ZIM vs BAN: ಬಾಂಗ್ಲಾ ಬೌಲರ್ಗಳ ಬೆಂಡೆತ್ತಿದ ಜಿಂಬಾಬ್ವೆ..!
ಈ ಬೃಹತ್ ಮೊತ್ತವನ್ನು ಬೆನ್ನತ್ತಿದ ಬಾಂಗ್ಲಾ ಪರ ನಾಯಕ ನೂರುಲ್ ಹಸನ್ 26 ಎಸೆತಗಳಲ್ಲಿ ಅಜೇಯ 42 ರನ್ ಬಾರಿಸಿದ್ದರು. ಇದಾಗ್ಯೂ ಉಳಿದ ಬ್ಯಾಟ್ಸ್ಮನ್ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ.
ಹರಾರೆಯಲ್ಲಿ ನಡೆಯುತ್ತಿರುವ ಬಾಂಗ್ಲಾದೇಶ ವಿರುದ್ದದ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಜಿಂಬಾಬ್ವೆ ತಂಡವು ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಜಿಂಬಾಬ್ವೆ ನಾಯಕ ಕ್ರೇಗ್ ಎರ್ವಿನ್ ಬ್ಯಾಟಿಂಗ್ ಆಯ್ದುಕೊಂಡರು. ಆದರೆ ಆರಂಭದಲ್ಲೇ ಜಿಂಬಾಬ್ವೆ ಆರಂಭಿಕರಾದ ಚಕಬ್ವಾ (8) ಹಾಗೂ ಕ್ರೇಗ್ ಎರ್ವಿನ್ (21) ವಿಕೆಟ್ ಪಡೆಯುವ ಮೂಲಕ ಬಾಂಗ್ಲಾ ಬೌಲರ್ಗಳು ಮೇಲುಗೈ ಸಾಧಿಸಿದ್ದರು.
ಈ ಹಂತದಲ್ಲಿ ಕಣಕ್ಕಿಳಿದ ವೆಸ್ಲಿ ಮಧೆವೆರೆ 46 ಎಸೆತಗಳಲ್ಲಿ 67 ರನ್ ಬಾರಿಸಿ ತಂಡಕ್ಕೆ ಆಸರೆಯಾದರು. ಮತ್ತೊಂದು ತುದಿಯಲ್ಲಿ ಸೀನ್ ವಿಲಿಯಮ್ಸನ್ 19 ಎಸೆತಗಳಲ್ಲಿ 1 ಸಿಕ್ಸ್ 4 ಫೋರ್ನೊಂದಿಗೆ 33 ರನ್ ಬಾರಿಸಿ ತಂಡದ ರನ್ಗತಿ ಹೆಚ್ಚಿಸಿದರು. ಅದರಂತೆ 12 ಓವರ್ ವೇಳೆಗೆ ಜಿಂಬಾಬ್ವೆ ತಂಡವು 99 ರನ್ ಕಲೆಹಾಕಿತ್ತು. ಈ ವೇಳೆ ಮೈದಾನಕ್ಕಿಳಿದ ಸಿಕಂದರ್ ರಾಜಾ ಬಾಂಗ್ಲಾದೇಶ್ ಬೌಲರ್ಗಳ ಬೆಂಡೆತ್ತಿದ್ದರು. ಕಣಕ್ಕಿಳಿಯುತ್ತಿದ್ದಂತೆ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ ರಾಜಾ ಕೇವಲ 23 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಅಲ್ಲದೆ 26 ಎಸೆತಗಳಲ್ಲಿ 4 ಸಿಕ್ಸ್, 7 ಫೋರ್ನೊಂದಿಗೆ 65 ರನ್ ಬಾರಿಸುವ ಮೂಲಕ 20 ಓವರ್ಗಳಲ್ಲಿ ತಂಡದ ಮೊತ್ತವನ್ನು 205 ಕ್ಕೆ ತಂದು ನಿಲ್ಲಿಸಿದರು.
A 23-ball fifty for Sikandar Raza helps Zimbabwe post a good total in Harare! ?
Watch #ZIMvBAN series LIVE on https://t.co/CPDKNxoJ9v (in select regions) ?
?Scorecard: https://t.co/MqdoAejYAk pic.twitter.com/TrczPST86d
— ICC (@ICC) July 30, 2022
ಈ ಬೃಹತ್ ಮೊತ್ತವನ್ನು ಬೆನ್ನತ್ತಿದ ಬಾಂಗ್ಲಾ ಪರ ನಾಯಕ ನೂರುಲ್ ಹಸನ್ 26 ಎಸೆತಗಳಲ್ಲಿ ಅಜೇಯ 42 ರನ್ ಬಾರಿಸಿದ್ದರು. ಇದಾಗ್ಯೂ ಉಳಿದ ಬ್ಯಾಟ್ಸ್ಮನ್ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಅಂತಿಮವಾಗಿ ಬಾಂಗ್ಲಾ ತಂಡವು 6 ವಿಕೆಟ್ ನಷ್ಟಕ್ಕೆ 188 ರನ್ಗಳಿಸಲಷ್ಟೇ ಶಕ್ತರಾದರು. ಇದರೊಂದಿಗೆ ಜಿಂಬಾಬ್ವೆ ತಂಡವು 17 ರನ್ಗಳ ಭರ್ಜರಿ ಜಯ ಸಾಧಿಸಿತು. ಈ ಗೆಲುವಿನೊಂದಿಗೆ ಜಿಂಬಾಬ್ವೆ ಬಾಂಗ್ಲಾದೇಶದ ವಿರುದ್ದದ 3 ಪಂದ್ಯಗಳ ಟಿ20 ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಪಡೆದುಕೊಂಡಿದೆ.
ಕೇವಲ 23 ಎಸೆತಗಳಲ್ಲಿ ಅರ್ಧಶತಕ ಪೂರೈಸುವ ಮೂಲಕ ಸಿಕಂದರ್ ರಾಜಾ ಜಿಂಬಾಬ್ವೆ ಪರ ಟಿ20 ಅತೀ ವೇಗದ ಹಾಫ್ ಸೆಂಚುರಿ ಸಿಡಿಸಿದ ನಾಲ್ಕನೇ ಬ್ಯಾಟ್ಸ್ಮನ್ ಎಂಬ ದಾಖಲೆ ಬರೆದರು. ಅಲ್ಲದೆ ಟಿ20 ಕ್ರಿಕೆಟ್ನಲ್ಲಿ 25 ಕ್ಕಿಂತ ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಬ್ಯಾಟ್ಸ್ಮನ್ಗಳ ಪಟ್ಟಿಯಲ್ಲೂ ಸ್ಥಾನ ಪಡೆದರು. ಇನ್ನೂ ಈ ಭರ್ಜರಿ ಬ್ಯಾಟಿಂಗ್ ಫಲವಾಗಿ ಸಿಕಂದರ್ ರಾಜಾಗೆ ಪಂದ್ಯಶ್ರೇಷ್ಠ ಪ್ರಶಸ್ತಿ ಒಲಿಯಿತು.