ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಮೊದಲ ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸುವ ಮೂಲಕ ಭಾರತ 2-0 ಅಂತರದಿಂದ ಸರಣಿ ವಶಪಡಿಸಿಕೊಂಡಾಗಿದೆ. ಭಾನುವಾರ ಇಂದೋರ್ನಲ್ಲಿ ನಡೆದ ದ್ವಿತೀಯ ಪಂದ್ಯದಲ್ಲಿ ಶುಭ್ಮನ್ ಗಿಲ್ (Shubman Gill) ಹಾಗೂ ಶ್ರೇಯಸ್ ಅಯ್ಯರ್ ಅವರ ಮನಮೋಹಕ ಶತಕದ ನೆರವಿನಿಂದ ಟೀಮ್ ಇಂಡಿಯಾ ಬೃಹತ್ ಮೊತ್ತ ಕಲೆಹಾಕಿ ಜಯ ಸಾಧಿಸಿತು. ಇದೀಗ ಭಾರತ ಸರಣಿ ಕ್ಲೀನ್ಸ್ವೀಪ್ ಮೇಲೆ ಕಣ್ಣಿದೆ. ಆದರೆ, ಇದಕ್ಕೂ ಮುನ್ನ ಬಿಗ್ ನ್ಯೂಸ್ ಹೊರಬಂದಿದ್ದು, ಶತಕವೀರ ಶುಭ್ಮನ್ ಗಿಲ್ ಮೂರನೇ ಏಕದಿನ ಪಂದ್ಯದಲ್ಲಿ ಆಡುವುದಿಲ್ಲ.
ರಾಜ್‌ಕೋಟ್‌ನಲ್ಲಿ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ ಅಂತಿಮ ಏಕದಿನ ಪಂದ್ಯದಿಂದ ಶುಭ್ಮನ್ ಗಿಲ್ ಅವರಿಗೆ ವಿಶ್ರಾಂತಿ ನೀಡಲು ಟೀಮ್ ಮ್ಯಾನೇಜ್‌ಮೆಂಟ್ ನಿರ್ಧರಿಸಿದೆ ಎಂದು ಇಂಡಿಯನ್ ಎಕ್ಸ್ಪ್ರೆಸ್ ವರದಿ ಮಾಡಿದೆ. ಇವರ ಜೊತೆಗೆ ಶಾರ್ದೂಲ್ ಠಾಕೂರ್ ಕೂಡ ಈ ಪಂದ್ಯದಿಂದ ಹೊರಗುಳಿಯಲಿದ್ದಾರಂತೆ.
ಇವರಿಬ್ಬರು ಮೂರನೇ ಪಂದ್ಯದ ಸ್ಥಳವಾದ ರಾಜ್‌ಕೋಟ್‌ಗೆ ಪ್ರಯಾಣ ಬೆಳೆಸುವುದಿಲ್ಲ. ಬದಲಿಗೆ ಭಾರತವು ತಮ್ಮ ಐಸಿಸಿ ಏಕದಿನ ವಿಶ್ವಕಪ್ ಪ್ರಯಾಣವನ್ನು ಪ್ರಾರಂಭಿಸುವ ಗುವಾಹಟಿಯಲ್ಲಿ ತಂಡವನ್ನು ಸೇರಿಕೊಳ್ಳಲಿದ್ದಾರೆ ಎಂದು ವರದಿ ಆಗಿದೆ. ವಿಶ್ವಕಪ್ಗು ಮೊದಲು ತಮ್ಮ ಆಟಗಾರರನ್ನು ತಾಜಾವಾಗಿರಿಸಲು ತಂಡದ ಮ್ಯಾನೇಜ್‌ಮೆಂಟ್ ಈರೀತಿ ಮಾಡುತ್ತಿದೆ.
Asian Games 2023: ಭಾರತ- ಶ್ರೀಲಂಕಾ ನಡುವೆ ಫೈನಲ್; ಪಂದ್ಯ ಎಷ್ಟು ಗಂಟೆಗೆ ಆರಂಭ ಗೊತ್ತಾ?
ಆಸೀಸ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಗಿಲ್ 97 ಎಸೆತಗಳಲ್ಲಿ 104 ರನ್ ಚಚ್ಚಿ ಹಲವು ದಾಖಲೆ ಕೂಡ ನಿರ್ಮಾಣ ಮಾಡಿದರು. ಟೀಮ್ ಇಂಡಿಯಾ ಪರ ಅತೀ ವೇಗವಾಗಿ 6 ಶತಕಗಳನ್ನು ಬಾರಿಸಿದ ದಾಖಲೆ ಇದೀಗ ಗಿಲ್ ಪಾಲಾಗಿದೆ. ಅಂತೆಯೆ 25 ವರ್ಷ ತುಂಬುವ ಮುನ್ನ ಏಕದಿನ ಕ್ರಿಕೆಟಿನಲ್ಲಿ 5+ ಶತಕ ಸಿಡಿಸಿದ ಬ್ಯಾಟರ್ಗಳ ಪಟ್ಟಿಯಲ್ಲಿ ಸೇರ್ಪಡೆಯಾಗಿದ್ದಾರೆ. ಏಕದಿನ ಕ್ರಿಕೆಟ್ನಲ್ಲಿ ಒಂದೇ ವರ್ಷ 5 ಅಥವಾ ಅದಕ್ಕಿಂತ ಹೆಚ್ಚು ಶತಕಗಳನ್ನು ಬಾರಿಸಿದ ಭಾರತದ 7ನೇ ಬ್ಯಾಟರ್ ಗಿಲ್ ಆಗಿದ್ದಾರೆ. ಇನ್ನು 2023 ರಲ್ಲಿ ಅತೀ ಹೆಚ್ಚು ಶತಕ ಬಾರಿಸಿದ ಬ್ಯಾಟರ್ಗಳ ಪಟ್ಟಿಯಲ್ಲೂ ಶುಭ್ಮನ್ ಗಿಲ್ ಅಗ್ರಸ್ಥಾನ ಪಡೆದುಕೊಂಡಿದ್ದಾರೆ.
ಗಿಲ್-ಠಾಕೂರ್ಗೆ ವಿಶ್ರಾಂತಿ ನೀಡುತ್ತಿದ್ದಂತೆ ಇತ್ತ ಮೊದಲ ಎರಡು ಪಂದ್ಯದಿಂದ ಹೊರಗುಳಿದಿದ್ದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಇಂದು ತಂಡ ಸೇರಿಕೊಳ್ಳಲಿದ್ದಾರೆ. ಸೆಪ್ಟೆಂಬರ್ 25, ಸೋಮವಾರ ಇವರಿಬ್ಬರು ರಾಜ್‌ಕೋಟ್‌ನಲ್ಲಿ ಟೀಮ್ ಇಂಡಿಯಾವನ್ನು ಸೇರಿಕೊಳ್ಳಲಿದ್ದಾರೆ. ಈ ಮೂಲಕ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ಭಾರತ ತಂಡದ ನಾಯಕತ್ವವನ್ನು ವಹಿಸಿಕೊಳ್ಳಲಿದ್ದಾರೆ. ಇವರ ಜೊತೆಗೆ ಹಾರ್ದಿಕ್ ಪಾಂಡ್ಯ, ಜಸ್ಪ್ರಿತ್ ಬುಮ್ರಾ ಮತ್ತು ಕುಲ್ದೀಪ್ ಯಾದವ್ ಕೂಡ ಕಮ್ಬ್ಯಾಕ್ ಮಾಡುತ್ತಾರೆ.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ