AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup 2025: ಏಷ್ಯಾಕಪ್‌ ಬಗ್ಗೆ ಸಿಗ್ತು ಸಿಹಿ ಸುದ್ದಿ; ಈ ದೇಶದಲ್ಲಿ ಪಂದ್ಯಾವಳಿಯನ್ನು ಆಯೋಜಿಸಲಿದೆ ಬಿಸಿಸಿಐ

Asia Cup 2025: 2025ರ ಏಷ್ಯಾ ಕಪ್ ಪಂದ್ಯಾವಳಿಯು ಸೆಪ್ಟೆಂಬರ್ 8 ರಿಂದ ಪ್ರಾರಂಭವಾಗಲಿದೆ ಎಂದು ವರದಿಯಾಗಿದೆ. ಯುಎಇಯಲ್ಲಿ ಈ ಪಂದ್ಯಾವಳಿಯನ್ನು ನಡೆಸಲು ತೀರ್ಮಾನಿಸಲಾಗಿದ್ದು, ಇದರ ಆತಿಥ್ಯ ಬಿಸಿಸಿಐ ಬಳಿ ಇರಲಿದೆ. ಈ ಪಂದ್ಯಾವಳಿಯಲ್ಲಿ ಭಾರತ, ಪಾಕಿಸ್ತಾನ, ಶ್ರೀಲಂಕಾ ಸೇರಿದಂತೆ 8 ತಂಡಗಳು ಭಾಗವಹಿಸಲಿವೆ. ಟಿ20 ಸ್ವರೂಪದಲ್ಲಿ ನಡೆಯಲಿರುವ ಈ ಪಂದ್ಯಾವಳಿಯು ಸೆಪ್ಟೆಂಬರ್ 24 ರಂದು ಫೈನಲ್ ಪಂದ್ಯದೊಂದಿಗೆ ಮುಕ್ತಾಯಗೊಳ್ಳಲಿದೆ. ಬಿಸಿಸಿಐ ಪಂದ್ಯಾವಳಿಯ ವೇಳಾಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಿದೆ.

Asia Cup 2025: ಏಷ್ಯಾಕಪ್‌ ಬಗ್ಗೆ ಸಿಗ್ತು ಸಿಹಿ ಸುದ್ದಿ; ಈ ದೇಶದಲ್ಲಿ ಪಂದ್ಯಾವಳಿಯನ್ನು ಆಯೋಜಿಸಲಿದೆ ಬಿಸಿಸಿಐ
Asia Cup 2025
ಪೃಥ್ವಿಶಂಕರ
|

Updated on:Jul 25, 2025 | 6:39 PM

Share

2025 ರ ಏಷ್ಯಾಕಪ್ (Asia Cup 2025) ಪಂದ್ಯಾವಳಿ ನಡೆಯುವ ಬಗ್ಗೆ ಬಹಳ ಸಮಯದಿಂದ ಚರ್ಚೆ ನಡೆಯುತ್ತಿದೆ. ಆದಾಗ್ಯೂ, ಈಗ ಈ ಪಂದ್ಯಾವಳಿಯ ಆರಂಭದ ಬಗ್ಗೆ ಒಂದು ದೊಡ್ಡ ವರದಿ ಹೊರಬಿದ್ದಿದೆ. 2025 ರ ಏಷ್ಯಾಕಪ್ ಕುರಿತು ಢಾಕಾದಲ್ಲಿ ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ACC) ಸಭೆ ನಡೆಯಬೇಕಿತ್ತು, ಆದರೆ ಬಿಸಿಸಿಐ (BCCI) ಈ ಸಭೆಗೆ ಹಾಜರಾಗಲು ನಿರಾಕರಿಸಿತ್ತು. ಆದಾಗ್ಯೂ, ಬಿಸಿಸಿಐ ಆನ್‌ಲೈನ್‌ನಲ್ಲಿ ಈ ಸಭೆಯಲ್ಲಿ ಭಾಗವಹಿಸಿದ್ದು, ಏಷ್ಯಾಕಪ್ ಆಯೋಜನೆಯ ಬಗ್ಗೆ ಚರ್ಚಿಸಲಾಗಿದೆ. ಅಲ್ಲದೆ ಪಂದ್ಯಾವಳಿಯನ್ನು ಆಯೋಜಿಸಲು ಒಮ್ಮತ ಮೂಡಿಬಂದಿದೆ ಎಂದು ಹೇಳಲಾಗುತ್ತಿದ್ದು, ಪಂದ್ಯಾವಳಿ ಸೆಪ್ಟೆಂಬರ್ 7 ರಿಂದ ಪ್ರಾರಂಭವಾಗಲಿದೆ ಎಂದು ವರದಿಯಾಗಿದೆ.

ಸೆಪ್ಟೆಂಬರ್ 7ರಿಂದ ಪಂದ್ಯಾವಳಿ ಆರಂಭ

ವರದಿಯ ಪ್ರಕಾರ, 2025 ರ ಏಷ್ಯಾಕಪ್ ಪಂದ್ಯಾವಳಿ ಸೆಪ್ಟೆಂಬರ್ 7 ರಿಂದ ಪ್ರಾರಂಭವಾಗಲಿದ್ದು, ಇದರ ಫೈನಲ್ ಪಂದ್ಯ ಸೆಪ್ಟೆಂಬರ್ 24 ರಂದು ನಡೆಯಲಿದೆ. 8 ತಂಡಗಳ ನಡುವೆ ಈ ಟೂರ್ನಿಯಲ್ಲಿ ಭಾರತ, ಅಫ್ಘಾನಿಸ್ತಾನ, ಶ್ರೀಲಂಕಾ, ಬಾಂಗ್ಲಾದೇಶ ಮತ್ತು ಪಾಕಿಸ್ತಾನ ಪೂರ್ಣ ಸದಸ್ಯತ್ವ ರಾಷ್ಟಗಳಾಗಿದ್ದರೆ, ಎಸಿಸಿ ಪ್ರೀಮಿಯರ್ ಕಪ್ ವಿಜೇತ ತಂಡ ಹಾಂಗ್ ಕಾಂಗ್, ಓಮನ್ ಮತ್ತು ಯುಎಇ ಕೂಡ ಇದರಲ್ಲಿ ಭಾಗವಹಿಸಲಿವೆ. ಮಾಹಿತಿಯ ಪ್ರಕಾರ, ಈ ಬಾರಿಯ ಏಷ್ಯಾಕಪ್ ಪಂದ್ಯಾವಳಿಯನ್ನು ಯುಎಇಯಲ್ಲಿ ಆಯೋಜಿಸಲಾಗುವುದು. ಆದಾಗ್ಯೂ, ಬಿಸಿಸಿಐ ಬಳಿ ಇದರ ಆತಿಥ್ಯದ ಹಕ್ಕು ಇರಲಿದ್ದು, ಶೀಘ್ರದಲ್ಲೇ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಿದೆ.

2026 ರ ಟಿ20 ವಿಶ್ವಕಪ್ ಅನ್ನು ಗಮನದಲ್ಲಿಟ್ಟುಕೊಂಡು, ಈ ಬಾರಿ ಏಷ್ಯಾಕಪ್ ಅನ್ನು ಟಿ20 ಸ್ವರೂಪದಲ್ಲಿ ನಡೆಸಲಾಗುವುದು. ಕಳೆದ ಬಾರಿ ಏಕದಿನ ವಿಶ್ವಕಪ್ ಇದ್ದಾಗ, ಈ ಪಂದ್ಯಾವಳಿಯನ್ನು ಏಕದಿನ ಸ್ವರೂಪದಲ್ಲಿ ಆಯೋಜಿಸಲಾಗಿತ್ತು. ಹೈಬ್ರಿಡ್ ಮಾದರಿಯಡಿಯಲ್ಲಿ ನಡೆದ ಈ ಟೂರ್ನಿಯನ್ನು ಪಾಕಿಸ್ತಾನ ಮತ್ತು ಶ್ರೀಲಂಕಾದಲ್ಲಿ ಆಯೋಜಿಸಲಾಗಿತ್ತು. ಶ್ರೀಲಂಕಾದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ, ಶ್ರೀಲಂಕಾವನ್ನು ಸೋಲಿಸಿ ಚಾಂಪಿಯನ್‌ ಆಗಿ ಹೊರಹೊಮ್ಮಿತ್ತು.

‘ಅದರಲ್ಲಿ ಯಾವುದೇ ಸತ್ಯವಿಲ್ಲ’; ಏಷ್ಯಾಕಪ್ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ಬಿಸಿಸಿಐ ಕಾರ್ಯದರ್ಶಿ

ಭಾರತ ಹಾಲಿ ಚಾಂಪಿಯನ್‌

ಏಷ್ಯಾಕಪ್‌ನ ಕೊನೆಯ ಸೀಸನ್ 2023 ರಲ್ಲಿ ನಡೆದಿತ್ತು. ಇದರ ಫೈನಲ್ ಪಂದ್ಯ ಕೊಲಂಬೊದಲ್ಲಿ ನಡೆದಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ್ದ ಶ್ರೀಲಂಕಾ ಕೇವಲ 50 ರನ್‌ಗಳಿಗೆ ಆಲೌಟ್ ಆಯಿತು. ಭಾರತದ ಪರ, ವೇಗಿ ಮೊಹಮ್ಮದ್ ಸಿರಾಜ್ ಮಾರಕ ಬೌಲಿಂಗ್ ಮಾಡಿ 7 ಓವರ್‌ಗಳಲ್ಲಿ 21 ರನ್‌ ನೀಡಿ 6 ವಿಕೆಟ್‌ಗಳನ್ನು ಕಬಳಿಸಿದರೆ, ಹಾರ್ದಿಕ್ ಪಾಂಡ್ಯ ಮೂರು ವಿಕೆಟ್‌ಗಳನ್ನು ಕಬಳಿಸಿದರು. ಟೀಂ ಇಂಡಿಯಾ ಕೇವಲ 6.1 ಓವರ್‌ಗಳಲ್ಲಿ 51 ರನ್‌ಗಳ ಗುರಿ ತಲುಪಿ ಟ್ರೋಫಿಯನ್ನು ಎತ್ತಿ ಹಿಡಿದಿತ್ತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:30 pm, Thu, 24 July 25

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು