ಟೀಮ್ ಇಂಡಿಯಾದ 2ನೇ ಪಂದ್ಯಕ್ಕೂ ಶುಭ್‌ಮನ್ ಗಿಲ್ ಅಲಭ್ಯ
Shubman Gill: ಶುಭ್‌ಮನ್ ಗಿಲ್ ಅನುಪಸ್ಥಿತಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ ಇಶಾನ್ ಕಿಶನ್ ಆರಂಭಿಕರಾಗಿ ಕಣಕ್ಕಿಳಿದಿದ್ದರು. ಹೀಗಾಗಿ ಅಫ್ಘಾನಿಸ್ತಾನ್ ವಿರುದ್ಧದ ಪಂದ್ಯದಲ್ಲೂ ಟೀಮ್ ಇಂಡಿಯಾ ಓಪನರ್ ಆಗಿ ಎಡಗೈ ದಾಂಡಿಗ ಕಿಶನ್ ಅವರೇ ಕಣಕ್ಕಿಳಿಯಲಿದ್ದಾರೆ.
ಭಾರತ ತಂಡದ ಯುವ ಆರಂಭಿಕ ಆಟಗಾರ ಶುಭ್‌ಮನ್ ಗಿಲ್ (Shubman Gill) ಅಫ್ಘಾನಿಸ್ತಾನ್ ವಿರುದ್ಧದ ಪಂದ್ಯದಿಂದಲೂ ಹೊರಗುಳಿದಿದ್ದಾರೆ. ಡೆಂಗಿ ಜ್ವರದ ಕಾರಣ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಿಂದ ಹೊರಗುಳಿದಿದ್ದ ಗಿಲ್ 2ನೇ ಪಂದ್ಯಕ್ಕಾಗಿ ದೆಹಲಿಗೆ ತೆರಳಿಲ್ಲ ಎಂದು ಬಿಸಿಸಿಐ ಸ್ಪಷ್ಟಪಡಿಸಿದೆ.
ಶುಭ್‌ಮನ್ ಗಿಲ್ ಅವರು 9 ಅಕ್ಟೋಬರ್ 2023 ರಂದು ದೆಹಲಿಗೆ ತಂಡದೊಂದಿಗೆ ಪ್ರಯಾಣಿಸಿಲ್ಲ. ಅವರು ಚೆನ್ನೈನಲ್ಲಿ ಉಳಿದಿದ್ದಾರೆ. ಅಲ್ಲದೆ ಅಲ್ಲೇ ವೈದ್ಯಕೀಯ ತಂಡದ ಮೇಲ್ವಿಚಾರಣೆಯಲ್ಲಿರಲಿದ್ದಾರೆ. ಹೀಗಾಗಿ ಅಫ್ಘಾನಿಸ್ತಾನ್ ವಿರುದ್ಧದ ಪಂದ್ಯದಿಂದಲೂ ಶುಭ್‌ಮನ್ ಗಿಲ್ ಹೊರಗುಳಿದಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ.
ಇನ್ನು ಶುಭ್‌ಮನ್ ಗಿಲ್ ಅನುಪಸ್ಥಿತಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ ಇಶಾನ್ ಕಿಶನ್ ಆರಂಭಿಕರಾಗಿ ಕಣಕ್ಕಿಳಿದಿದ್ದರು. ಹೀಗಾಗಿ ಅಫ್ಘಾನಿಸ್ತಾನ್ ವಿರುದ್ಧದ ಪಂದ್ಯದಲ್ಲೂ ಎಡಗೈ ದಾಂಡಿಗ ಕಿಶನ್ ಅವರೇ ಕಣಕ್ಕಿಳಿಯಲಿದ್ದಾರೆ.
ಭಾರತ-ಅಫ್ಘಾನಿಸ್ತಾನ್ ಅಕ್ಟೋಬರ್ 11 ರಂದು ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಮುಖಾಮುಖಿಯಾಗಲಿದ್ದು, ಈ ಪಂದ್ಯದಲ್ಲೂ ಗೆಲ್ಲುವ ಮೂಲಕ ಗೆಲುವಿನ ಲಯ ಮುಂದುವರೆಸುವ ಇರಾದೆಯಲ್ಲಿದೆ ಟೀಮ್ ಇಂಡಿಯಾ.
ಏಕೆಂದರೆ ಈ ಪಂದ್ಯದ ಬಳಿಕ ಟೀಮ್ ಇಂಡಿಯಾದ ಮುಂದಿನ ಎದುರಾಳಿ ಪಾಕಿಸ್ತಾನ್. ಅಕ್ಟೋಬರ್ 14 ರಂದು ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಇದೀಗ ಕ್ರಿಕೆಟ್ ಪ್ರೇಮಿಗಳ ಕುತೂಹಲದ ಕೇಂದ್ರವಾಗಿ ಮಾರ್ಪಟ್ಟಿದೆ. ಗಾಗಿ ಅಫ್ಘಾನಿಸ್ತಾನ್ ವಿರುದ್ಧ ಭರ್ಜರಿ ಪ್ರದರ್ಶನ ನೀಡುವ ಮೂಲಕ ಪಾಕ್ ವಿರುದ್ದದ ಪಂದ್ಯಕ್ಕೆ ಟೀಮ್ ಇಂಡಿಯಾ ಸಜ್ಜಾಗಲಿದೆ.