AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶುಭ್​ಮನ್ ಗಿಲ್ ಕೊಹ್ಲಿಯನ್ನು ಕಾಪಿ ಮಾಡ್ತಿದ್ದಾರೆ: ಮಾಜಿ ಕ್ರಿಕೆಟಿಗನ ಟೀಕೆ

Shubman Gill: ಇಂಗ್ಲೆಂಡ್ ವಿರುದ್ಧದ ಮೊದಲೆರಡು ಟೆಸ್ಟ್ ಪಂದ್ಯಗಳಲ್ಲಿ ಶತಕ ಸಿಡಿಸಿ ಮಿಂಚಿದ್ದ ಶುಭ್​ಮನ್ ಗಿಲ್ ಮೂರನೇ ಪಂದ್ಯದಲ್ಲಿ ಸಂಪೂರ್ಣ ವಿಫಲರಾಗಿದ್ದರು. ಲಾರ್ಡ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ16 ರನ್​ಗಳಿಸಿದರೆ, ದ್ವಿತೀಯ ಇನಿಂಗ್ಸ್​ನಲ್ಲಿ 6 ರನ್ ಬಾರಿಸಿ ವಿಕೆಟ್ ಒಪ್ಪಿಸಿದ್ದರು.

ಶುಭ್​ಮನ್ ಗಿಲ್ ಕೊಹ್ಲಿಯನ್ನು ಕಾಪಿ ಮಾಡ್ತಿದ್ದಾರೆ: ಮಾಜಿ ಕ್ರಿಕೆಟಿಗನ ಟೀಕೆ
Virat Kohli - Shubman Gill
ಝಾಹಿರ್ ಯೂಸುಫ್
|

Updated on: Jul 22, 2025 | 12:44 PM

Share

ಲಾರ್ಡ್ಸ್‌ನಲ್ಲಿ ಇಂಗ್ಲೆಂಡ್ ವಿರುದ್ಧ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲಿ ಭಾರತದ ನಾಯಕ ಶುಭಮನ್ ಗಿಲ್ ಅವರ ಆಕ್ರಮಣಕಾರಿ ವರ್ತನೆಯನ್ನು ಮಾಜಿ ಕ್ರಿಕೆಟಿಗ ಮನೋಜ್ ತಿವಾರಿ ಟೀಕಿಸಿದ್ದಾರೆ. ಪಂದ್ಯದ ಮೂರನೇ ದಿನದಾಟದ ಅಂತ್ಯದ ವೇಳೆ ಇಂಗ್ಲೆಂಡ್ ಆರಂಭಿಕ ಬ್ಯಾಟ್ಸ್‌ಮನ್ ಝಾಕ್ ಕ್ರಾಲಿ ಜೊತೆ ಗಿಲ್ ಮಾತಿನ ಚಕಮಕಿ ನಡೆಸಿದ್ದರು. ಇದನ್ನು ಪ್ರಸ್ತಾಪಿಸಿ ಸಂದರ್ಶನವೊಂದರಲ್ಲಿ ಮಾತನಾಡಿದ ಮನೋಜ್ ತಿವಾರಿ, ಗಿಲ್ ವಿರಾಟ್ ಕೊಹ್ಲಿಯನ್ನು ಅನುಕರಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಶುಭ್​ಮನ್ ಗಿಲ್ ವಿರಾಟ್ ಕೊಹ್ಲಿಯಂತೆ ಆಗಲು ಬಯಸುತ್ತಿದ್ದಾರೆ. ಅದಕ್ಕಾಗಿ ಅವರ ವಿಧಾನವನ್ನು ನಕಲಿಸಲು ಪ್ರಯತ್ನಿಸುತ್ತಿದ್ದಾರೆ. ಇದು ಪರೋಕ್ಷವಾಗಿ ಗಿಲ್ ಅವರ ಬ್ಯಾಟಿಂಗ್ ಮೇಲೆ ಪರಿಣಾಮ ಬೀರಿದೆ ಎಂದು ತಿವಾರಿ ಹೇಳಿದ್ದಾರೆ. ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್​ನಲ್ಲಿ ಗಿಲ್ ಏಕಾಏಕಿ ಆಕ್ರಮಣಕಾರಿಯಾಗಿ ವರ್ತಿಸುತ್ತಿರುವುದು ಕಂಡು ಬಂದಿದೆ. ಇಂತಹ ವರ್ತನೆಯಿಂದ ಅವರು ನೈಜ ಶಕ್ತಿಯನ್ನು ಕಳೆದುಕೊಳ್ಳಲಿದ್ದಾರೆ.

ಗಿಲ್ ನಡೆದುಕೊಳ್ಳುತ್ತಿರುವ ರೀತಿ ನನಗೆ ಇಷ್ಟವಾಗಿಲ್ಲ. ವಿರಾಟ್ ಕೊಹ್ಲಿ ಈ ಹಿಂದೆ ಮಾಡಿದ್ದನ್ನು ಅವರು ಅನುಕರಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ನಾನು ಭಾವಿಸುತ್ತೇನೆ. ಇದರ ಪರಿಣಾಮವಾಗಿ ಅವರು ಬ್ಯಾಟಿಂಗ್‌ನಲ್ಲಿ ವಿಫಲವಾಗಿದ್ದಾರೆ. ಐಪಿಎಲ್‌ನಲ್ಲಿ ನಾಯಕರಾದಾಗಿನಿಂದ, ಅವರು ಆಕ್ರಮಣಕಾರಿ ಮನಸ್ಥಿತಿಗೆ ಒಳಗಾಗುತ್ತಿದ್ದಾರೆ.

ಅಂಪೈರ್‌ಗಳೊಂದಿಗೆ ಕೂಡ ವಾಗ್ವಾದ ನಡೆಸುತ್ತಿರುವುದು ಕಂಡು ಬರುತ್ತಿದೆ. ಇವೆಲ್ಲವೂ ಗಿಲ್‌ ಅವರ ಸ್ವಭಾವದಿಂದ ಭಿನ್ನವಾಗಿದೆ. ಅವರು ಆ ರೀತಿಯ ಆಕ್ರಮಣಶೀಲತೆಯನ್ನು ಈ ಹಿಂದೆ ಪ್ರದರ್ಶಿಸಿರಲಿಲ್ಲ. ಅಲ್ಲದೆ ಅದನ್ನು ಪ್ರದರ್ಶಿಸುವ ಅಗತ್ಯವಿಲ್ಲ ಮತ್ತು ಏನನ್ನೂ ಸಾಬೀತುಪಡಿಸಬೇಕಾಗಿಲ್ಲ ಎಂದು ತಿವಾರಿ ಹೇಳಿದರು.

“ಒಬ್ಬ ನಾಯಕ ಪ್ರತಿಯೊಂದು ವಿಷಯದಲ್ಲೂ ಮುಂದಾಳತ್ವ ವಹಿಸಬೇಕೆಂದು ನಿಜ. ಆದರೆ ಇಷ್ಟೊಂದು ಆಕ್ರಮಣಶೀಲತೆ ಅಗತ್ಯವಿಲ್ಲ. ಅದು ನಿಮ್ಮ ಶಕ್ತಿಯನ್ನು ಕಸಿದುಕೊಳ್ಳುತ್ತದೆ. ಅವರು ತಮ್ಮ ಆಕ್ರಮಣಕಾರಿ ಶೈಲಿಗೆ ಅಂಟಿಕೊಳ್ಳಬಹುದು. ಆದರೆ ಅದನ್ನು ಯಾವಾಗಲೂ ಮಾತಿನಲ್ಲಿ ಪ್ರತಿಫಲಿಸಬೇಕು ಎಂದಲ್ಲ. ಟೆಸ್ಟ್ ಪಂದ್ಯಗಳನ್ನು ಗೆಲ್ಲುವ ಮೂಲಕವೂ ಆಕ್ರಮಣಶೀಲತೆಯನ್ನು ತೋರಿಸಬಹುದು.

ಲಾರ್ಡ್ಸ್​ ಟೆಸ್ಟ್ ಪಂದ್ಯದಲ್ಲಿ ಗೆಲ್ಲುವ ಮೂಲಕ ಟೀಮ್ ಇಂಡಿಯಾ ಸರಣಿಯಲ್ಲಿ 2-1 ಅಂತರದಲ್ಲಿ ಸುಲಭವಾಗಿ ಮುನ್ನಡೆ ಸಾಧಿಸಬಹುದಿತ್ತು. ಆದರೆ ಭಾರತೀಯ ಬ್ಯಾಟರ್​ಗಳಿಗೆ ಅದು ಮಾಡಲು ಸಾಧ್ಯವಾಗಿಲ್ಲ. ಅದರಲ್ಲೂ ಗಿಲ್ ಎರಡು ಇನಿಂಗ್ಸ್​ಗಳಲ್ಲೂ ವಿಫಲರಾಗಿದ್ದರು. ಹೀಗಾಗಿ ಮೈದಾನದಲ್ಲಿ ಹೆಚ್ಚು ಆಕ್ರಮಣಶೀಲರಾಗಿ ಕಾಣಿಸಿಕೊಳ್ಳುವುದು ಆಟಕ್ಕೆ ಒಳ್ಳೆಯದಲ್ಲ ಎಂದು ಮನೋಜ್ ತಿವಾರಿ ಕಿವಿಮಾತು ಹೇಳಿದ್ದಾರೆ.

ಇನ್ನು ಶುಭ್​ಮನ್ ಮನ್ ಗಿಲ್ ಪಂದ್ಯದ ನಡುವೆ ಬಳಸಿದ ಪದಗಳಿಗೂ ಅಸಮಾಧಾನ ವ್ಯಕ್ತಪಡಿಸಿರುವ ತಿವಾರಿ, ಸ್ಟಂಪ್‌ಗಳ ಬಳಿ ಇರುವಾಗ ಆಡಿಯೋದಲ್ಲಿ ಬರುವ ಭಾಷೆ ಮತ್ತು ಪದಗಳ ಬಗ್ಗೆ ಜಾಗರೂಕರಾಗಿರಬೇಕು. ನೀವು ಭಾರತೀಯ ಕ್ರಿಕೆಟ್ ತಂಡವನ್ನು ಪ್ರತಿನಿಧಿಸುತ್ತಿದ್ದೀರಿ. ಹಿಂದಿನ ನಾಯಕರು ತಮ್ಮ ಕೋಪವನ್ನು ವ್ಯಕ್ತಪಡಿಸಲು ಬಹುಶಃ ಇಂತಹ ಪದಗಳನ್ನು ಬಳಸಿರಬಹುದು.

ಇದನ್ನೂ ಓದಿ: 34,504 ಎಸೆತಗಳು… ಗೆರೆ ದಾಟದೇ ವಿಶ್ವ ದಾಖಲೆ ನಿರ್ಮಿಸಿದ ನಾಥನ್ ಲಿಯಾನ್

ಆದರೆ ಇದೀಗ ಇದೊಂದು ಪ್ರವೃತ್ತಿಯಾಗಿದೆ ಎಂದು ನಾನು ಭಾವಿಸುತ್ತೇನೆ. ಇಂತಹ ಕೋಪಗಳನ್ನು ನಿಯಂತ್ರಿಸಬೇಕಾಗಿದೆ. ನೀವು ಈ ರೀತಿಯ ಭಾಷೆಗಳನ್ನು ಬಳಿಸಿದರೆ, ಮುಂದಿನ ಪೀಳಿಗೆಯು ಅದನ್ನು ತೆಗೆದುಕೊಳ್ಳುತ್ತದೆ. ಹೀಗಾಗಿ ಮೈದಾನದಲ್ಲಿ ತನ್ನ ಕೋಪವನ್ನು ನಿಯಂತ್ರಿಸುವ ಬಗ್ಗೆ ಹಾಗೂ ಆಡುವ ಪದಗಳ ಬಗ್ಗೆ ಶುಭ್​ಮನ್ ಗಿಲ್ ಜಾಗರೂಕರಾಗಬೇಕು ಎಂದು ಮನೋಜ್ ತಿವಾರಿ ಹೇಳಿದರು.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ