ಇಂಡಿಯನ್ ಪ್ರೀಮಿಯರ್ ಲೀಗ್ 2023 (IPL 2023) ಮುಗಿದ ಬಳಿಕ ಭಾರತ ಕ್ರಿಕೆಟ್ ತಂಡದ ಆಟಗಾರರು ಬಹುನಿರೀಕ್ಷಿತ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ (WTC Final 2023) ತಯಾರಿ ನಡೆಸುತ್ತಿದ್ದಾರೆ. ಜೂನ್ 7ಕ್ಕೆ ಲಂಡನ್ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ಈ ಪಂದ್ಯ ಶುರುವಾಗಲಿದೆ. ಈಗಾಗಲೇ ಟೀಮ್ ಇಂಡಿಯಾದ ಎಲ್ಲ ಆಟಗಾರರು ಇಂಗ್ಲೆಂಡ್ಗೆ ತಲುಪಿದ್ದು ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ. 2021ರಲ್ಲಿ ನಡೆದಿದ್ದ ಮೊದಲ ಆವೃತ್ತಿಯ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲೆಂಡ್ ಎದುರು ಮುಗ್ಗರಿಸಿತ್ತು. ಇದೀಗ ಟೀಮ್ ಇಂಡಿಯಾ (Team India) ಮತ್ತೊಮ್ಮೆ ಫೈನಲ್‌ಗೆ ದಾಪುಗಾಲಿಟ್ಟಿದ್ದು, ಅಪಾಯಕಾರಿ ಆಸ್ಟ್ರೇಲಿಯಾ ತಂಡದ ಸವಾಲೆದುರಿಸಲಿದೆ.
ಐಪಿಎಲ್ 2023 ಫೈನಲ್ ಪಂದ್ಯ ಮುಗಿದ ಬಳಿಕ ಕೊನೆಯ ಬ್ಯಾಚ್ ಆಗಿ ಲಂಡನ್ ತಲುಪಿರುವ ಅಜಿಂಕ್ಯಾ ರಹಾನೆ, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ ಹಾಗೂ ಶುಭ್ಮನ್ ಗಿಲ್ ಇದೀಗ ಪ್ರ್ಯಾಕ್ಟೀಸ್ ಶುರು ಮಾಡಿಕೊಂಡಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಇವರು ಅಭ್ಯಾಸ ನಡೆಸುತ್ತಿರುವ ಫೋಟೋವನ್ನು ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದೆ.
IPL 2023: RCB, CSK ಹಾಗೂ ಮುಂಬೈ ಇಂಡಿಯನ್ಸ್ ಪರ ಆಡಿದ 3 ಆಟಗಾರರು ಯಾರು ಗೊತ್ತಾ?
The wait is over. Hello guys, welcome back!? #TeamIndia ??@imjadeja | @ShubmanGill | @ajinkyarahane88 | @surya_14kumar pic.twitter.com/UrVtNwAGfW
— BCCI (@BCCI) June 1, 2023
ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, , ಪೂಜಾರ ಸೇರಿದಂತೆ ಇತರೆ ಆಟಗಾರರು ಲಂಡನ್ನ ಅರುಂಡೆಲ್ ಕ್ಯಾಸಲ್ ಕ್ರಿಕೆಟ್ ಕ್ಲಬ್‌ನಲ್ಲಿ ಅಭ್ಯಾಸ ನಡೆಸುತ್ತಿದ್ದು, ಹೊಸ ಪರಿಸರಕ್ಕೆ ಹೊಂದಿಕೊಳ್ಳುತ್ತಿದ್ದಾರೆ.
Preparations, adapting to the conditions and getting into the #WTC23 Final groove ?
Hear from Paras Mhambrey, T Dilip & Vikram Rathour on #TeamIndia‘s preps ahead of the all-important clash ???? – By @RajalArora
Full Video ??https://t.co/AyJN4GzSRD pic.twitter.com/x5wRxTn99b
— BCCI (@BCCI) May 31, 2023
ಇನ್ನು ಬಹುನಿರೀಕ್ಷಿತ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯ ಸ್ಟಾರ್ ಸ್ಪೋರ್ಟ್ಸ್ ಟೆಲಿವಿಷನ್ ವಾಹಿನಿಯಲ್ಲಿ ನೇರ ಪ್ರಸಾರವಾಗಲಿದೆ. ಲೈವ್ ಸ್ಟ್ರೀಮಿಂಗ್ ಡಿಸ್ನಿ ಪ್ಲಸ್ ಹಾಟ್ ಸ್ಟಾರ್ ಮೊಬೈಲ್ ಅಪ್ಲಿಕೇಷನ್‌ನಲ್ಲಿ ಲಭ್ಯವಾಗಲಿದೆ. ಐಸಿಸಿಐ ಅಧಿಕೃತ ವೆಬ್‌ಸೈಟ್‌ನಲ್ಲೂ ನೇರ ಪ್ರಸಾರ ಪಡೆಯಬಹುದಾಗಿದೆ. ಇಂಗ್ಲಿಷ್ ಮತ್ತು ಹಿಂದಿ ಭಾಷೆಯಲ್ಲಿ ನೇರ ಪ್ರಸಾರ ಲಭ್ಯವಾಗಲಿದೆ. ಭಾರತೀಯ ಕಾಲಮಾನದ ಪ್ರಕಾರ ಫೈನಲ್ ಪಂದ್ಯ ಮಧ್ಯಾಹ್ನ 3 ಗಂಟೆಗೆ ಶುರುವಾಗಲಿದೆ.
ಈ ಚಾಂಪಿಯನ್ಶಿಪ್ನ ಬಹುಮಾನದ ಮೊತ್ತವನ್ನು ಐಸಿಸಿ ಘೋಷಿಸಿದ್ದು, ಈ ಆವೃತ್ತಿಗಾಗಿ ಸುಮಾರು 29.75 ಕೋಟಿ ರೂ.ಗಳನ್ನು ಬಹುಮಾನಕ್ಕಾಗಿ ಮೀಸಲಿಟ್ಟಿದೆ. ಇದರಲ್ಲಿ 2023ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಗೆಲ್ಲುವ ತಂಡಕ್ಕೆ 13.22 ಕೋಟಿ ರೂ. ಬಹುಮಾನವಾಗಿ ಸಿಗಲಿದೆ. ಇನ್ನು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ನಲ್ಲಿ ಸೋತು ರನ್ನರ್ ಅಪ್ ಎನಿಸಿಕೊಳ್ಳುವ ತಂಡ ರೂ. 6.61 ಕೋಟಿಯನ್ನು ಬಹುಮಾನವಾಗಿ ಪಡೆಯಲ್ಲಿದೆ. ಈ ಎರಡು ತಂಡಗಳನ್ನು ಹೊರತುಪಡಿಸಿ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದಿರುವ ದಕ್ಷಿಣ ಆಫ್ರಿಕಾ ತಂಡಕ್ಕೆ 3.71 ಕೋಟಿ ರೂ. ಬಹುಮಾನವಾಗಿ ಸಿಗಲಿದೆ.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ