AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಚೊಚ್ಚಲ ಟೆಸ್ಟ್ ದ್ವಿಶತಕ ಬಾರಿಸಿದ ನಾಯಕ ಶುಭ್​ಮನ್ ಗಿಲ್

Shubman Gill double century: ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಶುಭ್‌ಮನ್ ಗಿಲ್ ತಮ್ಮ ಚೊಚ್ಚಲ ಟೆಸ್ಟ್ ದ್ವಿಶತಕವನ್ನು ಗಳಿಸಿದ್ದಾರೆ. ಮೊದಲ ದಿನದ ಅಂತ್ಯದಲ್ಲಿ ಶತಕ ಗಳಿಸಿದ್ದ ಗಿಲ್, ಎರಡನೇ ದಿನ 21 ಬೌಂಡರಿ ಮತ್ತು 2 ಸಿಕ್ಸರ್‌ಗಳೊಂದಿಗೆ 311 ಎಸೆತಗಳಲ್ಲಿ 200 ರನ್ ಪೂರ್ಣಗೊಳಿಸಿದರು. ಇದರಿಂದ ಭಾರತ ತಂಡವು 400 ರನ್‌ಗಳ ಗಡಿ ದಾಟಿದೆ.

IND vs ENG: ಚೊಚ್ಚಲ ಟೆಸ್ಟ್  ದ್ವಿಶತಕ ಬಾರಿಸಿದ ನಾಯಕ ಶುಭ್​ಮನ್ ಗಿಲ್
Shubman Gill
ಪೃಥ್ವಿಶಂಕರ
|

Updated on:Jul 03, 2025 | 7:56 PM

Share

ಎಡ್ಜ್‌ಬಾಸ್ಟನ್​ನಲ್ಲಿ (Edgbaston Test) ನಡೆಯುತ್ತಿರುವ ಇಂಗ್ಲೆಂಡ್‌ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲಿ ಟೀಂ ಇಂಡಿಯಾ ನಾಯಕ ಶುಭ್​ಮನ್ ಗಿಲ್ (Shubman Gill) ದ್ವಿಶತಕ ಬಾರಿಸಿದ್ದಾರೆ. ಪಂದ್ಯದ ಎರಡನೇ ದಿನದಾಟದ ಎರಡನೇ ಸೆಷನ್​ನಲ್ಲಿ ಶುಭ್​ಮನ್ ಗಿಲ್ ತಮ್ಮ ಟೆಸ್ಟ್ ವೃತ್ತಿಜೀವನದ ಚೊಚ್ಚಲ ದ್ವಿಶತಕ ಪೂರ್ಣಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮೊದಲ ದಿನದಾಟದ ಕೊನೆಯ ಸೆಷನ್​ನಲ್ಲಿ ಶತಕ ಬಾರಿಸಿ ಅಜೇಯರಾಗಿ ಉಳಿದಿದ್ದ ಗಿಲ್, ಎರಡನೇ ದಿನದಾಟದಲ್ಲೂ ತಮ್ಮ ತಾಳ್ಮೆಯ ಆಟವನ್ನು ಮುಂದುವರೆಸಿ, ರವೀಂದ್ರ ಜಡೇಜಾ (Ravindra Jadeja) ಅವರೊಂದಿಗೆ ದ್ವಿಶತಕದ ಜೊತೆಯಾಟವನ್ನು ನಡೆಸಿದಲ್ಲದೆ, ತಂಡದ ಮೊತ್ತವನ್ನು ಸಹ 400 ರನ್​ಗಳ ಗಡಿ ದಾಟಿಸಿದರು. ಇತ್ತ ವೈಯಕ್ತಿಕವಾಗಿಯೂ 311 ಎಸೆತಗಳಲ್ಲಿ 21 ಬೌಂಡರಿ ಹಾಗೂ 2 ಸಿಕ್ಸರ್​ಗಳ ಸಹಿತ ತಮ್ಮ ಚೊಚ್ಚಲ ಟೆಸ್ಟ್ ದ್ವಿಶತಕನ್ನು ಬಾರಿಸಿದರು.

ಜಡೇಜಾ ಜೊತೆ ದ್ವಿಶತಕದ ಜೊತೆಯಾಟ

ಎರಡನೇ ಟೆಸ್ಟ್ ಪಂದ್ಯದ ಮೊದಲ ದಿನದಾಟ ಮುಗಿಯುವ ವೇಳೆಗೆ114 ರನ್ ಬಾರಿಸಿ ಅಜೇಯರಾಗಿ ಉಳಿದಿದ್ದ ಶುಭಮನ್ ಗಿಲ್, ಇಲ್ಲಿಂದ ಎರಡನೇ ದಿನದಾಟವನ್ನು ಮುಂದುವರಿಸಿದರು. ಗಿಲ್​ಗೆ ಉತ್ತಮ ಸಾಥ್ ನೀಡಿದ ರವೀಂದ್ರ ಜಡೇಜಾ ಶತಕ ವಂಚಿತರಾದರೂ ತಂಡವನ್ನು 400 ರನ್​ಗಳ ಗಡಿ ದಾಟಿಸುವಲ್ಲಿ ಯಶಸ್ವಿಯಾದರು. ಹಾಗೆಯೇ ಇಬ್ಬರಿಬ್ಬರ ನಡುವೆ 6ನೇ ವಿಕೆಟ್​ಗೆ 213 ರನ್​ಗಳ ಜೊತೆಯಾಟ ಕೂಡ ಮೂಡಿಬಂತು. ಆದಾಗ್ಯೂ ಜಡೇಜಾ ತಮ್ಮ ಇನ್ನಿಂಗ್ಸ್​ನಲ್ಲಿ 137 ಎಸೆತಗಳನ್ನು ಎದುರಿಸಿ 10 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ 89 ರನ್ ಬಾರಿಸಿ ಔಟಾದರು. ಜಡೇಜಾ ಔಟಾದ ಬಳಿಕ ಬಂದ ವಾಷಿಂಗ್ಟನ್ ಸುಂದರ್, ನಾಯಕನಿಗೆ ಬೆಂಬಲವಾಗಿ ನಿಂತರು.

ಅಜರುದ್ದೀನ್ ದಾಖಲೆ ಉಡೀಸ್

ದ್ವಿಶತಕ ಬಾರಿಸುವುದರೊಂದಿಗೆ ಗಿಲ್, ಈಗ ಇಂಗ್ಲೆಂಡ್ ನೆಲದಲ್ಲಿ ಅತಿದೊಡ್ಡ ಇನ್ನಿಂಗ್ಸ್ ಆಡಿದ ಭಾರತೀಯ ನಾಯಕ ಎನಿಸಿಕೊಂಡಿದ್ದಾರೆ. ಈ ಮೂಲಕ, 1990 ರಲ್ಲಿ 179 ರನ್ ಬಾರಿಸಿದ್ದ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಅವರ ದಾಖಲೆಯನ್ನು ಸಹ ಮುರಿದರು. ಇದರ ಜೊತೆಗೆ ಇಂಗ್ಲೆಂಡ್‌ನಲ್ಲಿ ಅತಿದೊಡ್ಡ ಇನ್ನಿಂಗ್ಸ್ ಆಡಿದ ಭಾರತೀಯ ನಾಯಕ ಮತ್ತು ಇಂಗ್ಲಿಷ್ ನೆಲದಲ್ಲಿ ದ್ವಿಶತಕ ಸಿಡಿಸಿದ ಮೊದಲ ಭಾರತೀಯ ನಾಯಕ ಎನಿಸಿಕೊಂಡಿದ್ದಾರೆ. ಇದು ಕೂಡ ಒಂದು ವಿಶೇಷ ದಾಖಲೆಯಾಗಿದೆ.

ಅತ್ಯಂತ ಕಿರಿಯ ನಾಯಕ

ಹಾಗೆಯೇ ಗಿಲ್, ಟೆಸ್ಟ್‌ನಲ್ಲಿ ದ್ವಿಶತಕ ಬಾರಿಸಿದ ಭಾರತದ ಎರಡನೇ ಅತ್ಯಂತ ಕಿರಿಯ ನಾಯಕ ಎನಿಸಿಕೊಂಡಿದ್ದಾರೆ. ಈ ವಿಷಯದಲ್ಲಿ ಅವರು ಸಚಿನ್ ತೆಂಡೂಲ್ಕರ್ ಮತ್ತು ವಿರಾಟ್ ಕೊಹ್ಲಿ ಅವರನ್ನು ಹಿಂದಿಕ್ಕಿದ್ದಾರೆ. ಗಿಲ್ 25 ವರ್ಷ 298 ದಿನಗಳಲ್ಲಿ ಈ ಸಾಧನೆ ಮಾಡಿದ್ದಾರೆ. ಭಾರತದ ಪರ ಟೆಸ್ಟ್‌ನಲ್ಲಿ ದ್ವಿಶತಕ ಸಿಡಿಸಿದ ಅತ್ಯಂತ ಕಿರಿಯ ನಾಯಕನ ದಾಖಲೆ ಎಂ. ಪಟೌಡಿ ಅವರ ಹೆಸರಿನಲ್ಲಿದ್ದು, 1964 ರಲ್ಲಿ ದೆಹಲಿಯಲ್ಲಿ ನಡೆದಿದ್ದ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಈ ಸಾಧನೆ ಮಾಡಿದರು. ಪಟೌಡಿ 23 ವರ್ಷ 39 ದಿನಗಳಲ್ಲಿ ನಾಯಕನಾಗಿ ಟೆಸ್ಟ್‌ನಲ್ಲಿ ದ್ವಿಶತಕ ಸಿಡಿಸಿದ್ದರು.

IND vs ENG: ಚೊಚ್ಚಲ ಟೆಸ್ಟ್ ದ್ವಿಶತಕ ಬಾರಿಸಿದ ನಾಯಕ ಶುಭ್​ಮನ್ ಗಿಲ್

1999 ರಲ್ಲಿ ನಡೆದಿದ್ದ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್‌ನಲ್ಲಿ ಸಚಿನ್ ತೆಂಡೂಲ್ಕರ್ ನಾಯಕನಾಗಿ ದ್ವಿಶತಕ ಬಾರಿಸಿದ್ದರು. ಆ ಸಮಯದಲ್ಲಿ ಅವರ ವಯಸ್ಸು 26 ವರ್ಷ 189 ದಿನಗಳಾಗಿದ್ದವು. ಮತ್ತೊಂದೆಡೆ, ಕೊಹ್ಲಿ 2016 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ನಾಯಕನಾಗಿ ದ್ವಿಶತಕ ಬಾರಿಸಿದ್ದರು. ಆಗ ಕೊಹ್ಲಿಯ ವಯಸ್ಸು 27 ವರ್ಷ ಮತ್ತು 260 ದಿನಗಳಾಗಿದ್ದವು. ಒಟ್ಟಾರೆಯಾಗಿ 11 ನಾಯಕರು ಇಂಗ್ಲೆಂಡ್‌ನಲ್ಲಿ ದ್ವಿಶತಕ ಸಿಡಿಸಿದ್ದಾರೆ. ಅದರಲ್ಲಿ ನಾಲ್ವರು ಆತಿಥೇಯ ತಂಡದವರಾಗಿದ್ದರೆ, ಏಳು ನಾಯಕರು ಪ್ರವಾಸಿ ತಂಡದವರಾಗಿದ್ದಾರೆ. ಇಂಗ್ಲೆಂಡ್‌ನಲ್ಲಿ ನಾಯಕನಾಗಿ ಅತ್ಯಂತ ಕಿರಿಯ ವಯಸ್ಸಿನಲ್ಲಿ ದ್ವಿಶತಕ ಗಳಿಸಿದವರಲ್ಲಿ ಗ್ರೇಮ್ ಸ್ಮಿತ್ ಮಾತ್ರ ಗಿಲ್‌ಗಿಂತ ಮುಂದಿದ್ದಾರೆ. ಸ್ಮಿತ್ 2003 ರಲ್ಲಿ 22 ವರ್ಷ ಮತ್ತು 175 ದಿನಗಳಲ್ಲಿ ಈ ಸಾಧನೆ ಮಾಡಿದ್ದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:57 pm, Thu, 3 July 25

ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ