AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾಪ್ಟನ್ ಕಿಂಗ್: ಇತಿಹಾಸದ ನಿರ್ಮಿಸಿದ ಶುಭ್​ಮನ್ ಗಿಲ್

India vs England Test: ಭಾರತ ಮತ್ತು ಇಂಗ್ಲೆಂಡ್ ನಡುವಣ 5 ಪಂದ್ಯಗಳ ಟೆಸ್ಟ್ ಸರಣಿಯ ದ್ವಿತೀಯ ಮ್ಯಾಚ್ ನಲ್ಲಿ ಟೀಮ್ ಇಂಡಿಯಾ ಗೆಲುವು ದಾಖಲಿಸಿದೆ. ಇದಕ್ಕೂ ಮುನ್ನ ಹೆಡಿಂಗ್ಲೆಯಲ್ಲಿ ನಡೆದ ಮೊದಲ ಟೆಸ್ಟ್ ನಲ್ಲಿ ಇಂಗ್ಲೆಂಡ್ ಜಯ ಸಾಧಿಸಿತ್ತು‌. ಇದೀಗ ದ್ವಿತೀಯ ಪಂದ್ಯ ಗೆದ್ದು ಟೀಮ್ ಇಂಡಿಯಾ 1-1 ಅಂತರದಿಂದ ಸರಣಿಯಲ್ಲಿ ಸಮಬಲ ಸಾಧಿಸಿದೆ.

ಕ್ಯಾಪ್ಟನ್ ಕಿಂಗ್: ಇತಿಹಾಸದ ನಿರ್ಮಿಸಿದ ಶುಭ್​ಮನ್ ಗಿಲ್
Shubman Gill
ಝಾಹಿರ್ ಯೂಸುಫ್
|

Updated on:Jul 07, 2025 | 7:38 AM

Share

ಸುನಿಲ್ ಗಾವಸ್ಕರ್, ಕಪಿಲ್ ದೇವ್, ಇಮ್ರಾನ್ ಖಾನ್, ಇಂಝಮಾಮ್ ಉಲ್ ಹಕ್, ಸೌರವ್ ಗಂಗೂಲಿ, ಮಹೇಲ ಜಯವರ್ಧನೆ, ಮಹೇಂದ್ರ ಸಿಂಗ್ ಧೋನಿ, ವಿರಾಟ್ ಕೊಹ್ಲಿ ಸೇರಿದಂತೆ ಏಷ್ಯಾದ ಯಾವುದೇ ನಾಯಕನಿಗೆ ಸಾಧ್ಯವಾಗದ ಅಭೂತಪೂರ್ವ ಗೆಲುವೊಂದನ್ನು ಟೀಮ್ ಇಂಡಿಯಾದ ಯಂಗ್ ಕ್ಯಾಪ್ಟನ್ ಶುಭ್​ಮನ್ ಗಿಲ್ ತಮ್ಮದಾಗಿಸಿಕೊಂಡಿದ್ದಾರೆ. ಅದು ಕೂಡ ಬರೋಬ್ಬರಿ 336 ರನ್ ಗಳ ಅಮೋಘ ಗೆಲುವಿನೊಂದಿಗೆ..!

ಹೌದು, ಬರ್ಮಿಂಗ್ಹ್ಯಾಮ್​ನ ಎಡ್ಜ್​ಬಾಸ್ಟನ್ ಸ್ಟೇಡಿಯಂನಲ್ಲಿ ಟೆಸ್ಟ್ ಪಂದ್ಯ ಗೆದ್ದ ಏಷ್ಯಾದ ಮೊದಲ ನಾಯಕ ಶುಭ್ ಮನ್ ಗಿಲ್. ಕಳೆದ 58 ವರ್ಷಗಳಿಂದ ಏಷ್ಯಾ ತಂಡಗಳ ಪಾಲಿಗೆ ಮರೀಚಿಕೆಯಾಗಿದ್ದ ಗೆಲುವನ್ನು ಟೀಮ್ ಇಂಡಿಯಾ ತನ್ನದಾಗಿಸಿಕೊಂಡಿದೆ.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತದ ಪರ ನಾಯಕ ಶುಭ್​ಮನ್ ಗಿಲ್ 269 ರನ್ ಗಳ ಭರ್ಜರಿ ಇನಿಂಗ್ಸ್ ಆಡಿದ್ದರು. ಈ ಮೂಲಕ ಟೀಮ್ ಇಂಡಿಯಾ ಮೊದಲ ಇನಿಂಗ್ಸ್ ನಲ್ಲಿ 587 ರನ್ ಕಲೆಹಾಕಿತು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ಇಂಗ್ಲೆಂಡ್ ವಿರುದ್ಧ ಮೊಹಮ್ಮದ್ ಸಿರಾಜ್ ಮಾರಕ ದಾಳಿ ಸಂಘಟಿಸಿ 6 ವಿಕೆಟ್ ಕಬಳಿಸಿದರು. ಪರಿಣಾಮ ಇಂಗ್ಲೆಂಡ್ ತಂಡದ ಮೊದಲ ಇನಿಂಗ್ಸ್ 407 ರನ್ ಗಳಿಗೆ ಅಂತ್ಯಗೊಂಡಿತು.

180 ರನ್ ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಪರ ಗಿಲ್ 161 ರನ್ ಬಾರಿಸಿದರು. ಈ ಮೂಲಕ ಭಾರತ ತಂಡ ದ್ವಿತೀಯ ಇನಿಂಗ್ಸ್ ನಲ್ಲಿ 427 ರನ್ ಗಳಿಸಿ ಡಿಕ್ಲೇರ್ ಘೋಷಿಸಿದೆ.

ಮೊದಲ ಇನಿಂಗ್ಸ್ ನಲ್ಲಿನ 180 ರನ್ ಗಳ ಹಿನ್ನಡೆಯೊಂದಿಗೆ 608 ರನ್​ಗಳ ಗುರಿ ಪಡೆದ ಇಂಗ್ಲೆಂಡ್ ಪಾಲಿಗೆ ಆಕಾಶ್ ದೀಪ್ ಮಾರಕವಾಗಿ ಪರಿಣಮಿಸಿದರು. 6 ವಿಕೆಟ್ ಕಬಳಿಸಿ ಮಿಂಚಿದ ಆಕಾಶ್ ದೀಪ್ ಇಂಗ್ಲೆಂಡ್ ತಂಡವನ್ನು ದ್ವಿತೀಯ ಇನಿಂಗ್ಸ್ ನಲ್ಲಿ 271 ರನ್ ಗಳಿಗೆ ಆಲೌಟ್ ಮಾಡುವಲ್ಲಿ ಯಶಸ್ವಿಯಾದರು. ಈ ಮೂಲಕ ಟೀಮ್ ಇಂಡಿಯಾ ಬರೋಬ್ಬರಿ 336 ರನ್ ಗಳ ಐತಿಹಾಸಿಕ ಗೆಲುವು ದಾಖಲಿಸಿತು.

ಈ ಐತಿಹಾಸಿಕ ಜಯದೊಂದಿಗೆ ಎಡ್ಜ್​ಬಾಸ್ಟನ್ ಮೈದಾನದಲ್ಲಿ ಇಂಗ್ಲೆಂಡ್ ತಂಡಕ್ಕೆ ಸೋಲುಣಿಸಿದ ಏಷ್ಯಾದ ಮೊದಲ ನಾಯಕ ಎಂಬ ಹೆಗ್ಗಳಿಕೆಯನ್ನು ಶುಭ್ ಮನ್ ಗಿಲ್ ತಮ್ಮದಾಗಿಸಿಕೊಂಡರು.

ಭಾರತ ಪ್ಲೇಯಿಂಗ್ ಇಲೆವೆನ್: ಕೆಎಲ್ ರಾಹುಲ್, ಯಶಸ್ವಿ ಜೈಸ್ವಾಲ್, ಕರುಣ್ ನಾಯರ್, ಶುಭ್​ಮನ್ ಗಿಲ್, ರಿಷಭ್ ಪಂತ್, ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ನಿತೀಶ್ ಕುಮಾರ್ ರೆಡ್ಡಿ, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.

ಇದನ್ನೂ ಓದಿ: IPL 2026: CSK ತಂಡಕ್ಕೆ ಸಂಜು ಸ್ಯಾಮ್ಸನ್ ಎಂಟ್ರಿ ಬಹುತೇಕ ಖಚಿತ

ಇಂಗ್ಲೆಂಡ್ ಪ್ಲೇಯಿಂಗ್ ಇಲೆವೆನ್: ಝಾಕ್ ಕ್ರಾಲಿ, ಬೆನ್ ಡಕೆಟ್, ಒಲೀ ಪೋಪ್, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್ (ನಾಯಕ), ಜೇಮಿ ಸ್ಮಿತ್ (ವಿಕೆಟ್ ಕೀಪರ್), ಕ್ರಿಸ್ ವೋಕ್ಸ್, ಬ್ರೈಡನ್ ಕಾರ್ಸ್, ಜೋಶ್ ಟಂಗ್, ಶೋಯೆಬ್ ಬಶೀರ್.

Published On - 7:35 am, Mon, 7 July 25

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ