AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಶ್ರೇಯಸ್ ಏಕಾಂಗಿ ಹೋರಾಟ; ಉಳಿದವರು ಹೋದ ಪುಟ್ಟ ಬಂದ ಪುಟ್ಟ

India vs England 4th T20: ಬ್ರಿಸ್ಟಲ್‌ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ 4ನೇ ಟಿ20 ಪಂದ್ಯದಲ್ಲಿ ಭಾರತ 159 ರನ್ ಗಳಿಸಿತು. ನಾಯಕ ಶ್ರೇಯಸ್ ಅಯ್ಯರ್ ಅಜೇಯ 80 ರನ್ ಸಿಡಿಸಿ ತಂಡಕ್ಕೆ ಆಸರೆಯಾದರು. ಅಗ್ರ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳಾದ ವೈಭವ್, ಇಶಾನ್ ಮತ್ತು ಅಭಿಷೇಕ್ ಮತ್ತೆ ವೈಫಲ್ಯ ಅನುಭವಿಸಿದರು. ತಿಲಕ್ ವರ್ಮಾ ಕೂಡ ನಿರಾಸೆ ಮೂಡಿಸಿದರು. ಅಯ್ಯರ್ ಅವರ ಏಕಾಂಗಿ ಹೋರಾಟದಿಂದ ಭಾರತ ಸವಾಲಿನ ಮೊತ್ತ ಗಳಿಸಲು ಸಾಧ್ಯವಾಯಿತು.

IND vs ENG: ಶ್ರೇಯಸ್ ಏಕಾಂಗಿ ಹೋರಾಟ; ಉಳಿದವರು ಹೋದ ಪುಟ್ಟ ಬಂದ ಪುಟ್ಟ
Shreyas Iyer
ಪೃಥ್ವಿಶಂಕರ
|

Updated on:Jul 09, 2026 | 11:40 PM

Share

ಭಾರತ ಮತ್ತು ಇಂಗ್ಲೆಂಡ್ (India vs England) ನಡುವಿನ ಐದು ಪಂದ್ಯಗಳ ಟಿ20 ಸರಣಿಯ ನಾಲ್ಕನೇ ಪಂದ್ಯ ಇಂದು ಬ್ರಿಸ್ಟಲ್‌ನ ಕೌಂಟಿ ಮೈದಾನದಲ್ಲಿ ನಡೆಯಿತು. ಈ ನಿರ್ಣಾಯಕ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ಶ್ರೇಯಸ್ ಅಯ್ಯರ್ (Shreyas Iyer) ಮೊದಲು ಬ್ಯಾಟಿಂಗ್‌ ಮಾಡಲು ನಿರ್ಧರಿಸಿದರು. ಅದರಂತೆ ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ ನಾಯಕ ಶ್ರೇಯಸ್ ಅಯ್ಯರ್ ಅವರ ಅರ್ಧಶತಕದ ನೆರವಿನಿಂದ ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್‌ಗಳನ್ನು ಕಳೆದುಕೊಂಡು 159 ರನ್ ಕಲೆಹಾಕಿತು. ಅಯ್ಯರ್ ಹೊರತುಪಡಿಸಿ ತಂಡದ ಉಳಿದ ಆಟಗಾರರಿಂದ ಹೇಳಿಕೊಳ್ಳುವಂತಹ ಪ್ರದರ್ಶನ ಮೂಡಿಬರಲಿಲ್ಲ. ಹೀಗಾಗಿ ದೊಡ್ಡ ಮೊತ್ತ ಕಲೆಹಾಕಲು ಸಾಧ್ಯವಾಗಲಿಲ್ಲ.

ಭಾರತಕ್ಕೆ ಮತ್ತೆ ಕಳಪೆ ಆರಂಭ

ಎಂದಿನಂತೆ ಈ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ ಹಾಗೂ ಅಭಿಷೇಕ್ ಶರ್ಮಾ ತಂಡದ ಇನ್ನಿಂಗ್ಸ್ ಆರಂಭಿಸಿದರು. ಆದರೆ ಈ ಪಂದ್ಯದಲ್ಲೂ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ. ವೈಭವ್ ಈ ಪಂದ್ಯದಲ್ಲೂ ರನ್ ಗಳಿಸಲು ವಿಫಲರಾಗಿ 10 ಎಸೆತಗಳನ್ನು ಎದುರಿಸಿ 15 ರನ್ ಬಾರಿಸಿ ಔಟಾದರು. ಗಮನಿಸಬೇಕಾದ ಸಂಗತಿಯೆಂದರೆ ಕಳೆದ ಎರಡು ಪಂದ್ಯಗಳಲ್ಲೂ ವೈಭವ್ ಅವರ ವಿಕೆಟ್ ಪಡೆದಿದ್ದು, ಜೋಪ್ರಾ ಆರ್ಚರ್. ವೈಭವ್ ವಿಕೆಟ್ ಬಳಿಕ ಬಂದ ಇಶಾನ್ ಕಿಶನ್ ಕೂಡ 4 ರನ್​ಗಳಿಗೆ ವಿಕೆಟ್ ಒಪ್ಪಿಸಿದರು. ಅಭಿಷೇಕ್ ಶರ್ಮಾ ಅವರ ಇನ್ನಿಂಗ್ಸ್ ಕೂಡ 16 ರನ್​ಗಳಿಗೆ ಅಂತ್ಯವಾಯಿತು. ಹೀಗಾಗಿ ಟೀಂ ಇಂಡಿಯಾ ಕೇವಲ 48 ರನ್​ಗಳಿಗೆ ತನ್ನ ಪ್ರಮುಖ 3 ವಿಕೆಟ್‌ಗಳನ್ನು ಕಳೆದುಕೊಂಡಿತು.

ಕೈಕೊಟ್ಟ ಮಧ್ಯಮ ಕ್ರಮಾಂಕ

ಹೀಗಾಗಿ ತಂಡಕ್ಕೆ 100 ರನ್​ಗಳನ್ನು ಪೂರೈಸಲು 14 ಓವರ್​ಗಳು ಬೇಕಾದವು. ನಾಲ್ಕನೇ ವಿಕೆಟ್​ಗೆ ಜೊತೆಯಾದ ದುಬೆ ಹಾಗೂ ನಾಯಕ ಶ್ರೇಯಸ್ ಅಯ್ಯರ್ 50 ರನ್​ಗಳ ಜೊತೆಯಾಟದೊಂದಿಗೆ ತಂಡವನ್ನು 100 ರನ್​ಗಳ ಗಡಿ ದಾಟಿಸಿದರು. ಆದರೆ ವಿಕೆಟ್ ಪತನದೊಂದಿಗೆ ಈ ಜೊತೆಯಾಟ ಮುರಿದುಬಿತ್ತು. ಉಪನಾಯಕ ತಿಲಕ್ ವರ್ಮಾ ಮತ್ತದೆ ನಿದ್ರೆ ಬರಿಸುವ ಬ್ಯಾಟಿಂಗ್‌ ಮಾಡಿ 8 ಎಸೆತಗಳಲ್ಲಿ 11 ರನ್ ಬಾರಿಸಿ ಔಟಾದರು. ಉಪನಾಯಕತ್ವವಹಿಸಿಕೊಂಡ ಬಳಿಕ ಒತ್ತಡಕ್ಕೆ ಒಳಗಾದವರಂತೆ ಕಾಣುತ್ತಿರುವ ತಿಲಕ್ ರನ್ ಗಳಿಸಲು ಪರದಾಡುತ್ತಿದ್ದಾರೆ. ಹೀಗಾಗಿ ಅವರ ಸ್ಟ್ರೈಕ್ ರೇಟ್​ ಕೂಡ ಕುಸಿತ ಕಂಡಿದೆ.

IND vs ENG: 3ನೇ ಪಂದ್ಯದಲ್ಲೂ ಮುಗ್ಗರಿಸಿದ ವೈಭವ್ ಸೂರ್ಯವಂಶಿ

ಶ್ರೇಯಸ್ ಏಕಾಂಗಿ ಹೋರಾಟ

ತಂಡದ ಬ್ಯಾಟಿಂಗ್‌ ವಿಭಾಗ ಮತ್ತೊಮ್ಮೆ ವಿಫಲವಾದಾಗ ಜವಾಬ್ದಾರಿಯುತ ಬ್ಯಾಟಿಂಗ್‌ ಮಾಡಿದ ನಾಯಕ ಶ್ರೇಯಸ್ ಅಯ್ಯರ್ ಕೊನೆಯವರೆಗೂ ಅಜೇಯರಾಗಿ ಉಳಿದು 80 ರನ್​ಗಳ ಇನ್ನಿಂಗ್ಸ್ ಆಡುವ ಮೂಲಕ ತಂಡವನ್ನು 150 ರನ್​ಗಳ ಗಡಿ ದಾಟಿಸಿದರು. ಒಂದು ವೇಳೆ ಅಯ್ಯರ್ ನೆಲಕಚ್ಚಿ ನಿಂತು ಆಡದಿದ್ದರೆ, ಈ ಪಂದ್ಯದಲ್ಲೂ ಭಾರತ ತಂಡ 100 ರನ್​ಗಳ ಗಡಿ ದಾಟುವುದು ಕಷ್ಟಕರವಾಗಿರುತ್ತಿತ್ತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:39 pm, Thu, 9 July 26

Follow Us