AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS 3rd ODI: ಆಸೀಸ್ ವಿರುದ್ಧದ ತೃತೀಯ ಏಕದಿನದಿಂದ ಶುಭ್​ಮನ್ ಗಿಲ್ ಔಟ್

Shubman Gill rested from third ODI: ರಾಜ್‌ಕೋಟ್‌ನಲ್ಲಿ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ ಅಂತಿಮ ಏಕದಿನ ಪಂದ್ಯದಿಂದ ಶುಭ್​ಮನ್ ಗಿಲ್ ಅವರಿಗೆ ವಿಶ್ರಾಂತಿ ನೀಡಲು ಟೀಮ್ ಮ್ಯಾನೇಜ್‌ಮೆಂಟ್ ನಿರ್ಧರಿಸಿದೆ ಎಂದು ಇಂಡಿಯನ್ ಎಕ್ಸ್​ಪ್ರೆಸ್ ವರದಿ ಮಾಡಿದೆ. ಇವರ ಜೊತೆಗೆ ಶಾರ್ದೂಲ್ ಠಾಕೂರ್ ಕೂಡ ಈ ಪಂದ್ಯದಿಂದ ಹೊರಗುಳಿಯಲಿದ್ದಾರಂತೆ.

IND vs AUS 3rd ODI: ಆಸೀಸ್ ವಿರುದ್ಧದ ತೃತೀಯ ಏಕದಿನದಿಂದ ಶುಭ್​ಮನ್ ಗಿಲ್ ಔಟ್
Shubman Gill (10)
Vinay Bhat
|

Updated on: Sep 25, 2023 | 10:07 AM

Share

ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಮೊದಲ ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸುವ ಮೂಲಕ ಭಾರತ 2-0 ಅಂತರದಿಂದ ಸರಣಿ ವಶಪಡಿಸಿಕೊಂಡಾಗಿದೆ. ಭಾನುವಾರ ಇಂದೋರ್​ನಲ್ಲಿ ನಡೆದ ದ್ವಿತೀಯ ಪಂದ್ಯದಲ್ಲಿ ಶುಭ್​ಮನ್ ಗಿಲ್ (Shubman Gill) ಹಾಗೂ ಶ್ರೇಯಸ್ ಅಯ್ಯರ್ ಅವರ ಮನಮೋಹಕ ಶತಕದ ನೆರವಿನಿಂದ ಟೀಮ್ ಇಂಡಿಯಾ ಬೃಹತ್ ಮೊತ್ತ ಕಲೆಹಾಕಿ ಜಯ ಸಾಧಿಸಿತು. ಇದೀಗ ಭಾರತ ಸರಣಿ ಕ್ಲೀನ್​ಸ್ವೀಪ್ ಮೇಲೆ ಕಣ್ಣಿದೆ. ಆದರೆ, ಇದಕ್ಕೂ ಮುನ್ನ ಬಿಗ್ ನ್ಯೂಸ್ ಹೊರಬಂದಿದ್ದು, ಶತಕವೀರ ಶುಭ್​ಮನ್ ಗಿಲ್ ಮೂರನೇ ಏಕದಿನ ಪಂದ್ಯದಲ್ಲಿ ಆಡುವುದಿಲ್ಲ.

ರಾಜ್‌ಕೋಟ್‌ನಲ್ಲಿ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ ಅಂತಿಮ ಏಕದಿನ ಪಂದ್ಯದಿಂದ ಶುಭ್​ಮನ್ ಗಿಲ್ ಅವರಿಗೆ ವಿಶ್ರಾಂತಿ ನೀಡಲು ಟೀಮ್ ಮ್ಯಾನೇಜ್‌ಮೆಂಟ್ ನಿರ್ಧರಿಸಿದೆ ಎಂದು ಇಂಡಿಯನ್ ಎಕ್ಸ್​ಪ್ರೆಸ್ ವರದಿ ಮಾಡಿದೆ. ಇವರ ಜೊತೆಗೆ ಶಾರ್ದೂಲ್ ಠಾಕೂರ್ ಕೂಡ ಈ ಪಂದ್ಯದಿಂದ ಹೊರಗುಳಿಯಲಿದ್ದಾರಂತೆ.

ಇವರಿಬ್ಬರು ಮೂರನೇ ಪಂದ್ಯದ ಸ್ಥಳವಾದ ರಾಜ್‌ಕೋಟ್‌ಗೆ ಪ್ರಯಾಣ ಬೆಳೆಸುವುದಿಲ್ಲ. ಬದಲಿಗೆ ಭಾರತವು ತಮ್ಮ ಐಸಿಸಿ ಏಕದಿನ ವಿಶ್ವಕಪ್ ಪ್ರಯಾಣವನ್ನು ಪ್ರಾರಂಭಿಸುವ ಗುವಾಹಟಿಯಲ್ಲಿ ತಂಡವನ್ನು ಸೇರಿಕೊಳ್ಳಲಿದ್ದಾರೆ ಎಂದು ವರದಿ ಆಗಿದೆ. ವಿಶ್ವಕಪ್​ಗು ಮೊದಲು ತಮ್ಮ ಆಟಗಾರರನ್ನು ತಾಜಾವಾಗಿರಿಸಲು ತಂಡದ ಮ್ಯಾನೇಜ್‌ಮೆಂಟ್ ಈರೀತಿ ಮಾಡುತ್ತಿದೆ.

ಇದನ್ನೂ ಓದಿ
Image
ಚಾಣಾಕ್ಷತನ ತೋರಲು ಯತ್ನಿಸಿ ಎಡವಟ್ಟು ಮಾಡಿಕೊಂಡ ಡೇವಿಡ್ ವಾರ್ನರ್
Image
ಭಾರತ-ಆಸ್ಟ್ರೇಲಿಯಾ ಮೂರನೇ ಏಕದಿನ ಪಂದ್ಯ ಯಾವಾಗ?, ಎಲ್ಲಿ?, ಎಷ್ಟು ಗಂಟೆಗೆ?
Image
ಒಂದೇ ಓವರ್​ನಲ್ಲಿ 4 ಸಿಕ್ಸರ್! ಸೂರ್ಯ ಸ್ಫೋಟಕ್ಕೆ ದಂಗಾದ ಗ್ರೀನ್
Image
ಎರಡನೇ ಏಕದಿನ ಬಳಿಕ ಪೋಸ್ಟ್ ಮ್ಯಾಚ್​ನಲ್ಲಿ ಕೆಎಲ್ ರಾಹುಲ್ ಆಡಿದ ಮಾತುಗಳೇನು

Asian Games 2023: ಭಾರತ- ಶ್ರೀಲಂಕಾ ನಡುವೆ ಫೈನಲ್; ಪಂದ್ಯ ಎಷ್ಟು ಗಂಟೆಗೆ ಆರಂಭ ಗೊತ್ತಾ?

ಆಸೀಸ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಗಿಲ್ 97 ಎಸೆತಗಳಲ್ಲಿ 104 ರನ್ ಚಚ್ಚಿ ಹಲವು ದಾಖಲೆ ಕೂಡ ನಿರ್ಮಾಣ ಮಾಡಿದರು. ಟೀಮ್ ಇಂಡಿಯಾ ಪರ ಅತೀ ವೇಗವಾಗಿ 6 ಶತಕಗಳನ್ನು ಬಾರಿಸಿದ ದಾಖಲೆ ಇದೀಗ ಗಿಲ್ ಪಾಲಾಗಿದೆ. ಅಂತೆಯೆ 25 ವರ್ಷ ತುಂಬುವ ಮುನ್ನ ಏಕದಿನ ಕ್ರಿಕೆಟಿನಲ್ಲಿ 5+ ಶತಕ ಸಿಡಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ ಸೇರ್ಪಡೆಯಾಗಿದ್ದಾರೆ. ಏಕದಿನ ಕ್ರಿಕೆಟ್​ನಲ್ಲಿ ಒಂದೇ ವರ್ಷ 5 ಅಥವಾ ಅದಕ್ಕಿಂತ ಹೆಚ್ಚು ಶತಕಗಳನ್ನು ಬಾರಿಸಿದ ಭಾರತದ 7ನೇ ಬ್ಯಾಟರ್ ಗಿಲ್ ಆಗಿದ್ದಾರೆ. ಇನ್ನು 2023 ರಲ್ಲಿ ಅತೀ ಹೆಚ್ಚು ಶತಕ ಬಾರಿಸಿದ ಬ್ಯಾಟರ್​ಗಳ ಪಟ್ಟಿಯಲ್ಲೂ ಶುಭ್​ಮನ್ ಗಿಲ್ ಅಗ್ರಸ್ಥಾನ ಪಡೆದುಕೊಂಡಿದ್ದಾರೆ.

ಕೊಹ್ಲಿ-ರೋಹಿತ್ ಕಮ್​ಬ್ಯಾಕ್:

ಗಿಲ್-ಠಾಕೂರ್​ಗೆ ವಿಶ್ರಾಂತಿ ನೀಡುತ್ತಿದ್ದಂತೆ ಇತ್ತ ಮೊದಲ ಎರಡು ಪಂದ್ಯದಿಂದ ಹೊರಗುಳಿದಿದ್ದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಇಂದು ತಂಡ ಸೇರಿಕೊಳ್ಳಲಿದ್ದಾರೆ. ಸೆಪ್ಟೆಂಬರ್ 25, ಸೋಮವಾರ ಇವರಿಬ್ಬರು ರಾಜ್‌ಕೋಟ್‌ನಲ್ಲಿ ಟೀಮ್ ಇಂಡಿಯಾವನ್ನು ಸೇರಿಕೊಳ್ಳಲಿದ್ದಾರೆ. ಈ ಮೂಲಕ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ಭಾರತ ತಂಡದ ನಾಯಕತ್ವವನ್ನು ವಹಿಸಿಕೊಳ್ಳಲಿದ್ದಾರೆ. ಇವರ ಜೊತೆಗೆ ಹಾರ್ದಿಕ್ ಪಾಂಡ್ಯ, ಜಸ್​ಪ್ರಿತ್ ಬುಮ್ರಾ ಮತ್ತು ಕುಲ್ದೀಪ್ ಯಾದವ್ ಕೂಡ ಕಮ್​ಬ್ಯಾಕ್ ಮಾಡುತ್ತಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಉತ್ತರ ಪ್ರದೇಶದಲ್ಲಿ ತರಬೇತಿ ವಿಮಾನ ಪತನ; ಮಹಿಳಾ ಪೈಲಟ್‌ಗೆ ಗಂಭೀರ ಗಾಯ
ಉತ್ತರ ಪ್ರದೇಶದಲ್ಲಿ ತರಬೇತಿ ವಿಮಾನ ಪತನ; ಮಹಿಳಾ ಪೈಲಟ್‌ಗೆ ಗಂಭೀರ ಗಾಯ
ಬೆಂಗಳೂರಿಗರ ಬಗ್ಗೆ ಸಚಿವ ಕೃಷ್ಣಭೈರೇಗೌಡರ ಅಂತರಾಳದ ನುಡಿಗಳು
ಬೆಂಗಳೂರಿಗರ ಬಗ್ಗೆ ಸಚಿವ ಕೃಷ್ಣಭೈರೇಗೌಡರ ಅಂತರಾಳದ ನುಡಿಗಳು
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
"ವಿಜಯೇಂದ್ರನನ್ನು ಕಿತ್ತು ಬಿಸಾಕಿ": ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯ ಸಿನೀಮಿಯ ದರೋಡೆ
ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯ ಸಿನೀಮಿಯ ದರೋಡೆ
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ಲಗೇಜ್ ಬ್ಯಾಗ್‌ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್!
ಲಗೇಜ್ ಬ್ಯಾಗ್‌ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್!
ಸಿದ್ದು ಸೈಡ್​ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು!
ಸಿದ್ದು ಸೈಡ್​ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು!
ಉದ್ಯಮಿಯಿಂದ 1.05 ಕೋಟಿ ರೂ. ದರೋಡೆ ಕೇಸಲ್ಲಿ ಐವರ ಬಂಧನ
ಉದ್ಯಮಿಯಿಂದ 1.05 ಕೋಟಿ ರೂ. ದರೋಡೆ ಕೇಸಲ್ಲಿ ಐವರ ಬಂಧನ