬಗ್ಗೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.
— Cricsphere (@Cricsphere) December 4, 2021
ಇದನ್ನೂ ಓದಿ: IPL 2022: ದುಡ್ಡಿಗಿಂತ RCB ತಂಡವೇ ಮುಖ್ಯ: ವಿರಾಟ್ ಕೊಹ್ಲಿಗೆ ಅಭಿಮಾನಿಗಳಿಂದ ಬಹುಪರಾಕ್
ಇದನ್ನೂ ಓದಿ: 8 ಫ್ರಾಂಚೈಸಿ ಉಳಿಸಿಕೊಂಡ ಆಟಗಾರರ ಪಟ್ಟಿ ಹೀಗಿದೆ
ಇದನ್ನೂ ಓದಿ: IPL 20222: ಇವರೇ RCB ತಂಡದ ಮುಂದಿನ ಕ್ಯಾಪ್ಟನ್ ಎಂದ ಮಾಜಿ ಆರ್ಸಿಬಿ ನಾಯಕ