AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಸಿಎಸ್​ಕೆ ಸೋಲುತ್ತಿದ್ದಂತೆ ಕ್ರೀಡಾಂಗಣದಲ್ಲೇ ಕಣ್ಣೀರಿಟ್ಟ ಶೃತಿ ಹಸನ್; ವಿಡಿಯೋ ನೋಡಿ

Shruti Haasan Cries After CSK's IPL 2025 Loss: ಐಪಿಎಲ್ 2025ರ 43ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ಕೆ) ತಂಡ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಸೋಲು ಅನುಭವಿಸಿತು. ಈ ಪಂದ್ಯವನ್ನು ವೀಕ್ಷಿಸಲು ಬಂದಿದ್ದ ನಟಿ ಶ್ರುತಿ ಹಾಸನ್ ಅವರು ತಮ್ಮ ನೆಚ್ಚಿನ ತಂಡದ ಸೋಲಿಗೆ ಭಾವುಕರಾಗಿ ಕಣ್ಣೀರು ಹಾಕಿದ್ದು, ಅದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

IPL 2025: ಸಿಎಸ್​ಕೆ ಸೋಲುತ್ತಿದ್ದಂತೆ ಕ್ರೀಡಾಂಗಣದಲ್ಲೇ ಕಣ್ಣೀರಿಟ್ಟ ಶೃತಿ ಹಸನ್; ವಿಡಿಯೋ ನೋಡಿ
Shruti Haasan
ಪೃಥ್ವಿಶಂಕರ
|

Updated on:Apr 26, 2025 | 5:31 PM

Share

ಐಪಿಎಲ್ 2025 (IPL 2025) ರ 43 ನೇ ಪಂದ್ಯದಲ್ಲಿ, 5 ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ (CSK) ಮತ್ತು ಸನ್‌ರೈಸರ್ಸ್ ಹೈದರಾಬಾದ್ (SRH) ಪರಸ್ಪರ ಮುಖಾಮುಖಿಯಾಗಿದ್ದವು. ಈ ಪಂದ್ಯ ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯಿತು. ಈ ಪಂದ್ಯವನ್ನು ವೀಕ್ಷಿಸಲು ಖ್ಯಾತ ನಟಿ ಶ್ರುತಿ ಹಾಸನ್ ಕೂಡ ಕ್ರೀಡಾಂಗಣಕ್ಕೆ ಬಂದಿದ್ದರು. ಶ್ರುತಿ ಕೂಡ ತಮ್ಮ ಕೆಲವು ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ಅದರಲ್ಲಿ ಅವರು ಚೆನ್ನೈ ತಂಡ ಮತ್ತು ಮಹೇಂದ್ರ ಸಿಂಗ್ ಧೋನಿ ಅವರನ್ನು ಬೆಂಬಲಿಸುತ್ತಿರುವುದನ್ನು ಕಾಣಬಹುದಾಗಿದೆ. ಆದಾಗ್ಯೂ, ಸಿಎಸ್‌ಕೆ ಈ ಪಂದ್ಯದಲ್ಲಿ ಹೀನಾಯ ಸೋಲನ್ನು ಎದುರಿಸಬೇಕಾಯಿತು. ತನ್ನ ನೆಚ್ಚಿನ ತಂಡ ಸೋತಿದ್ದನ್ನು ನೋಡಿ ಶ್ರುತಿ ಹಸನ್ ಕೂಡ ತುಂಬಾ ಭಾವುಕರಾಗಿದ್ದು, ಕ್ರೀಡಾಂಗಣದಲ್ಲಿಯೇ ಕಣ್ಣೀರು ಹಾಕಿದ್ದಾರೆ. ಇದೀಗ ಅದರ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.

ಕ್ರೀಡಾಂಗಣದಲ್ಲಿಯೇ ಕಣ್ಣೀರು ಹಾಕಿದ ಶ್ರುತಿ

ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವಿನ ಪಂದ್ಯ ಮುಗಿದ ಬಳಿಕ ಶ್ರುತಿ ಹಸನ್ ಕಣ್ಣೀರು ಹಾಕುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇದರಲ್ಲಿ ಅವರು ತುಂಬಾ ಭಾವುಕರಾಗಿ ಕಾಣುತ್ತಿದ್ದು, ಕಣ್ಣೀರು ಒರೆಸಿಕೊಳ್ಳುತ್ತಿದ್ದಾರೆ. ತನ್ನ ನೆಚ್ಚಿನ ತಂಡ ಸೋತದ್ದನ್ನು ನೋಡಿ, ಶೃತಿ ನಿರಾಶೆಗೊಂಡಿದ್ದು, ದುಃಖ ತಡೆಯಲು ಸಾಧ್ಯವಾಗಲಿಲ್ಲ.

ಚೆನ್ನೈ ತಂಡಕ್ಕೆ ಹೀನಾಯ ಸೋಲು

ಇನ್ನು ಪಂದ್ಯದ ಬಗ್ಗೆ ಹೇಳುವುದಾದರೆ.. ಸನ್‌ರೈಸರ್ಸ್ ಹೈದರಾಬಾದ್ ತಂಡವು 8 ಎಸೆತಗಳು ಬಾಕಿ ಇರುವಂತೆಯೇ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 5 ವಿಕೆಟ್‌ಗಳಿಂದ ಸೋಲಿಸುವ ಮೂಲಕ ಇತಿಹಾಸ ನಿರ್ಮಿಸಿತು. ಟಾಸ್ ಗೆದ್ದ ಹೈದರಾಬಾದ್‌ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿ ಸಿಎಸ್​ಕೆ ತಂಡವನ್ನು ಕೇವಲ 154 ರನ್‌ಗಳಿಗೆ ಆಲೌಟ್ ಮಾಡಿತು. ಚೆನ್ನೈ ಪರ ಯುವ ಬ್ಯಾಟ್ಸ್‌ಮನ್ ಆಯುಷ್ ಮ್ಹಾತ್ರೆ 30 ರನ್ ಗಳಿಸಿದರೆ, ಡೆವಾಲ್ಡ್ ಬ್ರೆವಿಸ್ 44 ರನ್ ಗಳಿಸಿದರು. ಆದರೆ, ನಾಯಕ ಧೋನಿ 10 ಎಸೆತಗಳಲ್ಲಿ ಕೇವಲ 6 ರನ್ ಗಳಿಸಿ ನಿರಾಶೆ ಮೂಡಿಸಿದರು. ಈ ಸಣ್ಣ ಗುರಿಯನ್ನು ಹೈದರಾಬಾದ್ ತಂಡ 18.4 ಓವರ್‌ಗಳಲ್ಲಿ ಬೆನ್ನಟ್ಟಿತು. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ಮೊದಲ ಬಾರಿಗೆ ಸನ್‌ರೈಸರ್ಸ್ ಹೈದರಾಬಾದ್ ತಂಡವು ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಚೆಪಾಕ್‌ನಲ್ಲಿ ಸೋಲಿಸಿದ ದಾಖಲೆಯನ್ನು ಬರೆಯಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:28 pm, Sat, 26 April 25

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!