ICC World Cup: ವಿಶ್ವಕಪ್ ಮೊದಲ ಪಂದ್ಯಕ್ಕೂ ಮುನ್ನ ಭಾರತಕ್ಕೆ ಶಾಕ್: ಶುಭ್​ಮನ್ ಗಿಲ್​ಗೆ ಡೆಂಗ್ಯೂ ಸೋಂಕು ದೃಢ

Shubman Gill is suffering from dengue: ಭಾರತ ತಂಡದ ಸ್ಟಾರ್ ಇನ್​-ಫಾರ್ಮ್​ ಬ್ಯಾಟರ್ ಶುಭ್​ಮನ್ ಗಿಲ್ ಅವರಿಗೆ ಡೆಂಘೀ ಸೋಂಕು ದೃಢ ಪಟ್ಟಿದೆ. 24ರ ಹರೆಯದ ಗಿಲ್ ಏಕದಿನ ವಿಶ್ವಕಪ್​ನಲ್ಲಿ ಭಾನುವಾರ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ ಮೊದಲ ವಿಶ್ವಕಪ್ ಪಂದ್ಯದಲ್ಲಿ ಆಡುವ ಸಾಧ್ಯತೆಯಿಲ್ಲ ಎಂದು ಹೇಳಲಾಗಿದೆ.

ICC World Cup: ವಿಶ್ವಕಪ್ ಮೊದಲ ಪಂದ್ಯಕ್ಕೂ ಮುನ್ನ ಭಾರತಕ್ಕೆ ಶಾಕ್: ಶುಭ್​ಮನ್ ಗಿಲ್​ಗೆ ಡೆಂಗ್ಯೂ ಸೋಂಕು ದೃಢ
Shubman Gill
Follow us
Vinay Bhat
|

Updated on:Oct 06, 2023 | 8:46 AM

ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗೆ ಚಾಲನೆ ಸಿಕ್ಕಾಗಿದೆ. ಭಾರತ ತಂಡ ಅಕ್ಟೋಬರ್ 8 ರಂದು ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ ವಿರುದ್ಧ ಆಡುವ ಮೂಲಕ ತನ್ನ ಅಭಿಯಾನ ಆರಂಭಿಸಲಿದೆ. ಆದರೆ, ಈ ಮೊದಲ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾಕ್ಕೆ ದೊಡ್ಡ ಆಘಾತ ಉಂಟಾಗಿದೆ. ತಂಡದ ಸ್ಟಾರ್ ಇನ್​-ಫಾರ್ಮ್​ ಬ್ಯಾಟರ್ ಶುಭ್​ಮನ್ ಗಿಲ್ (Shubman Gill) ಅವರಿಗೆ ಡೆಂಘೀ ಸೋಂಕು ದೃಢ ಪಟ್ಟಿದೆ. 24ರ ಹರೆಯದ ಗಿಲ್ ಭಾನುವಾರ ಆಸ್ಟ್ರೇಲಿಯಾ ವಿರುದ್ಧದ ಮೊದಲ ವಿಶ್ವಕಪ್ ಪಂದ್ಯದಲ್ಲಿ ಆಡುವ ಸಾಧ್ಯತೆಯಿಲ್ಲ ಎಂದು ಹೇಳಲಾಗಿದೆ. ನಿನ್ನೆ ತರಬೇತಿ ಅವಧಿಯಲ್ಲಿ ಗಿಲ್ ಅವರು ಡೆಂಗ್ಯೂನಿಂದ ಬಳಲುತ್ತಿದ್ದರು ಎಂದು ವರದಿ ಆಗಿದೆ.

2023 ರ ಏಕದಿನ ಕ್ರಿಕೆಟ್​ನಲ್ಲಿ ಭಾರತದ ಪರ ಅತಿ ಹೆಚ್ಚು ರನ್ ಗಳಿಸಿದ ಗಿಲ್, ವಿಶ್ವಕಪ್ ಮೊದಲ ಪಂದ್ಯದಿಂದ ಮಾರಕವಾಗಲಿದ್ದಾರೆ ಎಂದು ನಂಬಲಾಗಿತ್ತು. ಆದರೀಗ ಇವರ ಅನುಪಸ್ಥಿತಿ ತಂಡಕ್ಕೆ ದೊಡ್ಡ ಹೊಡೆತ ಬಿದ್ದಿದೆ. ಇವರ ಬದಲು ಆಸ್ಟ್ರೇಲಿಯಾ ವಿರುದ್ಧದ ಮೊದಲ ಪಂದ್ಯದಲ್ಲಿ ಇಶಾನ್ ಕಿಶನ್ ಆಡುವ ಸಾಧ್ಯತೆ ಇದೆ.

ICC World Cup: ಕ್ಯಾಪ್ಟನ್ಸಿ ಡೇಯಲ್ಲಿ ಗರಂ ಆದ ರೋಹಿತ್: ವರದಿಗಾರರ ಪ್ರಶ್ನೆಗೆ ಹಿಟ್​ಮ್ಯಾನ್ ಖಡಕ್ ಉತ್ತರ

ಇದನ್ನೂ ಓದಿ
Image
ಭಾರತದ ಬೌಲಿಂಗ್ ದಾಳಿಗೆ ಬಾಂಗ್ಲಾ ತತ್ತರ: ರುತುರಾಜ್ ಪಡೆಗೆ ಸುಲಭ ಟಾರ್ಗೆಟ್
Image
ಟೀಮ್ ಇಂಡಿಯಾ ಟ್ರೈನಿಂಗ್ ಸೆಷನ್​ನಿಂದ ಬಯಲಾಯಿತು ದೊಡ್ಡ ಸುದ್ದಿ
Image
ವಿಶ್ವಕಪ್​ನಲ್ಲಿಂದು ಪಾಕಿಸ್ತಾನ-ನೆದರ್ಲೆಂಡ್ಸ್ ಮುಖಾಮುಖಿ
Image
ಏಷ್ಯನ್ ಗೇಮ್ಸ್ ಸೆಮಿ ಫೈನಲ್: ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ

ಗಿಲ್ ಅವರು ತೀವ್ರ ಜ್ವರದಿಂದ ಬಳಲುತ್ತಿದ್ದಾರೆ ಎಂದು ವರದಿಯಾಗಿದೆ. ಗಿಲ್ ಅವರನ್ನು ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಿಂದ ಕೈಬಿಡುವ ಮೊದಲು ಇಂದು ಮತ್ತೊಮ್ಮೆ ಡೆಂಗ್ಯೂ ಪರೀಕ್ಷೆಗೆ ಒಳಗಾಗಲಿದ್ದಾರೆ. ಜ್ವರ ತೀವ್ರವಾಗಿದ್ದರೆ ಗಿಲ್ ಮೊದಲ ಎರಡು ಪಂದ್ಯಗಳನ್ನು ಕಳೆದುಕೊಳ್ಳಬಹುದು. “ಚೆನ್ನೈಗೆ ಬಂದಿಳಿದ ನಂತರ ಶುಭ್‌ಮನ್‌ಗೆ ತೀವ್ರ ಜ್ವರವಿತ್ತು. ಈ ಕುರಿತು ಪರೀಕ್ಷೆಗಳು ನಡೆಯುತ್ತಿವೆ. ಶುಕ್ರವಾರ ಟೆಸ್ಟ್ ನಡೆಸಿ ಆರಂಭಿಕ ಪಂದ್ಯದಲ್ಲಿ ಭಾಗವಹಿಸುವ ಕುರಿತು ಅಂತಿಮ ಕರೆ ತೆಗೆದುಕೊಳ್ಳಲಾಗುವುದು” ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

ದೇಶಾದ್ಯಂತ ಡೆಂಗ್ಯೂ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ತಿಂಗಳ ಆರಂಭದಲ್ಲಿ ಇದರ ಬಗ್ಗೆ ಭಾರತದ ಕೇಂದ್ರ ಆರೋಗ್ಯ ಸಚಿವ ಡಾ. ಮನ್ಸುಖ್ ಮಾಂಡವಿಯಾ ಅವರು ಉನ್ನತ ಮಟ್ಟದ ಸಭೆ ನಡೆಸಿ ಮುಂಜಾಗ್ರತೆ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರು.

ವಿಶ್ವಕಪ್​ಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪ ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಇಶಾನ್ ಕಿಶನ್, ಸೂರ್ಯ ಕುಮಾರ್ ಯಾದವ್.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:31 am, Fri, 6 October 23

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್