
ಐಪಿಎಲ್ 2025 (IPL 2025) ರ 43 ನೇ ಪಂದ್ಯದಲ್ಲಿ, 5 ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ (CSK) ಮತ್ತು ಸನ್‌ರೈಸರ್ಸ್ ಹೈದರಾಬಾದ್ (SRH) ಪರಸ್ಪರ ಮುಖಾಮುಖಿಯಾಗಿದ್ದವು. ಈ ಪಂದ್ಯ ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯಿತು. ಈ ಪಂದ್ಯವನ್ನು ವೀಕ್ಷಿಸಲು ಖ್ಯಾತ ನಟಿ ಶ್ರುತಿ ಹಾಸನ್ ಕೂಡ ಕ್ರೀಡಾಂಗಣಕ್ಕೆ ಬಂದಿದ್ದರು. ಶ್ರುತಿ ಕೂಡ ತಮ್ಮ ಕೆಲವು ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ಅದರಲ್ಲಿ ಅವರು ಚೆನ್ನೈ ತಂಡ ಮತ್ತು ಮಹೇಂದ್ರ ಸಿಂಗ್ ಧೋನಿ ಅವರನ್ನು ಬೆಂಬಲಿಸುತ್ತಿರುವುದನ್ನು ಕಾಣಬಹುದಾಗಿದೆ. ಆದಾಗ್ಯೂ, ಸಿಎಸ್‌ಕೆ ಈ ಪಂದ್ಯದಲ್ಲಿ ಹೀನಾಯ ಸೋಲನ್ನು ಎದುರಿಸಬೇಕಾಯಿತು. ತನ್ನ ನೆಚ್ಚಿನ ತಂಡ ಸೋತಿದ್ದನ್ನು ನೋಡಿ ಶ್ರುತಿ ಹಸನ್ ಕೂಡ ತುಂಬಾ ಭಾವುಕರಾಗಿದ್ದು, ಕ್ರೀಡಾಂಗಣದಲ್ಲಿಯೇ ಕಣ್ಣೀರು ಹಾಕಿದ್ದಾರೆ. ಇದೀಗ ಅದರ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.
ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವಿನ ಪಂದ್ಯ ಮುಗಿದ ಬಳಿಕ ಶ್ರುತಿ ಹಸನ್ ಕಣ್ಣೀರು ಹಾಕುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇದರಲ್ಲಿ ಅವರು ತುಂಬಾ ಭಾವುಕರಾಗಿ ಕಾಣುತ್ತಿದ್ದು, ಕಣ್ಣೀರು ಒರೆಸಿಕೊಳ್ಳುತ್ತಿದ್ದಾರೆ. ತನ್ನ ನೆಚ್ಚಿನ ತಂಡ ಸೋತದ್ದನ್ನು ನೋಡಿ, ಶೃತಿ ನಿರಾಶೆಗೊಂಡಿದ್ದು, ದುಃಖ ತಡೆಯಲು ಸಾಧ್ಯವಾಗಲಿಲ್ಲ.
Chuthi 🥵🤤 pic.twitter.com/dWEuZF5Va8
— Let’s Rakita 😈 (@ordinarygaadni) April 25, 2025
ಇನ್ನು ಪಂದ್ಯದ ಬಗ್ಗೆ ಹೇಳುವುದಾದರೆ.. ಸನ್‌ರೈಸರ್ಸ್ ಹೈದರಾಬಾದ್ ತಂಡವು 8 ಎಸೆತಗಳು ಬಾಕಿ ಇರುವಂತೆಯೇ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 5 ವಿಕೆಟ್‌ಗಳಿಂದ ಸೋಲಿಸುವ ಮೂಲಕ ಇತಿಹಾಸ ನಿರ್ಮಿಸಿತು. ಟಾಸ್ ಗೆದ್ದ ಹೈದರಾಬಾದ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿ ಸಿಎಸ್ಕೆ ತಂಡವನ್ನು ಕೇವಲ 154 ರನ್‌ಗಳಿಗೆ ಆಲೌಟ್ ಮಾಡಿತು. ಚೆನ್ನೈ ಪರ ಯುವ ಬ್ಯಾಟ್ಸ್‌ಮನ್ ಆಯುಷ್ ಮ್ಹಾತ್ರೆ 30 ರನ್ ಗಳಿಸಿದರೆ, ಡೆವಾಲ್ಡ್ ಬ್ರೆವಿಸ್ 44 ರನ್ ಗಳಿಸಿದರು. ಆದರೆ, ನಾಯಕ ಧೋನಿ 10 ಎಸೆತಗಳಲ್ಲಿ ಕೇವಲ 6 ರನ್ ಗಳಿಸಿ ನಿರಾಶೆ ಮೂಡಿಸಿದರು. ಈ ಸಣ್ಣ ಗುರಿಯನ್ನು ಹೈದರಾಬಾದ್ ತಂಡ 18.4 ಓವರ್‌ಗಳಲ್ಲಿ ಬೆನ್ನಟ್ಟಿತು. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ಮೊದಲ ಬಾರಿಗೆ ಸನ್‌ರೈಸರ್ಸ್ ಹೈದರಾಬಾದ್ ತಂಡವು ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಚೆಪಾಕ್‌ನಲ್ಲಿ ಸೋಲಿಸಿದ ದಾಖಲೆಯನ್ನು ಬರೆಯಿತು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 5:28 pm, Sat, 26 April 25