IND vs AUS, WTC Final 2023: ಅಭ್ಯಾಸಕ್ಕಿಳಿದ ರಹಾನೆ, ಜಡೇಜಾ, ಗಿಲ್: ವೈರಲ್ ಆಗುತ್ತಿದೆ ಫೋಟೋ

WTC Final 2023: ಐಪಿಎಲ್ 2023 ಫೈನಲ್ ಪಂದ್ಯ ಮುಗಿದ ಬಳಿಕ ಕೊನೆಯ ಬ್ಯಾಚ್ ಆಗಿ ಲಂಡನ್ ತಲುಪಿರುವ ಅಜಿಂಕ್ಯಾ ರಹಾನೆ, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ ಹಾಗೂ ಶುಭ್​ಮನ್ ಗಿಲ್ ಇದೀಗ ಪ್ರ್ಯಾಕ್ಟೀಸ್ ಶುರು ಮಾಡಿಕೊಂಡಿದ್ದಾರೆ.

IND vs AUS, WTC Final 2023: ಅಭ್ಯಾಸಕ್ಕಿಳಿದ ರಹಾನೆ, ಜಡೇಜಾ, ಗಿಲ್: ವೈರಲ್ ಆಗುತ್ತಿದೆ ಫೋಟೋ
Jadeja Rahane and Gill
Follow us
Vinay Bhat
|

Updated on: Jun 02, 2023 | 10:27 AM

ಇಂಡಿಯನ್ ಪ್ರೀಮಿಯರ್ ಲೀಗ್ 2023 (IPL 2023) ಮುಗಿದ ಬಳಿಕ ಭಾರತ ಕ್ರಿಕೆಟ್ ತಂಡದ ಆಟಗಾರರು ಬಹುನಿರೀಕ್ಷಿತ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್​ಗೆ (WTC Final 2023) ತಯಾರಿ ನಡೆಸುತ್ತಿದ್ದಾರೆ. ಜೂನ್ 7ಕ್ಕೆ ಲಂಡನ್​ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ಈ ಪಂದ್ಯ ಶುರುವಾಗಲಿದೆ. ಈಗಾಗಲೇ ಟೀಮ್ ಇಂಡಿಯಾದ ಎಲ್ಲ ಆಟಗಾರರು ಇಂಗ್ಲೆಂಡ್​ಗೆ ತಲುಪಿದ್ದು ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ. 2021ರಲ್ಲಿ ನಡೆದಿದ್ದ ಮೊದಲ ಆವೃತ್ತಿಯ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲೆಂಡ್‌ ಎದುರು ಮುಗ್ಗರಿಸಿತ್ತು. ಇದೀಗ ಟೀಮ್ ಇಂಡಿಯಾ (Team India) ಮತ್ತೊಮ್ಮೆ ಫೈನಲ್‌ಗೆ ದಾಪುಗಾಲಿಟ್ಟಿದ್ದು, ಅಪಾಯಕಾರಿ ಆಸ್ಟ್ರೇಲಿಯಾ ತಂಡದ ಸವಾಲೆದುರಿಸಲಿದೆ.

ಐಪಿಎಲ್ 2023 ಫೈನಲ್ ಪಂದ್ಯ ಮುಗಿದ ಬಳಿಕ ಕೊನೆಯ ಬ್ಯಾಚ್ ಆಗಿ ಲಂಡನ್ ತಲುಪಿರುವ ಅಜಿಂಕ್ಯಾ ರಹಾನೆ, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ ಹಾಗೂ ಶುಭ್​ಮನ್ ಗಿಲ್ ಇದೀಗ ಪ್ರ್ಯಾಕ್ಟೀಸ್ ಶುರು ಮಾಡಿಕೊಂಡಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಇವರು ಅಭ್ಯಾಸ ನಡೆಸುತ್ತಿರುವ ಫೋಟೋವನ್ನು ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದೆ.

ಇದನ್ನೂ ಓದಿ
Image
IND Playing XI WTC 2023 Final: ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ ಪ್ಲೇಯಿಂಗ್ XI ಗೆ ಭಾರತದ 7 ಆಟಗಾರರು ಫಿಕ್ಸ್: ಯಾರೆಲ್ಲ ಗೊತ್ತೇ?
Image
WTC Final 2023 Live Streaming: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಭಾರತದಲ್ಲಿ ಎಷ್ಟು ಗಂಟೆಗೆ ಶುರು?, ನೇರ ಪ್ರಸಾರ ಯಾವುದರಲ್ಲಿ?
Image
WTC Final 2023: ಟೀಮ್ ಇಂಡಿಯಾಗೆ 22 ವರ್ಷದ ಬೌಲರ್​ನದ್ದೇ ಚಿಂತೆ..!
Image
WTC Final: ವಿಶ್ವ ಟೆಸ್ಟ್​​ ಚಾಂಪಿಯನ್​ಶಿಪ್​ ಫೈನಲ್​ಗೆ ಪ್ಲೇಯಿಂಗ್ ಇಲೆವೆನ್ ಹೆಸರಿಸಿದ ಹರ್ಭಜನ್ ಸಿಂಗ್

IPL 2023: RCB, CSK ಹಾಗೂ ಮುಂಬೈ ಇಂಡಿಯನ್ಸ್ ಪರ ಆಡಿದ 3 ಆಟಗಾರರು ಯಾರು ಗೊತ್ತಾ?

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, , ಪೂಜಾರ ಸೇರಿದಂತೆ ಇತರೆ ಆಟಗಾರರು ಲಂಡನ್​ನ ಅರುಂಡೆಲ್ ಕ್ಯಾಸಲ್ ಕ್ರಿಕೆಟ್ ಕ್ಲಬ್‌ನಲ್ಲಿ ಅಭ್ಯಾಸ ನಡೆಸುತ್ತಿದ್ದು, ಹೊಸ ಪರಿಸರಕ್ಕೆ ಹೊಂದಿಕೊಳ್ಳುತ್ತಿದ್ದಾರೆ.

ಇನ್ನು ಬಹುನಿರೀಕ್ಷಿತ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್‌ ಪಂದ್ಯ ಸ್ಟಾರ್‌ ಸ್ಪೋರ್ಟ್ಸ್‌ ಟೆಲಿವಿಷನ್‌ ವಾಹಿನಿಯಲ್ಲಿ ನೇರ ಪ್ರಸಾರವಾಗಲಿದೆ. ಲೈವ್‌ ಸ್ಟ್ರೀಮಿಂಗ್‌ ಡಿಸ್ನಿ ಪ್ಲಸ್‌ ಹಾಟ್‌ ಸ್ಟಾರ್‌ ಮೊಬೈಲ್‌ ಅಪ್ಲಿಕೇಷನ್‌ನಲ್ಲಿ ಲಭ್ಯವಾಗಲಿದೆ. ಐಸಿಸಿಐ ಅಧಿಕೃತ ವೆಬ್‌ಸೈಟ್‌ನಲ್ಲೂ ನೇರ ಪ್ರಸಾರ ಪಡೆಯಬಹುದಾಗಿದೆ. ಇಂಗ್ಲಿಷ್‌ ಮತ್ತು ಹಿಂದಿ ಭಾಷೆಯಲ್ಲಿ ನೇರ ಪ್ರಸಾರ ಲಭ್ಯವಾಗಲಿದೆ. ಭಾರತೀಯ ಕಾಲಮಾನದ ಪ್ರಕಾರ ಫೈನಲ್ ಪಂದ್ಯ ಮಧ್ಯಾಹ್ನ 3 ಗಂಟೆಗೆ ಶುರುವಾಗಲಿದೆ.

ಈ ಚಾಂಪಿಯನ್​ಶಿಪ್​ನ ಬಹುಮಾನದ ಮೊತ್ತವನ್ನು ಐಸಿಸಿ ಘೋಷಿಸಿದ್ದು, ಈ ಆವೃತ್ತಿಗಾಗಿ ಸುಮಾರು 29.75 ಕೋಟಿ ರೂ.ಗಳನ್ನು ಬಹುಮಾನಕ್ಕಾಗಿ ಮೀಸಲಿಟ್ಟಿದೆ. ಇದರಲ್ಲಿ 2023ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಗೆಲ್ಲುವ ತಂಡಕ್ಕೆ 13.22 ಕೋಟಿ ರೂ. ಬಹುಮಾನವಾಗಿ ಸಿಗಲಿದೆ. ಇನ್ನು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್​ನಲ್ಲಿ ಸೋತು ರನ್ನರ್​ ಅಪ್ ಎನಿಸಿಕೊಳ್ಳುವ ತಂಡ ರೂ. 6.61 ಕೋಟಿಯನ್ನು ಬಹುಮಾನವಾಗಿ ಪಡೆಯಲ್ಲಿದೆ. ಈ ಎರಡು ತಂಡಗಳನ್ನು ಹೊರತುಪಡಿಸಿ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದಿರುವ ದಕ್ಷಿಣ ಆಫ್ರಿಕಾ ತಂಡಕ್ಕೆ 3.71 ಕೋಟಿ ರೂ. ಬಹುಮಾನವಾಗಿ ಸಿಗಲಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕಾಂಗ್ರೆಸ್​ನ ನೂತನ ಪ್ರಧಾನ​ ಕಚೇರಿ‘ಇಂದಿರಾ ಭವನ’ ಉದ್ಘಾಟಿಸಿದ ಸೋನಿಯಾ
ಕಾಂಗ್ರೆಸ್​ನ ನೂತನ ಪ್ರಧಾನ​ ಕಚೇರಿ‘ಇಂದಿರಾ ಭವನ’ ಉದ್ಘಾಟಿಸಿದ ಸೋನಿಯಾ
ಹೋಲಿ ಡಿಪ್ ಆಧ್ಯಾತ್ಮಿಕ ಅನುಭೂತಿಯನ್ನು ನೀಡುತ್ತದೆ: ರಷ್ಯನ್ ಮಹಿಳೆ
ಹೋಲಿ ಡಿಪ್ ಆಧ್ಯಾತ್ಮಿಕ ಅನುಭೂತಿಯನ್ನು ನೀಡುತ್ತದೆ: ರಷ್ಯನ್ ಮಹಿಳೆ
ನೂತನ ಎಐಸಿಸಿ ಕಟ್ಟಡಕ್ಕೆ ಇಂದಿರಾ ಗಾಂಧಿ ಭವನ್ ಎಂದು ಹೆಸರಿಡಲಾಗಿದೆ
ನೂತನ ಎಐಸಿಸಿ ಕಟ್ಟಡಕ್ಕೆ ಇಂದಿರಾ ಗಾಂಧಿ ಭವನ್ ಎಂದು ಹೆಸರಿಡಲಾಗಿದೆ
ತಾರಾ ಎದುರೇ ಮೋಕ್ಷಿತಾಗೆ ಕೈ ಮುಗಿದು ಕ್ಷಮೆ ಕೇಳಿದ ಮಂಜು
ತಾರಾ ಎದುರೇ ಮೋಕ್ಷಿತಾಗೆ ಕೈ ಮುಗಿದು ಕ್ಷಮೆ ಕೇಳಿದ ಮಂಜು
Daily Devotional: ಸಾಲ ಬಾಧೆ, ಮನೆಯಲ್ಲಿನ ಸಮಸ್ಯೆಗಳಿಗೆ ಇಲ್ಲಿದೆ ಪರಿಹಾರ
Daily Devotional: ಸಾಲ ಬಾಧೆ, ಮನೆಯಲ್ಲಿನ ಸಮಸ್ಯೆಗಳಿಗೆ ಇಲ್ಲಿದೆ ಪರಿಹಾರ
Daily Horoscope: ಈ ರಾಶಿಯವರು ಇಂದು ಮಕ್ಕಳಿಂದ ಶುಭ ಸುದ್ದಿ ಕೇಳುವರು
Daily Horoscope: ಈ ರಾಶಿಯವರು ಇಂದು ಮಕ್ಕಳಿಂದ ಶುಭ ಸುದ್ದಿ ಕೇಳುವರು
ಜಾತ್ರೆಗೆ ನುಗ್ಗಿದ ಕಾರು: ಯುವತಿ ಸಾವು, 8 ಜನರಿಗೆ ಗಂಭೀರ ಗಾಯ..!
ಜಾತ್ರೆಗೆ ನುಗ್ಗಿದ ಕಾರು: ಯುವತಿ ಸಾವು, 8 ಜನರಿಗೆ ಗಂಭೀರ ಗಾಯ..!
ಸರ್ಕಾರದ ಅಸ್ಥಿಪಂಜರ ಮಾತ್ರ ಉಳಿದಿದೆ, ಸುಟ್ಟುಹೋಗೋದು ನಿಶ್ಚಿತ: ಸೋಮಣ್ಣ
ಸರ್ಕಾರದ ಅಸ್ಥಿಪಂಜರ ಮಾತ್ರ ಉಳಿದಿದೆ, ಸುಟ್ಟುಹೋಗೋದು ನಿಶ್ಚಿತ: ಸೋಮಣ್ಣ
ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಗೆ ನುಗ್ಗಿದ ಚಿರತೆ, ವಿಡಿಯೋ ನೋಡಿ
ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಗೆ ನುಗ್ಗಿದ ಚಿರತೆ, ವಿಡಿಯೋ ನೋಡಿ
ದರ್ಶನ್, ಶಿವಣ್ಣ ಬಳಿಕ ಧ್ರುವ ಸರ್ಜಾಗೆ ಮಚ್ಚು ನೀಡಿದ ಜೋಗಿ ಪ್ರೇಮ್
ದರ್ಶನ್, ಶಿವಣ್ಣ ಬಳಿಕ ಧ್ರುವ ಸರ್ಜಾಗೆ ಮಚ್ಚು ನೀಡಿದ ಜೋಗಿ ಪ್ರೇಮ್