AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರಾ ಜತೆಗಿನ ಡೇಟಿಂಗ್ ಬಗ್ಗೆ ಕೇಳಿದಾಗ ಅಡ್ಡ ಗೋಡೆ ಮೇಲೆ ‘ಪ್ರೀತಿ’ ಇಟ್ಟ ಶುಭ್​ಮನ್ ಗಿಲ್

Shubman Gill: ಟೀಮ್ ಇಂಡಿಯಾದ ಯುವ ಆರಂಭಿಕ ದಾಂಡಿಗ ಶುಭ್​ಮನ್ ಗಿಲ್ ಭರ್ಜರಿ ಫಾರ್ಮ್​ನಲ್ಲಿದ್ದಾರೆ. ಬಾಂಗ್ಲಾದೇಶ್ ವಿರುದ್ಧದ ಪಂದ್ಯದಲ್ಲಿ 101 ರನ್ ಬಾರಿಸಿ ಮಿಂಚಿದ್ದ ಗಿಲ್, ಪಾಕಿಸ್ತಾನ್ ವಿರುದ್ಧದ ಮಹತ್ವದ ಪಂದ್ಯದಲ್ಲಿ 46 ರನ್​ಗಳ ಕೊಡುಗೆ ನೀಡಿದ್ದಾರೆ. ಈ ಮೂಲಕ ಭಾರತ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿರುವ ಗಿಲ್ ಇದೀಗ ಲವ್ ವಿಚಾರದಿಂದ ಸುದ್ದಿಯಲ್ಲಿದ್ದಾರೆ.

ಸಾರಾ ಜತೆಗಿನ ಡೇಟಿಂಗ್ ಬಗ್ಗೆ ಕೇಳಿದಾಗ ಅಡ್ಡ ಗೋಡೆ ಮೇಲೆ 'ಪ್ರೀತಿ' ಇಟ್ಟ ಶುಭ್​ಮನ್ ಗಿಲ್
Shubman Gill - Sara Tendulkar
ಝಾಹಿರ್ ಯೂಸುಫ್
|

Updated on:Feb 27, 2025 | 2:39 PM

Share

ಭಾರತದ ಯುವ ಕ್ರಿಕೆಟಿಗ ಶುಭಮನ್ ಗಿಲ್ (Shubman Gill) ಮತ್ತೆ ಸುದ್ದಿಯಲ್ಲಿದ್ದಾರೆ. ಆದರೆ ಈ ಬಾರಿ ತಮ್ಮ ಆಕರ್ಷಕ ಬ್ಯಾಟಿಂಗ್​ನಿಂದಲ್ಲ ಎಂಬುದಷ್ಟೇ ವ್ಯತ್ಯಾಸ. ಅಂದರೆ ಈ ಬಾರಿ ಗಿಲ್ ಹೊಸ ಸಂಗಾತಿಯ ವಿಷಯದಿಂದ ಲೈಮ್​ಲೈಟ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಹಿಂದಿನಿಂದಲೂ ಗಿಲ್ ಜತೆ ಸಚಿನ್ ತೆಂಡೂಲ್ಕರ್ ಅವರ ಪುತ್ರಿ ಸಾರಾ ತೆಂಡೂಲ್ಕರ್ ಹೆಸರು ತಳುಕು ಹಾಕಿಕೊಂಡಿತ್ತು.

ಇದಾಗ್ಯೂ ಶುಭ್​ಮನ್ ಗಿಲ್ ಎಲ್ಲೂ ಕೂಡ ತಾನು ಸಾರಾ ಜೊತೆ ಡೇಟಿಂಗ್ ಮಾಡುತ್ತಿದ್ದೀನಿ ಎಂದು ಬಹಿರಂಗವಾಗಿ ಹೇಳಿರಲಿಲ್ಲ. ಆದರೀಗ ಗಿಲ್ ನೀಡಿದ ಸಂದರ್ಶನವೊಂದರ ಹಳೆಯ ವಿಡಿಯೋ ತುಣುಕು ವೈರಲ್ ಆಗಿದೆ.

ಇದನ್ನೂ ಓದಿ
Image
ಟೀಮ್ ಇಂಡಿಯಾಗೆ ಹೊಸ ಚಿಂತೆ ಶುರು: ಅಭ್ಯಾಸಕ್ಕೆ ಇಬ್ಬರು ಆಟಗಾರರು ಗೈರು..!
Image
ICC ODI Rankings: ಟಾಪ್-10 ನಲ್ಲಿ ಟೀಮ್ ಇಂಡಿಯಾದ ನಾಲ್ವರು ಬ್ಯಾಟರ್​ಗಳು
Image
ಎಲ್ಲರೂ ಶತಕ ಬಾರಿಸಿದ್ರು... ಪಾಕಿಸ್ತಾನ್ ಬ್ಯಾಟರ್​ಗಳಿಗೆ ನಾಚಿಕೆಗೇಡು..!
Image
IPL 2025: ಐಪಿಎಲ್​ನಲ್ಲೂ ಟೀಮ್ ಇಂಡಿಯಾಗೆ ಟೆಸ್ಟ್​

ಈ ಸಂದರ್ಶನದಲ್ಲಿ ನೀವು ಸಾರಾ ಜೊತೆ ಡೇಟಿಂಗ್ ಮಾಡುತ್ತಿದ್ದೀರಾ ಎಂಬ ಪ್ರಶ್ನಿಸಲಾಗಿತ್ತು. ಈ ಪ್ರಶ್ನೆಗೆ ಗಿಲ್ ಅಡ್ಡ ಗೋಡೆ ಮೇಲೆ ‘ಪ್ರೀತಿ’ ಇಟ್ಟಿರುವುದೇ ವಿಶೇಷ. ಅಂದರೆ ಅತ್ತ ಇಲ್ಲ ಅಂದಿಲ್ಲ. ಇತ್ತ ಹೌದು ಕೂಡ ಅಂದಿಲ್ಲ. ಬದಲಾಗಿ ಬಹುಶಃ ಮಾಡುತ್ತಿರಬಹುದು ಎಂಬಾರ್ಥದಲ್ಲಿ ಉತ್ತರ ನೀಡಿದ್ದಾರೆ.

ಈ ಮೂಲಕ ಶುಭ್​ಮನ್ ಗಿಲ್ ಪರೋಕ್ಷವಾಗಿ ಸಾರಾ ಜೊತೆ ಡೇಟಿಂಗ್ ಮಾಡುತ್ತಿರುವುದನ್ನು ಬಹಿರಂಗಪಡಿಸಿದ್ದಾರೆ. ಇದೀಗ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಇದಕ್ಕೆ ಅಭಿಮಾನಿಗಳಿಂದಲೂ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

ಶುಭ್​ಮನ್ ಗಿಲ್ ಸಂದರ್ಶನದ ವಿಡಿಯೋ ತುಣುಕು:

ಶುಭ್​ಮನ್ ಶುಭಾರಂಭ:

ಇದೇ ಮೊದಲ ಬಾರಿಗೆ ಚಾಂಪಿಯನ್ಸ್ ಟ್ರೋಫಿಯಲ್ಲಿ ಕಣಕ್ಕಿಳಿದಿರುವ ಶುಭ್​ಮನ್ ಗಿಲ್ ಚೊಚ್ಚಲ ಪಂದ್ಯದಲ್ಲೇ ಶತಕ ಸಿಡಿಸಿದ್ದಾರೆ. ಬಾಂಗ್ಲಾದೇಶ್ ವಿರುದ್ಧ ನಡೆದ ಮೊದಲ ಪಂದ್ಯದಲ್ಲಿ 101 ರನ್ ಬಾರಿಸಿದ್ದ ಗಿಲ್, ಪಾಕಿಸ್ತಾನ್ ವಿರುದ್ಧ 46 ರನ್​ಗಳ ಕೊಡುಗೆ ನೀಡಿದ್ದರು.

ಇದನ್ನೂ ಓದಿ: ICC ODI Rankings: ಟಾಪ್-10 ನಲ್ಲಿ ಟೀಮ್ ಇಂಡಿಯಾದ ನಾಲ್ವರು ಬ್ಯಾಟರ್​ಗಳು

ಈ ಮೂಲಕ ಟೀಮ್ ಇಂಡಿಯಾ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿರುವ ಶುಭ್​ಮನ್ ಗಿಲ್ ವೈಯುಕ್ತಿಕ ವಿಷಯದಿಂದ ಸೋಷಿಯಲ್ ಮೀಡಿಯಾದಲ್ಲಿ ಹಲ್​ಚಲ್ ಎಬ್ಬಿಸಿದ್ದಾರೆ.

Published On - 2:30 pm, Thu, 27 February 25

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ