AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಗ್ಲೆಂಡ್‌ನಲ್ಲಿ ಒಟ್ಟಿಗೆ ಕಾಣಿಸಿಕೊಂಡ ಗಿಲ್-ಸಾರಾ; ಫೋಟೋ ನೋಡಿ

Shubman Gill, Sara Tendulkar at Yuvraj's London Charity Event: ಜುಲೈ 8, 2025 ರಂದು ಲಂಡನ್‌ನಲ್ಲಿ ಯುವರಾಜ್ ಸಿಂಗ್ ಅವರ YouWeCan ಫೌಂಡೇಶನ್‌ಗಾಗಿ ದತ್ತಿ ಭೋಜನ ನಡೆಯಿತು. ಈ ಕಾರ್ಯಕ್ರಮದಲ್ಲಿ ಕ್ರಿಕೆಟ್ ದಿಗ್ಗಜರು ಭಾಗವಹಿಸಿದ್ದರು. ಶುಭ್ಮನ್ ಗಿಲ್ ಮತ್ತು ಸಾರಾ ತೆಂಡೂಲ್ಕರ್ ಅವರ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇಬ್ಬರ ನಡುವಿನ ಸಂಬಂಧದ ಬಗ್ಗೆ ಮತ್ತೆ ಚರ್ಚೆ ಆರಂಭವಾಗಿದೆ. ಈ ಫೌಂಡೇಶನ್ ಕ್ಯಾನ್ಸರ್ ಜಾಗೃತಿ ಮತ್ತು ಚಿಕಿತ್ಸೆಗಾಗಿ ಕೆಲಸ ಮಾಡುತ್ತದೆ.

ಇಂಗ್ಲೆಂಡ್‌ನಲ್ಲಿ ಒಟ್ಟಿಗೆ ಕಾಣಿಸಿಕೊಂಡ ಗಿಲ್-ಸಾರಾ; ಫೋಟೋ ನೋಡಿ
Sara , Gill
ಪೃಥ್ವಿಶಂಕರ
|

Updated on:Jul 09, 2025 | 7:21 PM

Share

ಜುಲೈ 8, 2025 ರಂದು ಲಂಡನ್‌ನಲ್ಲಿ, ಭಾರತದ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ (Yuvraj Singh) ತಮ್ಮ YouWeCan ಫೌಂಡೇಶನ್‌ಗಾಗಿ ದತ್ತಿ ಭೋಜನ ಕೂಟವನ್ನು ಆಯೋಜಿಸಿದ್ದರು. ಈ ಭೋಜನ ಕೂಟದಲ್ಲಿ ಕ್ರಿಕೆಟ್ ಜಗತ್ತಿನ ಅನೇಕ ಗಣ್ಯ ವ್ಯಕ್ತಿಗಳು ಭಾಗವಹಿಸಿದ್ದರು. ಕ್ಯಾನ್ಸರ್ ಜಾಗೃತಿ ಮತ್ತು ಚಿಕಿತ್ಸೆಗಾಗಿ ಹಣವನ್ನು ಸಂಗ್ರಹಿಸುವ ಸಲುವಾಗಿ ಈ ಭೋಜನ ಕೂಟ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಭೋಜನ ಕೂಟದಲ್ಲಿ ಭಾರತ ಟೆಸ್ಟ್ ತಂಡದ ನಾಯಕ ಶುಭ್​ಮನ್ ಗಿಲ್ (Shubman Gill) ಇಡೀ ತಂಡದೊಂದಿಗೆ ಆಗಮಿಸಿದ್ದರು. ಏತನ್ಮಧ್ಯೆ, ಗಿಲ್ ಅವರ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಫೋಟೋದಲ್ಲಿ ಸಚಿನ್ ತೆಂಡೂಲ್ಕರ್ ಅವರ ಪುತ್ರಿ ಸಾರಾ ತೆಂಡೂಲ್ಕರ್ (Sara Tendulkar), ಗಿಲ್ ಅವರೊಂದಿಗೆ ಕಾಣಿಸಿಕೊಂಡಿರುವುದು ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ.

ಇಂಗ್ಲೆಂಡ್‌ನಲ್ಲಿ ಗಿಲ್ ಮತ್ತು ಸಾರಾ

ಕ್ಯಾನ್ಸರ್ ಎಂಬ ಮಾಹ ಮಾರಿಯ ವಿರುದ್ಧ ಗೆದ್ದ ಬಳಿಕ ಯುವರಾಜ್ ಸಿಂಗ್ 2011 ರಲ್ಲಿ YouWeCan ಫೌಂಡೇಶನ್ ಸ್ಥಾಪಿಸಿದರು. ಈ ಫೌಂಡೇಶನ್ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸಲು, ಆರಂಭಿಕ ಪತ್ತೆಹಚ್ಚುವಿಕೆಯನ್ನು ಉತ್ತೇಜಿಸಲು ಮತ್ತು ರೋಗಿಗಳಿಗೆ ಆರ್ಥಿಕ ನೆರವು ನೀಡಲು ಕೆಲಸ ಮಾಡುತ್ತದೆ. ಅದರಂತೆ ಲಂಡನ್‌ನಲ್ಲಿ ನಡೆದ ಈ ದತ್ತಿ ಭೋಜನದ ಉದ್ದೇಶವು ಪ್ರತಿಷ್ಠಾನಕ್ಕಾಗಿ ಹಣವನ್ನು ಸಂಗ್ರಹಿಸುವುದಾಗಿತ್ತು. ಇದೀಗ ಈ ಕಾರ್ಯಕ್ರಮದಲ್ಲಿ ಶುಭ್‌ಮನ್ ಗಿಲ್ ಮತ್ತು ಸಾರಾ ತೆಂಡೂಲ್ಕರ್ ಕಾಣಿಸಿಕೊಂಡಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಗಿಲ್ (17)

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ಫೋಟೋದಲ್ಲಿ ಶುಭ್​ಮನ್ ನಗುತ್ತಿರುವುದನ್ನು ಮತ್ತು ಸಚಿನ್ ತೆಂಡೂಲ್ಕರ್ ಅವರ ಪುತ್ರಿ ಸಾರಾ ತೆಂಡೂಲ್ಕರ್ ಅವರ ಮುಂದೆ ಕುಳಿತಿರುವುದನ್ನು ನಾವು ಕಾಣಬಹುದು. ಆದರೆ ಈ ಫೋಟೋ ಗಿಲ್ ತಂಡದೊಂದಿಗೆ ಭೋಜನಕ್ಕೆ ಬಂದಾಗ ಮತ್ತು ಸಾರಾ ಈಗಾಗಲೇ ಅಲ್ಲಿ ಹಾಜರಿದ್ದಾಗ ತೆಗೆದದ್ದು ಎಂದು ಹೇಳಲಾಗುತ್ತಿದೆ. ಸಾರಾ ತೆಂಡೂಲ್ಕರ್ ಈ ಕಾರ್ಯಕ್ರಮದ ಫೋಟೋವನ್ನು ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದು, ಅದರಲ್ಲಿ ಅವರು ತಮ್ಮ ಸ್ನೇಹಿತರೊಂದಿಗೆ ಕಾಣಿಸಿಕೊಂಡಿದ್ದಾರೆ.

ICC Test Rankings: ಬರೋಬ್ಬರಿ 15 ಸ್ಥಾನ ಮೇಲೇರಿದ ಶುಭ್​ಮನ್ ಗಿಲ್

ಸಾರಾ- ಗಿಲ್ ನಡುವೆ ಪ್ರೀತಿಯ ವದಂತಿ

ಶುಭ್​ಮನ್ ಗಿಲ್ ಅವರ ಹೆಸರು ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಪುತ್ರಿ ಸಾರಾ ತೆಂಡೂಲ್ಕರ್ ಅವರೊಂದಿಗೆ ಹಲವು ಬಾರಿ ತಳುಕು ಹಾಕಿಕೊಂಡಿದೆ. ಒಂದು ಸಮಯದಲ್ಲಿ ಇವರಿಬ್ಬರ ನಡುವೆ ಪ್ರೇಮ ಸಂಬಂಧದ ವದಂತಿಗಳು ಹಬ್ಬಿದ್ದವು. ಇದಕ್ಕೆ ಪೂರಕವಾಗಿ ಇಬ್ಬರೂ ಈ ಮೊದಲು ಸೋಶಿಯಲ್ ಮೀಡಿಯಾದಲ್ಲಿ ಒಬ್ಬರನ್ನೊಬ್ಬರು ಅನುಸರಿಸುತ್ತಿದ್ದರು. ಹಾಗೆಯೇ ಪರಸ್ಪರರ ಪೋಸ್ಟ್‌ಗಳಿಗೆ ಲೈಕ್ ಮಾಡುತ್ತಾ ಮತ್ತು ಕಾಮೆಂಟ್ ಕೂಡ ಮಾಡುತ್ತಿದ್ದರು. ಆದರೆ ಆ ಬಳಿಕ ಒಬ್ಬರನ್ನೊಬ್ಬರು ಅನ್​ಫಾಲೋ ಮಾಡುವ ಮೂಲಕ ವದಂತಿಗಳಿಗೆ ತೆರೆ ಎಳೆದಿದ್ದರು. ಆದಾಗ್ಯೂ, ಶುಭಮನ್ ಮತ್ತು ಸಾರಾ ಈ ವದಂತಿಗಳ ಬಗ್ಗೆ ಇದುವರೆಗೂ ಬಹಿರಂಗವಾಗಿ ಏನನ್ನೂ ಹೇಳಿಲ್ಲ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:18 pm, Wed, 9 July 25

3 ರಾಷ್ಟ್ರಗಳ ಪ್ರವಾಸದ ಕೊನೆಯ ಹಂತವಾಗಿ ಒಮನ್​ಗೆ ತೆರಳಿದ ಪ್ರಧಾನಿ ಮೋದಿ
3 ರಾಷ್ಟ್ರಗಳ ಪ್ರವಾಸದ ಕೊನೆಯ ಹಂತವಾಗಿ ಒಮನ್​ಗೆ ತೆರಳಿದ ಪ್ರಧಾನಿ ಮೋದಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು