IND vs BAN: ಟಿ20 ಸರಣಿ ವೇಳೆ ಟೀಮ್ ಇಂಡಿಯಾದ ಮೂವರಿಗೆ ವಿಶ್ರಾಂತಿ ಸಾಧ್ಯತೆ
India vs Bangladesh: ಭಾರತ-ಬಾಂಗ್ಲಾದೇಶ್ ನಡುವಣ ಟೆಸ್ಟ್ ಸರಣಿಯು ಸೆಪ್ಟೆಂಬರ್ 19 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ 2 ಟೆಸ್ಟ್ ಪಂದ್ಯಗಳನ್ನಾಡಲಾಗುತ್ತಿದ್ದು, ಇದಾದ ಬಳಿಕ ಅಕ್ಟೋಬರ್ 7 ರಿಂದ ಮೂರು ಪಂದ್ಯಗಳ ಟಿ20 ಸರಣಿ ಆರಂಭವಾಗಲಿದೆ. ಈ ಸರಣಿಗೆ ಟೀಮ್ ಇಂಡಿಯಾದ ಮೂವರು ಪ್ರಮುಖ ಆಟಗಾರರು ಅಲಭ್ಯರಾಗುವ ಸಾಧ್ಯತೆಯಿದೆ.
ಭಾರತ ಮತ್ತು ಬಾಂಗ್ಲಾದೇಶ್ ನಡುವಣ ಟೆಸ್ಟ್ ಸರಣಿ ಮುಕ್ತಾಯದ ಬೆನ್ನಲ್ಲೇ ಟಿ20 ಸರಣಿ ಆರಂಭವಾಗಲಿದೆ. ಈ ಸರಣಿಯಿಂದ ಟೀಮ್ ಇಂಡಿಯಾದ ಮೂವರು ಆಟಗಾರರಿಗೆ ವಿಶ್ರಾಂತಿ ನೀಡುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ನ್ಯೂಝಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಗಮನದಲ್ಲಿಟ್ಟುಕೊಂಡು ಕೆಲ ಆಟಗಾರರಿಗೆ ವಿಶ್ರಾಂತಿ ನೀಡಲು ಬಿಸಿಸಿಐ ನಿರ್ಧರಿಸಿದೆ.
ಅದರಂತೆ ಬಾಂಗ್ಲಾದೇಶ್ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯ ಪಂದ್ಯಗಳಿಗೆ ಶುಭ್ಮನ್ ಗಿಲ್ ಅಲಭ್ಯರಾಗುವುದು ಬಹುತೇಕ ಖಚಿತ ಎನ್ನಲಾಗಿದೆ. ಹಾಗೆಯೇ ಈ ಸರಣಿಯ ವೇಳೆ ವೇಗಿಗಳಾದ ಜಸ್ಪ್ರೀತ್ ಬುಮ್ರಾ ಹಾಗೂ ಮೊಹಮ್ಮದ್ ಸಿರಾಜ್ಗೂ ವಿಶ್ರಾಂತಿ ನೀಡುವ ಸಾಧ್ಯತೆಯಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಇನ್ನು ರಿಷಭ್ ಪಂತ್ ಈ ಸರಣಿಯಿಂದ ಹೊರಗುಳಿದರೆ ವಿಕೆಟ್ ಕೀಪರ್ ಆಗಿ ಇಶಾನ್ ಕಿಶನ್ಗೆ ಅವಕಾಶ ಸಿಗುವ ಸಾಧ್ಯತೆಯಿದೆ. ಈ ಮೂಲಕ ನ್ಯೂಝಿಲೆಂಡ್ ವಿರುದ್ಧದ ಮಹತ್ವದ ಸರಣಿಗೂ ಮುನ್ನ ಭಾರತ ತಂಡದ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಲು ಬಿಸಿಸಿಐ ಪ್ಲ್ಯಾನ್ ರೂಪಿಸಿದೆ.
ಭಾರತ ಮತ್ತು ಬಾಂಗ್ಲಾದೇಶ್ ಸರಣಿ ಯಾವಾಗ ಶುರು?
ಭಾರತ-ಬಾಂಗ್ಲಾದೇಶ್ ನಡುವಣ ಟೆಸ್ಟ್ ಸರಣಿಯು ಸೆಪ್ಟೆಂಬರ್ 19 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ 2 ಟೆಸ್ಟ್ ಪಂದ್ಯಗಳನ್ನಾಡಲಾಗುತ್ತಿದ್ದು, ಇದಾದ ಬಳಿಕ ಅಕ್ಟೋಬರ್ 7 ರಿಂದ ಮೂರು ಪಂದ್ಯಗಳ ಟಿ20 ಸರಣಿ ಆರಂಭವಾಗಲಿದೆ.
ಭಾರತ vs ಬಾಂಗ್ಲಾದೇಶ್ ಸರಣಿ ವೇಳಾಪಟ್ಟಿ:
ತಂಡಗಳು | ದಿನಾಂಕ | ಸಮಯ | ಸ್ಥಳ |
1ನೇ ಟೆಸ್ಟ್, ಭಾರತ vs ಬಾಂಗ್ಲಾದೇಶ | ಗುರುವಾರ, 19 ಸೆಪ್ಟೆಂಬರ್ 2024 | 9:30 AM | ಚೆನ್ನೈ |
2ನೇ ಟೆಸ್ಟ್, ಭಾರತ vs ಬಾಂಗ್ಲಾದೇಶ | ಶುಕ್ರವಾರ, 27 ಸೆಪ್ಟೆಂಬರ್ 2024 | 9:30 AM | ಕಾನ್ಪುರ |
1ನೇ ಟಿ20, ಭಾರತ vs ಬಾಂಗ್ಲಾದೇಶ | ಸೋಮವಾರ, 7 ಅಕ್ಟೋಬರ್ 2024 | 7 PM | ಗ್ವಾಲಿಯರ್ |
2ನೇ ಟಿ20, ಭಾರತ vs ಬಾಂಗ್ಲಾದೇಶ | ಗುರುವಾರ, 10 ಅಕ್ಟೋಬರ್ 2024 | 7 PM | ದೆಹಲಿ |
3ನೇ ಟಿ20, ಭಾರತ vs ಬಾಂಗ್ಲಾದೇಶ | ಭಾನುವಾರ, 13 ಅಕ್ಟೋಬರ್ 2024 | 7 PM | ಹೈದರಾಬಾದ್ |
ಭಾರತ vs ನ್ಯೂಝಿಲೆಂಡ್ ಸರಣಿ:
ಬಾಂಗ್ಲಾದೇಶ್ ವಿರುದ್ಧ ಸರಣಿಯ ಬಳಿಕಅಕ್ಟೋಬರ್-ನವೆಂಬರ್‌ನಲ್ಲಿ ಭಾರತ ತಂಡವು ನ್ಯೂಝಿಲೆಂಡ್ ವಿರುದ್ಧ 3 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ. ಭಾರತದಲ್ಲಿ ಜರುಗಲಿರುವ ಈ ಸರಣಿಯ ವೇಳಾಪಟ್ಟಿ ಇಲ್ಲಿದೆ.
ತಂಡಗಳು | ದಿನಾಂಕ | ಸಮಯ | ಸ್ಥಳ |
1ನೇ ಟೆಸ್ಟ್, ಭಾರತ vs ನ್ಯೂಝಿಲೆಂಡ್ | ಬುಧವಾರ, 16 ಅಕ್ಟೋಬರ್ 2024 | 9:30 AM | ಬೆಂಗಳೂರು |
2ನೇ ಟೆಸ್ಟ್, ಭಾರತ vs ನ್ಯೂಝಿಲೆಂಡ್ | ಗುರುವಾರ, 24 ಅಕ್ಟೋಬರ್ 2024 | 9:30 AM | ಪುಣೆ |
3ನೇ ಟೆಸ್ಟ್, ಭಾರತ vs ನ್ಯೂಝಿಲೆಂಡ್ | ಶುಕ್ರವಾರ, 1 ನವೆಂಬರ್ 2024 | 9:30 AM | ಮುಂಬೈ |