AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AFG: ನಾಯಕನಾಗಿ ಚೊಚ್ಚಲ ಏಕದಿನ ಸರಣಿ ಗೆದ್ದ ಶುಭ್​ಮನ್ ಗಿಲ್

India vs Afghanistan ODI series: ಲಕ್ನೋದಲ್ಲಿ ಅಫ್ಘಾನಿಸ್ತಾನ ವಿರುದ್ಧದ ಏಕದಿನ ಪಂದ್ಯದಲ್ಲಿ ಭಾರತ 170 ರನ್‌ಗಳಿಂದ ಭರ್ಜರಿ ಜಯ ಸಾಧಿಸಿದೆ. ಇದರೊಂದಿಗೆ ಮೂರು ಪಂದ್ಯಗಳ ಸರಣಿಯನ್ನು 2-0 ಅಂತರದಿಂದ ಗೆದ್ದುಕೊಂಡಿದೆ. ಶುಭ್​ಮನ್ ಗಿಲ್ ನಾಯಕನಾಗಿ ತಮ್ಮ ಮೊದಲ ಏಕದಿನ ಸರಣಿಯನ್ನು ಗೆದ್ದು ಇತಿಹಾಸ ನಿರ್ಮಿಸಿದರು. ಭಾರತ 402 ರನ್ ಗಳಿಸಿತು. ಗುರ್ನೂರ್ ಬ್ರಾರ್ ಮತ್ತು ಅರ್ಷದೀಪ್ ಸಿಂಗ್ ತಲಾ ಮೂರು ವಿಕೆಟ್ ಪಡೆದು ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.

IND vs AFG: ನಾಯಕನಾಗಿ ಚೊಚ್ಚಲ ಏಕದಿನ ಸರಣಿ ಗೆದ್ದ ಶುಭ್​ಮನ್ ಗಿಲ್
Ind Vs Afg
ಪೃಥ್ವಿಶಂಕರ
|

Updated on:Jun 17, 2026 | 10:15 PM

Share

ಲಕ್ನೋದ ಏಕನಾ ಕ್ರಿಕೆಟ್ ಮೈದಾನದಲ್ಲಿ ನಡೆದ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಭಾರತ ತಂಡವು, ಅಫ್ಘಾನಿಸ್ತಾನವನ್ನು ((India vs Afghanistan) ) 170 ರನ್‌ಗಳಿಂದ ಸೋಲಿಸಿ ಮೂರು ಪಂದ್ಯಗಳ ಏಕದಿನ ಸರಣಿಯನ್ನು 2-0 ಅಂತರದಿಂದ ಗೆದ್ದುಕೊಂಡಿದೆ. ಇದರೊಂದಿಗೆ ಶುಭ್​ಮನ್ ಗಿಲ್ ((Shubman Gill)) ನಾಯಕನಾಗಿ ತಮ್ಮ ಮೊದಲ ಏಕದಿನ ಸರಣಿಯನ್ನು ಗೆದ್ದ ಸಾಧನೆಯನ್ನು ಮಾಡಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ 49.5 ಓವರ್‌ಗಳಲ್ಲಿ 402 ರನ್‌ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಅಫ್ಘಾನಿಸ್ತಾನ 44.3 ಓವರ್​ಗಳಲ್ಲಿ 232 ರನ್​ಗಳಿಗೆ ಆಲೌಟ್ ಆಯಿತು. ಭಾರತದ ಪರ ಬೌಲಿಂಗ್‌ನಲ್ಲಿ ಮಿಂಚಿದ ಗುರ್ನೂರ್ ಬ್ರಾರ್ ಮತ್ತು ಅರ್ಷದೀಪ್ ಸಿಂಗ್ ತಲಾ ಮೂರು ವಿಕೆಟ್‌ಗಳನ್ನು ಪಡೆದರೆ, ಪ್ರಿನ್ಸ್ ಯಾದವ್ ಎರಡು ವಿಕೆಟ್‌ಗಳನ್ನು ಪಡೆದರು.

ರೋಹಿತ್- ಗಿಲ್ ಜೊತೆಯಾಟ

ಟಾಸ್ ಸೋತು ಬ್ಯಾಟಿಂಗ್‌ ಆರಂಭಿಸಿದ ಭಾರತ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ. ರೋಹಿತ್ ಜೊತೆ ಇನ್ನಿಂಗ್ಸ್ ಆರಂಭಿಸಿದ ಯಶಸ್ವಿ ಜೈಸ್ವಾಲ್ ಕೇವಲ 4 ರನ್‌ಗಳಿಗೆ ಔಟಾದರು. ಆದರೆ ಆ ಬಳಿಕ ಜೊತೆಯಾದ ರೋಹಿತ್ ಶರ್ಮಾ ಮತ್ತು ನಾಯಕ ಶುಭ್​ಮನ್ ಗಿಲ್ ಅರ್ಧಶತಕದ ಜೊತೆಯಾಟವನ್ನಾಡುವ ಮೂಲಕ ಇನ್ನಿಂಗ್ಸ್ ಸ್ಥಿರಗೊಳಿಸಿದರು. ಆದಾಗ್ಯೂ ರೋಹಿತ್ ಶರ್ಮಾ ಕೇವಲ 2 ರನ್‌ಗಳಿಂದ ಅರ್ಧಶತಕ ವಂಚಿತರಾಗಿ, 39 ಎಸೆತಗಳಲ್ಲಿ 48 ರನ್ ಗಳಿಸಿ ವಿಕೆಟ್ ಒಪ್ಪಿಸಿದರು.

ಗಿಲ್- ಕಿಶನ್ ಶತಕ

ರೋಹಿತ್ ಔಟಾದ ನಂತರ ಬಂದ ಇಶಾನ್ ಕಿಶನ್, ಶುಭ್​ಮನ್ ಗಿಲ್ ಜೊತೆಗೂಡಿ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದರು. ಈ ಇಬ್ಬರೂ ಮೂರನೇ ವಿಕೆಟ್‌ಗೆ 141 ಎಸೆತಗಳಲ್ಲಿ 224 ರನ್​ಗಳ ಜೊತೆಯಾಟವನ್ನಾಡಿದರು. ಇದೇ ವೇಳೆ ಗಿಲ್ 77 ಎಸೆತಗಳಲ್ಲಿ ಶತಕ ಪೂರೈಸಿದರೆ, ಇತ್ತ ಇಶಾನ್ ಕಿಶನ್ ಕೇವಲ 71 ಎಸೆತಗಳಲ್ಲಿ ಶತಕ ಬಾರಿಸಿದರು. ಇಶಾನ್ ಕಿಶನ್ 125 ರನ್‌ಗಳಿಗೆ ಔಟಾದರೆ, ಗಿಲ್ 154 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಗಿಲ್ ವಿಕೆಟ್ ನಂತರ ನಂತರ ತಂಡದ ಇನ್ನಿಂಗ್ಸ್ ಕುಸಿಯಿತು. ತಂಡವು ತನ್ನ ಕೊನೆಯ ಎಂಟು ವಿಕೆಟ್‌ಗಳನ್ನು 82 ರನ್‌ಗಳಿಗೆ ಕಳೆದುಕೊಂಡಿತು. ಒಂದು ಹಂತದಲ್ಲಿ, ಭಾರತ ತಂಡ 450 ತಲುಪುತ್ತದೆ ಎಂದು ತೋರುತ್ತಿತ್ತು, ಆದರೆ 402 ರನ್ ಕಲೆಹಾಕಲಷ್ಟೇ ಶಕ್ತವಾಯಿತು.

IND vs AFG: ನಾಯಕನಾಗಿ ಮೊದಲ ಏಕದಿನ ಶತಕ ಸಿಡಿಸಿದ ಶುಭ್​ಮನ್ ಗಿಲ್

ತತ್ತರಿಸಿದ ಅಫ್ಘಾನಿಸ್ತಾನ

402 ರನ್‌ಗಳ ಗುರಿ ಬೆನ್ನಟ್ಟಿದ ಅಫ್ಘಾನಿಸ್ತಾನ ಪರ ರಹಮಾನುಲ್ಲಾ ಗುರ್ಬಾಜ್ ಮತ್ತು ಇಬ್ರಾಹಿಂ ಜದ್ರಾನ್ ಉತ್ತಮ ಆರಂಭ ನೀಡಿದರು. ಇವರಿಬ್ಬರು ಮೊದಲ ವಿಕೆಟ್‌ಗೆ 52 ರನ್‌ಗಳ ಪಾಲುದಾರಿಕೆಯನ್ನು ನೀಡಿದರು. ರಹಮಾನುಲ್ಲಾ 41 ರನ್‌ಗಳಿಗೆ ಔಟಾದರೆ, ಇಬ್ರಾಹಿಂ ಜದ್ರಾನ್ 21 ರನ್‌ಗಳಿಗೆ ಸುಸ್ತಾದರು. ಸೆಡಿಕುಲ್ಲಾ ಅಟಲ್ ಅವರ ಆಟವೂ 42 ರನ್‌ಗಳಿಗೆ ಕೊನೆಗೊಂಡಿತು. ಒಂದೆಡೆ ತಂಡದ ಪರ ರಹಮತ್ ಶಾ ಹೋರಾಟದ ಇನ್ನಿಂಗ್ಸ್ ಆಡುತ್ತಿದ್ದರೆ, ಇತ್ತ ದರ್ವಿಶ್ ರಸೂಲ್ ಗಾಯದಿಂದ ರಿಟೈರ್ಡ್ ಹರ್ಟ್​ ಆಗಿ ಡಗೌಟ್ ಸೇರಿಕೊಂಡರು. ಆ ಬಳಿಕ ಬಂದ ಹಶ್ಮತುಲ್ಲಾ ಶಾಹಿದಿ 4 ರನ್‌ಗಳಿಸಲಷ್ಟೇ ಶಕ್ತರಾದರೆ, ನಂಗಿಯಾಲಿಯಾ ಖರೋಟಿ 6, ರಶೀದ್ ಖಾನ್ 12 ಮತ್ತು ಎಎಮ್ ಗಜನ್‌ಫರ್ 1 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ರಹಮತ್ ಶಾ 89 ಎಸೆತಗಳಲ್ಲಿ 79 ರನ್‌ಗಳ ಹೋರಾಟದ ಇನ್ನಿಂಗ್ಸ್ ಮಾಡಿದರಾದರೂ ತಂಡವನ್ನು ಗೆಲುವಿನ ದಡ ಮುಟ್ಟಿಸಲು ಸಾಧ್ಯವಾಗಲಿಲ್ಲ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:42 pm, Wed, 17 June 26

Follow Us
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ